Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕಾಂಗ್ರೆಸ್‌ನ 'ಟ್ರಬಲ್ ಶೂಟರ್' ಈಗ...

ಕಾಂಗ್ರೆಸ್‌ನ 'ಟ್ರಬಲ್ ಶೂಟರ್' ಈಗ ಕರ್ನಾಟಕದ ʼಮುಖ್ಯಮಂತ್ರಿʼ

ವಾರ್ತಾಭಾರತಿವಾರ್ತಾಭಾರತಿ3 Jun 2026 5:04 PM IST
share
ಕಾಂಗ್ರೆಸ್‌ನ ಟ್ರಬಲ್ ಶೂಟರ್ ಈಗ ಕರ್ನಾಟಕದ ʼಮುಖ್ಯಮಂತ್ರಿʼ
ಹೈಕಮಾಂಡ್ ನಂಬಿಕಸ್ಥ, ಪಕ್ಷದ ಕಟ್ಟಾಳು: ಸವಾಲುಗಳನ್ನು ಮೆಟ್ಟಿ ನಿಂತು ಸಿಎಂ ಆದ ಶಿವಕುಮಾರ್

ಬೆಂಗಳೂರು : ರಾಜ್ಯದ ಜನತೆ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಬಹು ನಿರೀಕ್ಷೆಯಂತೆ ದೊಡ್ಡ ಆಲಹಳ್ಳಿ ಕೆಂಪೇಗೌಡ ಶಿವಕುಮಾರ್ ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಕನಕಪುರ ತಾಲೂಕು, ದೊಡ್ಡಆಲಹಳ್ಳಿ ಗ್ರಾಮದ ಕೆಂಪೇಗೌಡ ಹಾಗೂ ಗೌರಮ್ಮ ದಂಪತಿಯ ಪ್ರಥಮ ಪುತ್ರನಾಗಿ (1962ರ ಮೇ 15ರಂದು) ಜನಿಸಿದ ಡಿ.ಕೆ.ಶಿವಕುಮಾರ್ ತಮ್ಮ ತಂದೆಯಿಂದಲೇ ನಾಯಕತ್ವದ ಗುಣಗಳನ್ನು ಪಡೆದುಕೊಂಡು ಬಂದರು. 18ನೇ ವಯಸ್ಸಿನಲ್ಲಿಯೇ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ ವಿಭಾಗವಾದ ಎನ್‍ಎಸ್‍ಯುಐಗೆ ಸೇರ್ಪಡೆಗೊಂಡು ಕೆಲ ಕಾಲದಲ್ಲಿಯೇ ಬೆಂಗಳೂರು ಜಿಲ್ಲೆಯ ಘಟಕದ ಅಧ್ಯಕ್ಷರೂ ಆದರು (1981-83).

ನಂತರ ವಿದ್ಯಾಭ್ಯಾಸಕ್ಕೆಂದು ಬೆಂಗಳೂರು ಸೇರಿದ ಡಿ.ಕೆ.ಶಿವಕುಮಾರ್ ಆರ್.ಸಿ. ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾಗ ಯುವ ಕಾಂಗ್ರೆಸ್‍ಗೆ ಸೇರಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ, ಕನಕಪುರ ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ ಶಿಬಿರಗಳನ್ನು ವ್ಯವಸ್ಥೆಗೊಳಿಸಿ ಜನಮನವನ್ನು ಸೂರೆಗೊಂಡರು.

1985ರ ಸಾತನೂರು ವಿಧಾನಸಭಾ ಕ್ಷೇತ್ರದಲ್ಲಿ ಅಂದಿನ ಪ್ರಭಾವಿ ಜನತಾದಳ ಮುಖಂಡ ಎಚ್.ಡಿ.ದೇವೇಗೌಡರ ವಿರುದ್ಧ ಕಾಂಗ್ರೆಸ್ ಪಕ್ಷದಲ್ಲಿ ಉತ್ತಮ ಅಭ್ಯರ್ಥಿ ಸಿಗುವುದು ದುರ್ಲಭವಾದಾಗ ಪಕ್ಷದ ವರಿಷ್ಠರ ಕಣ್ಣು ಡಿ.ಕೆ.ಶಿವಕುಮಾರ್ ಮೇಲೆ ಬಿತ್ತು. ಹೀಗಾಗಿ ರಾಜಕಾರಣದ ಪರಿಚಯವೇ ಇಲ್ಲದಿದ್ದ ಶಿವಕುಮಾರ್ ಅವರನ್ನು ಎಚ್.ಡಿ.ದೇವೇಗೌಡ ಅವರ ವಿರುದ್ದ ಸ್ಪರ್ಧಿಸಲು ಪಕ್ಷದ ಅಭ್ಯರ್ಥಿಯನ್ನಾಗಿ ನಿಲ್ಲಿಸಲಾಯಿತು. ಸಾಕಷ್ಟು ಪ್ರಬಲ ಪ್ರತಿರೋಧ ತೋರಿದ ಡಿ.ಕೆ.ಶಿವಕುಮಾರ್ ಚುನಾವಣೆಯಲ್ಲಿ ದೇವೇಗೌಡರು ಅತ್ಯಂತ ಪ್ರಯಾಸದ ಜಯ ಪಡೆಯುವಂತೆ ಮಾಡುವಲ್ಲಿ ಯಶಸ್ವಿಯಾದರು.

ವಿಧಾನಸಭಾ ಚುನಾವಣೆಯಾದ ಕೆಲವೇ ದಿನಗಳಲ್ಲಿ 1987ರಲ್ಲಿ ಅವರು ಸಾತನೂರು ಕ್ಷೇತ್ರದಿಂದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿಗೆ ಸದಸ್ಯರಾಗಿ ಆಯ್ಕೆಗೊಂಡರು. 1989ರಲ್ಲಿ ಅಖಿಲ ಭಾರತೀಯ ಕಾಂಗ್ರೆಸ್ ಪಕ್ಷದ ಮುಖೇನ ಸಾತನೂರು ಕ್ಷೇತ್ರದಿಂದ ಸ್ಪರ್ಧಿಯನ್ನಾಗಿ ನಿಲ್ಲಿಸಲಾಯಿತು. ಈ ಚುನಾವಣೆಯಲ್ಲಿ ಡಿ.ಕೆ.ಶಿವಕುಮಾರ್ ಅತ್ಯಧಿಕ ಮತಗಳಿಂದ ಜಯಗಳಿಸಿದರು.

1991ರಲ್ಲಿ ಅಂದಿನ ಮುಖ್ಯಮಂತ್ರಿ ವೀರೇಂದ್ರ ಪಾಟೀಲ್ ಅವರು ಅನಾರೋಗ್ಯದ ಕಾರಣ ಸಿಎಂ ಪದವಿ ತ್ಯಜಿಸಬೇಕಾಗಿ ಬಂದಾಗ ಅವರ ಉತ್ತರಾಧಿಕಾರಿಯನ್ನಾಗಿ ಎಸ್.ಬಂಗಾರಪ್ಪ ಸರ್ವಾನುಮತದಿಂದ ಆಯ್ಕೆಯಾಗುವಂತೆ ಮಾಡುವಲ್ಲಿ ಡಿ.ಕೆ.ಶಿವಕುಮಾರ್ ಪ್ರಮುಖ ಪಾತ್ರ ವಹಿಸಿದ್ದರು. ಇದಕ್ಕೆ ಬಹುಮಾನದ್ಯೋತಕವಾಗಿ ಬಂಗಾರಪ್ಪನವರು ಈ ಯುವಕನನ್ನು ಸಚಿವರನ್ನಾಗಿ ಮಾಡಿ ಬಂಧಿಖಾನೆ ಖಾತೆ ನೀಡಿದರು.

ಆದರೂ ಕೆಲ ರಾಜಕೀಯ ಕಾರಣಗಳಿಂದ ಅವರಿಗೆ 1994ರಲ್ಲಿ ಪಕ್ಷದ ಟಿಕೆಟ್ ವಿರೋಧಿಸಲಾಯಿತು, ಧೃತಿಗೆಡದೆ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಜಯಗಳಿಸಿ ಜಯದ ಪರಂಪರೆ ಮುಂದುವರೆಸಿದರು. 2004ರಲ್ಲಿ ಡಿ.ಕೆ. ಶಿವಕುಮಾರ್ ಸಾತನೂರು ಕ್ಷೇತ್ರದಿಂದ 4ನೇ ಭಾರಿ ಆರಿಸಿ ಬಂದರೂ ಕಾಂಗ್ರೆಸ್ ಪಕ್ಷ ಬಹುಮತಗಳಿಸುವಲ್ಲಿ ವಿಫಲವಾಯಿತು. ಬಳಿಕ ಜೆಡಿಎಸ್‌ ಜೊತೆಗೂಡಿ ಕಾಂಗ್ರೆಸ್‌ ಸಮ್ಮಿಶ್ರ ಸರಕಾರ ರಚನೆಯಾಯಿತು. ಹೀಗೆ ರಾಜ್ಯದಲ್ಲಿ ಪ್ರಥಮ ಬಾರಿಗೆ ಉದಯಿಸಿದ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರಕಾರದಲ್ಲಿ ಡಿ.ಕೆ.ಶಿವಕುಮಾರ್‍ಗೆ ಸ್ಥಾನವಿರಲಿಲ್ಲ.

ಟ್ರಬಲ್ ಶೂಟರ್: ನೆರೆಯ ಮಹಾರಾಷ್ಟ್ರದಲ್ಲಿ ವಿಲಾಸ್‍ರಾವ್ ದೇಶ್‍ಮುಖ್ ಸಮ್ಮಿಶ್ರ ಸರಕಾರ ಎನ್‍ಸಿಪಿ ಪಕ್ಷದೊಂದಿಗೆ ಸೆಣಸಾಟಕ್ಕಿಳಿದಾಗ ಸರಕಾರ ಅಲ್ಪಮತದ ಅಪಾಯಕ್ಕೆ ಸಿಕ್ಕಿಕೊಂಡಿತ್ತು. ಆಗ ಕುದುರೆ ವ್ಯಾಪಾರದ ಅಪಾಯ ಎದುರಾಗಿತ್ತು. ತಕ್ಷಣ ಕಾಂಗ್ರೆಸ್ ಹೈಕಮಾಂಡಿನ ಆದೇಶದಂತೆ ಕಾರ್ಯಪ್ರವೃತ್ತರಾದ ಶಿವಕುಮಾರ್ ಮಹಾರಾಷ್ಟ್ರ ಕಾಂಗ್ರೆಸ್ ಶಾಸಕರನ್ನು ಮುಂಬೈಯಿಂದ ಬೆಂಗಳೂರಿಗೆ ಕರೆದುಕೊಂಡು ಬಂದು 10-12 ದಿನಗಳ ಕಾಲ ಬೆಂಗಳೂರಿನ ರೆಸಾರ್ಟ್‍ವೊಂದರಲ್ಲಿ ಇರಿಸಿಕೊಂಡು ರಕ್ಷಣೆ ನೀಡಿದರು. ಮುಂಬೈಯಲ್ಲಿ ಪರಿಸ್ಥಿತಿ ತಿಳಿಯಾಗಿ ಸರಕಾರಕ್ಕೆ ಅಪಾಯವಿಲ್ಲವೆಂಬ ಸಂಗತಿ ಮನವರಿಕೆಯಾದ ನಂತರವಷ್ಟೇ ಮಹಾರಾಷ್ಟ್ರ ಶಾಸಕರನ್ನು ಕ್ಷೇಮವಾಗಿ ಕಳುಹಿಸಲಾಯಿತು.

ಹೀಗೆ ಡಿ.ಕೆ.ಶಿವಕುಮಾರ್ ಸಕಾಲಿಕ ರಾಜಕೀಯ ತಂತ್ರಗಾರಿಕೆ ಫಲಕೊಟ್ಟು ಮಹಾರಾಷ್ಟ್ರದಲ್ಲಿ ಸಿಎಂ ವಿಲಾಸ್‍ರಾವ್ ದೇಶ್‍ಮುಖ್ ಸರಕಾರ ಅಪಾಯ ಎದುರಿಸದೆ ಪಾರಾಗಿ ಮುಂದುವರೆಯುವಂತಾಯಿತು.

1999ರಲ್ಲಿ ಎಸ್.ಎಂ.ಕೃಷ್ಣ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಆಯ್ಕೆಗೊಂಡಾಗ ಡಿ.ಕೆ.ಶಿವಕುಮಾರ್ ಅವರ ಹಿಂದೆ ಬೆನ್ನೆಲುಬಾಗಿ ನಿಂತು ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಭೂತಪೂರ್ವ ರೀತಿಯಲ್ಲಿ ಜಯಗಳಿಸಿ ಸರಕಾರ ರಚಿಸುವಲ್ಲಿ ಕಾರಣೀಭೂತರಾದರು. ಎಸ್.ಎಂ.ಕೃಷ್ಣ ಚುನಾವಣಾ ಪೂರ್ವದಲ್ಲಿ ಪಾಂಚಜನ್ಯ ಮೊಳಗಿಸುವ ಮೂಲಕ ಚುನಾವಣಾ ಸಮರ ಆರಂಭಿಸಿದಾಗ, ಈ ಐತಿಹಾಸಿಕ ಯಾತ್ರೆಯನ್ನು ಆಯೋಜಿಸಿದವರು ಡಿ.ಕೆ.ಶಿವಕುಮಾರ್, ಇದರಿಂದಲೇ ಕಾಂಗ್ರೆಸ್ ಪಕ್ಷ 139 ಸ್ಥಾನಗಳನ್ನು ಗಳಿಸಿ ಸ್ವಂತ ಬಲದ ಮೇಲೆ ಸರಕಾರವನ್ನು ರಚಿಸುವಂತಾಯಿತು.

1999ರಲ್ಲಿ ಡಿ.ಕೆ.ಶಿವಕುಮಾರ್ ಅವರಿಗೆ ಮತ್ತೊಮ್ಮೆ ಸಾತನೂರು ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಪಕ್ಷ ಅನುಮತಿ ನೀಡಿತ್ತು. ಈ ಭಾರಿ ಅವರ ಎದುರಾಳಿ ಎಚ್.ಡಿ.ದೇವೇಗೌಡರ ಪುತ್ರ ಎಚ್.ಡಿ.ಕುಮಾರಸ್ವಾಮಿ, ದೇವೇಗೌಡರು ರಾಜಕೀಯ ಸ್ಥಿತ್ಯಂತರದಿಂದ ಅಂದಿನ ಪ್ರಧಾನಿಯಾಗಿದ್ದರು. ಆದರೆ ಆ ಚುನಾವಣೆಯಲ್ಲಿ ಕುಮಾರಸ್ವಾಮಿ ಸೋತರು. ಡಿ.ಕೆ.ಶಿವಕುಮಾರ್ ಸತತ 3ನೇ ಬಾರಿಗೆ ಮರಳಿ ಗೆಲುವು ಸಾಧಿಸಲು ಸಾಧ್ಯವಾಯಿತು. ಎಸ್.ಎಂ.ಕೃಷ್ಣ ಸಂಪುಟದಲ್ಲಿ ಸಚಿವರನ್ನಾಗಿ ನೇಮಿಸಿ ಮಹತ್ವದ ಸಹಕಾರ ಖಾತೆ ನೀಡುವ ಮೂಲಕ ಡಿ.ಕೆ.ಶಿವಕುಮಾರ್ ಶ್ರಮಕ್ಕೆತಕ್ಕ ಮನ್ನಣೆ ನೀಡಿದರು.(1999-2002).

2013ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಮರಳಿ ಬಂದು ಸಿದ್ಧರಾಮಯ್ಯ ಮುಖ್ಯಮಂತ್ರಿಗಳಾಗಿ ಆಯ್ಕೆಗೊಂಡಾಗ ಆರಂಭದಲ್ಲಿ ಶಿವಕುಮಾರ್‌ ಅವರಿಗೆ ಸಚಿವ ಸ್ಥಾನ ಕೈತಪ್ಪಿತ್ತು. ಬಳಿಕ 7 ತಿಂಗಳ ಅಲ್ಪಾವಧಿಯ ನಂತರ ಶಿವಕುಮಾರ್, ಸಿದ್ಧರಾಮಯ್ಯ ಸಂಪುಟದಲ್ಲಿ ಸಚಿವ ಸ್ಥಾನ ಪಡೆದುಕೊಂಡರು. ಇಂಧನ ಖಾತೆಯಂತಹ ಪ್ರಮುಖ ಖಾತೆಯನ್ನು ನೀಡಲಾಯಿತು.

ರೈತ ಸೂರ್ಯ ಯೋಜನೆ ರೂವಾರಿ: ಇಂಧನ ಸಚಿವರಾಗಿ ಡಿ.ಕೆ.ಶಿವಕುಮಾರ್ ಜಡ್ಡುಗಟ್ಟಿದ್ದ ಇಲಾಖೆಯನ್ನು ಅಮೂಲಾಗ್ರ ಸುಧಾರಣೆ ಮಾಡಲಾರಂಭಿಸಿದರು. ಹಿಂದಿನ ಸರಕಾರಗಳ ಅವಧಿಯಲ್ಲಿ ಸಹಿ ಮಾಡಲಾಗಿದ್ದ ಹಲವು ವಿದ್ಯುತ್ ಖರೀದಿ ಒಪ್ಪಂದಗಳನ್ನು ರದ್ದುಗೊಳಿಸಿದರು. ವಿದ್ಯುತ್ ಖರೀದಿಯಲ್ಲಿ ಅಕ್ರಮ ಕುರಿತ ಸದನ ಸಮಿತಿ ರಚನೆಗೆ ಕಾರಣರಾದರು. ‘ರೈತ ಸೂರ್ಯ’ ಯೋಜನೆಯನ್ನು ರೂಪಿಸಿ ಭೂ ಮಾಲಕರಾದ ರೈತರು ಸ್ವಯಂ 1ರಿಂದ 3 ಮೆ.ವ್ಯಾ. ಸೌರವಿದ್ಯುತ್ ಉತ್ಪಾದನೆ ಮಾಡುವಂತೆ ಅವಕಾಶ ಕಲ್ಪಿಸಿದರು. ರಾಜ್ಯ ಸರಕಾರದ ಈ ಯೋಜನೆಯನ್ನು ಕೇಂದ್ರ ಸರಕಾರ ಮುಕ್ತ ಕಂಠದಿಂದ ಪ್ರಶಂಸಿದೆಯಲ್ಲದೇ ಉಳಿದ ರಾಜ್ಯಗಳೂ ಕರ್ನಾಟಕದ ಮಾದರಿ ಅನುಸರಿಸುವಂತೆ ಕೇಂದ್ರ ಸಚಿವರೇ ಕರೆ ನೀಡಿದ್ದು, ನಿಜಕ್ಕೂ ಹೆಮ್ಮೆಯ ಸಂಗತಿ.

2018ರಲ್ಲಿ ಅಸ್ತಿತ್ವಕ್ಕೆ ಬಂದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರದಲ್ಲಿ ಮೊದಲಿಗೆ ಜಲಸಂಪನ್ಮೂಲ ನಂತರ ಹೆಚ್ಚುವರಿಯಾಗಿ ಕನ್ನಡ ಮತ್ತು ಸಂಸ್ಕೃತಿ ಖಾತೆಯನ್ನು ಪಡೆದ ಡಿ.ಕೆ.ಶಿವಕುಮಾರ್ ಅನೇಕ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತಂದರು, ಮಹದಾಯಿ ಸಮಸ್ಯೆ ಪರಿಹಾರ, ಎತ್ತಿನಹೊಳೆ, ಮೇಕೆದಾಟು ಯೋಜನೆಗಳ ಪ್ರಗತಿಗೆ ತಮ್ಮದೇ ಆದ ಕೊಡುಗೆ ನೀಡಿದ ಅವರು ರಾಜ್ಯದಲ್ಲಿ ಅತೀ ಹೆಚ್ಚು ಚೆಕ್ ಡ್ಯಾಮ್‍ಗಳ ನಿರ್ಮಾಣಕ್ಕೆ ಪ್ರೋತ್ಸಾಹಧನ ನೀಡಿಕೆ ಮೂಲಕ ಉತ್ತೇಜಿಸಿದರು.

ಕಾಂಗ್ರೆಸ್ ಕಟ್ಟಾಳು ಆಗಿರುವ ಡಿ.ಕೆ.ಶಿವಕುಮಾರ್ 2017ರಲ್ಲಿ ಹೈಕಮಾಂಡ್ ವಹಿಸಿದ ಜವಾಬ್ದಾರಿಯ ಮೇರೆಗೆ ಗುಜರಾತ್ ಕಾಂಗ್ರೆಸ್ ಶಾಸಕರನ್ನು ರಕ್ಷಿಸಿಟ್ಟುಕೊಟ್ಟ ಅವರು, ಅದಕ್ಕಾಗಿ ಭಾರಿ ಬೆಲೆಯನ್ನೇ ತೆರಬೇಕಾಯಿತಾದರೂ ವಿಚಲಿತರಾಗಲಿಲ್ಲ.

ಪಕ್ಷದ ಸಂಘಟನೆ: ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸೋನಿಯಾ ಗಾಂಧಿ ಅವರು 2020ರ ಮಾರ್ಚ್ 11ರಂದು ಡಿ.ಕೆ.ಶಿವಕುಮಾರ್ ಅವರನ್ನು ನೇಮಿಸಿದರು. ಈ ನೇಮಕವಾದ ಕೆಲವೇ ದಿನಗಳಲ್ಲಿ ಕೋವಿಡ್ ಸೋಂಕು ದೇಶದೆಲ್ಲೆಡೆ ಆವರಿಸಿತು. ಈ ವೇಳೆ ಶಿವಕುಮಾರ್ ಅವರು, ಪಕ್ಷದ ನಾಯಕರು ಹಾಗೂ ಕಾರ್ಯಕರ್ತರಿಗೆ ಉತ್ತೇಜನ ನೀಡಿ, ಅವರು ಸಂಕಷ್ಟಕ್ಕೆ ಸಿಲುಕಿರುವ ಜನರಿಗೆ ಸಹಾಯ ಮಾಡಲು ಕರೆ ನೀಡಿದರು.

ಕಾಂಗ್ರೆಸ್ ವತಿಯಿಂದ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನ ಆರಂಭಿಸಿದಾಗ, ಮತ್ತೆ ತಮ್ಮ ಕಾರ್ಯಕರ್ತರನ್ನು ಜನರತ್ತ ಕಳುಹಿಸಿ ರಾಜ್ಯದಲ್ಲಿ ಯಶಸ್ವಿಯಾಗಿ ಸದಸ್ಯತ್ವ ನೋಂದಣಿ ಅಭಿಯಾನ ಮಾಡಿದರು. ಪಕ್ಷದ ಸದಸ್ಯತ್ವ ಅಭಿಯಾನ ಯಶಸ್ವಿ ಜಾರಿ ಹಾಗೂ ರಾಜ್ಯದಲ್ಲಿ 78ಲಕ್ಷ ಸದಸ್ಯತ್ವ ನೋಂದಣಿ ಮೂಲಕ ದೇಶದಲ್ಲಿ ಪ್ರಥಮ ಸ್ಥಾನ ಪಡೆದು ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ತುಂಬಿದರು. ಕಾವೇರಿ ಜಲಾನಯನ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ, ವಿದ್ಯುತ್ ಉತ್ಪಾದನೆ ಸೇರಿದಂತೆ ಹಲವು ಪ್ರಯೋಜನಗಳನ್ನು ಹೊಂದಿರುವ ಮೇಕೆದಾಟು ಯೋಜನೆಗೆ ಸರಕಾರ ನಿರ್ಲಕ್ಷ್ಯ ವಹಿಸಿದಾಗ ಈ ಯೋಜನೆ ಆಗ್ರಹಿಸಿ, ಈ ಭಾಗದಲ್ಲಿ 160 ಕಿ.ಮೀ ಪಾದಯಾತ್ರೆ ಮಾಡಿದರು.

ಅಲ್ಲದೆ, ಕೇಂದ್ರದ ಕೃಷಿ ಕಾಯ್ದೆ ವಿರುದ್ಧ ಬೀದಿಗಿಳಿದು ಹೋರಾಟ ಮಾಡಿದರು. ರೈತರ ಬೆನ್ನಿಗೆ ನಿಂತರು. ಬಿಜೆಪಿ ಸರಕಾರದ ವಿರುದ್ಧ ಶೇ.40ರಷ್ಟು ಕಮಿಷನ್, ಪೇ ಸಿಎಂ, ನೇಮಕಾತಿ ಅಕ್ರಮ ವಿರುದ್ಧ ಬೀದಿಗಿಳಿದು ಹೋರಾಟ ಮಾಡಿದರು.

ರಾಹುಲ್ ಗಾಂಧಿ ‘ಭಾರತ ಜೋಡೋ ಯಾತ್ರೆ’ ಆರಂಭಿಸಿದ ನಂತರ ಕರ್ನಾಟಕದಲ್ಲಿ 21 ದಿನಗಳ ಕಾಲ 550 ಕಿ.ಮೀ ಉದ್ದದ ಭಾರತ ಜೋಡೋ ಯಾತ್ರೆ ಯಶಸ್ವಿ ಆಯೋಜನೆ ಮಾಡಿದರು. ಈ ಯೋಜನೆ ಹಾದು ಹೋದ ಮಾರ್ಗದಲ್ಲಿ ಕಾಂಗ್ರೆಸ್ ಪಕ್ಷ-2023ರ ಸಾರ್ವತ್ರಿಕ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸುವಲ್ಲಿ ಪ್ರಮುಖ ಕಾರಣವಾಯಿತು.

ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಪಕ್ಷ 2023ರ ವಿಧಾನಸಭೆ ಚುನಾವಣೆಯಲ್ಲಿ 136 ಕ್ಷೇತ್ರಗಳಲ್ಲಿ ಗೆದ್ದು ಭರ್ಜರಿ ಬಹುಮತದೊಂದಿಗೆ ಸರಕಾರ ರಚನೆ ಮಾಡಿತು. ಈ ಸರಕಾರದಲ್ಲಿ ಉಪ ಮುಖ್ಯಮಂತ್ರಿಯಾಗಿ, ಜಲಸಂಪನ್ಮೂಲ ಇಲಾಖೆ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ಅಧಿಕಾರ ನಡೆಸಿದರು.

Tags

D.K.ShivakumarChief Minister of Karnataka
share
ವಾರ್ತಾಭಾರತಿ
ವಾರ್ತಾಭಾರತಿ
Next Story
X