ಸಿದ್ದರಾಮಯ್ಯ ಬೆನ್ನಲ್ಲೆ ಡಿಸಿಎಂ ಡಿ.ಕೆ.ಶಿವಕುಮಾರ್ ದಿಲ್ಲಿಗೆ ಪ್ರಯಾಣ

ಡಿ.ಕೆ.ಶಿವಕುಮಾರ್ (Photo credit: PTI)
ಬೆಂಗಳೂರು: ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಸಿದ್ದರಾಮಯ್ಯ ದಿಲ್ಲಿಗೆ ತೆರಳಿದ ಬೆನ್ನಲ್ಲೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೊಸದಿಲ್ಲಿಗೆ ತೆರಳಲಿದ್ದಾರೆ.
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸಂಜೆ 7:40ರ ಸುಮಾರಿಗೆ ದಿಲ್ಲಿಗೆ ಪ್ರಯಾಣ ಬೆಳೆಸಲಿದ್ದು ಹೊಸದಿಲ್ಲಿ ವಾಸ್ತವ್ಯ ಇರಲಿದ್ದಾರೆ.
ಮೇ 29ರಂದು ದಿಲ್ಲಿಯಲ್ಲಿ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಮುಂದಿನ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆ ಸಹಿತ ಇನ್ನಿತರ ವಿಚಾರಗಳ ಕುರಿತು ಚರ್ಚಿಸಲಿದ್ದಾರೆ ಎಂದು ಹೇಳಲಾಗಿದೆ.
Next Story




