Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಎಚ್‌ಡಿಕೆ ಚನ್ನಪಟ್ಟಣದಲ್ಲಿ ಕೆಲಸ...

ಎಚ್‌ಡಿಕೆ ಚನ್ನಪಟ್ಟಣದಲ್ಲಿ ಕೆಲಸ ಮಾಡಿಲ್ಲ ಎನ್ನುವುದಕ್ಕೆ ಅಲ್ಲಿ ಬಂದಿರುವ 10 ಸಾವಿರ ಅರ್ಜಿಗಳೇ ಸಾಕ್ಷಿ : ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ6 July 2024 10:28 PM IST
share
ಎಚ್‌ಡಿಕೆ ಚನ್ನಪಟ್ಟಣದಲ್ಲಿ ಕೆಲಸ ಮಾಡಿಲ್ಲ ಎನ್ನುವುದಕ್ಕೆ ಅಲ್ಲಿ ಬಂದಿರುವ 10 ಸಾವಿರ ಅರ್ಜಿಗಳೇ ಸಾಕ್ಷಿ : ಡಿ.ಕೆ.ಶಿವಕುಮಾರ್

ಬೆಂಗಳೂರು: "ಕುಮಾರಸ್ವಾಮಿ ಅವರು ಶಾಸಕರಾಗಿದ್ದ ಚನ್ನಪಟ್ಟಣದಲ್ಲಿ ಜನರು ತಮ್ಮ ಕುಂದುಕೊರತೆಗಳ ಬಗ್ಗೆ 10 ಸಾವಿರ ಅರ್ಜಿಗಳನ್ನು ಕೊಟ್ಟಿದ್ದಾರೆ. ಕುಮಾರಸ್ವಾಮಿ ಅವರು ಜನರ ಪರ ಕೆಲಸ ಮಾಡಿಲ್ಲ ಎನ್ನುವುದಕ್ಕೆ ಇದಕ್ಕಿಂತ ಸಾಕ್ಷಿ ಬೇಕೆ?" ಎಂದು ಡಿಸಿಎಂ ಡಿಸಿಎಂ ಡಿ. ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ.

"ಮಂಡ್ಯದ ಜನತಾದರ್ಶನದಲ್ಲಿ ಮೂರುವರೆ ಸಾವಿರ ಅರ್ಜಿಗಳನ್ನು ಸ್ವೀಕಾರ ಮಾಡಿದ್ದೇನೆ. ಸರಕಾರ ಜನರ ಸಮಸ್ಯೆ ನಿವಾರಿಸುವಲ್ಲಿ ವಿಫಲಾಗಿದೆ. ಸಚಿವರು, ಶಾಸಕರು ಕೆಲಸ ಮಾಡಿಲ್ಲ" ಎಂದು ಕುಮಾರಸ್ವಾಮಿ ಅವರು ಮಾಡಿರುವ ಆರೋಪದ ಬಗ್ಗೆ ಮಾಧ್ಯಮದವರು ಗಮನ ಸೆಳೆದಾಗ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೀಗೆ ತಿರುಗೇಟು ಕೊಟ್ಟರು.

"ಕುಮಾರಸ್ವಾಮಿ ಅವರು ಏನೋ ಒಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ ತಮ್ಮ ಸಮಸ್ಯೆಗಳ ನಿವಾರಣೆಗೆ ಚನ್ನಪಟ್ಟಣದ ಜನರು ಸಾವಿರಾರು ಅರ್ಜಿ ಕೊಟ್ಟಿರುವುದಕ್ಕೆ ನಮ್ಮ ಬಳಿ ದಾಖಲೆಗಳಿವೆ. ದೂರವಾಣಿ ಸಂಖ್ಯೆಯಿದೆ. ಇದಕ್ಕೆ ಏನು ಹೇಳಬೇಕು" ಎಂದು ಮರು ಪ್ರಶ್ನಿಸಿದರು.

ಭಾರತ್ ಜೋಡೋ ಸಭಾಂಗಣದಲ್ಲಿ ನಡೆದ "ಕಾರ್ಯಕರ್ತರೊಂದಿಗೆ ನಿಮ್ಮ ಡಿಸಿಎಂ" ಕಾರ್ಯಕ್ರಮದ ನಡುವೆ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಶಿವಕುಮಾರ್ ಅವರು "ಕುಮಾರಸ್ವಾಮಿ ಒಬ್ಬರೇ ರಾಜಕಾರಣ ಮಾಡುತ್ತಿದ್ದಾರಾ? ನಮಗೂ ರಾಜಕಾರಣ ಬರುತ್ತದೆ. ಆದರೆ ನಮಗೆ ರಾಜಕಾರಣ ಮುಖ್ಯವಲ್ಲ, ಜನರ ಸೇವೆ ಮುಖ್ಯ. ಆದ ಕಾರಣ ಈ ಕಾರ್ಯಕ್ರಮ ಮಾಡುತ್ತಿದ್ದೇವೆ” ಎಂದು ತಿವಿದರು.

ಮೂಡಾದಲ್ಲಿ ಕಾನೂನು ಪ್ರಕಾರ ಪರಿಹಾರ ನೀಡಲಾಗಿದೆ :

ಮುಡಾ ಅಕ್ರಮದ ದಾಖಲೆಗಳನ್ನು ನಾಶ ಮಾಡಲಾಗುತ್ತಿದೆ, ಹಗರಣ ಮುಚ್ಚಿ ಹಾಕಲಾಗುತ್ತಿದೆ ಎನ್ನುವ ಆರೋಪದ ಬಗ್ಗೆ ಕೇಳಿದಾಗ “ಯಾರು ಯಾವುದನ್ನು ಮುಚ್ಚಿ ಹಾಕಬೇಕಾಗಿಲ್ಲ. ಇಲ್ಲಿ ಯಾವುದೇ ಅನ್ಯಾಯವೂ ಆಗಿಲ್ಲ. ಆಸ್ತಿ ಕಳೆದುಕೊಂಡವರು ಪರಿಹಾರಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. ಮುಡಾ ನಿಯಮದಂತೆ ಪರಿಹಾರ ನೀಡಲಾಗುತ್ತದೆ. ಬಿಡಿಎನಲ್ಲಿ ಶೇ 60:40 ಅನುಪಾತ ಇದ್ದು, ಮೂಡಾದಲ್ಲಿ 50:50 ಅನುಪಾತದಲ್ಲಿ ಪರಿಹಾರ ನೀಡುವಂತೆ ಕಾನೂನು ಮಾಡಿಕೊಂಡಿದ್ದಾರೆ. ಹೀಗಾಗಿ ಕಾನೂನು ಪ್ರಕಾರವೇ ಪರಿಹಾರ ನೀಡಲಾಗಿದೆ. ಸಿಎಂ ಅವರು ಚುನಾವಣಾ ಅಫಿಡವಿಟ್ ನಲ್ಲಿ ತಮ್ಮ ಪತ್ನಿಗೆ ಬಂದಿರುವ ಆಸ್ತಿಗಳ ಬಗ್ಗೆ ಹೇಳಿದ್ದಾರೆ ಎಂದು ತಿಳಿಸಿದರು.

13ಕ್ಕೆ ಮುಖ್ಯಮಂತ್ರಿಗಳಿಂದ ಕಾರ್ಯಕರ್ತರ ಭೇಟಿ :

ಪದಾಧಿಕಾರಿಗಳು, ಕಾರ್ಯಕರ್ತರನ್ನು ಭೇಟಿ ಮಾಡುವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬರಬೇಕಾಗಿತ್ತು. ಅನ್ಯ ಕಾರ್ಯನಿಮಿತ್ತ ಬರಲಾಗಲಿಲ್ಲ. ಆದರೆ ಜುಲೈ 13 ರಂದು ಭೇಟಿಯಾಗಲಿದ್ದಾರೆ. ಶೀಘ್ರದಲ್ಲೇ ದಿನಕ್ಕೆ ಇಬ್ಬರು ಮಂತ್ರಿಗಳು ಕಾರ್ಯಕರ್ತರನ್ನು ಭೇಟಿಯಾಗುವ ಕಾರ್ಯಕ್ರಮ ರೂಪಿಸಲಾಗುವುದು. ಯಾವ, ಯಾವ ಮಂತ್ರಿಗಳು ಯಾವಾಗ ಲಭ್ಯವಿರಲಿದ್ದಾರೆ ಎನ್ನುವ ವೇಳಾಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X