Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕೆಂಪೇಗೌಡರ ಸ್ಮಾರಕಗಳ ಅಭಿವೃದ್ಧಿಗೆ 103...

ಕೆಂಪೇಗೌಡರ ಸ್ಮಾರಕಗಳ ಅಭಿವೃದ್ಧಿಗೆ 103 ಕೋಟಿ ರೂ., ಕಾಲೇಜು ಸ್ಥಾಪನೆಗೆ 100 ಕೋಟಿ ರೂ. ಮೀಸಲು : ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ4 Oct 2025 10:32 PM IST
share
ಕೆಂಪೇಗೌಡರ ಸ್ಮಾರಕಗಳ ಅಭಿವೃದ್ಧಿಗೆ 103 ಕೋಟಿ ರೂ., ಕಾಲೇಜು ಸ್ಥಾಪನೆಗೆ 100 ಕೋಟಿ ರೂ. ಮೀಸಲು : ಡಿ.ಕೆ.ಶಿವಕುಮಾರ್
"ಕಸ ಸಮಸ್ಯೆ ನಿವಾರಣೆಗೆ ಅಭಿಯಾನ, 1 ಕೋಟಿ‌ ರೂ. ದಂಡ ಸಂಗ್ರಹ"

ಬೆಂಗಳೂರು, ಅ. 4: ನಾಡಪ್ರಭು ಕೆಂಪೇಗೌಡರ ಎಲ್ಲ ಸ್ಮಾರಕಗಳನ್ನು ಪುನರುಜ್ಜೀವನಗೊಳಿಸಲು 103 ಕೋಟಿ ರೂ. ಅನುದಾನ ಹಾಗೂ ಕೆಂಪೇಗೌಡರ ಹೆಸರಿನಲ್ಲಿ ನಗರ ವಿನ್ಯಾಸ ಕಾಲೇಜು ಸ್ಥಾಪನೆಗೆ 100 ಕೋಟಿ ರೂ.ಅನುದಾನ ಮೀಸಲಿಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ಶನಿವಾರ ವಿಧಾನಸೌಧದಲ್ಲಿ ನಡೆದ ಮಾಧ್ಯಮಗೋಷ್ಠಿಯನ್ನುದ್ದೇಶಿಸಿ ಶಿವಕುಮಾರ್ ಮಾತನಾಡಿದ ಅವರು, ಮಾಗಡಿ ಕೋಟೆಯ ಪುನರುಜ್ಜೀವನ ಕೆಲಸ ಶೇ. 50ರಷ್ಟು ಮುಗಿದಿದೆ. ಆಂತರಿಕ ಸಮನ್ವಯತೆ ಸಾಧಿಸಲು ಸಮಿತಿಯನ್ನು ರಚಿಸಲಾಗುವುದು. ಕೆಂಪೇಗೌಡರ ಸಮಾಧಿ ಸ್ಥಳದಲ್ಲಿ 10 ಎಕರೆ ಜಮೀನು ಸ್ವಾಧೀನ ಪಡಿಸಿಕೊಳ್ಳುತ್ತಿದ್ದು ಶೇ.90 ಸ್ವಾಧೀನ ಕಾರ್ಯ ಪೂರ್ಣಗೊಂಡಿದೆ. ಇದಕ್ಕೂ ಅನುದಾನವನ್ನು ಮೀಸಲಿಡಲಾಗಿದೆ ಎಂದರು.

ನಗರ ವಿನ್ಯಾಸ ಕಾಲೇಜಿನಲ್ಲಿ ಸುಮಾರು 300 ಜನ ವಿದ್ಯಾರ್ಥಿಗಳು ಅಭ್ಯಾಸ ಮಾಡುವಂತೆ ನಾವು ಆಲೋಚನೆ ಮಾಡಿದ್ದೇವೆ. ಇದಕ್ಕಾಗಿ ವಿಟಿಯು ಅವರು ತಯಾರಿಸಿದ ಪಠ್ಯಕ್ರಮ ಅಳವಡಿಸಿಕೊಳ್ಳುವ ಸಂಬಂಧ ಅವರ ಜೊತೆ ಚರ್ಚೆ ನಡೆಸಲಾಗುವುದು. ಸುಮ್ಮನಹಳ್ಳಿಯ ಬಳಿ ಐದು ಎಕರೆ ಪ್ರದೇಶದಲ್ಲಿ ನಿರ್ಮಾಣ ಮಾಡುತ್ತಿರುವ ಕೆಂಪೇಗೌಡ ಭವನಕ್ಕೆ ಅತ್ಯುತ್ತಮ ಕಟ್ಟಡ ವಿನ್ಯಾಸವನ್ನು ನೀಡಲು ವಾಸ್ತುಶಿಲ್ಪಿಗಳಿಂದ ವಿನ್ಯಾಸ ನೀಡಲು ಆಹ್ವಾನ ನೀಡಲಾಗಿದೆ ಎಂದು ಅವರು ಹೇಳಿದರು.

ನಗರ ವಿನ್ಯಾಸ ಅಧ್ಯಯನ ಮಾಡಿದವರಿಗೆ ಬಿಜಿಎ ಮತ್ತು ಪಾಲಿಕೆಗಳಲ್ಲಿ ಉದ್ಯೋಗ ನೀಡಬೇಕಿದೆ. ಏಕೆಂದರೆ ಬೆಂಗಳೂರಿಗೆ ನಗರ ವಿನ್ಯಾಸಕಾರರ ಅವಶ್ಯಕತೆ ಹೆಚ್ಚಿದೆ. ಕಾಲೇಜು ನಿರ್ಮಾಣಕ್ಕಾಗಿ ನಗರಾಭಿವೃದ್ದಿ ಇಲಾಖೆ, ಕೆಂಪೇಗೌಡ ಪ್ರಾಧಿಕಾರ ಮತ್ತು ಜಿಬಿಎಯಿಂದ ಅನುದಾನ ಮೀಸಲಿಡಲಾಗಿದೆ. ಏರ್ ಪೋರ್ಟ್ ಬಳಿಯ ಕೆಂಪೇಗೌಡ ಪ್ರತಿಮೆ ಬಳಿ ಥೀಮ್ ಪಾರ್ಕ್ ನಿರ್ಮಾಣ ಸಂಬಂಧ ಸಚಿವರಾದ ಕೃಷ್ಣೇಭೈರೇಗೌಡರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದರು.

ಎಲ್ಲೆಂದರಲ್ಲಿ ‌ಕಸ ಸಮಸ್ಯೆ ನಿವಾರಣೆಗೆ ಅಭಿಯಾನ :

ಐದು ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಗುಂಡಿ ಹಾಗೂ ರಸ್ತೆ ದುರಸ್ತಿಗಳನ್ನು ಅತ್ಯಂತ ವೇಗವಾಗಿ ಅಧಿಕಾರಿಗಳು ಮಾಡುತ್ತಿದ್ದಾರೆ. ದಸರಾ ರಜೆ ಇದ್ದ ಕಾರಣಕ್ಕೆ ಎಲ್ಲೆಂದರಲ್ಲಿ ಕಸದ ಸಮಸ್ಯೆ ಹೆಚ್ಚಿದೆ. ಇದಕ್ಕೂ ಒಂದು ಅಭಿಯಾನ ನಡೆಸಲಾಗುವುದು. ಎಲ್ಲೆಂದರಲ್ಲಿ ಕಟ್ಟಡ ತ್ಯಾಜ್ಯ ಹಾಗೂ ಕಸವನ್ನು ಎಸೆಯುವರನ್ನು ಗುರುತಿಸಿ ಅವರ ವಿರುದ್ಧ ಪ್ರಕರಣ ದಾಖಲಿಸಿ ಎಂದು ಪೊಲೀಸರಿಗೆ ಸೂಚನೆ ನೀಡಿದ್ದೇವೆ. ಬೆಂಗಳೂರನ್ನು ಸ್ವಚ್ಛವಾಗಿ ಇಡಲು ಎಲ್ಲೆಂದರಲ್ಲಿ ಸುರಿದಿರುವ ಕಟ್ಟಡ ತ್ಯಾಜ್ಯಗಳನ್ನು ಶೀಘ್ರ ವಿಲೇವಾರಿ ಮಾಡಲಾಗುವುದು ಎಂದರು.

ನಗರದಾದ್ಯಂತ ಎಲ್ಲೆಂದರಲ್ಲಿ ಕೇಬಲ್ ಗಳನ್ನು ಎಳೆಯಲಾಗಿದೆ. ಬೆಸ್ಕಾಂಗೆ ಸೇರಿದ ಕಂಬಗಳಲ್ಲಿ ಟಿವಿ ಕೇಬಲ್ ಗಳು ನೇತಾಡುತ್ತಿದ್ದು ನಗರ ಸೌಂದರ್ಯಕ್ಕೆ ಕಪ್ಪುಚುಕ್ಕೆಯಾಗಿದೆ. ಸಮಸ್ಯೆ ಬಗೆಹರಿಸಲು ಸಚಿವರಾದ ಕೆ.ಜೆ.ಜಾರ್ಜ್ ಅವರೊಟ್ಟಿಗೆ ಮತ್ತೊಂದು ಸುತ್ತಿ‌ನ ಸಭೆ ನಡೆಸಲಾಗುವುದು. ಡೆಕ್ ಒಳಗಡೆ ಕೇಬಲ್‌‌ ಗಳನ್ನು ಸಾಗಿಸಲು ಯಾರೂ ಸಹ ಸಹಕಾರ ‌ನೀಡುತ್ತಿಲ್ಲ. ಎಂಟನೇ ತಾರಿಕೀನ ನಂತರ 4 ಲಕ್ಷ ವಿದ್ಯುತ್ ಸಂಪರ್ಕ ನೀಡುವುದರ ಬಗ್ಗೆ ಮುಖ್ಯಮಂತ್ರಿಯವರು ಸಭೆ ಕರೆದಿದ್ದಾರೆ. ಇದರ ಜೊತೆಗೆ ಮುಂದಿನ ವಾರ ಎ ಹಾಗೂ ಬಿ ಖಾತಾ ವಿಚಾರವಾಗಿ ಮಾಹಿತಿ ನೀಡಲಾಗುವುದು ಎಂದರು.

ನಗರದ ಕೆಲವೊಂದು ಕಡೆ ಈ ಡೆಕ್ ಸೌಲಭ್ಯ ನೀಡಲಾಗಿದೆ. ಅವಕಾಶ ಇರುವ ಕಡೆಯಲ್ಲಿ ಹಾಕಿಕೊಳ್ಳಿ ಎಂದು ತಿಳಿಸಿದ್ದೇವೆ. ಇದಕ್ಕಾಗಿ ಬೆಸ್ಕಾಂ, ಪಾಲಿಕೆಗಳು ಸೇರಿ ಸಭೆ ನಡೆಸಿ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡಲಾಗುವುದು ಎಂದರು.

ಸಾರ್ವಜನಿಕ ಸ್ಥಳಗಳಲ್ಲಿ ಕಸವನ್ನು ಹಾಕಲು ಡಬ್ಬಿಗಳನ್ನು ಇಡುವ ಕುರಿತು ಕೇಳಿದಾಗ, "ಈ ಬಗ್ಗೆ ಪಾಲಿಕೆಗಳ ಆಯುಕ್ತರಿಗೆ ವರದಿ ನೀಡಿ ಎಂದು ಹೇಳಿದ್ದೇನೆ. ಜಿಬಿಎ ಹಾಗೂ ಐದು ಪಾಲಿಕೆಗಳ ಆಯುಕ್ತರು ಸೇರಿ ಇತರೆ ನಗರಗಳಲ್ಲಿ ಯಾವ ರೀತಿ ವ್ಯವಸ್ಥೆ ಇದೆ ಎಂಬುದನ್ನು ತಿಳಿದುಕೊಂಡು ವರದಿ ನೀಡಿ ಎಂದು ತಿಳಿಸಿದ್ದೇನೆ. ಜನರು ರಸ್ತೆ ಬದಿ ಹಾಗೂ ಎಲ್ಲೆಂದರಲ್ಲಿ ಕಸವನ್ನು ಎಸೆಯುತ್ತಿದ್ದಾರೆ. ಇದನ್ನು ತಪ್ಪಿಸಲು ಕ್ರಮ ತೆಗೆದುಕೊಳ್ಳುತ್ತೇವೆ. ಸಾರ್ವಜನಿಕರು ಇದಕ್ಕೆ ಸಹಕಾರ ನೀಡಬೇಕು. ಎಲ್ಲೆಂದರಲ್ಲಿ ಅದರ ಫೋಟೋ ತೆಗೆದು ಪಾಲಿಕೆಗಳು ಸೂಚಿಸಿರುವ ದೂರವಾಣಿ ಸಂಖ್ಯೆಗೆ ಕಳುಹಿಸಬೇಕು" ಎಂದರು.

1 ಕೋಟಿ ದಂಡ ಸಂಗ್ರಹ :

ಎಲ್ಲಿಂದರಲ್ಲಿ ಕಸ ಎಸೆಯುವವರಿಗೆ ದಂಡ ವಿಧಿಸುತ್ತಿರುವ ಪ್ರಕ್ರಿಯೆ ನಿಂತು ಹೋಗಿದೆ, ಮಾರ್ಷಲ್ ಗಳ ನಿಯೋಜನೆಯಾಗಿಲ್ಲ ಎಂದು ಕೇಳಿದಾಗ, " ಈ ಪ್ರಕ್ರಿಯೆ ನಿಂತಿಲ್ಲ. ಏಕ ಬಳಕೆಯ ಪ್ಲಾಸ್ಟಿಕ್ ಸೇರಿದಂತೆ ಎಲ್ಲೆಂದರಲ್ಲಿ ಕಸ ಎಸೆಯುವವರಿಂದ 1 ಕೋಟಿ ರೂ. ದಂಡ ಸಂಗ್ರಹ ಮಾಡಲಾಗಿದೆ. ಜೊತೆಗೆ ಕಸ ಸಂಗ್ರಹ ವಾಹನಗಳ ಸಂಖ್ಯೆಯನ್ನು ಹೆಚ್ಚಿಸಲಾಗುತ್ತದೆ. ಈ ಮೊದಲು 198 ವಾರ್ಡ್ ಗಳು ಮಾತ್ರ ಇದ್ದವು ಈಗ 300ಕ್ಕೂ ಹೆಚ್ಚು ವಾರ್ಡ್‌ ಗಳು ಆಗುತ್ತಿರುವುದರಿಂದ ಕಸ ಸಂಗ್ರಹ ಸಾಮರ್ಥ್ಯವನ್ನು ಹೆಚ್ಚಿಸಲಾಗುವುದು. ಅಲ್ಲದೇ ಬೆಂಗಳೂರಿನ ವ್ಯಾಪ್ತಿಗೆ ಸೇರದ ಆದರೆ ಪಕ್ಕ ಪಕ್ಕದ ಪ್ರದೇಶಗಳ ಹಕ್ಕು ಸೂಚನೆ ನೀಡಲಾಗಿದೆ. ಏಕೆಂದರೆ ಅದರಿಂದಲೂ ಬೆಂಗಳೂರಿಗೆ ತೊಂದರೆ ಆಗುತ್ತದೆ" ಎಂದರು.

"ಎ ಮತ್ತು ಬಿ ಖಾತಾ ವಿಚಾರದಲ್ಲಿ ಕ್ರಾಂತಿಕಾರಿ ಕೆಲಸಗಳು ನಡೆದಿವೆ. ಈ ಮೊದಲು ಹೇಗಿತ್ತು, ಏನಾಗಿದೆ ಎಂದು ಇದರ ಬಗ್ಗೆ ಮುಂದಿನ ದಿನಗಳಲ್ಲಿ ಪಿಪಿಟಿ ತಯಾರಿಸಿ ಪ್ರತಿಯೊಂದೂ ಮಾಹಿತಿ ನೀಡಲಾಗುವುದು. ಟೀಕೆ ಮಾಡುವವರಿಗೂ ಇದರಿಂದ ಉತ್ತರ ದೊರೆಯಲಿದೆ" ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X