Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಡಿ.ಕೆ.ಶಿವಕುಮಾರ್ ಅವರೇ, ನಿಮ್ಮ ಕೆಟ್ಟ...

ಡಿ.ಕೆ.ಶಿವಕುಮಾರ್ ಅವರೇ, ನಿಮ್ಮ ಕೆಟ್ಟ ರಾಜಕೀಯ ಆಟ ನನ್ನ ಬಳಿ ನಡೆಯಲ್ಲ: ಎಚ್.ಡಿ.ದೇವೇಗೌಡ

ವಾರ್ತಾಭಾರತಿವಾರ್ತಾಭಾರತಿ1 Oct 2023 10:57 PM IST
share
ಡಿ.ಕೆ.ಶಿವಕುಮಾರ್ ಅವರೇ, ನಿಮ್ಮ ಕೆಟ್ಟ ರಾಜಕೀಯ ಆಟ ನನ್ನ ಬಳಿ ನಡೆಯಲ್ಲ: ಎಚ್.ಡಿ.ದೇವೇಗೌಡ

ಬೆಂಗಳೂರು, ಅ.1: ಜೆಡಿಎಸ್ ಪಕ್ಷವನ್ನು ಶೂನ್ಯ ಮಾಡಿಬಿಡುತ್ತೇನೆ. ಅಲ್ಲಿ ಒಬ್ಬ ಸಮರ್ಥ ನಾಯಕನನ್ನು ಇರಲು ಬಿಡಲ್ಲ ಎಂದು ಹೇಳಿದ್ದೀರಿ ಮಿಸ್ಟರ್ ಡಿ.ಕೆ.ಶಿವಕುಮಾರ್. ನಿಮ್ಮ ಈ ಕಸನು ಎಂದಿಗೂ ಈಡೇರುವುದಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಗುಡುಗಿದ್ದಾರೆ.

ರವಿವಾರ ರಾಮನಗರ ಜಿಲ್ಲೆಯ ಬಿಡದಿ ಬಳಿಯ ಕೇತಿಗಾನಹಳ್ಳಿಯಲ್ಲಿರುವ ಎಚ್.ಡಿ.ಕುಮಾರಸ್ವಾಮಿ ಅವರ ತೋಟದಲ್ಲಿ ಆಯೋಜಿಸಿದ್ದ ಜೆಡಿಎಸ್ ಪಕ್ಷದ ಶಾಸಕರು, ಮಾಜಿ ಶಾಸಕರು, ಮಾಜಿ ಸಚಿವರು, ಜಿಲ್ಲಾಧ್ಯಕ್ಷರು ಹಾಗೂ ಹಿರಿಯ ಮುಖಂಡರ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಡಿ.ಕೆ.ಶಿವಕುಮಾರ್ ಅವರೇ, ನಿಮ್ಮ ಕೆಟ್ಟ ರಾಜಕೀಯ ಆಟ ನನ್ನ ಬಳಿ ನಡೆಯಲ್ಲ. ಅದು ನಿಮಗೆ ಗೊತ್ತಿರಲಿ, ನಮ್ಮ ಪಕ್ಷವನ್ನು ಏನು ಮಾಡಲು ಸಾಧ್ಯವಿಲ್ಲ. ಆ ವ್ಯಕ್ತಿಗೆ ಉತ್ತರ ಕೊಡಬೇಕು, ಕೊಡುವ ಕೆಲಸ ಮಾಡುತ್ತೇವೆ. ನಮ್ಮ ಪಕ್ಷವನ್ನು ದುರ್ಬಲಗೊಳಿಸಲು ಯಾರಿಂದಲೂ ಸಾಧ್ಯವಿಲ್ಲ. ಒಂದು ವೇಳೆ ಯಾರಾದರೂ ಹಾಗೆ ಭಾವಿಸಿದ್ದರೆ ಅದು ಅವರ ಭ್ರಮೆ ಅಷ್ಟೇ ಎಂದು ಅವರು ಹೇಳಿದರು.

ಕುಮಾರಸ್ವಾಮಿ ಈ ಸಭೆಯ ಮೂಲಕ ಇವತ್ತು ಒಳ್ಳೆಯ ಸಂದೇಶ ನೀಡಿದ್ದಾರೆ. ಪಕ್ಷದ ಶಕ್ತಿ ಏನು ಎಂಬುದನ್ನು ಅವರು ತೋರಿಸಿಕೊಟ್ಟಿದ್ದಾರೆ. ಈ ಸಭೆಗೆ ಬಂದ ಎಲ್ಲರಿಗೂ ನನ್ನ ಕೃತಜ್ಞತೆಗಳು. ನಿಮ್ಮನ್ನು (ಕಾರ್ಯಕರ್ತರು) ನಂಬಿದ್ದೇನೆ. ಪಕ್ಷದ ಬೆಳೆವಣಿಗೆಗೆ ಒಳ್ಳೆಯ ನಿರ್ಧಾರ ಕೈಗೊಳ್ಳಲಾಗಿದೆ. ಹೊಸ ರಾಜಕೀಯ ಬೆಳವಣಿಗೆ ಆಗುತ್ತಿದೆ. ಈ ಬಗ್ಗೆ ಕೇಂದ್ರ ಗೃಹಮಂತ್ರಿ ಅವರನ್ನು ಭೇಟಿ ಮಾಡಿದ್ದೆ. ಸುದೀರ್ಘ ಚರ್ಚೆ ನಡೆಸಿದ್ದೇನೆ. ಅವರ ಜತೆ ಮೈತ್ರಿ ಬಗ್ಗೆ ಚರ್ಚೆ ಮಾಡಿದೆ ಎಂದು ದೇವೇಗೌಡ ಹೇಳಿದರು.

ಈ ರಾಜಕಾರಣ ಅಧಿಕಾರಕ್ಕಾಗಿ ಯಾವ ಮಟ್ಟಕ್ಕೆ ಬೇಕಾದರೂ ಹೋಗುತ್ತದೆ. ಆದರೆ, ನಾನೆಂದೂ ಅದನ್ನು ಕೆಳಮಟ್ಟಕ್ಕೆ ತೆಗೆದುಕೊಂಡು ಹೋಗಿಲ್ಲ. ಆದರೆ, ಕಾಂಗ್ರೆಸ್ ನವರು ರಾಜಕೀಯವನ್ನು ಅದೆಷ್ಟು ಕನಿಷ್ಠ ಮಟ್ಟಕ್ಕೆ ಇಳಿಸಬೇಕೋ ಅಷ್ಟು ಮಾಡಿದ್ದಾರೆ. ಸಿದ್ದಾಂತ ಎನ್ನುವುದು ಆ ಪಕ್ಷದಲ್ಲಿ ಇಂದಿರಾಗಾಂಧಿ ಕಾಲದಲ್ಲಿಯೇ ಮುಗಿದು ಹೋಯಿತು ಎಂದು ಅವರು ಟೀಕಾಪ್ರಹಾರ ನಡೆಸಿದರು.

ರಾಜಕೀಯವಾಗಿ ನನ್ನ ಜತೆ ಇದ್ದ ಅನೇಕರು ಐಶ್ವರ್ಯ ಹುಡುಕಿಕೊಂಡು ಎಲ್ಲೆಲ್ಲೋ ಹೋದರು, ಬೇರೆ ಬೇರೆ ಪಕ್ಷಗಳಿಗೆ ಹೊರಟು ಹೋದರು. ನಾನು ಇಲ್ಲಿಯೇ ಇದ್ದೇನೆ. ನನಗೇನೂ ಬೇಸರ ಇಲ್ಲ. ಈ ಇಳಿ ವಯಸ್ಸಿನಲ್ಲಿಯೂ ಪಕ್ಷವನ್ನು ಕಟ್ಟುತ್ತಿದ್ದೇನೆ ಎಂದು ದೇವೇಗೌಡ ಹೇಳಿದರು.

ಈ ದೇಶ ಮುಂದೆ ಏನಾಗುತ್ತೋ ಊಹೆ ಮಾಡಲಾಗಲ್ಲ. ಪಕ್ಕದಲ್ಲಿ ಪಾಕಿಸ್ತಾನ, ಚೀನಾ ಇದೆ, ದೂರದಲ್ಲಿ ಅಮೆರಿಕ, ರಷ್ಯಾ ಇದೆ. ಈ ದೇಶವನ್ನು ಉಳಿಸುವ ನಾಯಕತ್ವ ಬೇಕು ಎಂದು ಅವರು ಹೇಳಿದರು.

ಧಾರ್ಮಿಕ ಅಲ್ಪಸಂಖ್ಯಾತರಿಗೆ ಕಾಂಗ್ರೆಸ್ ಎಷ್ಟು ಮಾಡಿದೆ, ನಾನು ಏನು ಮಾಡಿದೀನಿ ಎಂಬ ಬಗ್ಗೆ ಚರ್ಚೆ ನಡೆಯಲಿ. ಉತ್ತರ ಸಿಗುತ್ತದೆ. ಸಿ.ಎಂ.ಇಬ್ರಾಹೀಂ ಬಗ್ಗೆ ನಾನು ಲಘುವಾಗಿ ಮಾತನಾಡುವುದಿಲ್ಲ. ಭದ್ರಾವತಿಯಲ್ಲಿ ಸನ್ಮಾನ ಸಮಾರಂಭವೊಂದರಲ್ಲಿ ಸಿಕ್ಕಿದ್ದ ಇಬ್ರಾಹೀಂ ಅನ್ನು ಕರೆದುಕೊಂಡು ಬಂದು ಯುವ ಜನತಾದಳ ಅಧ್ಯಕ್ಷರನ್ನಾಗಿ ಮಾಡಿದೆ ಎಂದು ಸ್ಮರಿಸಿದ ಅವರು, ಇವತ್ತಿನ ಸಭೆಗೆ ಅವರನ್ನು ಕರೆ ತರಲು ತಿಪ್ಪೇಸ್ವಾಮಿ ಬಹಳ ಪ್ರಯತ್ನಪಟ್ಟರು ಎಂದರು.

ಈ ಸರಕಾರ ಕೊಟ್ಟಿರುವ ಗ್ಯಾರಂಟಿಗಳಿಂದ ಏನು ಆಗುತ್ತದೆ ಎನ್ನುವುದು ನನಗೆ ಗೊತ್ತಿದೆ. ಉತ್ತಮ ಬದುಕಿಗೆ ಶಾಶ್ವತ ಪರಿಹಾರ ನೀಡುವ ನಿಟ್ಟಿನಲ್ಲಿ ಕುಮಾರಸ್ವಾಮಿ ಪ್ರಾಮಾಣಿಕವಾಗಿ ಕೆಲಸ ಮಾಡಿದರು. ಆದರೆ, ಅವರನ್ನು ಸೋಲಿಸಿದ್ದು ನೋವುಂಟು ಮಾಡಿತು. ನಾವು ನಿರಾಶೆ ಪಡಬೇಕಿಲ್ಲ. ಒಳ್ಳೆಯ ದಿನಗಳು ಬರುತ್ತವೆ ಎಂದು ದೇವೇಗೌಡ ಹೇಳಿದರು.

‘ಮೈತ್ರಿ’ಗೆ ಬೆಂಬಲ ಘೋಷಿಸಿದ ಶಾಸಕರು: ಪಕ್ಷ ಮತ್ತು ವರಿಷ್ಠರು ಕೈಗೊಂಡ ನಿರ್ಧಾರ ದೂರದೃಷ್ಟಿಯಿಂದ ಕೂಡಿದೆ. ಪಕ್ಷದ ಹಿತ ಅದರಲ್ಲಿ ಅಡಗಿದೆ. ನಾವೆಲ್ಲರೂ ಈ ನಿರ್ಧಾರಕ್ಕೆ ಬದ್ಧವಾಗಿದ್ದೇವೆ. ಕಾಂಗ್ರೆಸ್ ಮಾಡುತ್ತಿರುವ ಅಪಪ್ರಚಾರಕ್ಕೆ ಸೊಪ್ಪು ಹಾಕುವುದಿಲ್ಲ. ಪಕ್ಷ ಉಳಿದರೆ ನಾವು ಉಳಿಯುತ್ತವೆ. ಪ್ರಾದೇಶಿಕ ಪಕ್ಷವನ್ನು ಉಳಿಸಿಕೊಳ್ಳುವುದು ಎಲ್ಲರ ಕರ್ತವ್ಯ ಆಗಿದೆ ಎಂದು ಬಿಜೆಪಿ-ಜೆಡಿಎಸ್ ಮೈತ್ರಿಗೆ ಸಭೆಯಲ್ಲಿ ಭಾಗವಹಿಸಿದ್ದ ಶಾಸಕರು, ಮಾಜಿ ಶಾಸಕರು, ಮಾಜಿ ಸಚಿವರು ಬೆಂಬಲ ಘೋಷಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X