‘ರಾಜಕೀಯ ಶಾಶ್ವತವಲ್ಲ’ ಎಂಬ ಸಿಎಂ ಹೇಳಿಕೆಗೆ ಹೆಚ್ಚಿನ ವಿಶ್ಲೇಷಣೆ ಅನಗತ್ಯ : ಡಿ.ಕೆ.ಸುರೇಶ್

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯನವರು ಯಾರೊಂದಿಗೋ ಮಾತನಾಡುವ ವೇಳೆ ಆಡಿರುವ ಮಾತುಗಳಿಗೆ ಹೆಚ್ಚಿನ ಮಹತ್ವ ನೀಡುವ ಅಗತ್ಯವಿಲ್ಲ. ಆ ಬಗ್ಗೆ ಹೆಚ್ಚಿನ ವಿಶ್ಲೇಷಣೆಯೂ ಅನಗತ್ಯ’ ಎಂದು ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್, ‘ರಾಜಕೀಯ ಯಾರಿಗೂ ಶಾಶ್ವತವಲ್ಲ’ ಎಂಬ ಸಿಎಂ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದಾರೆ.
ಬುಧವಾರ ಸದಾಶಿವನಗರ ನಿವಾಸದ ಬಳಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಕೆ.ಸಿ. ವೇಣುಗೋಪಾಲ್ ಅವರು ಮಂಗಳೂರಿನಲ್ಲಿ ಕಾರ್ಯಕ್ರಮ ಇರುವ ಹಿನ್ನೆಲೆಯಲ್ಲಿ ಆಗಮಿಸಿದ್ದಾರೆ. ಕಾರ್ಯಕ್ರಮ ಮುಗಿದ ನಂತರ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣೆ ಇರುವ ಕಾರಣ ಅಲ್ಲಿಗೆ ತೆರಳಲಿದ್ದಾರೆ ಎಂದು ತಿಳಿಸಿದರು.
ಮಂಗಳೂರಿನಲ್ಲಿ ವೇಣುಗೋಪಾಲ್ ಅವರಿಗೆ ಡಿ.ಕೆ.ಶಿವಕುಮಾರ್ ಅಭಿಮಾನಿಗಳು ಡಿ.ಕೆ., ಡಿ.ಕೆ. ಎಂದು ಅಭಿಮಾನದಿಂದ ಕೆಲವರು ಕೂಗಿರುತ್ತಾರೆ. ಆದರೆ, ಅವರು ಯಾರಿಗೂ ಮುತ್ತಿಗೆ ಹಾಕಿಲ್ಲ ಎಂದು ಡಿ.ಕೆ. ಸುರೇಶ್ ಸ್ಪಷ್ಟಣೆ ನೀಡಿದರು.
Next Story





