Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಹರ್ಯಾಣ ಚುನಾವಣೆಯ ಸೋಲಿಗೆ ಅತಿಯಾದ...

ಹರ್ಯಾಣ ಚುನಾವಣೆಯ ಸೋಲಿಗೆ ಅತಿಯಾದ ಆತ್ಮವಿಶ್ವಾಸ ಕಾರಣ : ಡಿ.ಕೆ.ಸುರೇಶ್

ವಾರ್ತಾಭಾರತಿವಾರ್ತಾಭಾರತಿ9 Oct 2024 2:47 PM IST
share
ಹರ್ಯಾಣ ಚುನಾವಣೆಯ ಸೋಲಿಗೆ ಅತಿಯಾದ ಆತ್ಮವಿಶ್ವಾಸ ಕಾರಣ : ಡಿ.ಕೆ.ಸುರೇಶ್

ಬೆಂಗಳೂರು :“ಹರ್ಯಾಣ ವಿಧಾನಸಭಾ ಚುನಾವಣೆ ಸೋಲಿಗೆ ಅತಿಯಾದ ಆತ್ಮವಿಶ್ವಾಸ ಕಾರಣ. ಹೈಕಮಾಂಡ್ ಸೋಲಿನ ಬಗ್ಗೆ ಪರಾಮರ್ಶನೆ ಮಾಡುತ್ತದೆ” ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿದರು.

ಸದಾಶಿವನಗರದ ನಿವಾಸದಲ್ಲಿ ಬುಧವಾರ ಮಾಧ್ಯಮದವರ ಜತೆ ಮಾತನಾಡಿದ ಅವರು, “ಅತಿಯಾದ ಆತ್ಮವಿಶ್ವಾಸ ಒಳ್ಳೆಯದಲ್ಲ ಎನ್ನುವುದಕ್ಕೆ ಇದು ಸಾಕ್ಷಿ ಹಾಗೂ ಉತ್ತಮ ನಿದರ್ಶನ. ಜಮ್ಮು, ಕಾಶ್ಮೀರದಲ್ಲಿ ಇಂಡಿಯಾ ಒಕ್ಕೂಟ ಸರಕಾರ ರಚನೆ ಮಾಡುತ್ತದೆ” ಎಂದರು.

ಹರ್ಯಾಣ ಫಲಿತಾಂಶ ಮಹಾರಾಷ್ಟ್ರ, ಜಾರ್ಖಂಡ್ ಚುನಾವಣೆ ಮೇಲೆ ಪರಿಣಾಮ ಬೀರುತ್ತದೆಯೇ ಎಂದು ಕೇಳಿದಾಗ, “ಈ ಎರಡೂ ರಾಜ್ಯಗಳ ಪರಿಸ್ಥಿತಿ ಬೇರೆ, ಬೇರೆ ರೀತಿಯಿದೆ. ಇವು ಆಯಾ ರಾಜ್ಯಗಳ ಚುನಾವಣೆಯಾಗಿದ್ದು, ಬೇರೆ ರಾಜ್ಯಗಳ ಫಲಿತಾಂಶ ಇವುಗಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಲೋಕಸಭೆ ಹಾಗೂ ವಿಧಾನಸಭಾ ಚುನಾವಣೆಗಳೇ ಬೇರೆ, ಬೇರೆ” ಎಂದರು.

ಕೆಲಸವಿಲ್ಲದ ಎಚ್‌ಡಿಕೆಗೆ ಉತ್ತರ ನೀಡುವುದಿಲ್ಲ :

ಮುಡಾ ಪ್ರಕರಣ ಮುಚ್ಚಿ ಹಾಕಲು ಜಾತಿಗಣತಿ ವಿಷಯ ಮುನ್ನಲೆಗೆ ತಂದಿದ್ದಾರೆ ಎನ್ನುವ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಬೆಳಿಗ್ಗೆ ಒಂದು, ಸಂಜೆಯೊಂದು ಮಾತನಾಡುವವರಿಗೆ ನಾವು ಉತ್ತರ ನೀಡುವುದಿಲ್ಲ. ಮಾಧ್ಯಮದವರಿಗೆ ಅವರು ಗಂಭೀರ ವ್ಯಕ್ತಿ ಎನಿಸಬಹುದು, ಆದರೆ ನಮಗಲ್ಲ. ಅವರ ಯಾವುದೇ ಹೇಳಿಕೆಗಳು ನ್ಯಾಯಯುತವಾಗಿರುವುದಿಲ್ಲ. ಅವರಿಗೆ ಕೆಲಸವಿಲ್ಲ, ಅದಕ್ಕೆ ಮಾತನಾಡುತ್ತಾರೆ. ಅವರಿಗೆ ಮೋದಿ ಅವರು ಒಳ್ಳೆ ಕೆಲಸ ಕೊಟ್ಟಿದ್ದಾರೆ, ಅದನ್ನು ಬಿಟ್ಟು ಕರ್ನಾಟಕದ ವಿಚಾರದಲ್ಲಿ ಮಾತನಾಡುತ್ತಿದ್ದಾರೆ" ಎಂದರು.

ಸಿದ್ದರಾಮಯ್ಯ ಅವರ ಬೆನ್ನಿಗೆ ಇದ್ದೇವೆ :

ಮಹದೇವಪ್ಪ, ಸತೀಶ್ ಜಾರಕಿಹೊಳಿ ಭೇಟಿ ವಿಚಾರದ ಬಗ್ಗೆ ಕೇಳಿದಾಗ, “ಮಹದೇವಪ್ಪ ಹಿರಿಯ ಸಚಿವರು. ಪರಮೇಶ್ವರ್ ಅವರು ಪ್ರಮುಖ ಖಾತೆ ಹೊಂದಿರುವವರು, ಇವರುಗಳು ರಾಜಕೀಯ ಹೊರತಾಗಿ ಸೇರಿದ್ದಾರೆ. ಈಗಾಗಲೇ ಸರಕಾರದ 136 ಶಾಸಕರು ಸಿದ್ದರಾಮಯ್ಯ ಅವರ ಬೆನ್ನಿಗೆ ಇದ್ದಾರೆ ಎನ್ನುವ ಸಂದೇಶವನ್ನು ನಾವು ಕೊಟ್ಟಿದ್ದೇವೆ” ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X