Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ‘ಗೃಹಲಕ್ಷ್ಮಿ ಯೋಜನೆ’ ನಕಲು ಮಾಡಿ...

‘ಗೃಹಲಕ್ಷ್ಮಿ ಯೋಜನೆ’ ನಕಲು ಮಾಡಿ ಮಹಾರಾಷ್ಟ್ರದಲ್ಲಿ ಬಿಜೆಪಿ ಗೆಲುವು : ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ24 Nov 2024 8:22 PM IST
share
‘ಗೃಹಲಕ್ಷ್ಮಿ ಯೋಜನೆ’ ನಕಲು ಮಾಡಿ ಮಹಾರಾಷ್ಟ್ರದಲ್ಲಿ ಬಿಜೆಪಿ ಗೆಲುವು : ಡಿ.ಕೆ.ಶಿವಕುಮಾರ್

ಕನಕಪುರ : ಮಹಾರಾಷ್ಟ್ರದಲ್ಲಿ ಅಧಿಕಾರದಲ್ಲಿ ಇದ್ದ ಬಿಜೆಪಿ ಮೈತ್ರಿ ಸರಕಾರ ನಮ್ಮ ಗೃಹಲಕ್ಷ್ಮಿ ಯೋಜನೆಯನ್ನೆ ನಕಲು ಮಾಡಿ ‘ಮಾಝಿ ಲಡಕಿ ಬಹಿನ್ ಯೋಜನಾ' ಎಂದು ಹೆಸರಿಟ್ಟು 1,500 ರೂ.ಗಳನ್ನು ಕೊಟ್ಟಿದ್ದರು. ನಾವು ಮಹಾಲಕ್ಷ್ಮಿ ಎನ್ನುವ ಹೆಸರಿಟ್ಟು 3 ಸಾವಿರ ರೂ. ಕೊಡುವುದಾಗಿ ಭರವಸೆ ನೀಡಿದ್ದೆವು. ಆದರೆ ಅಲ್ಲಿನ ಸರಕಾರ ಚುನಾವಣೆಗೆ ಆರು ತಿಂಗಳು ಮುಂಚಿತವಾಗಿ ಹಣ ನೀಡಿದ ಪರಿಣಾಮ ನಮಗಿಂತ ಅವರಿಗೆ ಹೆಚ್ಚು ಮತಗಳು ಬಂದವು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

ರವಿವಾರ ಕನಕಪುರದಲ್ಲಿ ಕನಕಾಂಬರಿ ಮಹಿಳಾ ಒಕ್ಕೂಟದ ವತಿಯಿಂದ ಆಯೋಜಿಸಿದ್ದ ಮಹಿಳಾ ಜಾಗೃತಿ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಹೆಣ್ಣು ಪ್ರಗತಿ ಹೊಂದಿದರೆ ಒಂದು ಕುಟುಂಬ ಪ್ರಗತಿ ಹೊಂದಿದಂತೆ. ರಾಜ್ಯ, ಹಳ್ಳಿ ಪ್ರಗತಿಯಾದಂತೆ. ಆದ ಕಾರಣಕ್ಕೆ ನಮ್ಮ ಗ್ಯಾರಂಟಿ ಯೋಜನೆಗಳು ಮಹಿಳೆಯರ ಅಭಿವೃದ್ಧಿಗೆ ಪೂರಕವಾಗಿರುವಂತೆ ರೂಪಿಸಲಾಗಿದೆ ಎಂದು ಹೇಳಿದರು.

ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ ನೀಡಲಾಗಿದೆ. ಆದರೆ ಮುಖಂಡರು ತಮ್ಮ ಹೆಂಡತಿ, ತಂಗಿ, ಅಕ್ಕ ಅಥವಾ ಸಂಬಂಧಿಕರನ್ನು ಚುನಾವಣೆಯಲ್ಲಿ ನಿಲ್ಲಿಸುತ್ತಿದ್ದಾರೆ. ಸಾಮಾನ್ಯ ಮಹಿಳೆಯರು ಅಧಿಕಾರದ ಗದ್ದುಗೆ ಇರಲು ಮುಂದಕ್ಕೆ ಬರಬೇಕು ಎಂದು ಶಿವಕುಮಾರ್ ಕರೆ ನೀಡಿದರು.

ಮಹಿಳೆಯರು ನಾಯಕತ್ವ ಗುಣ ಬೆಳೆಸಿಕೊಳ್ಳಿ: ಸಂಸತ್ತಿನಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡುವ ಮಸೂದೆಗೆ ಒಪ್ಪಿಗೆ ದೊರೆತಿದೆ. ಮುಂದಿನ ವಿಧಾನಸಭಾ ಚುನಾವಣೆ ಹೊತ್ತಿಗೆ ಶೇ.33ರಷ್ಟು ಮೀಸಲಾತಿಯನ್ನು ಮಹಿಳೆಯರಿಗೆ ನೀಡಬೇಕಾಗಬಹುದು. ಅದಕ್ಕಾಗಿ ಸಾಮಾನ್ಯ ಮಹಿಳೆಯರು ಈಗಿನಿಂದಲೇ ತಮ್ಮಲ್ಲಿರುವ ನಾಯಕತ್ವ ಗುಣವನ್ನು ಬೆಳೆಸಿಕೊಳ್ಳಿ ಎಂದು ಅವರು ಹೇಳಿದರು.

ಸ್ತ್ರೀಶಕ್ತಿ ಸಂಘಗಳಿಗೆ ಮುನ್ನುಡಿ ಬರೆದಿದ್ದೇ ನಾವು: ಎಸ್.ಎಂ.ಕೃಷ್ಣ ಅವರ ಸಂಪುಟದಲ್ಲಿ ನಾನು ಸಹಕಾರ ಸಚಿವನಾಗಿದ್ದೆ. ಆಗ ಈ ಸ್ತ್ರೀ ಶಕ್ತಿ ಸಂಘಗಳಿಗೆ ಮುನ್ನುಡಿ ಬರೆದಿದ್ದೇ ನಾವು. ಸಹಕಾರ ಇಲಾಖೆಯ ಅಡಿಯಲ್ಲಿ ಬರುವ ಡಿಸಿಸಿ ಬ್ಯಾಂಕ್ ನೇತೃತ್ವದಲ್ಲಿ ಸ್ವಸಹಾಯ ಗುಂಪುಗಳಿದ್ದವು, ಇವುಗಳನ್ನೇ ಸ್ತ್ರೀಶಕ್ತಿ ಸಂಘಗಳೆಂದು ಪರಿವರ್ತಿಸಿ, ಸಚಿವರಾಗಿದ್ದ ಮೋಟಮ್ಮ ಅವರಿಗೆ ನೇತೃತ್ವ ನೀಡಲಾಯಿತು ಎಂದು ಶಿವಕುಮಾರ್ ತಿಳಿಸಿದರು.

ಮಹಿಳೆಯರು ಜಮೀನು ಮಾರಲು ಬಿಡಬೇಡಿ: ಯಾವುದೇ ಕಾರಣಕ್ಕೂ ತಮ್ಮ ಪಾಲಿನ ಭೂಮಿ ಮಾರಾಟ ಮಾಡದಂತೆ ಮನೆಯ ಪುರುಷರಿಗೆ ಮಹಿಳೆಯರು ಬುದ್ಧಿ ಮಾತು ಹೇಳಬೇಕು. ಏಕೆಂದರೆ ಭೂಮಿಯ ಬೆಲೆ ಹೆಚ್ಚಾಗಿದೆ. ನಾನು ಮೊದಲ ಬಾರಿಗೆ ಇಲ್ಲಿ ಚುನಾವಣೆಗೆ ನಿಂತಾಗ, ಒಂದು ಎಕರೆಗೆ ಎರಡರಿಂದ ಮೂರು ಲಕ್ಷ ಮಾತ್ರ ಇತ್ತು. ಈಗ 50 ಲಕ್ಷ ರೂ.ಬೆಲೆಬಾಳುತ್ತದೆ ಎಂದು ಅವರು ತಿಳಿಸಿದರು.

ಇದನ್ನು ರಾಮನಗರ ಜಿಲ್ಲೆ ಎಂದು ಕರೆಯಬಹುದು ಆದರೆ ಮೂಲತಃ ನಾವೆಲ್ಲರೂ ಬೆಂಗಳೂರು ಜಿಲ್ಲೆಗೆ ಸೇರಿದವರು. ಕನಕಪುರ ಎಷ್ಟರಮಟ್ಟಿಗೆ ಅಭಿವೃದ್ಧಿ ಆಗುತ್ತದೆ ಎಂಬುದನ್ನು ನಾನು ಬಹಿರಂಗವಾಗಿ ಹೇಳುವುದಿಲ್ಲ. ಭೂಮಿ ಕಳೆದುಕೊಂಡರೆ ನಿಮ್ಮ ಜೇಬಿಗೆ ದುಡ್ಡನ್ನು ನಾನು ಹಾಕಲು ಆಗುವುದಿಲ್ಲ. ಜಮೀನು ಮಾರಿದರೆ ಒಳ್ಳೆಯ ಬೆಲೆ ಬರುತ್ತದೆ ಎಂದು ಆಮಿಷಕ್ಕೆ ಒಳಗಾಗಬೇಡಿ. ಯಾವುದೇ ಕಾರಣಕ್ಕೂ ಒಂದು ಕುಂಟೆ ಜಮೀನನ್ನು ಕಳೆದುಕೊಳ್ಳಬೇಡಿ ಎಂದು ಶಿವಕುಮಾರ್ ಹೇಳಿದರು.

ಕನಕಪುರಕ್ಕೆ ಹೊಸ ರೂಪ ನೀಡಬೇಕಾಗಿದೆ: ನಾವು ಇನ್ನೂ ಅಭಿವೃದ್ಧಿಯ ಮೈಲಿಗಲ್ಲನ್ನು ಸಾಧಿಸಬೇಕಾಗಿದೆ. ಕನಕಪುರಕ್ಕೆ ಹೊಸ ರೂಪವನ್ನು ನೀಡಬೇಕಾಗಿದೆ. 2025ಕ್ಕೆ ಕನಕಪುರದ ಅಭಿವೃದ್ಧಿಗೆ ಹೊಸ ಕಾರ್ಯಕ್ರಮಗಳನ್ನು ನೀಡಲಾಗುವುದು. ಸರಕಾರದಲ್ಲಿ ಹೆಚ್ಚಿನ ಜವಾಬ್ದಾರಿ ಇರುವ ಕಾರಣ ನಿಮ್ಮನ್ನು ಭೇಟಿಯಾಗಲು ಆಗುತ್ತಿಲ್ಲ. ಮುಂದಿನ ದಿನಗಳಲ್ಲಿ ತಾಲೂಕು, ಹೋಬಳಿ ಮಟ್ಟದಲ್ಲಿ ಕಾರ್ಯಕ್ರಮಗಳನ್ನು ರೂಪಿಸಿ ನಿಮ್ಮೆಲ್ಲರ ಅಹವಾಲುಗಳನ್ನು ಕೇಳಲಾಗುವುದು ಎಂದು ಅವರು ತಿಳಿಸಿದರು.

ಕನಕಾಂಬರಿ ಮಹಿಳಾ ಒಕ್ಕೂಟದ ಗೌರವ ಅಧ್ಯಕ್ಷ ಶ್ರೀಕಂಠು ನೇತೃತ್ವದಲ್ಲಿ ನಿಮಗೆ ಕೆನರಾ ಬ್ಯಾಂಕ್ ಮೂಲಕ ಆರ್ಥಿಕ ಸಹಾಯ ನೀಡಲಾಗುತ್ತಿದೆ. ಇವುಗಳನ್ನು ನೀವು ಬಳಸಿಕೊಂಡು ಉತ್ತಮ ಮಟ್ಟಕ್ಕೆ ಬೆಳೆದಿದ್ದೀರಿ ಎನ್ನುವುದು ನನ್ನ ಭಾವನೆ. ಈ ಸಂಸ್ಥೆಯಿಂದ ಸಾಲವನ್ನು ಪಡೆದವರು ತಮ್ಮ ಬದುಕನ್ನು ಗಟ್ಟಿಯಾಗಿ ಕಟ್ಟಿಕೊಳ್ಳಬೇಕು. ಕೇವಲ ಸಾಲ ಪಡೆಯುವವರಾಗಬಾರದು. ನೀವು ಸಾಲ ಪಡೆದು ಸ್ವಂತ ಉದ್ಯೋಗವನ್ನು ಕಟ್ಟಿ ನಾಲ್ಕು ಜನಕ್ಕೆ ಉದ್ಯೋಗ ಸೃಷ್ಟಿ ಮಾಡಬೇಕು ಎಂದು ಅವರು ಕರೆ ನೀಡಿದರು.

ದರ್ಶನ್ ಧ್ರುವನಾರಾಯಣ್ ಚಿಕ್ಕ ವಯಸ್ಸಿನಲ್ಲಿ ಶಾಸಕನಾಗಿ ನಮ್ಮ ಜೊತೆ ಕೆಲಸ ಮಾಡುತ್ತಿದ್ದಾನೆ. ಅವರ ತಂದೆ ಅಕಾಲಿಕವಾಗಿ ಮರಣ ಹೊಂದದೆ ಇದ್ದಿದ್ದರೆ, ನಮ್ಮ ಜೊತೆ ಸಂಪುಟದಲ್ಲಿ ಮಂತ್ರಿ ಆಗುವುದನ್ನು ಯಾರು ಕೂಡ ತಪ್ಪಿಸಲು ಆಗುತ್ತಿರಲಿಲ್ಲ. ದರ್ಶನ್ ಧ್ರುವ ನಾರಾಯಣ್ ಗೆ ಉತ್ತಮ ಭವಿಷ್ಯವಿದೆ ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X