Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಶಿಡ್ಲಘಟ್ಟ, ಚಿಂತಾಮಣಿಯ 164 ಕೆರೆಗಳಿಗೆ...

ಶಿಡ್ಲಘಟ್ಟ, ಚಿಂತಾಮಣಿಯ 164 ಕೆರೆಗಳಿಗೆ ಸಂಸ್ಕರಿಸಿದ ನೀರು ತುಂಬಿಸಲು 237 ಕೋಟಿ ರೂ.ಅನುದಾನಕ್ಕೆ ಅನುಮೋದನೆ: ಡಿ.ಕೆ. ಶಿವಕುಮಾರ್

"ಮಾಗಡಿಯ ಕೆಂಪೇಗೌಡ ಕೋಟೆ ನವೀಕರಣ, ಸಮಗ್ರ ಅಭಿವೃದ್ಧಿಗೆ 103 ಕೋಟಿ ರೂ.ಅನುದಾನ"

ವಾರ್ತಾಭಾರತಿವಾರ್ತಾಭಾರತಿ2 July 2025 8:39 PM IST
share
ಶಿಡ್ಲಘಟ್ಟ, ಚಿಂತಾಮಣಿಯ 164 ಕೆರೆಗಳಿಗೆ ಸಂಸ್ಕರಿಸಿದ ನೀರು ತುಂಬಿಸಲು 237 ಕೋಟಿ ರೂ.ಅನುದಾನಕ್ಕೆ ಅನುಮೋದನೆ: ಡಿ.ಕೆ. ಶಿವಕುಮಾರ್

ಚಿಕ್ಕಬಳ್ಳಾಪುರ(ನಂದಿಬೆಟ್ಟ) : ಬೆಂಗಳೂರು ನಗರದ ಹೆಬ್ಬಾಳ ನಾಗವಾರ ಕಣಿವೆಯ ದ್ವಿತೀಯ ಹಂತದ ಸಂಸ್ಕರಿತ ನೀರನ್ನು ಶಿಡ್ಲಘಟ್ಟ ಅಮಾನಿ ಕೆರೆಯಿಂದ ಶಿಡ್ಲಘಟ್ಟದ 45 ಕೆರೆಗಳಿಗೆ, ಚಿಂತಾಮಣಿ ತಾಲೂಕಿನ 119 ಕೆರೆಗಳಿಗೆ ಸೇರಿದಂತೆ ಒಟ್ಟು 164 ಕೆರೆಗಳಿಗೆ ಸಂಸ್ಕರಿಸಿದ ನೀರನ್ನು ತುಂಬಿಸಲು 237 ಕೋಟಿ ರೂ. ಮೊತ್ತದ ಯೋಜನೆಗೆ ಅನುಮೋದನೆ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

ಬುಧವಾರ ನಂದಿಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆ ಬಳಿಕ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಚಿಂತಾಮಣಿಯ ಭಕ್ತರಹಳ್ಳಿ ಅರಸಿಕೆರೆಯ ಕೆಳಭಾಗದಲ್ಲಿ ಹೊಸ ಕೆರೆ ನಿರ್ಮಾಣಕ್ಕೆ ರೂ.36 ಕೋಟಿ ಅಂದಾಜು ವೆಚ್ಚಕ್ಕೆ ಅನುಮೋದನೆ ನೀಡಲಾಗಿದೆ. ಬೆಂಗಳೂರು ದಕ್ಷಿಣ ಜಿಲ್ಲೆ ಮಾಗಡಿಯಲ್ಲಿ ನಾಡಪ್ರಭು ಕೆಂಪೇಗೌಡ ಕೋಟೆ ನವೀಕರಣ, ಸಮಗ್ರ ಅಭಿವೃದ್ಧಿ ಕಾಮಗಾರಿಗೆ ರೂ.103 ಕೋಟಿ ಮೊತ್ತದ ಯೋಜನೆಗೆ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದರು.

ಪಾತುಪಾಳ್ಯ ಹೋಬಳಿಯ ಮಲ್ಲಮ್ಮ ಕಣಿವೆಯಲ್ಲಿ ಜಲಾಶಯ ನಿರ್ಮಾಣಕ್ಕೆ ಜಲಸಂಪನ್ಮೂಲ ಇಲಾಖೆಯಿಂದ 189 ಕೋಟಿ ರೂ.ಅನುದಾನಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣವನ್ನು ಭಾಗ್ಯನಗರವಾಗಿ ಮರುನಾಮಕಾರಣ ಮಾಡಲು ಕೇಂದ್ರ ಗೃಹ ಮಂತ್ರಾಲಯದ ನಿರಪೇಕ್ಷಣ ಪತ್ರ ಪಡೆಯಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಗಣಿಗಾರಿಕೆಯಲ್ಲಿ ನಡೆದ ಅಕ್ರಮ ತನಿಖೆ ನಡೆಸಿದ ಲೋಕಾಯುಕ್ತ ವಿಶೇಷ ತಂಡದ ವರದಿ ಅಧ್ಯಯನ ಮಾಡಿ ಂಗಳಲ್ಲಿ ವರದಿ ಸಲ್ಲಿಸಲು ಕಾನೂನು ಸಚಿವರ ನೇತೃತ್ವದಲ್ಲಿ ಸಂಪುಟ ಉಪ ಸಮಿತಿ ರಚಿಸಲಾಗಿದೆ. ಈ ಹಿಂದೆ ರಚಿಸಲಾಗಿದ್ದ ಉಪಸಮಿತಿಯಲ್ಲಿ ಅನೇಕ ನ್ಯೂನ್ಯತೆ ಕಂಡುಹಿಡಿಯಲಾಗಿತ್ತು. ಆದರೆ, ನಂತರ ನಮ್ಮ ಸರಕಾರ ಪತನಗೊಂಡಿತ್ತು. ಈ ಅಕ್ರಮದಿಂದ ಆಗಿರುವ ನಷ್ಟವನ್ನು ಹೇಗೆ ಭರಿಸಬೇಕು ಎಂಬ ಸಲಹೆ ಬಂದಿತ್ತು. ಮುಂದೆ ನಮ್ಮ ರಾಜ್ಯದ ಸಂಪತ್ತನ್ನು ಹೇಗೆ ಕಾಪಾಡಬೇಕು ಎಂಬ ಉದ್ದೇಶದಿಂದ ಈಗ ಈ ಉಪಸಂಪುಟ ಸಮಿತಿ ರಚಿಸಲಾಗಿದೆ ಎಂದು ಅವರು ತಿಳಿಸಿದರು.

‘ಚಿಕ್ಕಬಳ್ಳಾಪುರದ ನಂದಿಗಿರಿಧಾಮದಲ್ಲಿ ಹೋಟೆಲ್ ಹಾಗೂ ಇತರೆ ಸೌಲಭ್ಯಕ್ಕಾಗಿ 50 ಕೋಟಿ ರೂ. ನೀಡಲಾಗಿದೆ. ಬೆಳಗಾವಿ ಜಿಲ್ಲೆ ಬೈಲಹೊಂಗಲ ಪುರಸಭೆ ಹಾಗೂ ವಿಜಯನಗರ ಜಿಲ್ಲೆ ಹರಪ್ಪನಹಳ್ಳಿ ಪುರಸಭೆಯನ್ನು ನಗರ ಸಭೆಯಾಗಿ ಮೇಲ್ದರ್ಜೆಗೆ ಏರಿಸಲಾಗಿದೆ. ಕೊಪ್ಪಳ ಜಿಲ್ಲೆ ಹನುಮಸಾಗರ ಗ್ರಾಮ ಪಂಚಾಯ್ತಿಯನ್ನು ಪಟ್ಟಣ ಪಂಚಾಯ್ತಿಯಾಗಿ ಮೇಲ್ದರ್ಜೆಗೆ ಏರಿಸಲಾಗಿದೆ ಎಂದು ವಿವರಿಸಿದರು.

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಯಿಂದ ಹಿಂದುಳಿದ ವರ್ಗದ 14 ವಸತಿ ಶಾಲೆ ನಿರ್ಮಾಣಕ್ಕೆ 306 ಕೋಟಿ ರೂ.ಅನುದಾನ ನೀಡಲಾಗುವುದು. ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನಲ್ಲಿ ಮೊರಾರ್ಜಿ ವಸತಿ ಶಾಲೆ ಪ್ರಾರಂಭಕ್ಕೆ ಅನುಮೋದನೆ. ಚಿಕ್ಕಬಳ್ಳಾಪುರದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಿಂದ 141 ಕೋಟಿ ರೂ.ವೆಚ್ಚದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಹೈಟೆಕ್ ಹೂವಿನ ಮಾರುಕಟ್ಟೆ ನಿರ್ಮಾಣಕ್ಕೆ ಒಪ್ಪಿಗೆ. ಜಿಲ್ಲೆಯ ನಂದಿ ಹಾಗೂ ಚಿಂತಾಮಣಿಯ ಕೈವಾರದಲ್ಲಿ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ತೀರ್ಮಾನ. ಚಿಂತಾಮಣಿ ಹಾಗೂ ಬಾಗೇಪಲ್ಲಿ ಸಾರ್ವಜನಿಕ ಆಸ್ಪತ್ರೆಯನ್ನು 60 ಹಾಸಿಗೆಗಳ ಮೇಲ್ದರ್ಜೆಗೆ ಏರಿಸಿ ನವೀಕರಣ ಮಾಡಲು ರೂ.36 ಕೋಟಿ ಅನುದಾನ ನೀಡಿದ್ದೇವೆ ಎಂದು ಹೇಳಿದರು.

ಕೋಲಾರದಲ್ಲಿ ಬಾಲಕರ ಸರಕಾರಿ ಕಾಲೇಜು ಮೂಲಭೂತ ಸೌಕರ್ಯಕ್ಕಾಗಿ 40 ಕೋಟಿ ರೂ.ಹಾಗೂ ಬಾಲಕಿಯರ ಕಾಲೇಜಿನ ಮೂಲಭೂತ ಸೌಕರ್ಯಕ್ಕೆ 20 ಕೋಟಿ ರೂ.ನೀಡಲು ಅನುಮೋದನೆ ನೀಡಲಾಗಿದೆ. ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ತಾಲೂಕಿನ ಅಮರಾವತಿ ಗ್ರಾಮದಲ್ಲಿ ಬೆಂಗಳೂರು ಉತ್ತರ ವಿವಿಯ ನೂತನ ಕ್ಯಾಂಪಸ್ ಎರಡನೇ ಹಂತದ ಕಾಮಗಾರಿಗೆ 123 ಕೋಟಿ ರೂ.ವೆಚ್ಚದ ಕಾಮಗಾರಿಗೆ ಅನುಮೋದನೆ ನೀಡಲಾಗಿದೆ. ಚಿಕ್ಕಬಳ್ಳಾಪುರದ ನಂದಿ ವೈದ್ಯಕೀಯ ಕಾಲೇಜು ಹಾಗೂ ಹುಬ್ಬಳ್ಳಿ ಕರ್ನಾಟಕ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಿಗೆ ಎಂಆರ್‌ಐ ಯಂತ್ರಗಳ ಖರೀದಿಗೆ 21 ಕೋಟಿ ರೂ.ನೀಡಲು ಅನುಮೋದನೆ ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X