Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಪಂಚೆಯುಟ್ಟ ರೈತನ ಪ್ರವೇಶಕ್ಕೆ ನಿರ್ಬಂಧ...

ಪಂಚೆಯುಟ್ಟ ರೈತನ ಪ್ರವೇಶಕ್ಕೆ ನಿರ್ಬಂಧ ಪ್ರಕರಣ | ರಾಜ್ಯದಲ್ಲಿ ಮಾಲ್‍ಗಳಿಗೆ ಹೊಸ ಮಾರ್ಗಸೂಚಿ : ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ22 July 2024 6:12 PM IST
share
ಪಂಚೆಯುಟ್ಟ ರೈತನ ಪ್ರವೇಶಕ್ಕೆ ನಿರ್ಬಂಧ ಪ್ರಕರಣ | ರಾಜ್ಯದಲ್ಲಿ ಮಾಲ್‍ಗಳಿಗೆ ಹೊಸ ಮಾರ್ಗಸೂಚಿ : ಡಿ.ಕೆ.ಶಿವಕುಮಾರ್

ಬೆಂಗಳೂರು : ರಾಜ್ಯದಲ್ಲಿನ ಎಲ್ಲ ಮಾಲ್‍ಗಳು ಸೇರಿದಂತೆ ಯಾವುದೇ ಸ್ಥಳಗಳಿಗೆ ಭೇಟಿ ನೀಡುವವರ ನಿರ್ದಿಷ್ಟ ವಸ್ತ್ರಗಳಿಗೆ ನಿರ್ಬಂಧ ಹೇರದಂತೆ ಮಾರ್ಗಸೂಚಿಯನ್ನು ಹೊರಡಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸೋಮವಾರ ವಿಧಾನಸಭೆಯಲ್ಲಿ ಸ್ವಯಂ ಪ್ರೇರಿತವಾಗಿ ಹೇಳಿಕೆ ನೀಡಿದ ಅವರು, ‘ಪಂಚೆ ನಮ್ಮ ಸಂಸ್ಕೃತಿ. ಇದಕ್ಕೆ ಪೂರಕವಾಗಿ ನಿಯಮ ತರಲಾಗುವುದು. ಇಡೀ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಈ ರೀತಿಯ ಘಟನೆಗಳು ನಡೆಯದಂತೆ ಅಗತ್ಯ ನಿಯಮಾವಳಿ ರೂಪಿಸಲಾಗುವುದು ಎಂದು ವಿವರಣೆ ನೀಡಿದರು.

ಮಾಲ್‍ಗೆ ಪಂಚೆ ಧರಿಸಿ ಬಂದ ರೈತನನ್ನು ತಡೆದ ವಿಚಾರವಾಗಿ ಇತ್ತೀಚಿಗೆ ವಿಧಾನಸಭೆಯಲ್ಲಿ ಪ್ರಸ್ತಾವನೆ ಮೇಲೆ ಚರ್ಚೆ ನಡೆಸಲಾಗಿತ್ತು. ಈ ವಿಚಾರವಾಗಿ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಹೇಳಿಕೆ ನೀಡಿದ್ದರು. ನಾನು ಶುಕ್ರವಾರ ಗೈರಾಗಿದ್ದ ಕಾರಣ ಈಗ ನನ್ನ ಹೇಳಿಕೆ ನೀಡುತ್ತಿದ್ದೇನೆ ಎಂದು ಶಿವಕುಮಾರ್ ಹೇಳಿದರು.

ಬೆಂಗಳೂರಿನ ಮಾಗಡಿ ರಸ್ತೆಯಲ್ಲಿನ ಜಿಟಿ ಮಾಲ್‍ಗೆ ಪಂಚೆ ಉಟ್ಟುಕೊಂಡು ಬಂದ ರೈತನಿಗೆ ಪ್ರವೇಶ ನೀಡದೆ ಇದ್ದ ಕಾರಣ ಮಾಲ್ ಮಾಲಕರಿಗೆ ಕಾರಣ ಕೇಳಿ ನೋಟಿಸ್ ನೀಡಿ, ತೆರಿಗೆ ಬಾಕಿ ಇದ್ದ ಕಾರಣ ಬೀಗ ಹಾಕಲಾಯಿತು. ಅವರು ಇದೀಗ ತಪ್ಪೊಪ್ಪಿಗೆ ಪತ್ರ ಬರೆದುಕೊಟ್ಟಿದ್ದಾರೆ. ಅಲ್ಲದೆ, ಚೆಕ್ ಮುಖಾಂತರ ಬಾಕಿ ತೆರಿಗೆ ಪಾವತಿ ಮಾಡಿದ್ದಾರೆ ಎಂದು ಅವರು ಸದನಕ್ಕೆ ತಿಳಿಸಿದರು.

ಇದೇ ವೇಳೆ, ಪ್ರತಿಪಕ್ಷದ ನಾಯಕ ಆರ್.ಅಶೋಕ್ ಮಾತನಾಡಿ, ‘ಮಾಲ್‍ಗೆ ಒಂದು ವಾರ ಬೀಗ ಹಾಕಿಸುತ್ತೇವೆ ಎಂದು ನಗರಾಭಿವೃದ್ಧಿ ಸಚಿವರು ಹೇಳಿದ್ದರು. ಬೀಗ ಹಾಕಿಸಿದ್ದೀರಾ? ಎಂದು ಪ್ರಶ್ನಿಸಿದರು. ಆಗ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಬೀಗ ಹಾಕಿಸಲಾಗಿತ್ತು ಎಂದರು.

ಮತ್ತೆ ಅಶೋಕ್ ಮಾತನಾಡಿ, ಮಾಲ್‍ಗಳಿಗೆ ಪರವಾನಗಿ ಕೊಡುವಾಗಲೇ ಗ್ರಾಮೀಣ ಭಾಗದ ಉಡುಪು ಧರಿಸಿದವರಿಗೆ ಅವಕಾಶ ನಿರಾಕರಿಸಬಾರದು ಎಂಬ ಷರತ್ತು ವಿಧಿಸಬೇಕು. ಸರಕಾರ ಜಮೀನು ಕೊಡುತ್ತದೆ. ಅನುಮತಿ ಕೊಟ್ಟಿರುವ ಕ್ಲಬ್‍ಗಳಿಗೂ ಇದು ಅನ್ವಯವಾಗಬೇಕು ಎಂದು ಒತ್ತಾಯಿಸಿದರು.

ಆಡಳಿತ ಪಕ್ಷದ ಶಾಸಕ ಬಸವರಾಜ ರಾಯರೆಡ್ಡಿ ಮಾತನಾಡಿ, ಅಶೋಕ್ ಹೇಳಿದ್ದು ಸರಿಯಿದೆ. ಸರಕಾರದಿಂದಲೇ ಸುತ್ತೋಲೆ ಹೊರಡಿಸಬೇಕೆಂದು ಸಲಹೆ ನೀಡಿದರು. ಕೆಲವು ಕ್ಲಬ್ ಗಳಲ್ಲಿ ಪಂಚೆ ಹಾಕಿದ್ದರೆ, ಶೂ ಹಾಕದೆ ಇದ್ದರೆ ಒಳಗೆ ಬಿಡುವುದಿಲ್ಲ. ಇದರ ಬಗ್ಗೆಯೂ ಗಮನ ಹರಿಸಿ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಮನವಿ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X