Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸರಕಾರ ಅಸ್ಥಿರಗೊಳಿಸುವ ಈಡಿ ಪ್ರಯತ್ನದ...

ಸರಕಾರ ಅಸ್ಥಿರಗೊಳಿಸುವ ಈಡಿ ಪ್ರಯತ್ನದ ವಿರುದ್ಧ ಹೋರಾಟ: ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ23 July 2024 3:33 PM IST
share
ಸರಕಾರ ಅಸ್ಥಿರಗೊಳಿಸುವ ಈಡಿ ಪ್ರಯತ್ನದ ವಿರುದ್ಧ ಹೋರಾಟ: ಡಿ.ಕೆ.ಶಿವಕುಮಾರ್

ಬೆಂಗಳೂರು : “ವಾಲ್ಮೀಕಿ ಅಭಿವೃದ್ಧಿ ನಿಗಮ ಅಕ್ರಮದಲ್ಲಿ ಈಡಿ ಅಧಿಕಾರಿಗಳು ಬಲವಂತವಾಗಿ ಮುಖ್ಯಮಂತ್ರಿಗಳು ಹಾಗೂ ಸಚಿವರ ಹೆಸರು ಹೇಳುವಂತೆ ನಿಗಮದ ಅಧಿಕಾರಿಗಳಿಗೆ ಬೆದರಿಕೆ ಹಾಕುತ್ತಿದ್ದಾರೆ. ಆ ಮೂಲಕ ಮುಖ್ಯಮಂತ್ರಿಗಳ ಹೆಸರಿಗೆ ಮಸಿ ಬಳಿದು, ಸರಕಾರ ಅಸ್ಥಿರಗೊಳಿಸುವ ಪ್ರಯತ್ನವನ್ನು ಖಂಡಿಸಿ ಹೋರಾಟ ಮಾಡುತ್ತಿದ್ದೇವೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.

ಈಡಿ ಅಧಿಕಾರಿಗಳ ವರ್ತನೆ ವಿರೋಧಿಸಿ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸರ್ಕಾರದ ಸಚಿವರುಗಳು ಹಾಗೂ ಕಾಂಗ್ರೆಸ್ ಶಾಸಕರುಗಳು ಮಂಗಳವಾರ ಪ್ರತಿಭಟನೆ ನಡೆಸಿದರು.

ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು, “ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಧಿಕಾರಿಗಳು ಅಕ್ರಮ ಎಸಗಿದ್ದಾರೆ ಎಂದು ತಿಳಿದ ತಕ್ಷಣ ನಮ್ಮ ಎಸ್‌ ಐಟಿ ರಚಿಸಿ, ಹಲವರನ್ನು ಬಂಧಿಸಿ, ಶೇ.50ಕ್ಕೂ ಹೆಚ್ಚಿನ ಹಣವನ್ನು ತೆಲಂಗಾಣದಿಂದ ಹಿಂಪಡೆಯಲಾಗಿದೆ. ನಿಷ್ಪಕ್ಷಪಾತ ತನಿಖೆ ನಡೆಯಬೇಕು ಎಂದು ನಮ್ಮ ಸಚಿವರು ಸ್ವಯಂಪ್ರೇರಿತವಾಗಿ ರಾಜೀನಾಮೆ ನೀಡಿದ್ದಾರೆ. ಈ ಪ್ರಕರಣವನ್ನು ಸಿಬಿಐ ತನಿಖೆ ನಡೆಸಲು ಕಾನೂನಿನಲ್ಲಿ ಅವಕಾಶವಿದೆ. ಆದರೆ ಇಡಿ ಮಧ್ಯಪ್ರವೇಶ ಮಾಡಿದೆ. ನಮ್ಮ ತನಿಖೆಯಲ್ಲಿ ಲೋಪವಿದ್ದಾಗ ಬರಬಹುದಿತ್ತು. ಆದರೆ ನಮ್ಮ ತನಿಖೆ ಮುಗಿಯುವ ಮುನ್ನವೇ ಮಧ್ಯಪ್ರವೇಶ ಮಾಡಿದ್ದಾರೆ” ಎಂದು ತಿಳಿಸಿದರು.

“ಈಡಿ ಅಧಿಕಾರಿಗಳು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ವ್ಯವಸ್ಥಾಪಕ ನಿರ್ದೇಶಕರಾದ ಕಲ್ಲೇಶ್ ಅವರಿಗೆ ಬೆದರಿಕೆ ಹಾಕಿ, ಈ ಪ್ರಕರಣದಲ್ಲಿ ಮಂತ್ರಿ, ಮುಖ್ಯಮಂತ್ರಿ ಹೆಸರು ಹೇಳಿಸುವ ಒತ್ತಡ ಹಾಕುತ್ತಿದ್ದಾರೆ. ಇವರ ಹೆಸರು ಹೇಳದಿದ್ದರೆ ಏಳು ವರ್ಷ ಜೈಲು ಶಿಕ್ಷೆ ಅನುಭಿಸಬೇಕಾಗುತ್ತದೆ ಎಂದು ಈಡಿ ಅಧಿಕಾರಿಗಳು ಬೆದರಿಕೆ ಹಾಕುತ್ತಿದ್ದಾರೆ. ಇದರಿಂದ ಮನನೊಂದ ಅಧಿಕಾರಿ, ಈಡಿ ಅಧಿಕಾರಿಗಳ ವಿರುದ್ಧ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ದೂರಿನ ಅನ್ವಯ ನಿನ್ನೆ ಈಡಿ ಅಧಿಕಾರಿಗಳ ಮೇಲೆ ಎಫ್ಐಆರ್ ದಾಖಲಾಗಿದ್ದು, ಈಡಿ ಅಧಿಕಾರಿ ಮಿತ್ತಲ್ ಎಂಬುವವರು ಎ1, ಮುರಳಿ ಕಣ್ಣನ್ ಎಂಬುವವರು ಎ2 ಆಗಿದ್ದಾರೆ. ಇವರಿಬ್ಬರು ಸೇರಿ ಈ ಪ್ರಕರಣದಲ್ಲಿ ಮುಖ್ಯಮಂತ್ರಿ ಹಾಗೂ ಮಂತ್ರಿ ಹೆಸರೇಳಬೇಕು. ಅವರ ಮಾರ್ಗದರ್ಶನದಲ್ಲಿ ಈ ಅಕ್ರಮ ನಡೆದಿದೆ ಎಂದು ಹೇಳಬೇಕು ಎಂದು ಒತ್ತಾಯಿಸಿದ್ದಾರೆ ಎಂದು ದೂರಿನಲ್ಲಿದೆ” ಎಂದು ವಿವರಿಸಿದರು.

“ನಿನ್ನೆ ರಾತ್ರಿ ನಮಗೆ ಈ ದೂರಿನ ವಿಚಾರ ತಿಳಿದಿದೆ. ಈಡಿ ಸಂಸ್ಥೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ಕೇಂದ್ರ ಸರಕಾರ ಹಾಗೂ ಅಧಿಕಾರಿಗಳ ವಿರುದ್ಧ ನಾವು ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ಮಾಡುತ್ತಿದ್ದೇವೆ. ಈ ಅಕ್ರಮದ ಬಗ್ಗೆ ವಿಧಾನಸಭೆಯಲ್ಲಿ ಚರ್ಚೆ ನಡೆದು ನಮ್ಮ ಮುಖ್ಯಮಂತ್ರಿಗಳು ಉತ್ತರ ನೀಡಲು ಬಿಜೆಪಿಯ ನಾಯಕರು ಅವಕಾಶ ನೀಡಲಿಲ್ಲ. ಅವರ ಕಾಲದಲ್ಲಿನ ದೊಡ್ಡ ಹಗರಣಗಳನ್ನು ನಾವು ಬಿಚ್ಚಿಡುತ್ತೇವೆ ಎಂಬ ಕಾರಣಕ್ಕೆ ಗದ್ದಲ ಸೃಷ್ಟಿಸಿದರು.ಬಿಜೆಪಿ ಕಾಲದಲ್ಲಿ ದೇವರಾಜ ಅರಸು ಟ್ರಕ್ ಟರ್ಮಿನಲ್ ನಿಗಮದಲ್ಲಿನ ಅಕ್ರಮದಲ್ಲಿ ಭಾಗಿಯಾಗಿದ್ದ ಬಿಜೆಪಿಯ ವಿಧಾನ ಪರಿಷತ್ ಮಾಜಿ ಸದಸ್ಯರನ್ನು ಬಂಧಿಸಲಾಗಿದೆ. ಇನ್ನು ಸಿಎಜಿ ವರದಿಯಲ್ಲಿ ಅಶ್ವತ್ಥ್ ನಾರಾಯಣ ಅವರ ಇಲಾಖೆಯಲ್ಲಿ 500 ಕೋಟಿ ಅವ್ಯವಹಾರ ನಡೆದಿರುವುದು ಕಂಡುಬಂದಿದೆ. ಕೋಟಾ ಶ್ರೀನಿವಾಸ ಪೂಜಾರಿ ಅವರ ಇಲಾಖೆಯ ನಿಗಮಗಳಲ್ಲೂ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ. ಯಡಿಯೂರಪ್ಪ ಹಾಗೂ ಬೊಮ್ಮಾಯಿ ಅವರ ಕಾಲದಲ್ಲಿ ನಡೆದಿರುವ ಅಕ್ರಮದ ಬಗ್ಗೆ ಪ್ರಸ್ತಾಪ ಮಾಡುವಾಗ ಬಿಜೆಪಿಗರು ಅವಕಾಶ ನೀಡಲಿಲ್ಲ” ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X