ಪರಿಷತ್ ಚುನಾವಣೆ: ಕಾಂಗ್ರೆಸ್‌ನಿಂದ ಐವರು ಅಭ್ಯರ್ಥಿಗಳು ಕಣಕ್ಕೆ : ಡಿ.ಕೆ.ಶಿವಕುಮಾರ್

ಬೆಂಗಳೂರು : ವಿಧಾನ ಪರಿಷತ್ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದು, ನಾವು ಐವರು ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುತ್ತಿದ್ದು, ಈಗಾಗಲೇ ನಾಲ್ವರು ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಐದನೇ ಅಭ್ಯರ್ಥಿ ಜೂ.5ಕ್ಕೆ ಪ್ರಕಟಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಗುರುವಾರ ವಿಧಾನಸೌಧದ ಆವರಣದಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ನಾನು ಅಧಿಕಾರಿಗಳ ಜೊತೆಗೆ ಸಭೆ ಮಾಡಿದ್ದೇನೆ. ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸಿದ್ದೇವೆ ಎಂದು ಹೇಳಿದರು.
ಹರಿಪ್ರಸಾದ್‌ಗೆ ಅಪಾರ ಅನುಭವವಿದೆ: ಈಗ ಕಾಂಗ್ರೆಸ್ ಪಕ್ಷದಲ್ಲಿ ಡಿ.ಕೆ ಹಾಗೂ ಬಿ.ಕೆ.ಜೋಡಿ ನೇತೃತ್ವವಿದೆ ಎಂದು ಕೇಳಿದಾಗ, ಹರಿಪ್ರಸಾದ್ ಕಾಂಗ್ರೆಸ್ ಪಕ್ಷದ ಹಿರಿಯ ಹಾಗೂ ನಿಷ್ಠಾವಂತ ನಾಯಕ, ಕಾರ್ಯಕರ್ತ. ನಾಲ್ಕು ಬಾರಿ ರಾಜ್ಯಸಭೆಗೆ ಆಯ್ಕೆಯಾಗಿದ್ದು, ಪ್ರಧಾನ ಕಾರ್ಯದರ್ಶಿಯಾಗಿ ದೇಶದ ವಿವಿಧ ರಾಜ್ಯಗಳಲ್ಲಿ ಕೆಲಸ ಮಾಡಿದ್ದಾರೆ ಎಂದು ಹೇಳಿದರು.
ಅವರು ವಿಧಾನ ಪರಿಷತ್ ಸದಸ್ಯರಾಗಿದ್ದು, ನಾಳೆ ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಲಿದ್ದಾರೆ. ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾಗಿದ್ದು, ಅಪಾರ ಅನುಭವ ಹೊಂದಿದ್ದಾರೆ. ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಅವರನ್ನು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ನೇಮಕ ಮಾಡಿದೆ ಎಂದರು.
ನಾವೆಲ್ಲರೂ ಒಟ್ಟಿಗೆ ಸೇರಿ ಕೆಲಸ ಮಾಡುತ್ತೇವೆ. ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವುದು ನಮ್ಮ ಕರ್ತವ್ಯ. ನಮ್ಮ ಆಡಳಿತವನ್ನು ರಾಜ್ಯದ ಜನ ಗೌರವಿಸಿ, ಬೆಂಬಲಿಸುವ ವಿಶ್ವಾಸವಿದೆ. ಉತ್ತಮ ಆಡಳಿತ ನೀಡುವುದು ನಮ್ಮ ಗುರಿ ಎಂದು ಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.
ಹೊರ ರಾಜ್ಯದವರಿಗಿಲ್ಲ ಉಚಿತ ಬಸ್ ಪಾಸ್
ನಾವು ನಮ್ಮ ರಾಜ್ಯದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುತ್ತಿದ್ದು, ಹೊರಗಿನವರಿಗೆ ಹೇಗೆ ಉಚಿತ ಬಸ್ ಪಾಸ್ ನೀಡಲು ಸಾಧ್ಯ?. ನಮ್ಮ ಯೋಜನೆಗಳು ಕೇವಲ ಕನ್ನಡಿಗರಿಗೆ ಮಾತ್ರ. ಬೇರೆ ರಾಜ್ಯದವರಿಗೆ ನೀಡಲು ಆಗುವುದಿಲ್ಲ. ನೀವು ಕೇವಲ ಮಹಿಳೆಯರಿಗೆ ಮಾತ್ರ ಉಚಿತ ಬಸ್ ಪ್ರಯಾಣ ಕಲ್ಪಿಸಿದ್ದೀರಿ ಎಂದು ಬಾಲಕ ವಿದ್ಯಾರ್ಥಿಗಳು ಪ್ರಶ್ನೆ ಮಾಡುತ್ತಿದ್ದರು. ಈಗ ಒಂದನೇ ತರಗತಿಯಿಂದ ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಉಚಿತ ಪಾಸ್ ನೀಡಲಾಗುವುದು ಎಂದು ಡಿಕೆಶಿ ಹೇಳಿದರು.






