ಶೃಂಗೇರಿ ಶಾಸಕರಾಗಿ ಡಿ.ಎನ್.ಜೀವರಾಜ್ ಪ್ರಮಾಣವಚನ ಸ್ವೀಕಾರ

ಬೆಂಗಳೂರು : ಶೃಂಗೇರಿ ಕ್ಷೇತ್ರದಿಂದ ವಿಧಾನಸಭಾ ಸದಸ್ಯರಾಗಿ ಆಯ್ಕೆಯಾದ ಡಿ.ಎನ್. ಜೀವರಾಜ್ ಅವರು ಬುಧವಾರ ಪ್ರಮಾಣವಚನ ಸ್ವೀಕರಿಸಿದರು.
ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರು ಪ್ರಮಾಣವಚನ ಬೋಧಿಸಿದರು.
ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಛಲವಾದಿ ನಾರಾಯಣಸ್ವಾಮಿ, ಶಾಸಕರಾದ ಎಸ್.ಮುನಿರಾಜು, ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
Next Story




