Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕಾಂಗ್ರೆಸ್‌ನಿಂದ ಡಾ. ಸೈಯದ್ ನಾಸಿರ್...

ಕಾಂಗ್ರೆಸ್‌ನಿಂದ ಡಾ. ಸೈಯದ್ ನಾಸಿರ್ ಹುಸೇನ್ ಮತ್ತೆ ರಾಜ್ಯಸಭೆಗೆ

ಬಳ್ಳಾರಿಯ ನಾಯಕ ಮತ್ತೊಮ್ಮೆ ದಿಲ್ಲಿಗೆ

ವಾರ್ತಾಭಾರತಿವಾರ್ತಾಭಾರತಿ14 Feb 2024 9:16 PM IST
share
ಕಾಂಗ್ರೆಸ್‌ನಿಂದ ಡಾ. ಸೈಯದ್ ನಾಸಿರ್ ಹುಸೇನ್ ಮತ್ತೆ ರಾಜ್ಯಸಭೆಗೆ

ಬೆಂಗಳೂರು: ಡಾ. ಸೈಯದ್ ನಾಸಿರ್ ಹುಸೇನ್ ಅವರನ್ನು 2024 ರ ರಾಜ್ಯಸಭಾ ಚುನಾವಣೆಗೆ ಕರ್ನಾಟಕದಿಂದ ಎರಡನೇ ಅವಧಿಗೆ ಕಾಂಗ್ರೆಸ್‌ನಿಂದ ಮರು ನಾಮನಿರ್ದೇಶನ ಮಾಡಲಾಗಿದೆ.

ಪಕ್ಷದ ನಿಷ್ಠಾವಂತ ಕಾರ್ಯಕರ್ತ, ರಾಜಕೀಯ ನಿಪುಣ ಮತ್ತು ಪಕ್ಷದ ವಕ್ತಾರ ನಾಸಿರ್ ಹುಸೇನ್ ಅವರು ರಾಜ್ಯಸಭೆಯಲ್ಲಿ ಸಾಮಾನ್ಯ ಜನರ ಸಮಸ್ಯೆಗಳ ಮೇಲೆ ಗಮನ ಸೆಳೆಯುವ ಕೆಲಸ ನಿರಂತರವಾಗಿ ಮಾಡಿದ್ದರು. ನಿರುದ್ಯೋಗ, ಬೆಲೆ ಏರಿಕೆ, ಅಗತ್ಯ ವಸ್ತುಗಳ ಮೇಲಿನ ಜಿಎಸ್‌ಟಿ, ಚೀನಾದ ಆಕ್ರಮಣ, ಮಣಿಪುರ ಜನಾಂಗೀಯ ಹಿಂಸಾಚಾರ, ದುರುಪಯೋಗ ಮತ್ತು ಪ್ರಸ್ತುತ ಸರಕಾರದ ಹಗರಣಗಳಂತಹ ದೇಶದ ಮೇಲೆ ಪರಿಣಾಮ ಬೀರುವ ನೈಜ ಮತ್ತು ಸಂಬಂಧಿತ ವಿಷಯಗಳಿಗೆ ಅವರು ಧ್ವನಿಯಾಗಿದ್ದರು. ಬಳ್ಳಾರಿ ಮೂಲದವರಾದ ಅವರು ಕರ್ನಾಟಕದ ಬಳ್ಳಾರಿ ಜಿಲ್ಲೆಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಧ್ವನಿಯೆತ್ತಿದ್ದರು.

ನಾಸಿರ್ ಹುಸೇನ್ ಅವರು ಪ್ರತಿಪಕ್ಷಗಳನ್ನು ಸಂಸತ್ತಿನಲ್ಲಿ ಸಕ್ರಿಯವಾಗಿ ಸಜ್ಜುಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಕೃಷಿ ಕಾನೂನುಗಳ ಆಂದೋಲನ, ಕಾರ್ಮಿಕ ಸಂಹಿತೆಗಳ ಪ್ರತಿಭಟನೆಗಳು ಮತ್ತು ಸಂಸತ್ತಿನಲ್ಲಿ ಸಿಎಎ ಮತ್ತು ಎನ್‌ಆರ್‌ಸಿ ಯಂತಹ ಅಸಂವಿಧಾನಿಕ ಕಾನೂನುಗಳ ಬಗ್ಗೆ ಚರ್ಚೆಯಲ್ಲಿ ವಿರೋಧ ಪಕ್ಷಗಳನ್ನು ಉತ್ತಮವಾಗಿ ಸಂಘಟಿಸಿ, ದನಿಯೆತ್ತಿದ್ದರು. ಸಂಸತ್ತಿನೊಳಗೆ ಸಮಸ್ಯೆಗಳನ್ನು ಪ್ರಸ್ತಾಪಿಸಿ ಮೋದಿ ಸರಕಾರವನ್ನು ಕಟಕೆಯಲ್ಲಿ ಟೀಕಿಸಿದ್ದಕ್ಕಾಗಿ ಅವರನ್ನು ಇತರ ವಿರೋಧ ಪಕ್ಷದ ಸಂಸದರೊಂದಿಗೆ ಮೂರು ಬಾರಿ ಅಮಾನತುಗೊಳಿಸಲಾಗಿತ್ತು.

2018 ರಲ್ಲಿ ರಾಜ್ಯಸಭೆಗೆ ಆಯ್ಕೆಯಾದ ಡಾ. ನಾಸಿರ್ ಹುಸೇನ್ ಅವರನ್ನು 2020 ರಲ್ಲಿ ವಿಪ್ ಆಗಿ ನೇಮಿಸಲಾಯಿತು. ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆಯವರ ಚುನಾವಣಾ ಪ್ರಚಾರದ ವ್ಯವಸ್ಥಾಪಕರಾಗಿದ್ದರು. ಆ ಬಳಿಕ ಅವರು ಕಾಂಗ್ರೆಸ್ ಅಧ್ಯಕ್ಷರ ಸಂಯೋಜಕರಾಗಿ ನೇಮಕಗೊಂಡರು.

ಅವರ ಕಠಿಣ ಪರಿಶ್ರಮ, ಪ್ರಾಮಾಣಿಕತೆ ಮತ್ತು ಸಮರ್ಪಣಾ ಮನೋಭಾವ ಕಾಂಗ್ರೆಸ್ ಪಕ್ಷದ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯಲ್ಲಿ (ಸಿಡಬ್ಲ್ಯೂಸಿ) ಸ್ಥಾನ ದೊರಕಿಸಿ ಕೊಟ್ಟಿತು.

ಕೋವಿಡ್ ಸಾಂಕ್ರಾಮಿಕ ಬಿಕ್ಕಟ್ಟಿನ ಸಂದರ್ಭದಲ್ಲಿ ಅವರ ನಾಯಕತ್ವವನ್ನು ಪಕ್ಷ ಮತ್ತು ಜನರು ಗಮನಿಸಿದ್ದಾರೆ. ದಿಲ್ಲಿಯ ಪಕ್ಷದ ಪ್ರಧಾನ ಕಚೇರಿಯಿಂದ ದೇಶದಾದ್ಯಂತ ಸಂತ್ರಸ್ತ ಜನರನ್ನು ತಲುಪುವ ಮಹತ್ತರ ಕಾರ್ಯವನ್ನು ಅವರು ಮಾಡಿದ್ದಾರೆ.

ವಿದ್ಯಾರ್ಥಿ ಜೀವನದಲ್ಲೇ ಹೋರಾಟಕ್ಕೆ ಧುಮುಕಿದ ಅವರು, ಜೆಎನ್‌ಯು ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿದ್ದರು. ಅವರು ವಿದ್ಯಾರ್ಥಿ ಜೀವನ ಮತ್ತು ಯುವ ರಾಜಕೀಯದ ತಮ್ಮ ದೀರ್ಘಾವಧಿಯಲ್ಲಿ ದಿಲ್ಲಿಯಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು. ಯುಪಿಎ ಅವಧಿಯಲ್ಲಿ ಎರಡು ಕಾರ್ಮಿಕ ಮಂಡಳಿಗಳ ಅಧ್ಯಕ್ಷರಾಗಿ ಅನುಭವವನ್ನು ಗಳಿಸಿದರು.

ಜವಾಹರಲಾಲ್ ವಿಶ್ವವಿದ್ಯಾನಿಲಯದಿಂದ ಅಂತರಾಷ್ಟ್ರೀಯ ಅಧ್ಯಯನದಲ್ಲಿ ಡಾಕ್ಟರೇಟ್ ಪಡೆದಿರುವ ನಾಸಿರ್ ಹುಸೇನ್ ಅವರು ರಾಜಕೀಯ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ. ಪಕ್ಷದ ರಾಷ್ಟ್ರೀಯ ವಕ್ತಾರರಾಗಿ, ಅವರು ದೂರದರ್ಶನ ಚಾನೆಲ್‌ಗಳು ಮತ್ತು ಪತ್ರಿಕಾಗೋಷ್ಠಿಗಳಲ್ಲಿ ಅನೇಕ ದೇಶೀಯ ಮತ್ತು ಅಂತರರಾಷ್ಟ್ರೀಯ ಸಮಸ್ಯೆಗಳ ಕುರಿತು ಪಕ್ಷದ ನಿಲುವನ್ನು ವ್ಯಕ್ತಪಡಿಸುತ್ತಿದ್ದಾರೆ. ಸಾಂಸ್ಥಿಕ ವ್ಯವಹಾರಗಳಲ್ಲಿ ದಿವಂಗತ ಆಸ್ಕರ್ ಫೆರ್ನಾಂಡಿಸ್ ಅವರಿಂದ ಮಾರ್ಗದರ್ಶನ ಪಡೆದ ಹುಸೇನ್ ಅವರು ದೇಶದ ವಿವಿಧ ಭಾಗಗಳಲ್ಲಿ ವಿವಿಧ ಹುದ್ದೆಗಳಲ್ಲಿ ಕೆಲಸ ಮಾಡುವ ಅವಕಾಶವನ್ನು ಪಡೆದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X