Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ವಿದೇಶಿಯರು ಪ್ರವಾಸಿ ವೀಸಾ ಪಡೆದು...

ವಿದೇಶಿಯರು ಪ್ರವಾಸಿ ವೀಸಾ ಪಡೆದು ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶವಿಲ್ಲ : ಡಾ.ಜಿ.ಪರಮೇಶ್ವರ್

ವಾರ್ತಾಭಾರತಿವಾರ್ತಾಭಾರತಿ3 Sept 2025 7:16 PM IST
share
ವಿದೇಶಿಯರು ಪ್ರವಾಸಿ ವೀಸಾ ಪಡೆದು ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶವಿಲ್ಲ : ಡಾ.ಜಿ.ಪರಮೇಶ್ವರ್

ಬೆಂಗಳೂರು, ಸೆ.3 : ವಿದೇಶಿಯರು ಪ್ರವಾಸಿ ವೀಸಾ ಪಡೆದು ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು, ಪ್ರಚಾರ ಮಾಡಲು ನಮ್ಮ ದೇಶದ ಕಾನೂನಿನಲ್ಲಿ ಅವಕಾಶವಿಲ್ಲ. ಈ ವಿಚಾರವನ್ನು ಪೊಲೀಸ್ ಇಲಾಖೆ ಮೂಲಕ ಮೀಲಾದುನ್ನಬಿ ಕಾರ್ಯಕ್ರಮದ ಆಯೋಜಕರ ಗಮನಕ್ಕೆ ತರಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸೆ.5ರಂದು ಆಯೋಜಿಸಿರುವ ಅಂತರ್‌ ರಾಷ್ಟ್ರೀಯ ಮೀಲಾದುನ್ನಬಿ ಕಾರ್ಯಕ್ರಮದಲ್ಲಿ ವಿದೇಶಗಳ ಧಾರ್ಮಿಕ ನಾಯಕರು ಭಾಗವಹಿಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸ್ ದೂರು ದಾಖಲಾಗಿರುವ ಕುರಿತು ಬುಧವಾರ ವಿಧಾನಸೌಧದಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದರು.

ವಿದೇಶಿ ಧಾರ್ಮಿಕ ನಾಯಕರನ್ನು ಕಾರ್ಯಕ್ರಮದ ಆಯೋಜಕರು ಆಹ್ವಾನಿಸಿರುತ್ತಾರೆ. ಆದರೆ, ನಾವು ಈಗಾಗಲೇ ಅವರಿಗೆ ವಿದೇಶಿಯರ ಕಾಯ್ದೆ ಹಾಗೂ ವೀಸಾ ನಿಯಮಾವಳಿಗಳ ಉಲ್ಲಂಘನೆಯಾಗದಂತೆ ಎಚ್ಚರಿಕೆ ವಹಿಸುವಂತೆ ತಿಳಿಸಿದ್ದೇವೆ ಎಂದು ಪರಮೇಶ್ವರ್ ತಿಳಿಸಿದರು.

ವಿದೇಶಿಯರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸದಂತೆಯೂ ತಿಳಿಸಿದ್ದೇವೆ. ಆಯೋಜಕರು ಈಗ ಅದನ್ನು ಸರಿಪಡಿಸಿಕೊಳ್ಳಬೇಕು. ಕಾನೂನು ಉಲ್ಲಂಘನೆಯಾಗದಂತೆ ಪೊಲೀಸ್ ಇಲಾಖೆ ಹಾಗೂ ಪ್ರಾದೇಶಿಕ ವಿದೇಶಿಯರ ನೋಂದಣಿ ಕಚೇರಿ(ಎಫ್‍ಆರ್‌ಆರ್)ಯವರು ನಿಗಾ ವಹಿಸಿರುತ್ತಾರೆ ಎಂದು ಅವರು ಹೇಳಿದರು.

ವಿದೇಶಿ ಧಾರ್ಮಿಕ ನಾಯಕರು ಭಾಗವಹಿಸಲಿರುವ ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಯೂ ಪಾಲ್ಗೊಳ್ಳುತ್ತಿದ್ದಾರೆ. ಇದು ಕಾನೂನಿನ ಉಲ್ಲಂಘನೆ ಯಾಗುವುದಿಲ್ಲವೇ? ಎಂದು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಪರಮೇಶ್ವರ್, ಕಾನೂನು ಉಲ್ಲಂಘನೆ ಮಾಡಿದಾಗ ತಾನೇ ಕ್ರಮ ಕೈಗೊಳ್ಳುವ ವಿಚಾರ ಬರೋದು ಎಂದರು.

ಕಾನೂನು ಪಾಲನೆ ಮಾಡುವ ವಿಚಾರದಲ್ಲಿ ವಿರೋಧ ಪಕ್ಷದವರಿಗಿಂತ ಹತ್ತು ಪಟ್ಟು ಹೆಚ್ಚಿನ ಜವಾಬ್ದಾರಿ ಸರಕಾರ ನಡೆಸುತ್ತಿರುವವರ ಮೇಲಿರುತ್ತದೆ. ವಿದೇಶಿ ಧಾರ್ಮಿಕ ನಾಯಕರು ಕೇವಲ ಭಾಷಣಕ್ಕಷ್ಟೇ ಅಲ್ಲ, ಅವರ ಉಪಸ್ಥಿತಿಯೂ ಕಾರ್ಯಕ್ರಮದಲ್ಲಿ ಇರಬಾರದು ಎಂದು ಸ್ಪಷ್ಟವಾಗಿ ಆಯೋಜಕರಿಗೆ ತಿಳಿಸಲಾಗಿದೆ ಎಂದು ಪರಮೇಶ್ವರ್ ತಿಳಿಸಿದರು.

ವೀಸಾ ನಿಯಮಾವಳಿಯಲ್ಲಿ ಏನಿದೆ?: ವಿದೇಶಿಯರು ಧಾರ್ಮಿಕ ಸ್ಥಳಗಳಿಗೆ ಭೇಟಿ ಹಾಗೂ ಸಾಮಾನ್ಯ ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗವಹಿಸಲು ಯಾವುದೆ ನಿರ್ಬಂಧವಿಲ್ಲ. ಆದರೆ, ಧಾರ್ಮಿಕ ಸಭೆ, ಸಮಾರಂಭಗಳಲ್ಲಿ ಭಾಷಣ ಮಾಡುವುದು, ಧಾರ್ಮಿಕ ವಿಚಾರಗಳನ್ನು ಪ್ರಚಾರ ಮಾಡುವಂತಿಲ್ಲ. ಅಲ್ಲದೇ, ಆಡಿಯೋ, ವಿಡಿಯೋ ಹಾಗೂ ಹಸ್ತಪ್ರತಿಗಳನ್ನು ಹಂಚುವುದು ನಿರ್ಬಂಧಿಸಲಾಗಿದೆ.

ಯಾರಿಗೆಲ್ಲ ಆಹ್ವಾನ?: ಸೌದಿ ಅರೇಬಿಯಾದ ಶೇಖ್ ಅಬ್ದುಲ್ಲಾ ಅಬ್ದುಲ್ ಕಬೀರ್ ಅಬ್ದುಲ್ ಕರೀಮ್, ಸಯ್ಯದ್ ಅಬ್ತಾನ್ ಅಲ್ ಶಾಮಿರಿ, ಇರಾಕ್ ದೇಶದ ಸಯ್ಯದ್ ಹಾಶಿಮ್ ಅಬ್ದುಲ್ ಖಾದಿರ್ ಅಲ್ ಜೀಲಾನಿ ಹಾಗೂ ಯಮನ್ ದೇಶದ ಸಯ್ಯದ್ ಹಬೀಬ್ ಉಮರ್ ಬಿನ್ ಹಫೀಝ್ ಅವರನ್ನು ಅಂತರ್‌ ರಾಷ್ಟ್ರೀಯ ಮೀಲಾದುನ್ನಬಿ ಸಮಾವೇಶದಲ್ಲಿ ಪಾಲ್ಗೊಳ್ಳುವಂತೆ ಆಹ್ವಾನ ನೀಡಲಾಗಿದೆ.

ಇವರಲ್ಲದೆ, ಕೇರಳದ ಸುಲ್ತಾನುಲ್ ಉಲಮಾ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಎ.ಪಿ.ಅಬೂಬಕರ್ ಮುಸ್ಲಿಯಾರ್, ಸಯ್ಯಿದುಲ್ ಉಲಮಾ ಜಿಫ್ರಿ ಮುತ್ತುಕೋಯ ತಂಙಳ್ ಅವರನ್ನು ಮುಖ್ಯ ಅತಿಥಿಗಳಾಗಿ ಆಹ್ವಾನಿಸಲಾಗಿದೆ.

ಧರ್ಮಗುರುಗಳು ಕಾರ್ಯಕ್ರಮದಲ್ಲಿ ಭಾಗಿಯಾಗುವುದಿಲ್ಲ: ಝಮೀರ್ ಅಹ್ಮದ್ ಖಾನ್

ಬೆಂಗಳೂರಿನಲ್ಲಿ ಪ್ರತಿ ವರ್ಷ ಮೂರು ಸಮಿತಿಗಳು ಪ್ರತ್ಯೇಕವಾಗಿ ಮೀಲಾದುನ್ನಬಿ ಆಚರಣೆ ಮಾಡುತ್ತಿದ್ದವು. ಆದರೆ, ಈ ಬಾರಿ ಪ್ರವಾದಿ ಮುಹಮ್ಮದ್(ಸ)ರವರ 1500ನೆ ಜನ್ಮದಿನಾಚರಣೆ ಆಗಿರುವ ಕಾರಣಕ್ಕೆ ಎಲ್ಲರೂ ಸೇರಿ ದೊಡ್ಡ ಕಾರ್ಯಕ್ರಮ ಆಯೋಜನೆ ಮಾಡಲು ನಿರ್ಧರಿಸಿದ್ದೇವೆ. ವಿದೇಶದಿಂದ ಪ್ರವಾಸಿ ವೀಸಾದಲ್ಲಿ ಬರುತ್ತಿರುವ ಧರ್ಮಗುರುಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕಾನೂನು ಪ್ರಕಾರ ಅವಕಾಶ ಇಲ್ಲ ಎಂದು ಹೇಳಲಾಗುತ್ತಿದೆ. ಹೀಗಾಗಿ, ಅವರು ಕಾರ್ಯಕ್ರಮದಲ್ಲಿ ಭಾಗಿ ಆಗುವುದಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X