Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬರ ಪರಿಹಾರಕ್ಕಾಗಿ 20,585.73 ಕೋಟಿ ರೂ....

ಬರ ಪರಿಹಾರಕ್ಕಾಗಿ 20,585.73 ಕೋಟಿ ರೂ. ಬಿಡುಗಡೆಗೆ ಆಗ್ರಹಿಸಿ ಪ್ರಧಾನಿ ಮೋದಿ, ಕೇಂದ್ರ ಗೃಹ ಹಾಗೂ ಕೃಷಿ ಸಚಿವರಿಗೆ ಡಾ. ಜಿ. ಪರಮೇಶ್ವರ ಪತ್ರ

► ರಾಜ್ಯದಲ್ಲಿ 226 ತಾಲೂಕುಗಳು ಬರಪೀಡಿತ; ಶೀಘ್ರ ಆರ್ಥಿಕ ನೆರವು ಬಿಡುಗಡೆಗೆ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ22 Oct 2026 2:17 PM IST
share
ಬರ ಪರಿಹಾರಕ್ಕಾಗಿ  20,585.73 ಕೋಟಿ ರೂ. ಬಿಡುಗಡೆಗೆ ಆಗ್ರಹಿಸಿ ಪ್ರಧಾನಿ ಮೋದಿ, ಕೇಂದ್ರ ಗೃಹ ಹಾಗೂ ಕೃಷಿ ಸಚಿವರಿಗೆ ಡಾ. ಜಿ. ಪರಮೇಶ್ವರ ಪತ್ರ

ಬೆಂಗಳೂರು, ಅ.22: ಕರ್ನಾಟಕದಲ್ಲಿ ಉಂಟಾಗಿರುವ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸಲು ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (NDRF) ಅಡಿಯಲ್ಲಿ 20,585.73 ಕೋಟಿ ರೂ. ಪರಿಹಾರವನ್ನು ತುರ್ತಾಗಿ ಮಂಜೂರು ಮಾಡಿ ಬಿಡುಗಡೆ ಮಾಡುವಂತೆ ಕೋರಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಪ್ರತ್ಯೇಕ ಪತ್ರಗಳನ್ನು ಬರೆದಿದ್ದಾರೆ.

ರಾಜ್ಯದಲ್ಲಿನ ಬರ ಪರಿಸ್ಥಿತಿಯ ಗಂಭೀರತೆಯನ್ನು ವಿವರಿಸಿರುವ ಅವರು, 2026ರ ನೈಋತ್ಯ ಮುಂಗಾರು ಅವಧಿಯಲ್ಲಿ ಕರ್ನಾಟಕದಲ್ಲಿ ಶೇ.35ರಷ್ಟು ಮಳೆ ಕೊರತೆಯಾಗಿದೆ. ವಾಡಿಕೆಯಂತೆ 852 ಮಿ.ಮೀ. ಮಳೆಯಾಗಬೇಕಿದ್ದು ಕೇವಲ 551 ಮಿ.ಮೀ. ಮಳೆಯಾಗಿದೆ. ಇದು 1956ರಿಂದೀಚೆಗೆ ದಾಖಲಾದ ಎರಡನೇ ಅತ್ಯಂತ ಕಡಿಮೆ ಹಾಗೂ 1901ರಿಂದೀಚೆಗೆ ದಾಖಲಾದ ಏಳನೇ ಅತ್ಯಂತ ಕಡಿಮೆ ಮುಂಗಾರು ಮಳೆಯಾಗಿದೆ ಎಂದು ತಿಳಿಸಿದ್ದಾರೆ.

ರಾಜ್ಯ ಸರ್ಕಾರವು 226 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದೆ. ಒಟ್ಟು 57.93 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, ಇದರಲ್ಲಿ 53.92 ಲಕ್ಷ ಹೆಕ್ಟೇರ್ ಕೃಷಿ ಬೆಳೆಗಳು ಹಾಗೂ 4.01 ಲಕ್ಷ ಹೆಕ್ಟೇರ್ ತೋಟಗಾರಿಕಾ ಬೆಳೆಗಳು ಸೇರಿವೆ. ಕೃಷಿ ವೆಚ್ಚದ ಆಧಾರದ ಮೇಲೆ ಲೆಕ್ಕಹಾಕಲಾದ ಒಟ್ಟು ಆರ್ಥಿಕ ನಷ್ಟ 62,481.88 ಕೋಟಿ ರೂ. ಆಗಿದೆ ಎಂದು ವಿವರಿಸಿದ್ದಾರೆ.

ಬರ ಪರಿಹಾರಕ್ಕಾಗಿ ರಾಜ್ಯ ಸರ್ಕಾರವು ಒಟ್ಟು 20,585.73 ಕೋಟಿ ರೂ. ಕೇಂದ್ರದ ನೆರವು ಕೋರಿ ಸಮಗ್ರ ಮನವಿ ಪತ್ರವನ್ನು ಸಲ್ಲಿಸಿದೆ. ಇದರಲ್ಲಿ ಬೆಳೆ ಹಾನಿಯ ಪರಿಹಾರ ಸಹಾಯಧನಕ್ಕಾಗಿ (Input Subsidy) 6,128.70 ಕೋಟಿ , 61.91 ಲಕ್ಷ ರೂ. ಸಣ್ಣ ಮತ್ತು ಅತಿಸಣ್ಣ ರೈತರಿಗೆ ಜೀವನೋಪಾಯ ಪರಿಹಾರವಾಗಿ 12,146.99 ಕೋಟಿ ರೂ., ಕುಡಿಯುವ ನೀರಿನ ಪೂರೈಕೆಗಾಗಿ 1,727 ಕೋಟಿ ರೂ. ಹಾಗೂ ಪಶುಸಂಗೋಪನೆ ಮತ್ತು ಜಾನುವಾರುಗಳ ಸಂರಕ್ಷಣೆಗಾಗಿ 583.04 ಕೋಟಿ ರೂ. ನೆರವು ಕೋರಲಾಗಿದೆ ಎಂದು ತಿಳಿಸಿದ್ದಾರೆ.

ಬರದಿಂದ ಜೀವನೋಪಾಯಕ್ಕೆ ತೀವ್ರ ಹೊಡೆತ ಬಿದ್ದಿರುವ ಸಣ್ಣ ಮತ್ತು ಅತಿಸಣ್ಣ ರೈತರಿಗೆ ತಕ್ಷಣವೇ ಆರ್ಥಿಕ ನೆರವು ಒದಗಿಸುವ ಅಗತ್ಯವನ್ನು ಡಾ. ಪರಮೇಶ್ವರ ಅವರು ವಿಶೇಷವಾಗಿ ಒತ್ತಿಹೇಳಿದ್ದಾರೆ. ರೈತರಿಗೆ ದಿನಕ್ಕೆ 327ರೂ.ರಂತೆ 60 ದಿನಗಳ ಅವಧಿಗೆ ಜೀವನೋಪಾಯ ಪರಿಹಾರವನ್ನು ಲೆಕ್ಕಹಾಕಲಾಗಿದೆ. ಜಾನುವಾರುಗಳ ರಕ್ಷಣೆಗಾಗಿ 476 ಗೋಶಾಲೆಗಳು ಮತ್ತು 583 ಮೇವು ಬ್ಯಾಂಕ್‌ಗಳನ್ನು ಸ್ಥಾಪಿಸಲು ಸಹ ಕೇಂದ್ರದ ನೆರವು ಕೋರಲಾಗಿದೆ.

ಬೆಳೆ ಹಾನಿಯ ಪರಿಹಾರ ಸಹಾಯಧನವನ್ನು ನಿರ್ಧರಿಸಲು ಈಗಲೂ 2015–16ರ ಹಳೆಯ ಕೃಷಿ ಗಣತಿಯ ಅಂಕಿಅಂಶಗಳನ್ನು ಬಳಸುತ್ತಿರುವ ಬಗ್ಗೆ ಡಾ. ಪರಮೇಶ್ವರ ಅವರು ಕಳವಳ ವ್ಯಕ್ತಪಡಿಸಿದ್ದಾರೆ. ಹಳೆಯ ದತ್ತಾಂಶವನ್ನು ಆಧರಿಸಿ ಪರಿಹಾರ ಲೆಕ್ಕಹಾಕುವುದರಿಂದ ರಾಜ್ಯಕ್ಕೆ ಸುಮಾರು 1,669.50 ಕೋಟಿ ರೂ. ನೆರವಿನ ಕೊರತೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ.

ಆದ್ದರಿಂದ, ಫಲಾನುಭವಿ ರೈತರನ್ನು ನಿಖರವಾಗಿ ಗುರುತಿಸಲು ಹಾಗೂ ಪರಿಹಾರದ ಅಗತ್ಯವನ್ನು ಸಮರ್ಪಕವಾಗಿ ಅಂದಾಜಿಸಲು ಕರ್ನಾಟಕ ಸರ್ಕಾರದ ನವೀಕೃತ ‘ಫ್ರೂಟ್ಸ್’ (FRUITS) ದತ್ತಾಂಶವನ್ನು ಪರಿಗಣಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಬರಪೀಡಿತ ತಾಲೂಕುಗಳ ಶಾಲಾ ಮಕ್ಕಳಿಗೆ ಬೇಸಿಗೆ ರಜೆಯ ಅವಧಿಯಲ್ಲಿಯೂ ಪೌಷ್ಟಿಕ ಆಹಾರ ಒದಗಿಸುವ ಉದ್ದೇಶದಿಂದ ಪಿಎಂ ಪೋಷಣ್ (PM POSHAN) ಯೋಜನೆಯಡಿ ಹೆಚ್ಚುವರಿಯಾಗಿ 427.20 ಕೋಟಿ ರೂ. ನೆರವು ಕೋರಿದ್ದಾರೆ. ಅದೇ ರೀತಿ, ದುರ್ಬಲ ವರ್ಗದ ಫಲಾನುಭವಿಗಳ ಪೌಷ್ಟಿಕಾಂಶದ ಅಗತ್ಯಗಳನ್ನು ಪೂರೈಸಲು ಪೂರಕ ಪೌಷ್ಟಿಕಾಂಶ ಕಾರ್ಯಕ್ರಮದಡಿ 70.96 ಕೋಟಿ ರೂ. ನೆರವು ಒದಗಿಸುವಂತೆ ಮನವಿ ಮಾಡಿದ್ದಾರೆ.

ಕೃಷಿ ಉತ್ಪಾದನಾ ವೆಚ್ಚ ನಿರಂತರವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹಾಗೂ 16ನೇ ಹಣಕಾಸು ಆಯೋಗದ ಅವಧಿಯನ್ನು ಪರಿಗಣಿಸಿ, ಪ್ರಸ್ತುತ ಜಾರಿಯಲ್ಲಿರುವ ಬೆಳೆ ಹಾನಿಯ ಪರಿಹಾರ ಸಹಾಯಧನದ ಮಾನದಂಡಗಳನ್ನು ಪರಿಷ್ಕರಿಸುವ ಅಗತ್ಯವನ್ನೂ ಅವರು ಪ್ರತಿಪಾದಿಸಿದ್ದಾರೆ.

ಕೇಂದ್ರದ ನೆರವು ಶೀಘ್ರ ಬಿಡುಗಡೆಗೆ ಒತ್ತಾಯ

ಕೇಂದ್ರ ಅಂತರ ಸಚಿವಾಲಯಗಳ ಅಧ್ಯಯನ ತಂಡವು (IMCT) ಅಕ್ಟೋಬರ್ 3ರಿಂದ 6ರವರೆಗೆ ಕರ್ನಾಟಕಕ್ಕೆ ಭೇಟಿ ನೀಡಿ ಬರ ಪರಿಸ್ಥಿತಿಯನ್ನು ಪರಿಶೀಲಿಸಿರುವುದನ್ನು ಪತ್ರದಲ್ಲಿ ಉಲ್ಲೇಖಿಸಿರುವ ಡಾ. ಪರಮೇಶ್ವರ ಅವರು, ರಾಜ್ಯ ಸರ್ಕಾರ ಸಲ್ಲಿಸಿರುವ ಸಮಗ್ರ ಬರ ಪರಿಹಾರ ಮನವಿ ಪತ್ರದ ಪರಿಶೀಲನೆಯನ್ನು ತ್ವರಿತಗೊಳಿಸುವಂತೆ ಕೋರಿದ್ದಾರೆ.

ಕೇಂದ್ರ ಅಧ್ಯಯನ ತಂಡದ ಶಿಫಾರಸುಗಳನ್ನು ಉನ್ನತ ಮಟ್ಟದ ಸಮಿತಿಗೆ ಶೀಘ್ರ ಸಲ್ಲಿಸಲು ಕ್ರಮ ಕೈಗೊಳ್ಳಬೇಕು. ಆ ಮೂಲಕ ಅಗತ್ಯ ಆರ್ಥಿಕ ನೆರವನ್ನು ವಿಳಂಬವಿಲ್ಲದೆ ಮಂಜೂರು ಮಾಡಿ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ರೈತರ ಕಲ್ಯಾಣದ ವಿಚಾರವು ರಾಜಕೀಯ ಮತ್ತು ಆಡಳಿತಾತ್ಮಕ ಗಡಿಗಳನ್ನು ಮೀರಿದ ಮಹತ್ವವನ್ನು ಹೊಂದಿದೆ. ಸಹಕಾರಿ ಒಕ್ಕೂಟ ವ್ಯವಸ್ಥೆಯ ಆಶಯದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕಾದ ಅಗತ್ಯವಿದೆ ಎಂದು ಅವರು ಒತ್ತಿಹೇಳಿದ್ದಾರೆ.

ನಮ್ಮ ದೇಶ ಸದೃಢವಾಗಿರಬೇಕಾದರೆ ಈ ನಾಡಿನ ಅನ್ನದಾತರಾದ ರೈತರ ಶಕ್ತಿಯೇ ಬಹುಮುಖ್ಯ ಆಧಾರವಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿರುವ ಡಾ. ಪರಮೇಶ್ವರ ಅವರು, ಕೃಷಿ ಆಧಾರಿತ ಜೀವನೋಪಾಯವನ್ನು ರಕ್ಷಿಸಲು ಹಾಗೂ ಬರ ಸಂಕಷ್ಟದಿಂದ ರೈತರನ್ನು ಕಾಪಾಡಲು ಸಕಾಲದಲ್ಲಿ ಆರ್ಥಿಕ ನೆರವು ಒದಗಿಸುವುದು ಅತ್ಯಂತ ಅಗತ್ಯವಾಗಿದೆ ಎಂದು ಪ್ರತಿಪಾದಿಸಿದ್ದಾರೆ.

Tags

Dr. G. ParameshwaraPrime Minister Modidrought relief
share
ವಾರ್ತಾಭಾರತಿ
ವಾರ್ತಾಭಾರತಿ
Next Story
X