Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ‘ಒಳ ಮೀಸಲಾತಿ’ ನಮ್ಮ ಸರಕಾರವು ನುಡಿದಂತೆ...

‘ಒಳ ಮೀಸಲಾತಿ’ ನಮ್ಮ ಸರಕಾರವು ನುಡಿದಂತೆ ನಡೆಯಲಿದೆ : ಸಚಿವ ಎಚ್.ಸಿ.ಮಹದೇವಪ್ಪ ಭರವಸೆ

ವಾರ್ತಾಭಾರತಿವಾರ್ತಾಭಾರತಿ16 Dec 2024 7:24 PM IST
share
‘ಒಳ ಮೀಸಲಾತಿ’ ನಮ್ಮ ಸರಕಾರವು ನುಡಿದಂತೆ ನಡೆಯಲಿದೆ : ಸಚಿವ ಎಚ್.ಸಿ.ಮಹದೇವಪ್ಪ ಭರವಸೆ

ಬೆಳಗಾವಿ : ‘ಪರಿಶಿಷ್ಟ ಜಾತಿ ಒಳ ಮೀಸಲಾತಿ ಕಲ್ಪಿಸುವ ಸಂಬಂಧ ಆಡಳಿತಾರೂಢ ಕಾಂಗ್ರೆಸ್ ಸರಕಾರ ಜಾರಿ ಮಾಡಲಿದ್ದು, ವಿಧಾನಸಭೆ ಚುನಾವಣಾ ಸಂದರ್ಭದಲ್ಲಿ ನೀಡಿದ್ದ ವಾಗ್ದಾನದಂತೆ ನುಡಿದಂತೆ ನಡೆಯಲಿದೆ’ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಭರವಸೆ ನೀಡಿದ್ದಾರೆ.

ಸೋಮವಾರ ಇಲ್ಲಿನ ಸುವರ್ಣ ವಿಧಾನಸೌಧದ ಬಳಿಯ ಸುವರ್ಣ ಗಾರ್ಡನ್‍ನಲ್ಲಿ ‘ಮಾದಿಗ ದಂಡೋರ ಸಮಿತಿ’ ಸೇರಿದಂತೆ ವಿವಿಧ ಸಂಘಟನೆಗಳಿಂದ ನಡೆದ ಒಳ ಮೀಸಲಾತಿ ಜಾರಿ ಹೋರಾಟದ ಸಮಾವೇಶದಲ್ಲಿ ಸ್ಥಳಕ್ಕೆ ಭೇಟಿ ನೀಡಿ ಮನವಿ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ಪರಿಶಿಷ್ಟ ಸಮುದಾಯಗಳು ತಮ್ಮನ್ನು ‘ಮಾದಿಗ ಮತ್ತು ಹೊಲೆಯ’ ಎಂದು ಕರೆದುಕೊಳ್ಳುವುದನ್ನು ನಿಲ್ಲಿಸಬೇಕು. ಪರಿಶಿಷ್ಟರ ಒಳ ಮೀಸಲಾತಿ ಜಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರವು ಬದ್ಧವಾಗಿದ್ದು, ಈಗಾಗಲೇ ಅದನ್ನು ಸ್ಪಷ್ಟವಾಗಿ ಘೋಷಿಸಿದೆ.

ಆದರೆ, ಬಿಜೆಪಿ ಪಕ್ಷದ ನಾಯಕರು ಇದನ್ನು ರಾಜಕೀಯಗೊಳಿಸುವ ಪ್ರಯತ್ನವನ್ನು ಮಾಡುತ್ತಿದ್ದು, ಇದರಿಂದ ಪರಿಶಿಷ್ಟ ಸಮುದಾಯಗಳಿಗೆ ಯಾವುದೇ ಪ್ರಯೋಜನ ಇಲ್ಲ. ಜನರನ್ನು ಮೆಚ್ಚಿಸಲು ಹಳೆಯ ವರದಿ ಮತ್ತು 2011ರ ಜನಗಣತಿಯ ದತ್ತಾಂಶ ತೆಗೆದುಕೊಂಡು ಮೀಸಲಾತಿ ಕೊಡಿ ಎಂದು ಸಲಹೆ ಕೊಡುತ್ತಿರುವ ಬಿಜೆಪಿಗರಿಗೆ 2011ರಿಂದ 2024ರ ಅವಧಿಯೊಳಗೆ ಪರಿಶಿಷ್ಟ ಸಮುದಾಯಗಳ ಜನಸಂಖ್ಯೆಯಲ್ಲಿ ಏರಿಕೆಯಾಗಿದ್ದರ ಕುರಿತು ಅರಿವಿಲ್ಲ ಎಂದು ತಿರುಗೇಟು ನೀಡಿದರು.

ಸುಮಾರು ಒಂದೂವರೆ ದಶಕದ ಅವಧಿಯಲ್ಲಿ ಆಗಿರುವ ಮಾರ್ಪಾಡುಗಳನ್ನು ಸೇರಿಸಿಕೊಳ್ಳದೇ ಪರಿಶಿಷ್ಟರ ಒಳ ಮೀಸಲಾತಿಯನ್ನು ಜಾರಿ ಮಾಡಿದರೆ ಮುಂದೊಮ್ಮೆ ಯಾರಾದರೂ ಪ್ರಶ್ನೆ ಮಾಡಿದರೆ ಆಗ ತೊಂದರೆ ಅನುಭವಿಸಬಾರದೆಂಬ ಉದ್ದೇಶದಿಂದಲೇ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ ಸಮಿತಿಯನ್ನು ರಚಿಸಲಾಗಿದೆ. ಅಂಬೇಡ್ಕರ್ ಹೇಳಿದಂತೆ ‘ರಾಜಕೀಯ ಅಧಿಕಾರವೇ ಶೋಷಿತರ ಅಭಿವೃದ್ಧಿಯ ಕೀಲಿ ಕೈ’. ಹೀಗಾಗಿ ಶೋಷಿತ ಸಮುದಾಯಗಳು ಇದನ್ನು ಗಮನದಲ್ಲಿಟ್ಟುಕೊಳ್ಳಬೇಕು ಎಂದು ಅವರು ನುಡಿದರು.

ಈ ಹೋರಾಟದಲ್ಲಿ ಚಿತ್ರದುರ್ಗದ ಮಾದರ ಚೆನ್ನಯ್ಯ ಗುರು ಪೀಠದ ಶ್ರೀ ಮಾದರ ಚೆನ್ನಯ್ಯ ಸ್ವಾಮೀಜಿ, ಷಡಕ್ಷರಿ ಮುನಿ ಸ್ವಾಮೀಜಿ, ವಿಪಕ್ಷ ನಾಯಕ ಆರ್.ಅಶೋಕ್, ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಸಂಸದ ಗೋವಿಂದ ಕಾರಜೋಳ, ಮಾಜಿ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಪಾಲ್ಗೊಂಡಿದ್ದರು.

‘ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ ಸಮಿತಿ ರಚಿಸಿ 50 ದಿನಗಳಾದರೂ ಸರಕಾರವು ಅವರಿಗೆ ಒಂದು ಕಚೇರಿ ನೀಡಿಲ್ಲ, ಅವರಿಗೆ ಸೂಕ್ತ ವ್ಯವಸ್ಥೆಗಳನ್ನೂ ಮಾಡಿಕೊಟ್ಟಿಲ್ಲ. ಇಂತಹ ರಾಜ್ಯ ಸರಕಾರಕ್ಕೆ ತಮ್ಮ ಬೇಡಿಕೆಗಳಿಗೆ ನ್ಯಾಯ ಒದಗಿಸಿಕೊಡುವ ಮನಸ್ಥಿತಿ ಇದೆಯೇ? ಇಲ್ಲವೇ ಎಂಬ ಪ್ರಶ್ನೆಯನ್ನು ರಾಜ್ಯದ ಪ್ರತಿಯೊಬ್ಬರೂ ಕೇಳುತ್ತಿದ್ದಾರೆ’

-ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X