Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ದೇಶದಲ್ಲಿ ಆಘೋಷಿತ ತುರ್ತು ಪರಿಸ್ಥಿತಿಯ...

ದೇಶದಲ್ಲಿ ಆಘೋಷಿತ ತುರ್ತು ಪರಿಸ್ಥಿತಿಯ ವಾತಾವರಣ : ಡಾ.ಮಹದೇವಪ್ಪ

ವಾರ್ತಾಭಾರತಿವಾರ್ತಾಭಾರತಿ28 Jun 2025 8:35 PM IST
share
ದೇಶದಲ್ಲಿ ಆಘೋಷಿತ ತುರ್ತು ಪರಿಸ್ಥಿತಿಯ ವಾತಾವರಣ : ಡಾ.ಮಹದೇವಪ್ಪ

ಬೆಂಗಳೂರು : ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರಕಾರವು ಅಧಿಕಾರಕ್ಕೆ ಬಂದ ದಿನದಿಂದಲೂ ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿಯ ವಾತಾವರಣ ಇದ್ದು, ಇದು ದೇಶದ ಅಂತರ್ ಶಕ್ತಿಯನ್ನು ಕುಂದಿಸುವಂತಹ ಕೆಲಸ ಮಾಡುತ್ತಿದೆ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಆರೋಪಿಸಿದ್ದಾರೆ.

ಶನಿವಾರ ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಸಂವಿಧಾನಾತ್ಮಕವಾದ ಸ್ವತಂತ್ರ ಸಂಸ್ಥೆಗಳನ್ನು ನಿಯಂತ್ರಣಕ್ಕೆ ಪಡೆದು, ವಿರೋಧ ಪಕ್ಷಗಳ ಮೇಲೆ ರಾಜಕೀಯ ಪ್ರೇರಿತ ದಾಳಿ ಮಾಡಲು ಬಳಸಿಕೊಳ್ಳುತ್ತಿರುವ ಕೇಂದ್ರ ಸರಕಾರವು, ದೇಶದ ಪ್ರಜಾಪ್ರಭುತ್ವದ ಆಶಯಗಳಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ ಎಂದು ಟೀಕಿಸಿದ್ದಾರೆ.

ಉತ್ತಮ ಆಡಳಿತಕ್ಕಾಗಿ ಯಾರಾದರೂ ಸಲಹೆ ನೀಡಿದರೆ ಅಥವಾ ವಿಮರ್ಶೆ ಮಾಡಿದರೆ ಅವರನ್ನು ವ್ಯವಸ್ಥಿತವಾಗಿ ಹಣಿಯುವಂತಹ ಹುನ್ನಾರವನ್ನು ಕೇಂದ್ರ ಸರಕಾರ ನಡೆಸುತ್ತಾ ಬಂದಿದೆ. ರಾಜಕೀಯ ಎದುರಾಳಿಗಳನ್ನು ಐಟಿ, ಈ.ಡಿ, ಸಿಬಿಐ ನಂತಹ ತನಿಖಾ ಸಂಸ್ಥೆಗಳ ಮೂಲಕ ನಿರಂತರವಾಗಿ ನಿಯಂತ್ರಿಸುತ್ತಿರುವ ಕೇಂದ್ರ ಸರಕಾರವು ದೇಶದಲ್ಲಿ ಅಘೋಷಿತ ರಾಜಕೀಯ ತುರ್ತು ಪರಿಸ್ಥಿತಿಯನ್ನು ಜಾರಿಗೊಳಿಸಿದೆ ಎಂದು ಅವರು ದೂರಿದ್ದಾರೆ.

ಇನ್ನೊಂದೆಡೆ ಸಾಮಾಜಿಕ ಅಸಮಾನತೆಯನ್ನು ಉತ್ತೇಜಿಸುವಂತಹ ಆರೆಸ್ಸೆಸ್‍ನ ನಡವಳಿಕೆಗಳನ್ನು ನಿಯಂತ್ರಿಸದೇ ಸಾಮಾಜಿಕ ತುರ್ತು ಪರಿಸ್ಥಿತಿಯನ್ನು ಜಾರಿ ಮಾಡಿದೆ. ಇನ್ನು ರಾಜ್ಯ ಸರಕಾರಕ್ಕೆ ಬರಬೇಕಾದ ನ್ಯಾಯಬದ್ಧವಾದ ತೆರಿಗೆ ಪಾಲನ್ನು ನೀಡದೇ ಸತಾಯಿಸುತ್ತಿರುವ ಕೇಂದ್ರ ಸರಕಾರವು ನಾಡಿನ ಜನ ಮತ್ತು ಅವರ ಅಭಿವೃದ್ಧಿಯನ್ನು ಸಂಪೂರ್ಣವಾಗಿ ಕಡೆಗಾಣಿಸಿದೆ. ದೇಶದ ಸಂಪತ್ತನ್ನು ತಮ್ಮ ಕಾರ್ಪೊ ರೇಟ್ ಸ್ನೇಹಿತರ ನಿಯಂತ್ರಣಕ್ಕೆ ಒಪ್ಪಿಸಿ ಆರ್ಥಿಕ ತುರ್ತು ಪರಿಸ್ಥಿತಿಯನ್ನು ಜನರ ಮೇಲೆ ಹೇರಿದೆ ಎಂದು ಮಹದೇವಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೇಶದಲ್ಲಿ ಸಂವಿಧಾನಾತ್ಮಕವಾಗಿ ಇರುವಂತಹ ಭಾವೈಕ್ಯತೆ, ಜಾತ್ಯತೀತತೆ ಮತ್ತು ಸಮಾನತೆಯ ತತ್ವಗಳನ್ನು ಗಾಳಿಗೆ ತೂರಿ, ಸ್ವಾತಂತ್ರ್ಯದ ಮಹಾನ್ ಉದ್ದೇಶಗಳನ್ನು ಗಣನೆಗೇ ತೆಗೆದುಕೊಳ್ಳದೇ ಏಕ ಮುಖವಾಗಿ ವರ್ತಿಸುತ್ತಿರುವ ಕೇಂದ್ರ ಸರಕಾರವು, ತನ್ನ ಅರಾಜಕ ಪ್ರವೃತ್ತಿಯ ಮೂಲಕ ದೇಶದಲ್ಲಿ ಸಾಮಾಜಿಕ, ರಾಜಕೀಯ ಮತ್ತು ಆರ್ಥಿಕ ತುರ್ತು ಪರಿಸ್ಥಿತಿಯನ್ನು ಹೇರಿದ್ದು ಇದು ದೇಶದ ಆತ್ಮವಾದ ಸಂವಿಧಾನದ ಆಶಯಗಳಿಗೆ ಸಂಪೂರ್ಣವಾಗಿ ವಿರುದ್ಧವಾಗಿದೆ ಎಂದು ಅವರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X