Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ವಿಧಾನಸೌಧ, ವಿಕಾಸಸೌಧಗಳಲ್ಲಿ ಕನ್ನಡಪರ...

ವಿಧಾನಸೌಧ, ವಿಕಾಸಸೌಧಗಳಲ್ಲಿ ಕನ್ನಡಪರ ಘೋಷಣೆಗಳನ್ನು ಅಳವಡಿಸಿ : ಡಾ.ಪುರುಷೋತ್ತಮ ಬಿಳಿಮಲೆ

ವಾರ್ತಾಭಾರತಿವಾರ್ತಾಭಾರತಿ16 Oct 2024 5:43 PM IST
share
ವಿಧಾನಸೌಧ, ವಿಕಾಸಸೌಧಗಳಲ್ಲಿ ಕನ್ನಡಪರ ಘೋಷಣೆಗಳನ್ನು ಅಳವಡಿಸಿ : ಡಾ.ಪುರುಷೋತ್ತಮ ಬಿಳಿಮಲೆ

ಬೆಂಗಳೂರು : ವಿಧಾನಸೌಧ, ವಿಕಾಸಸೌಧಗಳ ಪಡಸಾಲೆಗಳು, ವಿಧಾನ ಮಂಡಲದ ಸಭಾಂಗಣಗಳು, ಸಚಿವರು ಮತ್ತು ಅಧಿಕಾರಿಗಳ ಕಚೇರಿಗಳಲ್ಲಿ ಕನ್ನಡ ಭಾಷೆ, ಸಂಸ್ಕೃ ಗಳ ಪರವಾದ ಘೋಷಣೆಗಳ ಫಲಕಗಳನ್ನು ಅಳವಡಿಸುವ ಮೂಲಕ ಸರಕಾರದ ಕನ್ನಡ ಬದ್ಧತೆಯನ್ನು ತೋರಿಸಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಮನವಿ ಮಾಡಿದ್ದಾರೆ.

ಬುಧವಾರ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ರಾಜ್ಯದ ಆಡಳಿತದ ಶಕ್ತಿಕೇಂದ್ರ ವಿಧಾನಸೌಧ, ವಿಕಾಸಸೌಧ ಕರ್ನಾಟಕದ ಹೆಮ್ಮೆಯ ಪ್ರತೀಕ. ಸಾರ್ವಜನಿಕರು, ಗಣ್ಯರು, ದೇಶ-ವಿದೇಶಗಳ ಪ್ರತಿನಿಧಿಗಳು ವಿವಿಧ ಕೆಲಸ ಕಾರ್ಯಗಳಿಗೆ ಇಲ್ಲಿಗೆ ಭೇಟಿ ನೀಡುತ್ತಿದ್ದು, ಈ ಕಟ್ಟಡಗಳ ವಾಸ್ತುಶಿಲ್ಪಕ್ಕೆ ವಿಶ್ವದಲ್ಲಿನ ಜನರು ಮನಸೋತಿದ್ದಾರೆ ಎಂದು ತಿಳಿಸಿದರು.

ಕನ್ನಡ ಭಾಷೆ, ಸಂಸ್ಕೃತಿಗಳ ಪರವಾದ ಘೋಷಣೆಗಳು, ಉದ್ಧರಣಗಳನ್ನು ಫಲಕಗಳ ಮೂಲಕ ಈ ಎರಡೂ ಕಟ್ಟಡಗಳ ಪಡಸಾಲೆಗಳು, ವಿಧಾನಸಭೆ, ವಿಧಾನ ಪರಿಷತ್ ಸಭಾಂಗಣಗಳು, ಸಚಿವರು, ಅಧಿಕಾರಿಗಳ ಕಚೇರಿಗಳಲ್ಲಿ ಅಳವಡಿಸಲು ರಾಜ್ಯ ಸರಕಾರವು ಕ್ರಮ ವಹಿಸಿದ್ದಲ್ಲಿ ಈ ಕಟ್ಟಡಗಳ ವೈಭವದ ಮೂಲಕ ಕನ್ನಡದ ಅಸ್ಮಿತೆ ಇನ್ನಷ್ಟು ವಿಶ್ವಾಸಾತ್ಮಕವಾಗಲಿದೆ ಎಂದು ಅವರು ಹೇಳಿದರು.

‘ರಾಜ್ಯ ಸರಕಾರವು ಸುವರ್ಣ ಕರ್ನಾಟಕ ಸಂಭ್ರಮ-50ರನ್ನು ವಿಜೃಂಭಣೆಯಿಂದ ಆಚರಿಸುತ್ತಿರುವ ಈ ಸಂದರ್ಭದಲ್ಲಿ ಸರಕಾರದ ಈ ಕುರಿತಾದ ನಿರ್ಧಾರವು ಅರ್ಥಪೂರ್ಣ ಆಚರಣೆಗೆ ಪೂರಕವಾಗುತ್ತದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಈ ಕುರಿತಂತೆ ನಿರ್ದಿಷ್ಟ ರೂಪುರೇಷೆಗಳನ್ನು ಅವಶ್ಯಕತೆಗೆ ಅನುಗುಣವಾಗಿ ಒದಗಿಸಲಿದೆ’ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X