Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ನರ್ಸಿಂಗ್‌ ಕಾಲೇಜುಗಳಲ್ಲಿ ವಿದೇಶಿ ಭಾಷಾ...

ನರ್ಸಿಂಗ್‌ ಕಾಲೇಜುಗಳಲ್ಲಿ ವಿದೇಶಿ ಭಾಷಾ ತರಬೇತಿ: ಡಾ.ಶರಣ ಪ್ರಕಾಶ್ ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ28 March 2025 5:42 PM IST
share
ನರ್ಸಿಂಗ್‌ ಕಾಲೇಜುಗಳಲ್ಲಿ ವಿದೇಶಿ ಭಾಷಾ ತರಬೇತಿ: ಡಾ.ಶರಣ ಪ್ರಕಾಶ್ ಪಾಟೀಲ್

ಬೆಂಗಳೂರು: ಕರ್ನಾಟಕದ ನರ್ಸಿಂಗ್‌ ವಿದ್ಯಾರ್ಥಿಗಳಿಗೆ ಜಾಗತಿಕ ಉದ್ಯೋಗಾವಕಾಶವನ್ನು ಹೆಚ್ಚಿಸಲು, ಎಲ್ಲಾ ನರ್ಸಿಂಗ್‌ ಕಾಲೇಜುಗಳಲ್ಲಿ ವಿದೇಶಿ ಭಾಷಾ ಪ್ರಯೋಗಾಲಯಗಳ ಮೂಲಕ ವಿದೇಶಿ ಭಾಷಾ ತರಬೇತಿಯನ್ನು ನೀಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಘೋಷಿಸಿದರು.

ಶುಕ್ರವಾರ ನಗರದ ಡಾ.ಬಿ.ಆರ್.ಅಂಬೇಡ್ಕರ್ ಫಿಸಿಯೋಥೆರಪಿ ಕಾಲೇಜಿನಲ್ಲಿ ಹೊಸ ಫಿಸಿಯೋಥೆರಪಿ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಕೌಶಲ್ಯಪೂರ್ಣ ದಾದಿಯರು ಮತ್ತು ಸಂಬಂಧಿತ ಆರೋಗ್ಯ ವೃತ್ತಿಪರರಿಗೆ ಅಂತರ್‌ ರಾಷ್ಟ್ರೀಯ ಬೇಡಿಕೆ ಹೆಚ್ಚಾಗಿದೆ. ಹೀಗಾಗಿ ವಿದೇಶಿ ಭಾಷಾ ತರಬೇತಿ ಅಗತ್ಯವಿದೆ ಎಂದು ಹೇಳಿದರು.

ತರಬೇತಿ ಪಡೆದ ದಾದಿಯರು ಮತ್ತು ಸಂಬಂಧಿತ ಆರೋಗ್ಯ ವಿಜ್ಞಾನ ವಿದ್ಯಾರ್ಥಿಗಳಿಗೆ ಜರ್ಮನಿ, ಇಟಲಿ, ಜಪಾನ್ ಮತ್ತು ಯುಎಇ ಆಸ್ಪತ್ರೆಗಳಲ್ಲಿ ಅವಕಾಶ ಸಿಗುವ ಸಾಧ್ಯತೆಗಳಿವೆ. ಈಗಾಗಲೇ ಈ ದೇಶದವರು ನಮ್ಮನ್ನು ಸಂಪರ್ಕಿಸಿದ್ದಾರೆ. ಈ ಆಸ್ಪತ್ರೆಗಳಿಗೆ ಅವರ ಸ್ಥಳೀಯ ಭಾಷೆ ತಿಳಿದಿರುವ ಅಭ್ಯರ್ಥಿಗಳು ಬೇಕಾಗಿದ್ದಾರೆ ಮತ್ತು ಅದಕ್ಕೆ ಅನುಗುಣವಾಗಿ ನಮ್ಮ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಲು ನಾವು ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ ಎಂದು ಅವರು ತಿಳಿಸಿದರು.

ನರ್ಸಿಂಗ್‌ ವಿದ್ಯಾರ್ಥಿಗಳು ತಮ್ಮ ಕೋರ್ಸ್ ಅವಧಿಯಲ್ಲಿ ಜರ್ಮನ್, ಜಪಾನೀಸ್, ಇಟಾಲಿಯನ್ ಮತ್ತು ಇಂಗ್ಲಿಷ್‌ ಕಲಿಯುವ ಆಯ್ಕೆಯನ್ನು ಹೊಂದಿರುತ್ತಾರೆ. ಅವರು ವಿದೇಶಿ ಉದ್ಯೋಗಾವಕಾಶಗಳಿಗೆ ತಮ್ಮನ್ನು ತಾವು ಸಿದ್ಧಗೊಳಿಸಿಗೊಳ್ಳುತ್ತಾರೆ ಎಂದು ಶರಣ ಪ್ರಕಾಶ್ ಪಾಟೀಲ್ ವಿವರಿಸಿದರು.

ಕಳಪೆ ಗುಣಮಟ್ಟದ ಪ್ಯಾರಾ ಮೆಡಿಕಲ್ ಕಾಲೇಜು ಮುಚ್ಚಲು ಕ್ರಮ: ಕಳಪೆ ಗುಣಮಟ್ಟದ ಪ್ಯಾರಾಮೆಡಿಕಲ್, ಜಿಎನ್‍ಎಂ ಮತ್ತು ನರ್ಸಿಂಗ್‌ ಕಾಲೇಜುಗಳನ್ನು ಮುಚ್ಚುವ ಅಗತ್ಯವಿದೆ. ಉತ್ತಮ ಗುಣಮಟ್ಟದ ಶಿಕ್ಷಣ, ಉತ್ತಮ ಬೋಧನೆ ಮತ್ತು ಅತ್ಯಾಧುನಿಕ ಮೂಲಸೌಕರ್ಯ ಒದಗಿಸಲು ನಮ್ಮ ಸರಕಾರ ಬದ್ಧವಾಗಿದೆ. ವೃತ್ತಿಪರ ವೈದ್ಯಕೀಯ ಕಾಲೇಜುಗಳು ತಮ್ಮ ಕ್ಯಾಂಪಸ್‍ಗಳಲ್ಲಿ ಸಂಬಂಧಿತ ಆರೋಗ್ಯ ವಿಜ್ಞಾನ ಕೋರ್ಸ್‍ಗಳನ್ನು ಪರಿಚಯಿಸಬೇಕು ಎಂದು ಅವರು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷ ವಿ.ಎಸ್.ಕುಬೇರ್ ಮತ್ತು ಕಲಬುರಗಿ ಸಂಸದ ಮತ್ತು ಸಂಸ್ಥೆಯ ಖಜಾಂಚಿ ರಾಧಾಕೃಷ್ಣ ದೊಡ್ಡಮನಿ ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X