Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಅವ್ಯವಹಾರ ಎಸಗಿ ಕಿಮ್ಸ್ ಹೆಸರಿಗೆ ಮಸಿ...

ಅವ್ಯವಹಾರ ಎಸಗಿ ಕಿಮ್ಸ್ ಹೆಸರಿಗೆ ಮಸಿ ಬಳಿದರೆ ಮುಲಾಜಿಲ್ಲದೇ ಕ್ರಮ: ಡಾ.ಶರಣಪ್ರಕಾಶ ಪಾಟೀಲ ಎಚ್ಚರಿಕೆ

ಕೊಪ್ಪಳ ವೈದ್ಯಕೀಯ ಶಿಕ್ಷಣ ಸಂಸ್ಥೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ವೈದ್ಯಕೀಯ ಶಿಕ್ಷಣ ಸಚಿವ

ವಾರ್ತಾಭಾರತಿವಾರ್ತಾಭಾರತಿ16 Aug 2024 3:19 PM IST
share
ಅವ್ಯವಹಾರ ಎಸಗಿ ಕಿಮ್ಸ್ ಹೆಸರಿಗೆ ಮಸಿ ಬಳಿದರೆ ಮುಲಾಜಿಲ್ಲದೇ ಕ್ರಮ: ಡಾ.ಶರಣಪ್ರಕಾಶ ಪಾಟೀಲ ಎಚ್ಚರಿಕೆ

ಕೊಪ್ಪಳ, ಆ.16: ಕೊಪ್ಪಳ ವೈದ್ಯಕೀಯ ಶಿಕ್ಷಣ ಸಂಸ್ಥೆಯ ಬಗ್ಗೆ ಸಾಕಷ್ಟು ಭರವಸೆ ಇದೆ. ಇದನ್ನು ಅರ್ಥೈಸಿಕೊಳ್ಳಬೇಕು. ಅವ್ಯವಹಾರ ನಡೆಸಿ ಯಾರಾದರು ಸಂಸ್ಥೆಯ ಹೆಸರಿಗೆ ಮಸಿ ಬಳಿದರೆ ಯಾರೇ ಇರಲಿ ಅಂತವರ ವಿರುದ್ಧ ಮುಲಾಜಿಲ್ಲದೇ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಎಚ್ಚರಿಸಿದ್ದಾರೆ.

ಕೊಪ್ಪಳ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸಭಾಂಗಣದಲ್ಲಿ ಇಂದು ಸಂಸ್ಥೆಯ ನಿರ್ದೇಶಕರು, ವಿವಿಧ ವಿಭಾಗಗಳ ಮುಖ್ಯಸ್ಥರು, ವಿವಿಧ ಪ್ರಾಧ್ಯಾಪಕರೊಂದಿಗೆ ಸಭೆ ನಡೆಸಿ ಅವರು ಮಾತನಾಡುತ್ತಿದ್ದರು.

ವೈದ್ಯಾಧಿಕಾರಿಗಳ ಮತ್ತು ಸಿಬ್ಬಂದಿ ನೇಮಕಾತಿ ಹಾಗೂ ಸಾಮಗ್ರಿ ಖರೀದಿ ಸೇರಿದಂತೆ ಯಾವುದೇ ವಿಷಯದಲ್ಲಿ ಅವ್ಯವಹಾರಕ್ಕೆ ಅವಕಾಶವಿಲ್ಲದ ಹಾಗೆ ಆಡಳಿತ ನಡೆಸುವ ಮೂಲಕ ಕೊಪ್ಪಳ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯು ಮಾದರಿಯಾಗಬೇಕು ಎಂದು ಅವರು ಹೇಳಿದರು.

ಈಗಾಗಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡು ಚಾಲ್ತಿಯಲ್ಲಿರುವ ಕಾಮಗಾರಿಗಳು ಗುಣಮಟ್ಟದ ರೀತಿಯಲ್ಲಿ ನಡೆಯಬೇಕು. ಗುಣಮಟ್ಟದ ವಿಷಯದಲ್ಲಿ ಯಾವುದೇ ರಾಜಿ ಇಲ್ಲ. ಕಳಪೆ ಕಾಮಗಾರಿಯಾಗಿದ್ದರೆ ಗುತ್ತಿಗೆದಾರರಿಗೆ ನೊಟೀಸ್ ಜಾರಿ ಮಾಡಿ. ಸಂಸ್ಥೆಯ ಸುಪರ್ದಿಗೆ ಪಡೆಯುವ ಮೊದಲು ಕಟ್ಟಡದ ಕಾಮಗಾರಿಯ ಗುಣಮಟ್ಟದ ಬಗ್ಗೆ ಪರಿಶೀಲಿಸಿ ಎಂದು ತಿಳಿಸಿದರು.

ಕೊಪ್ಪಳ ಜಿಲ್ಲೆಯು ಬಯಲುಸೀಮೆಯ ನೆಲವಾಗಿದೆ. ಇಲ್ಲಿನ ಜನರ ಸಾಮಾಜಿಕ ಆರ್ಥಿಕ ಪರಿಸ್ಥಿತಿ ಇನ್ನು ಸುಧಾರಿಸಬೇಕಿದೆ. ಮುಖ್ಯವಾಗಿ ಇಲ್ಲಿನ ಜನತೆಗೆ ಉತ್ತಮವಾದ ಆರೋಗ್ಯ ಸೌಕರ್ಯ ದೊರೆಯಬೇಕಿದೆ ಎಂದು ಸಚಿವರು ಹೇಳಿದರು.

ಸಂಸ್ಥೆಯಲ್ಲಿ ಈಗಾಗಲೇ ರಚನೆಯಾಗಿರುವ ಎಲ್ಲ ಸಮಿತಿಗಳು ಸರಿಯಾಗಿ ಕಾರ್ಯನಿರ್ವಹಿಸಬೇಕು. ಕಾಲೇಜುಗಳಲ್ಲಿ ಪಿಡುಗಾಗಿ ಪರಿಣಮಿಸಿದ ರಾಗಿಂಗ್ ಗೆ ಅವಕಾಶ ನೀಡದೆ ವಿದ್ಯಾರ್ಥಿಗಳಿಗೆ ಕಾಲೇಜಿನಲ್ಲಿ ಒತ್ತಡ ಮುಕ್ತ ವಾತಾವರಣ ಇರುವ ಹಾಗೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.

ಕೊಪ್ಪಳ ವೈದ್ಯಕೀಯ ಶಿಕ್ಷಣ ಸಂಸ್ಥೆಗೆ ಒಟ್ಟು 81 ಹುದ್ದೆಗಳು ಮಂಜೂರಾಗಿವೆ. ಈ ಪೈಕಿ ಈಗಾಗಲೇ 49 ಹುದ್ದೆಗಳು ಭರ್ತಿಯಾಗಿವೆ. 32 ಹುದ್ದೆಗಳು ಖಾಲಿ ಇವೆ ಎಂದು ಸಂಸ್ಥೆಯ ನಿರ್ದೇಶಕರಾದ ವಿಶ್ವನಾಥ ಇಟಗಿ ಮಾಹಿತಿ ನೀಡಿದರು.

ಸಭೆಯಲ್ಲಿ ಸಂಸದರಾದ ರಾಜಶೇಖರ ಹಿಟ್ನಾಳ, ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ, ಹೇಮಲತಾ ನಾಯಕ, ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶಕಿ ಸುಜಾತಾ ರಾಠೋಡ, ಜಿಲ್ಲಾಧಿಕಾರಿ ನಳಿನ್ ಅತುಲ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X