Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ನಕ್ಸಲರು ಸಿಎಂ ಕಚೇರಿಗೆ ಬಂದು...

ನಕ್ಸಲರು ಸಿಎಂ ಕಚೇರಿಗೆ ಬಂದು ಶರಣಾಗತರಾಗಿರುವುದರಲ್ಲಿ‌ ತಪ್ಪೇನಿದೆ? : ಜಿ.ಪರಮೇಶ್ವರ್‌

"ರಾಜ್ಯದಲ್ಲಿ ನಕ್ಸಲ್ ಚಟುವಟಿಕೆ ಶೇ.99ರಷ್ಟು ಕೊನೆಯಾಗಿದೆ‌"

ವಾರ್ತಾಭಾರತಿವಾರ್ತಾಭಾರತಿ9 Jan 2025 1:52 PM IST
share
ನಕ್ಸಲರು ಸಿಎಂ ಕಚೇರಿಗೆ ಬಂದು ಶರಣಾಗತರಾಗಿರುವುದರಲ್ಲಿ‌ ತಪ್ಪೇನಿದೆ? : ಜಿ.ಪರಮೇಶ್ವರ್‌

ಬೆಂಗಳೂರು: ನಕ್ಸಲರು ಮುಖ್ಯಮಂತ್ರಿಯವರ ಕಚೇರಿಗೆ ಬಂದು ಶರಣಾಗತರಾಗಿರುವುದರಲ್ಲಿ‌ ತಪ್ಪೇನಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಪ್ರಶ್ನಿಸಿದರು.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ʼನಕ್ಸಲ್ ಚಟುವಟಿಕೆಗೆ ಬರಬಾರದು‌ ಎಂಬ ಸಂದೇಶ ಇಡೀ ಸಮಾಜಕ್ಕೆ ತಲುಪಬೇಕು. ಮುಖ್ಯಮಂತ್ರಿಯವರ ಮುಂದೆ ಶರಣಾದಾಗ ರಾಜ್ಯದಲ್ಲಿ ಎಲ್ಲರಿಗೂ ಗೊತ್ತಾಗುತ್ತದೆ. ನಕ್ಸಲರ‌ ಪರಿವರ್ತನೆಗೆ ಸರಕಾರ ಅವಕಾಶ ಕೊಟ್ಟಿದೆ. ಅದರಲ್ಲಿ ತಪ್ಪೇನಿದೆ‌. ಬಿಜೆಪಿ ಶಾಸಕ‌ ಸುನೀಲ್ ಕ್ಷೇತ್ರದಲ್ಲಿ ನಕ್ಸಲ್ ಚಟುವಟಿಕೆ ಜಾಸ್ತಿ ಇದೆ. ಎಎನ್ಎಫ್ ಕಾರ್ಕಳದಲ್ಲಿ ಇದೆಯಲ್ಲವೇ?ʼ ಎಂದು ಪ್ರಶ್ನಿಸಿದರು.

ನಕ್ಸಲರು ಶರಣಾದಾಗ ಶಸ್ತ್ರಾಸ್ತ್ರಗಳು ಇರಲಿಲ್ಲ. ಶಸ್ತ್ರಾಸ್ತ್ರಗಳನ್ನು ಬಿಟ್ಟು ಬಂದಿದ್ದಾರೆ. ಎಲ್ಲಿ ಎಸೆದು ಬಂದಿದ್ದಾರೆ ಎಂಬುದರ ಕುರಿತು ಪೊಲೀಸರು ತನಿಖೆ ನಡೆಸಲಿದ್ದಾರೆ. ರಾಜ್ಯದಲ್ಲಿ ನಕ್ಸಲ್ ಚಟುವಟಿಕೆ ಶೇ. 99ರಷ್ಟು ಕೊನೆಯಾಗಿದೆ‌. ಶರಣಾಗತರಾದ ನಕ್ಸಲರಲ್ಲಿ ತಮಿಳುನಾಡು, ಕೇರಳ ರಾಜ್ಯದವರು ಇದ್ದಾರೆ. ನಮ್ಮ‌ ಮುಖ್ಯಮಂತ್ರಿಯವರು ಸಂಬಂಧಪಟ್ಟ ರಾಜ್ಯಗಳ ಮುಖ್ಯಮಂತ್ರಿಯವರೊಂದಿಗೆ ಮಾತನಾಡುವುದಾಗಿ ತಿಳಿಸಿದ್ದಾರೆ. ಶರಣಾದ ನಕ್ಸಲರ ಮೇಲೆ ಬೇರೆ ರಾಜ್ಯಗಳಲ್ಲಿ ಪ್ರಕರಣಗಳಿವೆ. ಆ ರಾಜ್ಯದ ಸರಕಾರಗಳು ಸಹ ತೀರ್ಮಾನ ಕೈಗೊಳ್ಳಬೇಕು ಎಂದರು.

ಪಕ್ಷದಲ್ಲಿ ಯಾವ ಗೊಂದಲವೂ ಇಲ್ಲ :

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯ ಅಜೆಂಡ ಏನಿದೆ ಎಂಬುದು ಗೊತ್ತಿಲ್ಲ. ಪಕ್ಷದಲ್ಲಿ ಯಾವ ಗೊಂದಲವೂ ಇಲ್ಲ. ಎಸ್‌ಸಿ, ಎಸ್‌ಟಿ ಸಮಾವೇಶದ ಕುರಿತು‌ ಕರೆದಿದ್ದ ಸಭೆ ಮುಂದೂಡಲು ಅನೇಕ ಕಾರಣಗಳಿವೆ. ಎಐಸಿಸಿ ವರಿಷ್ಟರು ಭಾಗವಹಿಸುವುದಾಗಿ ತಿಳಿಸಿದ್ದರಿಂದ ಮುಂದೂಡಲಾಗಿದೆ. ಎಐಸಿಸಿ ನಮ್ಮ ಮೇಲೆ ನಂಬಿಕೆ ಇಟ್ಟಿಲ್ಲ ಎಂಬ ಪ್ರಶ್ನೆ ಈಗ ಬರುವುದಿಲ್ಲ. ನೀವೇ ಬೆಳಗ್ಗೆ ಒಂದು, ಸಂಜೆ ಒಂದು ನಂಬಿಕೆಯ ಪ್ರಶ್ನೆ ಹುಟ್ಟು ಹಾಕುತ್ತಿದ್ದೀರಿ ಎಂದು ಹೇಳಿದರು.

ಪ್ರಧಾನ ಕಾರ್ಯದರ್ಶಿಗಳಾದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲಾ ಅವರು ನನ್ನ ಹತ್ತಿರ ಮಾತನಾಡಿದ್ದಾರೆ. ಗೌಪ್ಯ ಸಭೆ ಏನು ಇಲ್ಲ. ನಮ್ಮ ಸಮಸ್ಯೆಗಳನ್ನು ಚರ್ಚಿಸಬೇಕು ಅಂತ ಸಭೆ ಸೇರುತ್ತಿದ್ದೇವೆ. ಅದಕ್ಕೆ ನೀವೇ ಬನ್ನಿ ಎಂದು ಕರೆದಿದ್ದೇನೆ. ಅವರು ದಿನಾಂಕ ಸೂಚಿಸುವುದಾಗಿ ತಿಳಿಸಿದ್ದಾರೆ. ನಂತರ ಸಭೆ ಮಾಡುತ್ತೇವೆ ಎಂದರು.

ಸಭೆಯ ಬಗ್ಗೆ ಕೆಲವರು ಆತಂಕಕ್ಕೆ ಒಳಗಾಗಿದ್ದಾರೆ ಎಂದು ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಯಾರು ಆತಂಕಕ್ಕೆ ಒಳಗಾಗಿದ್ದಾರೆ? ನನಗೆ ಗೊತ್ತಿರುವ ಹಾಗೇ ಯಾವ ಆತಂಕನೂ ಇಲ್ಲ. ಯಾರು ಆತಂಕ ಪಡುವ ಅಗತ್ಯತೆಯು ಇಲ್ಲ ಎಂದು ಈಗಾಗಲೇ ಸ್ಪಷ್ಟವಾಗಿ ಹೇಳಿದ್ದೇನೆ. ಪಕ್ಷದಿಂದ ಹೊರತಾಗಿ ಸಮಾವೇಶ ಮಾಡುತ್ತೇವೆ ಎಂದು ನಾನು ಎಲ್ಲೂ ಹೇಳಿಲ್ಲ. ನಾನಾ ವಿಶ್ಲೇಷಣೆಗಳಿಗೆ ಉತ್ತರಿಸಲು ಆಗುತ್ತದೆಯೇ? ಒಬ್ಬೊಬ್ಬರು ಒಂದೊಂದು ರೀತಿಯ ವಿಶ್ಲೇಷಣೆ ಮಾಡುವುದು ಸಹಜ. ಡಿ.ಕೆ.ಶಿವಕುಮಾರ್ ಅವರು ನನಗೆ ಆತಂಕವಿದೆ ಎಂದು ಎಲ್ಲಾದರು ಹೇಳಿದ್ದಾರೆಯೇ? ಸುಮ್ಮನೆ ಹೇಳುವುದು ಬೇಡ. ನಿನ್ನೆ ಇಡೀ ದಿನ ಅವರೊಂದಿಗೆ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದೇನೆ. ಪತ್ರಿಕಾಗೋಷ್ಠಿಯನ್ನು ನಡೆಸಿದ್ದೇವೆ. ನನಗೆ ನಿಮ್ಮ ಆತಂಕ ಇದೆ ಅಂತ ಅವರು ಹೇಳೇ ಇಲ್ಲ ಎಂದು ಪ್ರತಿಕ್ರಿಯಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X