Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಅಪಘಾತ ಪ್ರಕರಣಗಳಲ್ಲಿ ಸಂತ್ರಸ್ತನ ಬಳಿ...

ಅಪಘಾತ ಪ್ರಕರಣಗಳಲ್ಲಿ ಸಂತ್ರಸ್ತನ ಬಳಿ ಚಾಲನಾ ಪರವಾನಗಿ ಇಲ್ಲದಿರುವುದನ್ನೇ ನಿರ್ಲಕ್ಷ್ಯ ಎಂದು ಪರಿಗಣಿಸಲಾಗದು: ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ8 Aug 2025 11:20 PM IST
share
ಅಪಘಾತ ಪ್ರಕರಣಗಳಲ್ಲಿ ಸಂತ್ರಸ್ತನ ಬಳಿ ಚಾಲನಾ ಪರವಾನಗಿ ಇಲ್ಲದಿರುವುದನ್ನೇ ನಿರ್ಲಕ್ಷ್ಯ ಎಂದು ಪರಿಗಣಿಸಲಾಗದು: ಹೈಕೋರ್ಟ್

ಬೆಂಗಳೂರು: ರಸ್ತೆ ಅಪಘಾತಗಳಲ್ಲಿ ಚಾಲಕನ ನಿರ್ಲಕ್ಷ್ಯ ಸಾಬೀತಾಗದ ಹೊರತು ಆತನ ಬಳಿ ಚಾಲನಾ ಪರವಾನಗಿ (ಡಿಎಲ್) ಇಲ್ಲದಿರುವುದೇ ಅಪಘಾತಕ್ಕೆ ಕಾರಣವೆಂದು ತೀರ್ಮಾನಿಸಲಾಗದು ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್‌, ಅಪಘಾತದಲ್ಲಿ ಒಂದು ಕಾಲನ್ನು ಕಳೆದುಕೊಂಡಿದ್ದ ವ್ಯಕ್ತಿಯ ನೆರವಿಗೆ ಧಾವಿಸಿದೆ.

ಅಪಘಾತದಿಂದ ಒಂದು ಕಾಲನ್ನೇ ಕಳೆದುಕೊಂಡಿದ್ದರೂ ಕೇವಲ 50 ಸಾವಿರ ರೂ. ಪರಿಹಾರ ಘೋಷಿಸಿದ್ದ ಮೋಟಾರು ಅಪಘಾತ ಪರಿಹಾರ ನ್ಯಾಯಾಧಿಕರಣದ (ಎಂಎಸಿಟಿ) ಆದೇಶ ಪ್ರಶ್ನಿಸಿ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಅಣ್ಣೇನಹಳ್ಳಿ ಗ್ರಾಮದ ನಿವಾಸಿ ಶಿವೇಗೌಡ ಸಲ್ಲಿಸಿದ್ದ ಮೇಲ್ಮನವಿಯನ್ನು ಭಾಗಶಃ ಮಾನ್ಯ ಮಾಡಿರುವ ನ್ಯಾಯಮೂರ್ತಿ ಚಿಲಕೂರು ಸುಮಲತಾ ಅವರಿದ್ದ ಏಕಸದಸ್ಯ ನ್ಯಾಯಪೀಠ, ಮೇಲ್ಮನವಿದಾರರ ಪರಿಹಾರ ಮೊತ್ತವನ್ನು 5,67,000 ರೂ. ಗಳಿಗೆ ಹೆಚ್ಚಿಸಿದೆ.

ನ್ಯಾಷನಲ್‌ ಇನ್ಶೂರೆನ್ಸ್‌ ಕಂಪನಿಯಿಂದ ವಿಮೆ ಪಡೆದಿದ್ದ ಮತ್ತೊಂದು ವಾಹನ ಸವಾರನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣವಾಗಿದೆ ಎಂಬ ಅಂಶ ತನಿಖೆಯಲ್ಲಿ ಸಾಬೀತಾಗಿದೆ. ಆದ್ದರಿಂದ, ಮೇಲ್ಮನವಿದಾರನ ಬಳಿ ವಾಹನ ಚಾಲನಾ ಪರವಾನಗಿ ಇರಲಿಲ್ಲ ಎಂಬ ಕಾರಣಕ್ಕೆ ಅಪಘಾತದಲ್ಲಿ ಆತನ ನಿರ್ಲಕ್ಷ್ಯವೂ ಇದೆ ಎಂದು ಹೇಳಲಾಗುವುದಿಲ್ಲ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ಅಪಘಾತದಿಂದ ಮೇಲ್ಮನವಿದಾರರಿಗೆ ಗಂಭೀರ ಗಾಯವಾಗಿದ್ದು, ಈ ಸಂಬಂಧ ವೈದ್ಯರಲ್ಲಿ ಪರೀಕ್ಷೆಗೊಳಪಡಿಸಿದಾಗ ಎಡಗಾಲನ್ನು ತೆಗೆದುಹಾಕಬೇಕು ಎಂದು ತಿಳಿಸಿದ್ದರು. ಮೇಲ್ಮನವಿದಾರರ ಜೀವ ಉಳಿಯಬೇಕಾದರೆ ಮೊಣಕಾಲಿನ ಮೇಲ್ಭಾಗದವರೆಗೆ ತೆಗೆಯುವುದು ಅನಿವಾರ್ಯ ಎಂದು ವರದಿ ನೀಡಿದ್ದಾರೆ ಎಂದು ವಕೀಲರು ತಿಳಿಸಿದ್ದಾರೆ. ಅದಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನೂ ಸಲ್ಲಿಸಿದ್ದಾರೆ. ಆದರೆ, ವಿಮಾ ಕಂಪನಿ ಪರ ವಕೀಲರು, ಮೇಲ್ಮನವಿದಾರರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುವಲ್ಲಿ ವೈದ್ಯರ ಸಲಹೆಗಳನ್ನು ಪಾಲಿಸಿಲ್ಲ. ಮೇಲ್ಮನವಿದಾರರು ಚಿಕಿತ್ಸೆಯ ನಂತರ ಅನಿಸರಣಾ ಚಿಕತ್ಸೆ ಪಡೆಯಲು ನಿರ್ಲಕ್ಷ್ಯವಹಿಸಿದ್ದರಿಂದಲೇ ಅವರ ಕಾಲು ತೆಗೆಯುವಂತಾಗಿದೆ ಎಂದು ಆರೋಪಿಸಿದ್ದಾರೆ. ಆದರೆ, ಅದಕ್ಕೆ ಸೂಕ್ತ ಪುರಾವೆಗಳನ್ನು ಒದಗಿಸಲು ವಿಮಾ ಕಂಪನಿ ವಿಫಲವಾಗಿದೆ ಎಂದು ನ್ಯಾಯಾಲಯ ಹೇಳಿದೆ.

ಮೇಲ್ಮನವಿದಾರರು ಅನುಭವಿಸಿರುವ ನಷ್ಟಕ್ಕೆ ಪರಿಹಾರವಾಗಿ ನ್ಯಾಯಾಧಿಕರ ಕೇವಲ 50 ಸಾವಿರ ರೂ.ಗಳನ್ನು ಮಾತ್ರ ಘೋಷಣೆ ಮಾಡಿದೆ. ಆದರೆ, ಕಾಲು ಮುರಿತಕ್ಕೆ ಸೂಕ್ತ ಪರಿಹಾರ ಘೋಷಣೆ ಮಾಡುವಲ್ಲಿ ನ್ಯಾಯಾಧಿಕರಣ ವಿಫಲವಾಗಿದೆ ಎಂದಿರುವ ನ್ಯಾಯಪೀಠ, ಮೇಲ್ಮನವಿದಾರರಿಗೆ ಉಂಟಾಗಿರುವ ಅಂಗಾಂಗ ಊನಕ್ಕೆ ನ್ಯಾಯಾಧಿಕರಣ ಘೋಷಿಸಿರುವ ಪರಿಹಾರದ ಮೊತ್ತವನ್ನು 5,67,000 ರೂ.ಗಳಿಗೆ ಹೆಚ್ಚಿಸಲಾಗಿದ್ದು, ಆದೇಶ ಪ್ರತಿ ದೊರೆತ 8 ವಾರಗಳ ಒಳಗೆ ಪರಿಹಾರ ಮೊತ್ತ ಪಾವತಿಸಬೇಕು ಎಂದು ವಿಮಾ ಕಂಪನಿಗೆ ಆದೇಶಿಸಿದೆ.

ಪ್ರಕರಣವೇನು?:

ಮೇಲ್ಮನವಿದಾರ ಶಿವಣ್ಣ 2015ರ ಜನವರಿ 4ರಂದು ಸಂಬಂಧಿಕರೊಂದಿಗೆ ಟಿವಿಎಸ್‌ ಎಕ್ಸೆಲ್ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು. ಹಿರೇಹಳ್ಳಿ ಗ್ರಾಮದ ಕಡೆ ಹೋಗಲು ವಾಹನವನ್ನು ಯುಟರ್ನ್ ತೆಗೆದುಕೊಂಡು ಹೊರಟ ಸಂದರ್ಭದಲ್ಲಿ ನಿರ್ಲಕ್ಷ್ಯ ಹಾಗೂ ಅತಿವೇಗವಾಗಿ ಬಂದ ಮತ್ತೊಂದು ದ್ವಿಚಕ್ರ ವಾಹನ ಢಿಕ್ಕಿ ಹೊಡೆದಿತ್ತು. ಕೆಳಕ್ಕೆ ಬಿದ್ದಿದ್ದ ಶಿವಣ್ಣ ಗಂಭೀರ ಗಾಯಗೊಂಡಿದ್ದರು. ತಕ್ಷಣ ಅವರನ್ನು ಹಾಸನದ ಮಂಗಳ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎಡಗಾಲಿನ ಮೂಳೆ ಮುರಿತಕ್ಕೊಳಗಾಗಿದ್ದ ಶಿವಣ್ಣ ಜನವರಿ 11ರವರೆಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದರು.

ಆದರೆ, ಗಾಯದ ಭಾಗದಲ್ಲಿ ಸೋಂಕು ಉಲ್ಬಣಿಸಿದ ಕಾರಣ ಫೆಬ್ರವರಿ 25ರಂದು ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಶಿವಣ್ಣ ಅವರ ಜೀವಕ್ಕೇ ಅಪಾಯ ಎದುರಾಗಬಹುದಾದ ಸಾಧ್ಯತೆಯಿಂದ ಅವರ ಎಡಗಾಲನ್ನು ಮೊಣಕಾಲಿನವರೆಗೆ ಕತ್ತರಿಸಿಹಾಕಲಾಗಿತ್ತು. ಪರಿಹಾರ ಕೋರಿ ಶಿವಣ್ಣ ಎಂಎಸಿಟಿ ಮೊರೆ ಹೋಗಿದ್ದರು. ಅಪಘಾತದಲ್ಲಿ ಶಿವಣ್ಣ ಅವರ ನಿರ್ಲ್ಯಕ್ಷ್ಯವೂ ಇದೆ ಎಂದು ಅಭಿಪ್ರಾಯಪಟ್ಟಿದ್ದ ನ್ಯಾಯಾಧಿಕರಣ 50 ಸಾವಿರ ಪರಿಹಾರವನ್ನಷ್ಟೇ ಘೋಷಿಸಿತ್ತು. ಇದರಿಂದ, ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದ ಶಿವಣ್ಣ, ಅಪಘಾತದಲ್ಲಿ ತಮ್ಮ ನಿರ್ಲಕ್ಷ್ಯವಿಲ್ಲ ಎಂದು ಘೋಷಿಸುವಂತೆ ಹಾಗೂ ಪರಿಹಾರದ ಮೊತ್ತ ಹೆಚ್ಚಳ ಮಾಡುವಂತೆ ಕೋರಿದ್ದರು.

ಮೇಲ್ಮನವಿದಾರರ ವಾದವೇನು?

ವಿಚಾರಣೆ ವೇಳೆ ವಾದ ಮಂಡಿಸಿದ್ದ ಶಿವಣ್ಣ ಪರ ವಕೀಲರು, ಘಟನೆಗೆ ಸಂಬಂಧಿಸಿದಂತೆ ಮೇಲ್ಮನವಿದಾರರ ಕಡೆಯಿಂದ ಯಾವುದೇ ತಪ್ಪಾಗಿಲ್ಲ. ಮತ್ತೊಬ್ಬ ಬೈಕ್ ಸವಾರ ಅತಿ ವೇಗವಾಗಿ ಬಂದ ಪರಿಣಾಮದಿಂದ ಅಪಘಾತ ಸಂಭವಿಸಿದೆ. ಅದಕ್ಕೆ ಪುರಾವೆಗಳೂ ಇವೆ. ಈ ಸಂಬಂಧ ತನಿಖೆ ನಡೆಸಿರುವ ಪೊಲೀಸರು, ಡಿಕ್ಕಿ ಹೊಡೆದ ವಾಹನ ಸವಾರನ ಅಜಾಗರೂಕ ಹಾಗೂ ಅತಿ ವೇಗದ ಚಾಲನೆಯ ಕಾರಣದಿಂದಲೇ ಘಟನೆ ನಡೆದಿದೆ ಎಂದು ಆರೋಪಪಟ್ಟಿ ಸಲ್ಲಿಸಿದ್ದಾರೆ. ಹೀಗಿದ್ದರೂ, ಎಂಎಸಿಟಿ ಮೇಲ್ಮನವಿದಾರರದ್ದು ಶೇ.25 ಪ್ರಮಾಣದ ನಿರ್ಲಕ್ಷ್ಯವಿದೆ ಎಂದು ತೀರ್ಮಾನಿಸಿದೆ. ಜತೆಗೆ, ಪರಿಹಾರದ ಮೊತ್ತವೂ ಬಹಳ ಕಡಿಮೆಯಾಗಿದೆ ಎಂದು ಆಕ್ಷೇಪಿಸಿದ್ದರು.

ವಿಮಾ ಕಂಪನಿ ಪರ ವಕೀಲರು, ಮೇಲ್ಮನವಿದಾರರು ಸೂಕ್ತ ಚಾಲನಾ ಪರವಾನಗಿ ಹೊಂದಿಲ್ಲದೆ, ವಾಹನ ಚಲಾಯಿಸಿದ್ದಾರೆ. ಪಾಟೀಸವಾಲಿನ ಸಂದರ್ಭದಲ್ಲಿ ಅದನ್ನು ಮೇಲ್ಮನವಿದಾರರೂ ಒಪ್ಪಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ನ್ಯಾಯಾಧಿಕರಣ ನೀಡಿರುವ ಆದೇಶದಲ್ಲಿ ಸೂಕ್ತವಾಗಿದೆ. ಆದ್ದರಿಂದ, ಮೇಲ್ಮನವಿ ವಜಾಗೊಳಿಸಬೇಕು ಎಂದು ಕೋರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X