Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಡಿ.ಕೆ.ಶಿವಕುಮಾರ್‌ ಅವರನ್ನು ಸಚಿವ...

ಡಿ.ಕೆ.ಶಿವಕುಮಾರ್‌ ಅವರನ್ನು ಸಚಿವ ಸಂಪುಟದಿಂದ ಕೈಬಿಡಿ : ಎಚ್‌.ಡಿ.ಕುಮಾರಸ್ವಾಮಿ

"ಪೆನ್‍ಡ್ರೈವ್ ಪ್ರಕರಣದ ಬಗ್ಗೆ ವಿಶೇಷ ತನಿಖಾ ದಳ ನಿಷ್ಪಕ್ಷಪಾತ, ಪಾರದರ್ಶಕ ತನಿಖೆ ನಡೆಸುತ್ತಿಲ್ಲ"

ವಾರ್ತಾಭಾರತಿವಾರ್ತಾಭಾರತಿ7 May 2024 6:55 PM IST
share
ಡಿ.ಕೆ.ಶಿವಕುಮಾರ್‌ ಅವರನ್ನು ಸಚಿವ ಸಂಪುಟದಿಂದ  ಕೈಬಿಡಿ  : ಎಚ್‌.ಡಿ.ಕುಮಾರಸ್ವಾಮಿ

ಬೆಂಗಳೂರು : ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಲೈಂಗಿಕ ಹಗರಣ ಪ್ರಕರಣ ಸಂಬಂಧ ಪೆನ್‍ಡ್ರೈವ್ ಸೋರಿಕೆ ಹಿಂದೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇರುವ ಆರೋಪ ಹಿನ್ನೆಲೆ ಈ ಕೂಡಲೇ ಅವರನ್ನು ಸಂಪುಟದಿಂದ ಕೈಬಿಡಬೇಕೆಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಮಂಗಳವಾರ ನಗರದ ಜೆಪಿ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯ ಸರಕಾರಕ್ಕೆ ನೈತಿಕತೆ ಇದ್ದಲ್ಲಿ ಆರೋಪ ಕೇಳಿಬಂದಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಸಂಪುಟದಿಂದ ಕೈಬಿಡಬೇಕು. ಪೆನ್‍ಡ್ರೈವ್ ಪ್ರಕರಣದ ಬಗ್ಗೆ ವಿಶೇಷ ತನಿಖಾ ದಳ ನಿಷ್ಪಕ್ಷಪಾತ ಹಾಗೂ ಪಾರದರ್ಶಕವಾಗಿ ತನಿಖೆ ನಡೆಸುತ್ತಿಲ್ಲ. ಇದನ್ನು ಸಿಬಿಐ ತನಿಖೆಗೆ ವಹಿಸಬೇಕು. ಇಲ್ಲದಿದ್ದಲ್ಲಿ ಹೈಕೋರ್ಟಿನ ಹಾಲಿ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿದರು.

ಅನ್ಯಾಯವಾಗಿರುವ ಹೆಣ್ಣುಮಕ್ಕಳಿಗೆ ನ್ಯಾಯ ದೊರಕಬೇಕಾದರೆ ಸಿಬಿಐ ತನಿಖೆಗೆ ವಹಿಸಬೇಕು. ಅಲ್ಲದೆ, ಈ ಪ್ರಕರಣದಲ್ಲಿ ಕಾಂಗ್ರೆಸ್‍ಗೆ ಪ್ರಚಾರ ಪಡೆಯುವ ಉದ್ದೇಶವೇ ಹೊರತು ಪಾರದರ್ಶಕ ತನಿಖೆ ನಡೆಸುವುದಲ್ಲ. ಸಿಟ್ ನಿಷ್ಪಕ್ಷಪಾತವಾಗಿ ಪಾರದರ್ಶಕವಾಗಿ ತನಿಖೆ ನಡೆಸುತ್ತಿಲ್ಲ. ಇದು “ಸಿದ್ದರಾಮಯ್ಯ ಇನ್ವೆಸ್ಟಿಗೇಷನ್ ಟೀಂ ಶಿವಕುಮಾರ್ ಇನ್ವೆಸ್ಟಿಗೇಷನ್ ಟೀಂ” ಆಗಿದೆ ಎಂದು ಆರೋಪಿಸಿದರು.

ಹಾಸನದ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ಚುನಾವಣಾ ಏಜೆಂಟ್ ಪೂರ್ಣಚಂದ್ರ ತೇಜಸ್ವಿ ಅವರು ನೀಡಿದ ದೂರಿನ ಮೇಲೆ ಯಾವುದೇ ಕ್ರಮ ಕೈಗೊಂಡಿಲ್ಲ. ಅಲ್ಲದೆ, ಕೇವಲ ಮಾಜಿ ಸಚಿವ ಎಚ್.ಡಿ.ರೇವಣ್ಣ ಮತ್ತು ಸಂಸದ ಪ್ರಜ್ವಲ್ ರೇವಣ್ಣ ಅವರ ಬಗ್ಗೆ ಮಾತ್ರ ಎಸ್‍ಐಟಿ ತನಿಖೆ ಮಾಡುತ್ತಿದೆ. ಇವರಿಬ್ಬರಿಗೆ ಲುಕೌಟ್ ನೋಟಿಸ್ ಹೊರಡಿಸಿದ್ದಾರೆ. ಆದರೆ 25 ಸಾವಿರ ಪೆನ್‍ಡ್ರೈವ್ ಹಂಚಿಕೆ ಮಾಡಲಾಗಿದೆ ಎಂದು ವರದಿಯಾಗಿದೆ. ಹಂಚಿಕೆ ಮಾಡಿದವರ ಬಗ್ಗೆ ಲುಕೌಟ್ ನೋಟಿಸ್ ಎಸ್‌ಐಟಿ ಹೊರಡಿಸಿಲ್ಲ. ಒಟ್ಟಿನಲ್ಲಿ ಈ ಪೆನ್‍ಡ್ರೈವ್ ಹಿಂದೆ ಯಾರ ಪಾತ್ರವಿದೆ ಎಂಬ ಸತ್ಯಾಂಶ ಹೊರಬರಬೇಕೆಂದು ಕುಮಾರಸ್ವಾಮಿ ಒತ್ತಾಯಿಸಿದರು.

ಅಪಹರಣವಾಗಿದ್ದಾರೆ ಎನ್ನಲಾದ ಮಹಿಳೆ ಪತ್ತೆಯಾಗಿ ಎರಡು ದಿನವಾದರೂ ಇನ್ನೂ ನ್ಯಾಯಾಧೀಶರ ಮುಂದೆ ಹಾಜರುಪಡಿಸಿಲ್ಲ. ಆ ಪೆನ್‍ಡ್ರೈವ್ ಸೋರಿಕೆ ಮಾಡಿದವರಿಗೆ ಯಾವ ನೋಟಿಸ್ ಕೊಟ್ಟಿದ್ದೀರಿ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ಪ್ರಶ್ನಿಸಿದ ಅವರು, ಬಿಜೆಪಿ ರಾಷ್ಟ್ರೀಯ ಪಕ್ಷವಾಗಿದ್ದು, ಮೈತ್ರಿ ಮುಂದುವರಿಕೆ ಬಗ್ಗೆ ಏನು ತೀರ್ಮಾನ ಮಾಡುತ್ತಾರೋ ಗೊತ್ತಿಲ್ಲ. ಮುಂದುವರೆಸುತ್ತಾರೋ ಇಲ್ಲವೋ ಎಂಬ ಚಿಂತೆ ನನಗೂ ಇಲ್ಲ. ಪೆನ್‍ಡ್ರೈವ್ ಪ್ರಕರಣ ತಾರ್ಕಿಕ ಅಂತ್ಯವಾಗಬೇಕು ಎಂದು ನುಡಿದರು.

ಪರಿಷತ್ತು: ವಿಧಾನಪರಿಷತ್‍ನ ಚುನಾವಣೆಗೆ ನಾಮಪತ್ರ ಸಲ್ಲಿಸಲು ಮೇ 16ರವರೆಗೆ ಅವಕಾಶವಿದೆ. ದೀರ್ಘಾವಧಿ ಗೆ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳಲಾಗಿದೆ. ಬಿಜೆಪಿಯವರು ಯಾವ ತೀರ್ಮಾನ ಕೈಗೊಳ್ಳುತ್ತಾರೋ ಗೊತ್ತಿಲ್ಲ ಎಂದು ಅವರು ಹೇಳಿದರು.

ರೆಕಾರ್ಡ್ ಕೇಳಿಸಿದ ಕುಮಾರಸ್ವಾಮಿ..!

ಹಾಸನದ ಪೆನ್‍ಡ್ರೈವ್ ಕುರಿತಂತೆ ನಡೆದಿದೆ ಎನ್ನಲಾದ ಸಂಭಾಷಣೆಯೊಂದನ್ನು ಪತ್ರಿಕಾಗೋಷ್ಠಿಯಲ್ಲಿ ಕೇಳಿಸಿದರು. ಅದರಲ್ಲಿ 700 ಪೆನ್‍ಡ್ರೈವ್‍ಗಳನ್ನು ಆನಗೋಳದಲ್ಲಿ ಹಂಚಿಕೆ ಮಾಡಿರುವುದಾಗಿ ಸಂಭಾಷಣೆಯಲ್ಲಿ ವ್ಯಕ್ತವಾಗಿದೆ.

“ರಾಹುಲ್ ಗಾಂಧಿ ವಿಚಾರಣೆ ನಡೆಸಿ’

ಪ್ರಜ್ವಲ್ ರೇವಣ್ಣ ಅವರು 400 ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಹೇಳಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಎಸ್‌ಐಟಿ ವಿಚಾರಣೆಗೆ ಕರೆಯಬೇಕು. ಅಲ್ಲದೆ, ರಾಹುಲ್ ಗಾಂಧಿ ಅವರು ಅಂಕಿ ಅಂಶಗಳ ಸಮೇತ ಈ ವಿಷಯ ಹೇಳಿದ್ದಾರೆ. ಎಲ್ಲರಿಗಿಂತ ಮೊದಲೇ ಈ ಮಾಹಿತಿ ಅವರಿಗೆ ಸಿಕ್ಕಿರಬೇಕು. ಹೀಗಾಗಿ ಅವರಿಂದ ತನಿಖಾ ತಂಡ ಮಾಹಿತಿ ಪಡೆಯಬೇಕು. ಕೂಡಲೇ ಅವರಿಗೆ ಸಮನ್ಸ್ ಜಾರಿ ಮಾಡಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X