Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬರ ಪರಿಹಾರ | ರಾಜ್ಯಕ್ಕಾದ ಅನ್ಯಾಯದ...

ಬರ ಪರಿಹಾರ | ರಾಜ್ಯಕ್ಕಾದ ಅನ್ಯಾಯದ ವಿರುದ್ಧ ಬೀದಿಗಳಲ್ಲಿ ಮಾತ್ರವಲ್ಲ, ನ್ಯಾಯಾಲಯದಲ್ಲೂ ಹೋರಾಟ ಮುಂದುವರಿಯಲಿದೆ : ಸಿಎಂ ಸಿದ್ದರಾಮಯ್ಯ

"ಕೇಂದ್ರ ಸರಕಾರವು ಸುಪ್ರೀಂ ಕೋರ್ಟ್ ಗೆ ಕೂಡಾ ತಪ್ಪು ಮಾಹಿತಿ ನೀಡಿ, ಹಾದಿ ತಪ್ಪಿಸುವ ಪ್ರಯತ್ನ ಮಾಡುತ್ತಿದೆ"

ವಾರ್ತಾಭಾರತಿವಾರ್ತಾಭಾರತಿ8 April 2024 8:31 PM IST
share
ಬರ ಪರಿಹಾರ | ರಾಜ್ಯಕ್ಕಾದ ಅನ್ಯಾಯದ ವಿರುದ್ಧ ಬೀದಿಗಳಲ್ಲಿ ಮಾತ್ರವಲ್ಲ, ನ್ಯಾಯಾಲಯದಲ್ಲೂ ಹೋರಾಟ  ಮುಂದುವರಿಯಲಿದೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಬರ ಪರಿಹಾರದ ವಿಷಯದಲ್ಲಿ ರಾಜ್ಯಕ್ಕಾದ ಅನ್ಯಾಯದ ವಿರುದ್ಧ ಬೀದಿಗಳಲ್ಲಿ ಮಾತ್ರವಲ್ಲ ನ್ಯಾಯಾಲಯದಲ್ಲೂ ಹೋರಾಟ ಮುಂದುವರಿಯಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟನೆ ಹೊರಡಿಸಿರುವ ಅವರು, " ಕರ್ನಾಟಕಕ್ಕೆ ನ್ಯಾಯಬದ್ಧವಾಗಿ ನೀಡಬೇಕಾಗಿರುವ ಬರಪರಿಹಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರಕಾರವು ಸುಪ್ರೀಂ ಕೋರ್ಟ್ ಗೆ ಕೂಡಾ ತಪ್ಪು ಮಾಹಿತಿ ನೀಡಿ ನ್ಯಾಯಾಲಯದ ಹಾದಿ ತಪ್ಪಿಸುವ ಪ್ರಯತ್ನ ಮಾಡಿರುವುದು ವಿಷಾದನೀಯ" ಎಂದು ಅಸಮಾಧಾನ ಹೊರಹಾಕಿದರು.

" ನ್ಯಾಯಬದ್ಧವಾಗಿ ಕರ್ನಾಟಕಕ್ಕೆ ನೀಡಬೇಕಾಗಿರುವ ಬರಪರಿಹಾರವನ್ನು ನೀಡದೆ ಕೇಂದ್ರ ಸರಕಾರ ಕಳೆದ ಐದಾರು ತಿಂಗಳುಗಳಿಂದ ಸತಾಯಿಸುತ್ತಿರುವುದನ್ನು ಕಂಡು ಬೇರೆ ದಾರಿ ಕಾಣದೆ ನ್ಯಾಯ ಕೋರಿ ನಮ್ಮ ಸರಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು. ಇಂದು ನ್ಯಾಯಾಲಯದಲ್ಲಿ ನಡೆದ ವಿಚಾರಣೆಯಲ್ಲಿ ಕೇಂದ್ರ ಸರಕಾರದ ಅಡ್ವೋಕೇಟ್ ಜನರಲ್ ತುಷಾರ್ ಮೆಹ್ತಾ ಅವರು ಬರಪರಿಹಾರ ವಿಳಂಬಕ್ಕೆ ಕರ್ನಾಟಕ ಸರಕಾರವೇ ಕಾರಣ. ಇದರ ಹಿಂದೆ ರಾಜಕೀಯ ಉದ್ದೇಶ ಇದೆ ಎಂಬ ಅಭಿಪ್ರಾಯ ಮೂಡುವಂತೆ ವಾದ ಮಾಡಿದ್ದಾರೆ. ಇದು ಖಂಡನೀಯ" ಎಂದರು.

"ಬರ ಪರಿಹಾರಕ್ಕಾಗಿ ಕರ್ನಾಟಕ ಕೇಂದ್ರ ಸರ್ಕಾರವನ್ನು ಸಂಪರ್ಕಿಸಬಹುದಿತ್ತು. ಈ ಅರ್ಜಿ ಸಲ್ಲಿಸಿರುವ ಸಮಯದ ಮಹತ್ವ ನಮಗೆ ಅರ್ಥವಾಗುತ್ತದೆ. ಈ ಅರ್ಜಿಗೆ ಪ್ರತಿಕ್ರಿಯೆ ಕೋರಿ ನಮಗೆ ನೋಟೀಸ್ ನೀಡಬಾರದು. ಹಾಗೆ ಮಾಡಿದರೆ ಅದು ಸುದ್ದಿಯಾಗುತ್ತದೆ" ಎಂದು ಅಡ್ವೋಕೇಟ್ ಜನರಲ್ ಕೇಂದ್ರ ಸರಕಾರದ ವೈಫಲ್ಯವನ್ನು ಮುಚ್ಚಿಹಾಕಲು ಕರ್ನಾಟಕ ಸರಕಾರದ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಳೆದ ಎರಡು ಮೂರು ತಿಂಗಳ ಅವಧಿಯಲ್ಲಿ ನಾನು ಮತ್ತೆ ಮತ್ತೆ ಹೇಳಿರುವಂತೆ ‘ಬರಗಾಲಕ್ಕೆ ಪರಿಹಾರ ಕೋರಿ ನಮ್ಮ ಸರಕಾರ ಕಳೆದ ಸೆಪ್ಟೆಂಬರ್ ತಿಂಗಳಿನಲ್ಲಿಯೇ ನಷ್ಟದ ವಿವರ ಮತ್ತು ನಿರೀಕ್ಷಿತ ಪರಿಹಾರದ ಮೊತ್ತವನ್ನು ಒಳಗೊಂಡ ಮನವಿ ಪತ್ರವನ್ನು ಕೇಂದ್ರ ಸರಕಾರಕ್ಕೆ ಸಲ್ಲಿಸಿದ್ದೆವು. ಅದರ ನಂತರ ನಾನು ಮತ್ತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಗೃಹಸಚಿವ ಅಮಿತ್ ಶಾ ಅವರನ್ನು ದಿಲ್ಲಿಯಲ್ಲಿ ಭೇಟಿ ಮಾಡಿ ಮನವಿ ಮಾಡಿದ್ದೆವು ಎಂದರು.

ನಮ್ಮ ಉಪಮುಖ್ಯಮಂತ್ರಿಗಳು ಪ್ರತ್ಯೇಕವಾಗಿ ಕೇಂದ್ರ ಹಣಕಾಸು ಸಚಿವರನ್ನು ಭೇಟಿ ಮಾಡಿದ್ದರು. ಹೀಗಿದ್ದರೂ ಕರ್ನಾಟಕ ಸರ್ಕಾರ ವಿಳಂಬವಾಗಿ ಮನವಿ ಸಲ್ಲಿಸಿದೆ ಎಂದು ಕೇಂದ್ರ ಹಣಕಾಸು ಸಚಿವರು ಮತ್ತು ಗೃಹಸಚಿವರು ಯಾವ ಮುಜುಗರ ಇಲ್ಲದೆ ಸುಳ್ಳು ಹೇಳುತ್ತಾ ಬಂದಿದ್ದಾರೆ. ಇಂದು ಇದೇ ಸುಳ್ಳನ್ನು ಕೇಂದ್ರ ಸರಕಾರ ಸರ್ವೋಚ್ಚ ನ್ಯಾಯಾಲಯದ ಮುಂದೆಯೂ ಹೇಳಿದೆ ಎಂದು ತಿಳಿಸಿದರು.

ಕೇಂದ್ರ ಸರಕಾರದ ಅಡ್ವೋಕೇಟ್ ಜನರಲ್ ಅವರ ಹೇಳಿಕೆಯನ್ನು ಪುರಸ್ಕರಿಸಿದ ಸುಪ್ರೀಂ ಕೋರ್ಟ್ ಸದ್ಯಕ್ಕೆ ಪ್ರಕರಣವನ್ನು ಎರಡು ವಾರಗಳ ಕಾಲ ಮುಂದೂಡಿದೆ. ಮುಂದಿನ ವಿಚಾರಣೆಯೊಳಗೆ ಕೇಂದ್ರ ಸರಕಾರ ತನ್ನ ಉತ್ತರವನ್ನು ಸಿದ್ಧಗೊಳಿಸಬೇಕಾಗಿದೆ ಎಂದು ಹೇಳಿದರು.

ಬರಪರಿಹಾರ ನೀಡಿಕೆಯಲ್ಲಿ ಕೇಂದ್ರ ಸರಕಾರ ರಾಜ್ಯಕ್ಕೆ ಮಾಡಿರುವ ಅನ್ಯಾಯದ ವಿರುದ್ಧದ ನಮ್ಮ ಹೋರಾಟ ಬೀದಿಗಳಲ್ಲಿ ಮಾತ್ರವಲ್ಲ ನ್ಯಾಯಾಲಯದಲ್ಲಿಯೂ ಮುಂದುವರಿಯಲಿದೆ. ಕೇಂದ್ರ ಸರಕಾರದ ಸುಳ್ಳುಗಳನ್ನು ಒಂದೊಂದಾಗಿ ಬಯಲುಗೊಳಿಸುತ್ತಾ ಅದರ ನಿಜಸ್ವರೂಪವನ್ನು ರಾಜ್ಯದ ಜನತೆಯ ಮುಂದಿಡುವ ಪ್ರಯತ್ನವನ್ನು ಮಾಡಲಿದ್ದೇವೆ ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X