Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಾಜ್ಯಪಾಲರಿಗೆ ಜೆಡಿಎಸ್ ಪಕ್ಷದಿಂದ ಬರ...

ರಾಜ್ಯಪಾಲರಿಗೆ ಜೆಡಿಎಸ್ ಪಕ್ಷದಿಂದ ಬರ ಅಧ್ಯಯನ ವರದಿ ಸಲ್ಲಿಕೆ

ವಾರ್ತಾಭಾರತಿವಾರ್ತಾಭಾರತಿ3 Dec 2023 7:36 PM IST
share
ರಾಜ್ಯಪಾಲರಿಗೆ ಜೆಡಿಎಸ್ ಪಕ್ಷದಿಂದ ಬರ ಅಧ್ಯಯನ ವರದಿ ಸಲ್ಲಿಕೆ

ಬೆಂಗಳೂರು: ರಾಜ್ಯಾದ್ಯಂತ ಜೆಡಿಎಸ್ ಪಕ್ಷ ನಡೆಸಿದ್ದ ಬರ ಅಧ್ಯಯನ ವರದಿಯನ್ನು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಪಕ್ಷದ ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು ಹಾಗೂ ಜಿಲ್ಲಾ ಘಟಕಗಳ ಅಧ್ಯಕ್ಷರ ನಿಯೋಗವು ರವಿವಾರ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಸಲ್ಲಿಸಿತು.

ರಾಜ್ಯದಲ್ಲಿ ಬರ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳಲು ಕೇಂದ್ರದಿಂದ ಅನುದಾನ ಕೊಡಿಸಲು ಮಧ್ಯಪ್ರದೇಶ ಮಾಡಬೇಕೆಂದು ಎಚ್.ಡಿ.ಕುಮಾರಸ್ವಾಮಿ ಮಾಡಿದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ರಾಜ್ಯಪಾಲರು, ನಿಮ್ಮ ಅಹವಾಲನ್ನು ಕೇಂದ್ರ ಸರಕಾರದ ಗಮನಕ್ಕೆ ತರುವುದಾಗಿ ಭರವಸೆ ನೀಡಿದರು.

ಮಾನ್ಸೂನ್ ವೈಫಲ್ಯದಿಂದ ರಾಜ್ಯದಲ್ಲಿ ಒಟ್ಟು 48 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಈ ಪೈಕಿ 46.09 ಲಕ್ಷ ಹೆಕ್ಟೇರ್ ಕೃಷಿ ಬೆಳೆ ಹಾಗೂ 2.06 ಲಕ್ಷ ಹೆಕ್ಟೇರ್ ತೋಟಗಾರಿಕೆ ಬೆಳೆ ನಾಶವಾಗಿದೆ. ರಾಜ್ಯ ಸರಕಾರವೇ ಅಂದಾಜು ಮಾಡಿರುವಂತೆ ರಾಜ್ಯದಲ್ಲಿ ಒಟ್ಟು 35.162.02 ಕೋಟಿ ರೂಪಾಯಿಯಷ್ಟು ಬೆಳೆ ಹಾನಿ ಆಗಿದ್ದು, ಎನ್‍ಡಿಆರ್ ಎಫ್ ಮಾನದಂಡದ ಅಡಿಯಲ್ಲಿ ಕೇಂದ್ರ ಸರಕಾರದಿಂದ 18,171.44 ಕೋಟಿ ರೂಪಾಯಿ ಪರಿಹಾರವನ್ನು ರಾಜ್ಯ ಸರಕಾರ ಕೋರಿದೆ.

ಆದರೆ, ಇಷ್ಟು ಮೊತ್ತದ ಪರಿಹಾರದಿಂದ ರಾಜ್ಯದ ರೈತರ ಬವಣೆ ನೀಗುವುದಿಲ್ಲ. ಕೃಷಿಕರು ಅನುಭವಿಸಿರುವ ಒಟ್ಟಾರೆ ನಷ್ಟದಲ್ಲಿ ಶೇ.10ರಷ್ಟು ಪರಿಹಾರವೂ ಅವರಿಗೆ ಸಿಗುವುದಿಲ್ಲ. ಆದ್ದರಿಂದ ಈ ಹಿಂದೆ ನೀಡಿದಂತೆ ಪ್ರತಿ ಹೆಕ್ಟೇರ್ ಬೆಳೆ ನಾಶಕ್ಕೆ ಹೆಚ್ಚುವರಿ ಪರಿಹಾರವಾಗಿ 17,500 ರೂಪಾಯಿ ನೀಡಬೇಕು. ಈ ನಿಟ್ಟಿನಲ್ಲಿ ತಾವು ರಾಜ್ಯ ಸರಕಾರಕ್ಕೆ ಕಟ್ಟುನಿಟ್ಟಿನ ನಿರ್ದೇಶನ ನೀಡಬೇಕು ಎಂದು ಕುಮಾರಸ್ವಾಮಿ ಮನವಿ ಮಾಡಿದರು.

ಬರ ಪರಿಹಾರ ನಿರ್ವಹಣೆಯಲ್ಲಿ ವಿಫಲ: ರಾಜ್ಯದಲ್ಲಿ ಬರ ಪರಿಸ್ಥಿತಿ ನಿರ್ವಹಣೆ ಹಾಗೂ ಪರಿಹಾರ ಕ್ರಮ ಕೈಗೊಳ್ಳುವಲ್ಲಿ ರಾಜ್ಯ ಕಾಂಗ್ರೆಸ್ ಸರಕಾರ ಸಂಪೂರ್ಣವಾಗಿ ವಿಫಲವಾಗಿದೆ. ಅನೇಕ ಜಿಲ್ಲೆಗಳಲ್ಲಿ ಕುಡಿಯುವ ಸಮಸ್ಯೆ ಇದೆ. ಜಾನುವಾರುಗಳು ಸಂಕಷ್ಟದಲ್ಲಿವೆ. ರಾಜಧಾನಿ ಬೆಂಗಳೂರಿನಲ್ಲಿಯೂ ನೀರಿನ ಸಂಕಷ್ಟ ಎದುರಾಗಿದೆ ಎಂದು ರಾಜ್ಯಪಾಲರ ಗಮನಕ್ಕೆ ತಂದರು.

ಮನವಿಯ ಪ್ರಮುಖ ಅಂಶಗಳು

ಕೇಂದ್ರ ಸರಕಾರದಿಂದ ಎನ್.ಡಿ.ಆರ್.ಎಫ್ ಮಾನದಂಡದ ಅನ್ವಯ ಕೂಡಲೇ ರಾಜ್ಯಕ್ಕೆ 17,181.44 ಕೋಟಿ ರೂಪಾಯಿ ಬಿಡುಗಡೆ ಮಾಡಿಸಲು ರಾಜ್ಯಪಾಲರು ಮನವೊಲಿಸಬೇಕು.

ಕುಡಿಯುವ ನೀರು, ಜಾನುವಾರುಗಳ ಸಂರಕ್ಷಣೆ, ಕೃಷಿ ಕಾರ್ಮಿಕರಿಗೆ ನೆರವು, ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ನೆರವು ನೀಡುವ ಉದ್ದೇಶದಿಂದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ 10 ಸಾವಿರ ಕೋಟಿ ರೂಪಾಯಿ ಬಿಡುಗಡೆ ಮಾಡಲು ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಬೇಕು.

ವಿಮಾ ಕಂಪನಿಗಳು ಬೆಳೆ ನಷ್ಟ ಅನುಭವಿಸಿದ ರೈತರಿಗೆ ಪರಿಹಾರ ನೀಡಲು ರಾಜ್ಯ ಮತ್ತು ಕೇಂದ್ರ ಸರಕಾರಗಳು ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ರಾಜ್ಯಪಾಲರು ಕ್ರಮ ವಹಿಸಬೇಕು.

ಬೆಂಗಳೂರು ನಗರ ಕುಡಿಯುವ ನೀರಿನ ತೀವ್ರ ಬಿಕ್ಕಟ್ಟು ಎದುರಿಸುತ್ತಿದೆ. ಇದಕ್ಕೆ ಏಕೈಕ ಪರಿಹಾರ ಆಗಿರುವ ಮೇಕೆದಾಟು ಯೋಜನೆಗೆ ಕೇಂದ್ರ ಸರಕಾರದ ಒಪ್ಪಿಗೆ ಕೊಡಿಸುವ ನಿಟ್ಟಿನಲ್ಲಿ ರಾಜ್ಯಪಾಲರು ಕ್ರಮ ವಹಿಸಬೇಕು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X