Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ದಿಟ್ಟ ಐಪಿಎಸ್‌ ಅಧಿಕಾರಿ ಮೊಹಮ್ಮದ್...

ದಿಟ್ಟ ಐಪಿಎಸ್‌ ಅಧಿಕಾರಿ ಮೊಹಮ್ಮದ್ ಸುಜೀತ ಎಂ ಎಸ್

ಅತ್ಯಲ್ಪ ಕಾಲದಲ್ಲೇ ಖ್ಯಾತಿ ಪಡೆದ ಹಾಸನದ ನೂತನ ಎಸ್ಪಿ

ವಾರ್ತಾಭಾರತಿವಾರ್ತಾಭಾರತಿ6 Sept 2023 8:36 PM IST
share
ದಿಟ್ಟ ಐಪಿಎಸ್‌ ಅಧಿಕಾರಿ ಮೊಹಮ್ಮದ್ ಸುಜೀತ ಎಂ ಎಸ್
ಮೈಸೂರು ಜಿಲ್ಲೆಯ ನಂಜನಗೂಡು ಉಪ ವಿಭಾಗಕ್ಕೆ ಎಎಸ್ಪಿಯಾಗಿ ಆಗಮಿಸಿದ ಮೊಹಮ್ಮದ್‌ ಸುಜೀತ ಎಲ್ಲರಿಗೂ ಅಚ್ಚರಿ ಹುಟ್ಟಿಸುವಂತೆ ಕೆಲಸ ಮಾಡಿದ್ದರು. ಘಟಾನುಘಟಿಗಳ ಕ್ಷೇತ್ರದಲ್ಲಿ ಯುವ ಅಧಿಕಾರಿಯ ಪಾದರಸದಂತ ಚಲನೆ ಅವರೆಡೆ ಎಲ್ಲರು ಕಣ್ಣರಳಿಸಿ ನೋಡುವಂತೆ ಮಾಡಿತ್ತು

ಸಿದ್ದರಾಮಯ್ಯ ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದ ಸಮಯ. 2017ರಲ್ಲಿ ಸಚಿವ ಸಂಪುಟ ಪುನರ್ರಚನೆ ಸಂದರ್ಭ ಕಂದಾಯ ಸಚಿವರಾಗಿದ್ದ ವಿ ಶ್ರೀನಿವಾಸ್‌ ಪ್ರಸಾದ್‌ ಕೈಬಿಟ್ಟಿದ್ದಕ್ಕೆ, ವಿ ಶ್ರೀನಿವಾಸ್‌ ಪ್ರಸಾದ್‌ ಬಹಿರಂಗವಾಗಿ ಆಕ್ರೋಶ ಹೊರಹಾಕಿದ್ದರು. ಬದಲಾದ ಸನ್ನಿವೇಶದಲ್ಲಿ ಕಾಂಗ್ರೆಸ್‌ ಪಕ್ಷ ತೊರೆದು ಬಿಜೆಪಿ ಸೇರಿದರು. ಉಪಚುನಾವಣೆ ಘೋಷಣೆಯೂ ಆಯ್ತು. ಬಿಜೆಪಿಯಿಂದ ನಂಜನಗೂಡು ವಿಧಾನ ಸಭಾ ಕ್ಷೇತ್ರಕ್ಕೆ ವಿ ಶ್ರೀನಿವಾಸ್‌ ಪ್ರಸಾದ್‌ ಅಭ್ಯರ್ಥಿಯಾದರು. ಕಳಲೆ ಎನ್‌ ಕೇಶವಮೂರ್ತಿ ಕಾಂಗ್ರೆಸ್‌ ಅಭ್ಯರ್ಥಿಯಾದರು. ಹೈ ವೋಲ್ಟೇಜ್‌ ಚುನಾವಣೆ ಅದು. ಎರಡೂ ಪಕ್ಷಗಳು ಪ್ರತಿಷ್ಠೆಯಾಗಿ ತೆಗೆದುಕೊಂಡು ಚುನಾವಣೆ ಎದುರಿಸಿದವು. ಬಿರುಸಿನ ಪ್ರಚಾರವೂ ನಡೆಯಿತು. ಸಿದ್ದರಾಮಯ್ಯ ಜಿಲ್ಲೆಯ ನಂಜನಗೂಡು ಉಪಚುನಾವಣೆ ಟಿ-ಟ್ವೆಂಟಿ ಮಾದರಿಯ ಕ್ರಿಕೆಟ್‌ ಪಂದ್ಯದಂತೆ ಎಲ್ಲರನ್ನೂ ತುದಿಗಾಲಲ್ಲಿ ನಿಲ್ಲಿಸಿತ್ತು. ಫಲಿತಾಂಶ ಘೋಷಣೆಯಾದಾಗ ಕಾಂಗ್ರೆಸ್‌ ಜಯಭೇರಿ ಬಾರಿಸಿತ್ತು. ಈ ಚುನಾವಣೆಯ ಸಂದರ್ಭ ಕಾನೂನು ಸುವ್ಯವಸ್ಥೆ ಕಾಪಾಡಿಕೊಂಡು ಚುನಾವಣೆ ಸಲೀಸಾಗಿ ನಡೆಯಲು ಹದ್ದಿನ ಕಣ್ಣಿಟ್ಟು ಕೆಲಸ ಮಾಡಿದ ಐಪಿಎಸ್‌ ಅಧಿಕಾರಿಯೇ ಮೊಹಮ್ಮದ್‌ ಸುಜೀತ ಎಂ.ಎಸ್.

ಆಗಷ್ಟೇ ಐಪಿಎಸ್‌ ತರಬೇತಿ ಮುಗಿಸಿ ಮೈಸೂರು ಜಿಲ್ಲೆಯ ನಂಜನಗೂಡು ಉಪ ವಿಭಾಗಕ್ಕೆ ಎಎಸ್ಪಿಯಾಗಿ ಆಗಮಿಸಿದ ಮೊಹಮ್ಮದ್‌ ಸುಜೀತ ಎಲ್ಲರಿಗೂ ಅಚ್ಚರಿ ಹುಟ್ಟಿಸುವಂತೆ ಕೆಲಸ ಮಾಡಿದ್ದರು. ಘಟಾನುಘಟಿಗಳ ಕ್ಷೇತ್ರದಲ್ಲಿ ಯುವ ಅಧಿಕಾರಿಯ ಪಾದರಸದಂತ ಚಲನೆ ಅವರೆಡೆ ಎಲ್ಲರು ಕಣ್ಣರಳಿಸಿ ನೋಡುವಂತೆ ಮಾಡಿತ್ತು. ಯಾವುದೇ ಕ್ಷಣದಲ್ಲೂ ಮುನ್ನುಗ್ಗಿ ಕೆಲಸ ಮಾಡುವ ಅವರ ಗುಣ ಸಹಜವಾಗಿಯೇ ಯುವ ಜನರನ್ನು ಅವರತ್ತ ಆಕರ್ಷಿಸಿತ್ತು. ಮೈಸೂರು ಜಿಲ್ಲೆಯಲ್ಲಿದ್ದಾಗ ಆಗಿನ ಜಿಲ್ಲಾಧಿಕಾರಿ ರಂದೀಪ್, ಎಸ್ಪಿ ರವಿ ಚೆನ್ನಣ್ಣನವರ್‌ ಜೊತೆಗೂಡಿ ಹುಣಸೂರು ರಸ್ತೆಯ ಕಲಾಮಂದಿರಲ್ಲಿ ಆಯೋಜಿಸಿದ್ದ ಸಿವಿಲ್‌ ಸರ್ವಿಸ್‌ ಪರೀಕ್ಷೆಗಳೆಡೆಗೆ ಯುವಜನರನ್ನು ಸೆಳೆಯುವ ಕಾರ್ಯಗಾರ ಅವರಲ್ಲೊಬ್ಬ ಉತ್ತಮ ವಾಗ್ಮಿಯನ್ನು ಹೊರತಂದಿತ್ತು.

ಇಂದಿಗೂ ಸಾಮಾಜಿಕ ಜಾಲತಾಣಗಳ ಮೂಲಕ ನಾಗರಿಕ ಸೇವಾ ಪರೀಕ್ಷೆಗಳೆಡೆಗೆ ಯುವಜನರನ್ನು ಸೆಳೆಯುವ ಅವರ ವೀಡಿಯೂ ಅತೀ ಹೆಚ್ಚು ವೀಕ್ಷಣೆ ಪಡೆಯುತ್ತದೆ. ಆಸಕ್ತರನ್ನು ನಾಗರಿಕ ಸೇವೆಗೆ ಸೆಳೆಯಲು, ಆಸಕ್ತಿ ಹುಟ್ಟಿಸುವಲ್ಲಿ ಅವು ಒಂದು ಹೆಜ್ಜೆ ಮುಂದಿದೆ. ಕೋಲಾರ ಜಿಲ್ಲೆಯ ಎಸ್ಪಿಯಾಗಿದ್ದಾಗ ಮಹಿಳಾ ಸಬಲೀಕರಣಕ್ಕಾಗಿ ಅವರು ಕೈಗೊಂಡ ಕೆಲಸಗಳು ಒಬ್ಬ ಪೊಲೀಸ್‌ ಅಧಿಕಾರಿ ಯಾವ ರೀತಿ ಸಮಾಜವನ್ನು ಬದಲಾಯಿಸಬಹುದು ಎಂದು ತೋರಿಸಿಕೊಟ್ಟಿತ್ತು. 21 ದಿನಗಳ ಮಾದರಿ ಕಾರ್ಯಕ್ರಮದ ಮೂಲಕ ಮಹಿಳೆಯರಿಗೆ ಆತ್ಮ ರಕ್ಷಣೆಯ ತರಬೇತಿ ನೀಡಿದ್ದರು. ಬೈಕ್‌ ರೈಡಿಂಗ್‌ ಕಲಿಸಿಕೊಟ್ಟರು. ಕರಾಟೆ ಕಲಿಸುವ ಮೂಲಕ ಆತ್ಮವಿಶ್ವಾಸ ತುಂಬಿದರು. ಸುಮಾರು 300 ಕುಟುಂಬಗಳು ಇದರ ಪ್ರಯೋಜನ ಪಡೆದವು.

ಮೂಲತಃ ತಮಿಳುನಾಡಿನವರಾದ ಮೊಹಮ್ಮದ್‌ ಸುಜೀತಾ 2014ರ ಬ್ಯಾಚ್‌ನ ಐಪಿಎಸ್‌ ಅಧಿಕಾರಿ. ಅವರ ತಂದೆ ಮೊಹಮ್ಮದ್‌ ಸಲ್ಮಾನ್‌ ಟುಟುಕೋರಿನ್‌ ಬಂದರು ಟ್ರಸ್ಟ್‌ನಲ್ಲಿ ಉದ್ಯೋಗಿಯಾಗಿದ್ದರು. ತಾಯಿ ಮೊಹಮ್ಮದ್‌ ಅಝೀಝಾ ಅವರಿಗೂ ಮಗಳು ನಾಗರೀಕ ಸೇವೆಗೆ ಸೇರಬೇಕೆಂಬ ಆಸೆಯಿತ್ತು. 2011ರಲ್ಲಿ ನಾಗರೀಕ ಸೇವಾ ಪರೀಕ್ಷೆಯ ಮೊದಲ ಪ್ರಯತ್ನದಲ್ಲಿ ಹಿನ್ನಡೆ ಅನುಭವಿಸಿದರೂ, 2014ಕ್ಕೆ ಇತಿಹಾಸವನ್ನು ಐಚ್ಛಿಕ ವಿಷಯವಾಗಿ ತೆಗೆದುಕೊಂಡು ನಾಗರೀಕ ಸೇವೆಗೆ ಪ್ರವೇಶ ಪಡೆದರು. ಈಗ ರಾಜಕೀಯವಾಗಿ ಸೂಕ್ಷ್ಮವಾದ ಹಾಸನ ಜಿಲ್ಲೆಯ ಎಸ್ಪಿಯಾಗಿ ಅಧಿಕಾರ ಸ್ವೀಕರಿಸಿರುವ ಮೊಹಮ್ಮದ್‌ ಸುಜೀತಾ ಎಂ.ಎಸ್‌ ಅವರ ಮುಂದೆ ಬಹಳಷ್ಟು ಸವಾಲುಗಳಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X