Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಡಿವೈಎಸ್‍ಪಿ, ಪೊಲೀಸ್ ಇನ್ಸ್‌ಪೆಕ್ಟರ್...

ಡಿವೈಎಸ್‍ಪಿ, ಪೊಲೀಸ್ ಇನ್ಸ್‌ಪೆಕ್ಟರ್ ವರ್ಗಾವಣೆಗೆ ಮಾರ್ಗಸೂಚಿ ಪ್ರಕಟಿಸಿದ ಸರಕಾರ

ವಾರ್ತಾಭಾರತಿವಾರ್ತಾಭಾರತಿ2 Aug 2026 8:47 PM IST
share
ಡಿವೈಎಸ್‍ಪಿ, ಪೊಲೀಸ್ ಇನ್ಸ್‌ಪೆಕ್ಟರ್ ವರ್ಗಾವಣೆಗೆ ಮಾರ್ಗಸೂಚಿ ಪ್ರಕಟಿಸಿದ ಸರಕಾರ
ಮುಂಭಡ್ತಿ ಹೊಂದಿದ ನಂತರ ಎರಡು ವರ್ಷ ಕಾರ್ಯಕಾರ್ಯೇತರ ಹುದ್ದೆಯಲ್ಲಿ ಸೇವೆ ಸಲ್ಲಿಸುವುದು ಕಡ್ಡಾಯ

ಬೆಂಗಳೂರು : ರಾಜ್ಯ ಸರಕಾರವು ಪೊಲೀಸ್ ಉಪಾಧೀಕ್ಷಕ(ಡಿವೈಎಸ್‍ಪಿ) ಮತ್ತು ಪೊಲೀಸ್ ನಿರೀಕ್ಷಕ(ಇನ್ಸ್‌ ಪೆಕ್ಟರ್) ವರ್ಗಾವಣೆಗೆ ಸಂಬಂಧಪಟ್ಟಂತೆ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ಮುಂಭಡ್ತಿ ಹೊಂದಿದ ನಂತರ ಕನಿಷ್ಟ 2 ವರ್ಷಗಳ ಕಾಲ ಕಾರ್ಯಕಾರ್ಯೇತರ ಹುದ್ದೆಯಲ್ಲಿ ಸೇವೆ ಸಲ್ಲಿಸುವುದನ್ನು ಕಡ್ಡಾಯಗೊಳಿಸಿದೆ.

ಈ ಸಂಬಂಧ ಒಳಾಡಳಿತ ಇಲಾಖೆಯ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯಾ ಆದೇಶ ಹೊರಡಿಸಿದ್ದು, ಪೊಲೀಸ್ ಉಪಾಧೀಕ್ಷಕರು(ಸಿವಿಲ್) ಹುದ್ದೆಗೆ ಮುಂಭಡ್ತಿ ಹೊಂದಿದ ನಂತರ ಕಡ್ಡಾಯವಾಗಿ ಕನಿಷ್ಟ 2 ವರ್ಷಗಳ ಸೇವೆಯನ್ನು ಡಿವೈಎಸ್‍ಪಿ ವೃಂದದ ಕಾರ್ಯಕಾರ್ಯೇತರ(ನಾನ್-ಎಕ್ಸಿಕ್ಯೂಟಿವ್) ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸಬೇಕು. ಪೊಲೀಸ್ ನಿರೀಕ್ಷಕರು (ಸಿವಿಲ್) ಹುದ್ದೆಗೆ ಮುಂಬಡ್ತಿ ಹೊಂದಿದ ತಕ್ಷಣ ಕಡ್ಡಾಯವಾಗಿ ಕನಿಷ್ಠ 2 ವರ್ಷಗಳ ಸೇವೆಯನ್ನು ಪೊಲೀಸ್ ನಿರೀಕ್ಷಕರ ವೃಂದದ ಕಾರ್ಯಕಾರ್ಯೇತರ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸಬೇಕು ಎಂದಿದ್ದಾರೆ.

ಪೊಲೀಸ್ ಉಪಾಧೀಕ್ಷಕರು (ಸಿವಿಲ್) ಮತ್ತು ಪೊಲೀಸ್ ನಿರೀಕ್ಷಕರು (ಸಿವಿಲ್) ಬೆಂಗಳೂರು ನಗರ, ಮಂಗಳೂರು ನಗರ, ಮೈಸೂರು ನಗರ, ಹುಬ್ಬಳ್ಳಿ-ಧಾರವಾಡ ನಗರ, ಬೆಳಗಾವಿ ನಗರ, ಕಲಬುರಗಿ ನಗರಗಳಂತಹ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಗರಿಷ್ಠ ಐದು ವರ್ಷಗಳ ಅವಧಿಗೆ ಮಾತ್ರ ಕಾರ್ಯಕಾರಿ ಹುದ್ದೆಗಳಲ್ಲಿ (ಕಾನೂನು ಸುವ್ಯವಸ್ಥೆ, ಸಂಚಾರ, ಸಿಸಿಬಿ, ರೈಲ್ವೆ, ಸೈಬರ್ ಮತ್ತು ಮಹಿಳಾ) ಸೇವೆ ಸಲ್ಲಿಸಲು ಅರ್ಹರಾಗಿರುತ್ತಾರೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಕಮಿಷನರೇಟ್ ವ್ಯಾಪ್ತಿಯ ಕಾರ್ಯಕಾರಿ ಹುದ್ದೆಗಳಲ್ಲಿ 5 ವರ್ಷಗಳ ಸೇವೆಯನ್ನು ಪೂರ್ಣಗೊಳಿಸಿದ ಅಧಿಕಾರಿಗಳನ್ನು ಕಡ್ಡಾಯವಾಗಿ ಸಂಬಂಧಿಸಿದ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಿಂದ ವರ್ಗಾಯಿಸಿ, ಇತರೆ ಘಟಕಗಳಲ್ಲಿನ ಹುದ್ದೆಗಳಲ್ಲಿ 5 ವರ್ಷಗಳ ಕಾಲ ನೇಮಿಸಲಾಗುತ್ತದೆ. ಆನಂತರ, ಸಂಬಂಧಿಸಿದ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಹೊರಗಿನ ಘಟಕಗಳಲ್ಲಿ 5 ವರ್ಷಗಳ ಕಾಲ ‘ಕೋಲಿಂಗ್ ಪಿರಿಯಡ್’ ಅನ್ನು ಪೂರ್ಣಗೊಳಿಸಿದ ನಂತರ ಮಾತ್ರ ಅಧಿಕಾರಿಗಳು ಪುನಃ ಆಯಾ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಹುದ್ದೆಗಳ ಪರಿಗಣನೆಗೆ ಅರ್ಹತೆಯನ್ನು ಹೊಂದುತ್ತಾರೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಹೀಗಾಗಿ ಯಾವುದೇ ಅಧಿಕಾರಿಗೆ ಸಂಬಂಧಿಸಿದ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಕಾರ್ಯಕಾರಿ ಹುದ್ದೆಗಳಲ್ಲಿ ಸೇವೆ ಸಲ್ಲಿಸಲು ನಿಗದಿಪಡಿಸಿರುವ 5 ವರ್ಷಗಳ ಗರಿಷ್ಠ ಅವಧಿ ಪೂರ್ಣಗೊಂಡ ನಂತರವೇ ‘ಕೋಲಿಂಗ್ ಪಿರಿಯಡ್’ ಪ್ರಾರಂಭವಾಗುತ್ತದೆ. ಈ ಐದು ವರ್ಷದ ಅವಧಿ ಪೂರ್ಣಗೊಳ್ಳುವ ಮೊದಲು ಕಮಿಷನರೇಟ್ ವ್ಯಾಪ್ತಿಯ ಹೊರಗಿನ ಘಟಕಗಳಲ್ಲಿ ನಿರ್ವಹಿಸಿದ ಸೇವೆಯನ್ನು ಹಾಗೂ ಕಮಿಷನರೇಟ್ ವ್ಯಾಪ್ತಿಯಲ್ಲಿ ಕಾರ್ಯಕಾರ್ಯತರ ಹುದ್ದೆಗಳಲ್ಲಿ ಸಲ್ಲಿಸಿರುವ ಸೇವೆಯನ್ನು ಯಾವುದೇ ಕಾರಣಕ್ಕೂ ‘ಕೋಲಿಂಗ್ ಪಿರಿಯಡ್’ ಎಂದು ಪರಿಗಣಿಸತಕ್ಕದ್ದಲ್ಲ ಅಥವಾ ಲೆಕ್ಕಕ್ಕೆ ತೆಗೆದುಕೊಳ್ಳತಕ್ಕದ್ದಲ್ಲ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

ಪೊಲೀಸ್ ಉಪಾಧೀಕ್ಷಕರ ಮತ್ತು ಪೊಲೀಸ್ ನಿರೀಕ್ಷಕರ ಹುದ್ದೆಗೆ ಮುಂಬಡ್ತಿ ಹೊಂದಿದ ಪ್ರತಿಯೊಬ್ಬ ಅಧಿಕಾರಿಯು ಮುಂಬಡ್ತಿ ದಿನಾಂಕದಿಂದ 2 ವರ್ಷಗಳೊಳಗಾಗಿ ಕಡ್ಡಾಯವಾಗಿ 4 ವಾರಗಳ ಪುನರ್ ಮನನ ತರಬೇತಿಯನ್ನು ಪೂರ್ಣಗೊಳಿಸಬೇಕು. ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸದ ಅಧಿಕಾರಿಯನ್ನು ಕಾರ್ಯಕಾರಿ ಹುದ್ದೆಗೆ ಪರಿಗಣಿಸಲಾಗುವುದಿಲ್ಲ ಎಂದು ತಿಳಿಸಲಾಗಿದೆ.

ಕಾರ್ಯಕಾರಿ ಹುದ್ದೆಗೆ ನಿಯೋಜನೆಗೆ ಅನರ್ಹತೆ:

ಯಾವುದೇ ಪ್ರಮುಖ ಇಲಾಖಾ ವಿಚಾರಣೆ ಬಾಕಿ ಇದ್ದಲ್ಲಿ, ಲೋಕಾಯುಕ್ತ ಪ್ರಕರಣ ಬಾಕಿ ಇದ್ದಲ್ಲಿ, ಯಾವುದೇ ಅಪರಾಧ ಪ್ರಕರಣ ತನಿಖೆ/ವಿಚಾರಣೆಯಲ್ಲಿದ್ದಲ್ಲಿ ಅಥವಾ ಪೊಲೀಸ್ ಸಿಬ್ಬಂದಿ ಮಂಡಳಿಯು ಕಾರ್ಯಕಾರಿ ಹುದ್ದೆಗೆ ಅನರ್ಹರೆಂದು ಪರಿಗಣಿಸಿದ್ದಲ್ಲಿ, ಅಂತಹ ಸಂದರ್ಭಗಳಲ್ಲಿ ಯಾವುದೇ ಪೊಲೀಸ್ ಉಪಾಧೀಕ್ಷಕರು ಮತ್ತು ಪೊಲೀಸ್ ನಿರೀಕ್ಷಕರನ್ನು ಕಾರ್ಯಕಾರಿ ಹುದ್ದೆಗೆ ನಿಯೋಜಿಸಲಾಗುವುದಿಲ್ಲ ಎಂದು ಆದೇಶದಲ್ಲಿ ತಿಳಿಸಿದೆ.

ಕಾರ್ಯಕಾರಿ ಹುದ್ದೆಗೆ ನಿಯೋಜಿಸಲ್ಪಟ್ಟ ಪೊಲೀಸ್ ಉಪಾಧೀಕ್ಷಕರು ಕನಿಷ್ಠ 2 ವರ್ಷಗಳ ಸೇವೆಯನ್ನು ಪೂರ್ಣಗೊಳಿಸಿದ ನಂತರ ಕಡ್ಡಾಯವಾಗಿ ಕನಿಷ್ಠ 2 ವರ್ಷಗಳ ಕಾಲ ಕಾರ್ಯಕಾರೇತರ ಹುದ್ದೆಯಲ್ಲಿಯೂ ಕರ್ತವ್ಯ ನಿರ್ವಹಿಸಬೇಕು. ಹೀಗೆ ಕಾರ್ಯಕಾರೇತರ ಹುದ್ದೆಯಲ್ಲಿ ಕನಿಷ್ಠ ಎರಡು ವರ್ಷಗಳ ಸೇವೆಯನ್ನು ಪೂರ್ಣಗೊಳಿಸಿದ ನಂತರ ಮಾತ್ರ ಅಧಿಕಾರಿಗಳು ಪುನಃ ಕಾರ್ಯಕಾರಿ ಹುದ್ದೆಗೆ ನಿಯೋಜನೆಗೆ ಅರ್ಹರಾಗಿರುತ್ತಾರೆ ಎಂದು ಆದೇಶದಲ್ಲಿ ತಿಳಿಸಿದೆ.

ಕಾರ್ಯಕಾರಿ ಹುದ್ದೆಗೆ ನಿಯೋಜಿಸಲ್ಪಟ್ಟ ಪೊಲೀಸ್ ನಿರೀಕ್ಷಕರು ಕನಿಷ್ಠ 2 ವರ್ಷಗಳ ಸೇವೆಯನ್ನು ಪೂರ್ಣಗೊಳಿಸಿದ ನಂತರ ಕಡ್ಡಾಯವಾಗಿ ಕನಿಷ್ಠ ಒಂದು ವರ್ಷದ ಕಾಲ ಕಾರ್ಯಕಾರೇತರ ಹುದ್ದೆಯಲ್ಲಿಯೂ ಕರ್ತವ್ಯ ನಿರ್ವಹಿಸಬೇಕು. ಹೀಗೆ ಕಾರ್ಯಕಾರೇತರ ಹುದ್ದೆಯಲ್ಲಿ ಕನಿಷ್ಠ ಒಂದು ವರ್ಷದ ಸೇವೆಯನ್ನು ಪೂರ್ಣಗೊಳಿಸಿದ ನಂತರ ಮಾತ್ರ ಅಧಿಕಾರಿಗಳು ಪುನಃ ಕಾರ್ಯಕಾರಿ ಹುದ್ದೆಗೆ ನಿಯೋಜನೆಗೆ ಅರ್ಹರಾಗಿರುತ್ತಾರೆ ಎಂದು ರಾಜೇಂದರ್ ಕುಮಾರ್ ಕಟಾರಿಯಾ ಆದೇಶದಲ್ಲಿ ತಿಳಿಸಿದ್ದಾರೆ.

Tags

DySPPolice Inspector
share
ವಾರ್ತಾಭಾರತಿ
ವಾರ್ತಾಭಾರತಿ
Next Story
X