Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕೆಲವು ದೇಶಗಳಲ್ಲಿ E80 ಇದೆ: ಎಥೆನಾಲ್...

ಕೆಲವು ದೇಶಗಳಲ್ಲಿ E80 ಇದೆ: ಎಥೆನಾಲ್ ಮಿಶ್ರಣ ಸಮರ್ಥಿಸಿಕೊಂಡ ಆರ್.ಅಶೋಕ್

‘ನಮ್ಮ ವಾಹನಗಳು E20ಗೆ ಹೊಂದುತ್ತಿಲ್ಲ, ಇನ್ನು E80 ಹೇಗೆ?’ಎಂದು ಪ್ರಶ್ನಿಸಿದ ಜನರು

ವಾರ್ತಾಭಾರತಿವಾರ್ತಾಭಾರತಿ11 Nov 2026 11:55 PM IST
share
ಕೆಲವು ದೇಶಗಳಲ್ಲಿ E80 ಇದೆ: ಎಥೆನಾಲ್ ಮಿಶ್ರಣ ಸಮರ್ಥಿಸಿಕೊಂಡ ಆರ್.ಅಶೋಕ್

ಬೆಂಗಳೂರು : ಕರ್ನಾಟಕದಲ್ಲಿ ಪೆಟ್ರೋಲ್‌ಗೆ ಶೇ.20ಕ್ಕಿಂತ ಹೆಚ್ಚು ಎಥೆನಾಲ್ ಮಿಶ್ರಣ ಮಾಡಲಾಗುತ್ತಿದೆ ಎಂಬ ರಾಜ್ಯ ಸರ್ಕಾರದ ಆರೋಪದ ನಡುವೆ, ಎಥೆನಾಲ್ ಮಿಶ್ರಣ ನೀತಿಯನ್ನು ವಿಪಕ್ಷ ನಾಯಕ ಆರ್. ಅಶೋಕ್ ಸಮರ್ಥಿಸಿಕೊಂಡಿದ್ದಾರೆ. ಮುಂದುವರಿದ ದೇಶಗಳ ಕೆಲವು ಭಾಗಗಳಲ್ಲಿ ಶೇ.80ರಷ್ಟು ಎಥೆನಾಲ್ ಬಳಕೆಯಾಗುತ್ತಿದೆ ಎಂದು ಹೇಳಿರುವ ಅವರು, ಎಥೆನಾಲ್ ಮಿಶ್ರಣವನ್ನು ವಿರೋಧಿಸುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಿಜೆಪಿ ವತಿಯಿಂದ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಪೆಟ್ರೋಲ್ಗಿಂತ ಎಥೆನಾಲ್ ಬೆಲೆ ಹೆಚ್ಚಿದೆ. ಪೆಟ್ರೋಲ್ ಬೆಲೆ ಲೀಟರ್‌ಗೆ 54 ರೂ. ಇದ್ದರೆ, ಎಥೆನಾಲ್ ಬೆಲೆ 56 ರೂ. ಇದೆ. ಪೆಟ್ರೋಲ್ ಬೆಲೆಗಿಂತ ಎಥೆನಾಲ್ ಬೆಲೆ ಹೆಚ್ಚಿದ್ದರೂ ಅದನ್ನು ಪೆಟ್ರೋಲ್ ಜೊತೆ ಮಿಶ್ರಣ ಮಾಡಲಾಗುತ್ತಿದೆ.

ಅಮೆರಿಕ, ಇಟಲಿ, ಜರ್ಮನಿ ದೇಶಗಳನ್ನು ಪ್ರಸ್ತಾಪಿಸಿದ ಆರ್‌ ಅಶೋಕ್‌, ಕೆಲವು ದೇಶಗಳು ತಮ್ಮ ಆರ್ಥಿಕತೆಯನ್ನು ಬಲಪಡಿಸುವ ಹಾಗೂ ರೈತರ ಆದಾಯ ಹೆಚ್ಚಿಸುವ ಉದ್ದೇಶದಿಂದ ಪೆಟ್ರೋಲ್‌ಗೆ ಶೇ.80ರಷ್ಟು ಎಥೆನಾಲ್ ಮಿಶ್ರಣ ಮಾಡುತ್ತಿವೆ. ಭಾರತದಲ್ಲೂ ಪ್ರಸ್ತುತ ಶೇ.20ರಷ್ಟು ಎಥೆನಾಲ್ ಮಿಶ್ರಣ ಮಾಡಲಾಗುತ್ತಿದ್ದು, ಇದರಿಂದ ಬರುವ ಸಂಪೂರ್ಣ ಹಣ ರೈತರಿಗೆ ತಲುಪುತ್ತಿದೆ. ಆದರೆ, ರೈತರಿಗೆ ಅನುಕೂಲವಾಗುವ ಈ ಕ್ರಮಕ್ಕೂ ಕಾಂಗ್ರೆಸ್ ಸರ್ಕಾರ ಅಡ್ಡಿಪಡಿಸುತ್ತಿದೆ ಎಂದು ಆರೋಪಿಸಿದರು.

ರಾಜ್ಯದಲ್ಲಿ ಬೆಲೆ ಏರಿಕೆ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳಿಂದ ಜನರ ಗಮನ ಬೇರೆಡೆ ಸೆಳೆಯಲು ಕಾಂಗ್ರೆಸ್ ಸರ್ಕಾರ ಎಥೆನಾಲ್ ಮಿಶ್ರಣದ ವಿಚಾರವನ್ನು ವಿರೋಧಿಸುತ್ತಿದೆ ಎಂದು ಅಶೋಕ್ ಆರೋಪಿಸಿದ್ದಾರೆ.

ಆದರೆ, ಅಶೋಕ್ ಅವರ ಹೇಳಿಕೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಹಲವು ಬಳಕೆದಾರರು ವಾಹನಗಳ ಇಂಧನ ಹೊಂದಾಣಿಕೆಯ ವಿಚಾರ ಮುಂದಿಟ್ಟುಕೊಂಡು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

‘E20 ಯನ್ನೇ ತಡೆದುಕೊಳ್ಳದ ವಾಹನಗಳು E80 ಗೆ ಹೇಗೆ ಹೊಂದಿಕೊಳ್ಳುತ್ತವೆ?’ ಆರ್‌ ಅಶೋಕ್ ಅವರ ವಿಡಿಯೋ ಹಂಚಿಕೊಂಡು ವಿಪಕ್ಷ ನಾಯಕರ ಹೇಳಿಕೆಯನ್ನು ಹಲವು ಸಾಮಾಜಿಕ ಜಾಲತಾಣ ಬಳಕೆದಾರರು ಪ್ರಶ್ನಿಸಿದ್ದಾರೆ. ವಾಹನಗಳು ಎಷ್ಟು ಪ್ರಮಾಣದ ಎಥೆನಾಲ್ ಮಿಶ್ರಿತ ಪೆಟ್ರೋಲ್‌ಗೆ ಹೊಂದಿಕೊಳ್ಳುತ್ತವೆ ಎಂಬುದನ್ನು ಗಮನಿಸಬೇಕು. ಎಥೆನಾಲ್ ಮಿಶ್ರಣದಿಂದ ಬರುವ ಸಂಪೂರ್ಣ ಹಣ ರೈತರಿಗೆ ತಲುಪುತ್ತಿದೆ ಎಂಬ ಅಶೋಕ್ ಅವರ ಹೇಳಿಕೆಯನ್ನೂ ಕೆಲವರು ಪ್ರಶ್ನಿಸಿದ್ದಾರೆ.

ಪರಮತಪಸ್ವಿ ಎಂಬ ಬಳಕೆದಾರರು, ಎಥೆನಾಲ್ ನೀತಿಯಿಂದ ರೈತರಿಗೆ ಲಾಭವಾಗುತ್ತಿದೆ ಎಂಬ ವಾದವನ್ನು ತಳ್ಳಿಹಾಕಿ, ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಪುತ್ರನ ಉದ್ಯಮದೊಂದಿಗೆ ಈ ವಿಚಾರವನ್ನು ತಳುಕು ಹಾಕಿದ್ದಾರೆ. ಎಥೆನಾಲ್‌ ಮಿಶ್ರಣದಿಂದ ನಿತಿನ್‌ ಗಡ್ಕರಿ ಮಗನಿಗೆ ಹಣ ಹೋಗ್ತಿದೆ ಎಂದಿದ್ದಾರೆ.

ಇನ್ನು, ಅಶೋಕ್ ಅವರ ಹೇಳಿಕೆಗಳಿಗೆ ಪ್ರತಿಕ್ರಿಯಿಸಿರುವ ಕೆಲವರು, ಅವರು ವಾಸ್ತವಾಂಶಗಳನ್ನು ಪರಿಶೀಲಿಸದೆ ಮಾತನಾಡುತ್ತಿದ್ದಾರೆ ಎಂದು ಟೀಕಿಸಿ, ‘ವಾಟ್ಸ್ಆ್ಯಪ್ ಯೂನಿವರ್ಸಿಟಿ’ಯಿಂದ ಪಡೆದ ಮಾಹಿತಿಯನ್ನು ಹಂಚಿಕೊಳ್ಳುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ರಿಯಲ್‌ಎಂಆರ್‌ಐಜಿ ಎಂಬವರು ‘ಪೂರ್ತಿ ಹಣ ರೈತರಿಗೆ ಹೋಗುತ್ತಿದೆ’ ಎಂಬ ಅಶೋಕ್ ಅವರ ಹೇಳಿಕೆಯನ್ನು ಗುರಿಯಾಗಿಸಿಕೊಂಡು ವ್ಯಂಗ್ಯಾತ್ಮಕ ವಿಡಿಯೋ ಮೀಮ್ ಹಂಚಿಕೊಂಡಿದ್ದಾರೆ. ಮತ್ತೊಬ್ಬ ಬಳಕೆದಾರರು E50 ಜಾರಿಗೆ ತರಲಿ ಎಂದು ವ್ಯಂಗ್ಯವಾಡಿದ್ದಾರೆ.

ರೈತರ ಆದಾಯ ಹೆಚ್ಚಿಸಿ, ದೇಶದ ಆರ್ಥಿಕತೆಯನ್ನು ಬಲಪಡಿಸುವ ಎಥನಾಲ್ ಉತ್ಪಾದನೆಗೆ ಪ್ರೋತ್ಸಾಹ ನೀಡುವ ಬದಲು, ರಾಜಕೀಯ ಕಾರಣಗಳಿಗಾಗಿ ಅದನ್ನು ವಿರೋಧಿಸುವುದು ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ಮನಸ್ಥಿತಿಗೆ ಸಾಕ್ಷಿ! https://t.co/zm5KktPOd5

— R. Ashoka (@RAshokaBJP) November 11, 2026

Tags

R. AshokE20 fuel
share
ವಾರ್ತಾಭಾರತಿ
ವಾರ್ತಾಭಾರತಿ
Next Story
X