Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಶಿಕ್ಷಣ ನಮ್ಮ‌ ಸರಕಾರದ ಆದ್ಯತಾ...

ಶಿಕ್ಷಣ ನಮ್ಮ‌ ಸರಕಾರದ ಆದ್ಯತಾ ಕಾರ್ಯಕ್ರಮ: ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ5 Sept 2025 2:49 PM IST
share
ಶಿಕ್ಷಣ ನಮ್ಮ‌ ಸರಕಾರದ ಆದ್ಯತಾ ಕಾರ್ಯಕ್ರಮ: ಸಿಎಂ ಸಿದ್ದರಾಮಯ್ಯ
ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ಪ್ರಶಸ್ತಿ ಪ್ರಧಾನ

ಬೆಂಗಳೂರು, ಸೆ.5 : ಶಿಕ್ಷಣ ನಮ್ಮ‌ ಸರಕಾರದ ಆದ್ಯತಾ ಕಾರ್ಯಕ್ರಮವಾಗಿದ್ದು, ವರ್ಷಕ್ಕೆ 65 ಸಾವಿರ ಕೋಟಿ ರೂ.ಯನ್ನು ಸರಕಾರ ಶಿಕ್ಷಣಕ್ಕೆ ಖರ್ಚು ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ಪ್ರಶಸ್ತಿ ನೀಡಿ ಅಭಿನಂದಿಸಿ ಮಾತನಾಡಿದರು.

ನಾನು ರಾಜಪ್ಪ ಮೇಸ್ಟ್ರಿಂದ ಶಾಲಾ ಶಿಕ್ಷಣವನ್ನು ಹಾಗೂ ಪ್ರೊ.ನಂಜುಂಡಸ್ವಾಮಿ ಅವರಿಂದ ರಾಜಕೀಯ ಪಾಠ ಕಲಿತೆ ಎನ್ನುವ ಮೂಲಕ ತಮ್ಮ ಶಿಕ್ಷಕರನ್ನು ಸ್ಮರಿಸಿದ ಸಿ.ಎಂ.ಸಿದ್ದರಾಮಯ್ಯ ಅವರು ,ಇಬ್ಬರಿಗೂ ಧನ್ಯವಾದ ಹೇಳಿದರು.

ನಮ್ಮ ಸಮಾಜದ ಸಮಸ್ಯೆಗಳಿಗೆ ಸ್ಪಂದಿಸುವ ಮನಸ್ಥಿತಿಯನ್ನು ರೂಪಿಸುವುದು ವೈಚಾರಿಕ ಶಿಕ್ಷಣ. ಕೇವಲ ಪಾತ್ರೆ ತುಂಬಿಸುವುದು ಶಿಕ್ಷಣ ಅಲ್ಲ. ಮಕ್ಕಳಲ್ಲಿ ಅರಿವಿನ ಕಿಡಿ ಹೊತ್ತಿಸುವುದೇ ಶಿಕ್ಷಣದ ಉದ್ದೇಶ ಮತ್ತು ಮಹತ್ವವಾಗಿದೆ. ಇಂಥಹ ಶಿಕ್ಷಣ ನಮ್ಮ ಸರ್ಕಾರದ ಗುರಿ ಎಂದರು.

ಮೊದಲೆಲ್ಲಾ ಶೂದ್ರರಿಗೆ ವಿದ್ಯೆ ಕಲಿಯುವ ಅವಕಾಶ ಇರಲಿಲ್ಲ. ಸಂವಿಧಾನ ಎಲ್ಲರಿಗೂ ಕಡ್ಡಾಯ ಶಿಕ್ಷಣದ ಹಕ್ಕು ನೀಡಿದೆ. ಆದ್ದರಿಂದ, ನಮ್ಮ ಸರ್ಕಾರ ಬಂದ ಮೇಲೆ ಸಂವಿಧಾನದ ಪೀಠಿಕೆಯನ್ನು ಅರ್ಥೈಸುವ ಕೆಲಸ ಮಾಡುತ್ತಿದೆ. ಸ್ವಾತಂತ್ರ್ಯ, ಸಮಾನತೆ, ಬ್ರಾತೃತ್ವ ಸಂವಿಧಾನದ ಮೌಲ್ಯಗಳಾಗಿದ್ದು, ಇವನ್ನು ಬದುಕಿನಲ್ಲಿ ಅಳವಡಿಸಿಕೊಂಡರೆ ಸಮಾಜದಲ್ಲಿ ಮನುಷ್ಯತ್ವ ಹೊಂದಿರುವ ಅತ್ಯುನ್ನತ ನಾಗರಿಕರನ್ನು ಸೃಷ್ಟಿಸಬಹುದು. ಇದನ್ನು ಶಿಕ್ಷಕರು ಅರ್ಥ ಮಾಡಿಕೊಂಡು ನಾಗರಿಕ ಸಮಾಜ ರೂಪಿಸಬೇಕು ಎಂದರು.

ಜಾತಿ ವ್ಯವಸ್ಥೆ ಇರುವ ನಮ್ಮ ಸಮಾಜದಲ್ಲಿ ಬದಲಾವಣೆ ಆಗಿ ಮಾನವೀಯ ವ್ಯವಸ್ಥೆ ರೂಪುಗೊಳ್ಳಬೇಕು. ಶಿಕ್ಷಣ ಕಲಿತು ಜಾತಿ ಆಚರಿಸುವುದು, ಕಂದಾಚಾರ-ಮೌಡ್ಯ ಆಚರಿಸುವುದು ಶಿಕ್ಷಣಕ್ಕೆ ಬಗೆಯುವ ದ್ರೋಹ. ವೈಚಾರಿಕತೆ, ವೈಜ್ಞಾನಿಕತೆ, ಪರಧರ್ಮ ಸಹಿಷ್ಣುತೆ ಮೈಗೂಡಿಸಿಕೊಳ್ಳುವ ಶಿಕ್ಷಣ ಕೊಡುವ ನೈತಿಕ ಮತ್ತು ವೃತ್ತಿಪರ ಹೊಣೆಗಾರಿಕೆ ಶಿಕ್ಷಕರ ಮೇಲಿದೆ ಎಂದರು.

ಜಾತಿ ವ್ಯವಸ್ಥೆ ಕಾರಣಕ್ಕೆ ಅಸಮಾನ ಸಮಾಜ ನಿರ್ಮಾಣ ಆಗಿ ಅವಕಾಶಗಳು ಎಲ್ಲರಿಗೂ ಸಿಗುತ್ತಿಲ್ಲ. ಶೂದ್ರರ ಜೊತೆಗೆ ಮಹಿಳೆಯರನ್ನೂ ಶಿಕ್ಷಣದಿಂದ ಹೊರಗಿಡಲಾಗಿತ್ತು. ಆದರೆ ಈಗ ಶಿಕ್ಷಣದ ಹಕ್ಕಿನ‌ ಕಾರಣಕ್ಕೆ ಅವಕಾಶ ಪಡೆದು ಹೆಚ್ಚೆಚ್ಚು ರ‍್ಯಾಂಕ್ ಪಡೆಯುತ್ತಿರುವವರಲ್ಲಿ ಹೆಣ್ಣು ಮಕ್ಕಳೇ ಹೆಚ್ಚಾಗಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಡಾ.ಸರ್ವಪಲ್ಲಿ ರಾಧಾಕೃಷ್ಣ ಅವರು ಅತ್ಯಂತ ನೈತಿಕ ಮೌಲ್ಯಗಳುಳ್ಳ ಶಿಕ್ಷಕರು, ರಾಷ್ಟ್ರಪತಿಗಳು ಆಗಿದ್ದರು. ಇವರ ಆದರ್ಶಗಳನ್ನು ಪಾಲಿಸುವುದೇ ಅವರಿಗೆ ಸಲ್ಲಿಸುವ ಅತ್ಯುನ್ನತ ಗೌರವ ಎಂದರು.

ಮಧು ಬಂಗಾರಪ್ಪ ಮತ್ತು ಎಂ.ಸಿ.ಸುಧಾಕರ್ ಇಬ್ಬರೂ ನಮ್ಮ ಸರಕಾರದ ಅತ್ಯಂತ ಕ್ರಿಯಾಶೀಲ ಯುವ ಸಚಿವರು. ಇವರು ತಮ್ಮ ಜವಬ್ದಾರಿಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಿರ್ವಹಿಸುತ್ತಾರೆ ಎನ್ನುವ ಭರವಸೆ ನನಗಿದೆ ಎಂದರು.

ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ನಡವಳಿಕೆಗಳು ಮಕ್ಕಳ ಮೇಲೆ ಅಪಾರ ಪ್ರಭಾವ ಬೀರುತ್ತವೆ. ಶಿಕ್ಷಕರು ಅತ್ಯುನ್ನತ ಮಾನವೀಯ ಮತ್ತು ನಾಗರಿಕ ಮೌಲ್ಯಗಳನ್ನು ಪಾಲಿಸಬೇಕು ಎಂದರು.

ಮೊಬೈಲ್ ಬಿಡಿ-ಪುಸ್ತಕ ಹಿಡಿ: ಶಿಕ್ಷಕರಿಗೆ-ಮಕ್ಕಳಿಗೆ ಕರೆ ನೀಡಿದ ಸಿಎಂ :

ಮೊಬೈಲ್ ಗೀಳು ಈಗ ಮಕ್ಕಳಲ್ಲಿ ಹೆಚ್ಚಾಗಿದೆ. ಈ ಗೀಳಿನಿಂದ ಮಕ್ಕಳನ್ನು ಹೊರಗೆ ತರುವ ಕೆಲಸವನ್ನು ಶಿಕ್ಷಕರು ಪರಿಣಾಮಕಾರಿಯಾಗಿ ಮಾಡಬೇಕಿದೆ. ಆದ್ದರಿಂದ, "ಮೊಬೈಲ್ ಬಿಡಿ-ಪುಸ್ತಕ ಹಿಡಿ" ಎನ್ನುವ ಮೌಲ್ಯವನ್ನು ಪ್ರತೀ ಶಾಲೆ ಮತ್ತು ಮನೆಗಳಲ್ಲೂ ಜಾರಿ ಆಗಲಿ ಎಂದು ಶಿಕ್ಷಕರಿಗೆ-ಮಕ್ಕಳಿಗೆ ಸಿಎಂ ಕರೆ ನೀಡಿದರು.

ಸಾವಿತ್ರಿ ಫುಲೆ-ಫಾತಿಮಾ ಶೇಕ್ ರನ್ನು ಸ್ಮರಿಸಿದ ಸಿಎಂ :

ಸಾವಿತ್ರಿ ಫುಲೆ ಮತ್ತು ಫಾತಿಮಾ ಶೇಕ್ ಇಬ್ಬರೂ ದಮನಿತ ಮಹಿಳೆಯರಿಗೆ ಶಿಕ್ಷಣ ಕೊಟ್ಟ ಮೊದಲ ಶಿಕ್ಷಕಿಯರು. ಇವರಿಗೆ ಸೆಗಣಿಯನ್ನೆಲ್ಲಾ ಎಸೆದು ಅವಮಾನಿಸಲಾಗಿತ್ತು. ಈ ಎಲ್ಲಾ ಅವಮಾನ ಸಹಿಸಿಕೊಂಡು ಶಿಕ್ಷಣ ನೀಡಿದರು ಎಂದು ಸಿಎಂ ಸ್ಮರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X