Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಾಜ್ಯದಲ್ಲಿ ಬಿಸಿಗಾಳಿಯ ಪರಿಣಾಮ : ಒಂದು...

ರಾಜ್ಯದಲ್ಲಿ ಬಿಸಿಗಾಳಿಯ ಪರಿಣಾಮ : ಒಂದು ವಾರದವರೆಗೆ ಎಚ್ಚರಿಕೆ ವಹಿಸಲು ಹವಮಾನ ಇಲಾಖೆ ಸೂಚನೆ

ವಾರ್ತಾಭಾರತಿವಾರ್ತಾಭಾರತಿ3 April 2024 9:10 PM IST
share
ರಾಜ್ಯದಲ್ಲಿ ಬಿಸಿಗಾಳಿಯ ಪರಿಣಾಮ : ಒಂದು ವಾರದವರೆಗೆ ಎಚ್ಚರಿಕೆ ವಹಿಸಲು ಹವಮಾನ ಇಲಾಖೆ ಸೂಚನೆ

ಬೆಂಗಳೂರು: ಎಪ್ರಿಲ್ ಮೊದಲ ಮತ್ತು ಎರಡನೆಯ ವಾರದಲ್ಲಿ ರಾಜ್ಯದಲ್ಲಿ ಬಿಸಿಗಾಳಿಯ ಪರಿಣಾಮ ಇರಲಿದ್ದು, ಇನ್ನೂ ಒಂದು ವಾರಗಳ ಕಾಲ ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆಯಿಂದ ಸೂಚನೆ ನೀಡಿದೆ.

ರಾಜ್ಯದ ಉತ್ತರ ಒಳನಾಡಿನ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಚಿತ್ರದುರ್ಗ, ದಾವಣಗೆರೆ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಬೆಂಗಳೂರು ನಗರ ಮತ್ತು ಗ್ರಾಮಾಂತರ, ಚಾಮರಾಜನಗರ ಜಿಲ್ಲೆಗಳಲ್ಲಿ ಬಿಸಿಗಾಳಿಯ ಎಚ್ಚರಿಕೆ ನೀಡಿದೆ. ಗರಿಷ್ಠ ತಾಪಮಾನ ಮಾತ್ರ ಅಲ್ಲದೇ ಕನಿಷ್ಠ ತಾಪಮಾನದಲ್ಲೂ ಏರಿಕೆಯಾಗುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ಬುಧವಾರದಂದು 37.2 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದ್ದು, ಇಂದು (ಎ.4) 38 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆ ಇದೆ. ಬರಗಾಲ, ಜಲಕ್ಷಾಮಕ್ಕೆ ಸಿಲುಕಿ ತತ್ತರಿಸುತ್ತಿರುವ ನಗರಕ್ಕೆ ಇದರಿಂದ ಮತ್ತೊಂದು ಆಘಾತ ಎದುರಾಗಿದೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಬಿಸಿ ಮತ್ತು ಆದ್ರತೆಯ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ 5 ದಿನಗಳಲ್ಲಿ ಬಾಗಲಕೋಟೆ, ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನವು 2 ಡಿಗ್ರಿ ಸೆಲ್ಸಿಯಸ್ ಗೆ ಏರಿಕೆಯಾಗಲಿದೆ.

ಆರೋಗ್ಯ ಸಲಹೆ: ರಕ್ತದೊತ್ತಡ, ಹೃದಯ ಸಂಬಂಧಿ ಖಾಯಿಲೆ ಇರುವವರು, ಗರ್ಭಿಣಿಯರು, ವೃದ್ಧರು ಮತ್ತು ಮಕ್ಕಳು ರಣ ಬಿಸಿಲಿಗೆ ಮೈ ಒಡ್ಡಬಾರದು. ದೇಹದ ಉಷ್ಣತೆಯು 40 ಡಿಗ್ರಿ ಸೆಲ್ಸಿಯಸ್ ಅಥವಾ ಅದಕ್ಕಿಂತ ಹೆಚ್ಚು ಏರಿದರೆ ಅತ್ಯಂತ ಗಂಭೀರ ಸಮಸ್ಯೆ ಎದುರಾಗುವ ಸಂಭವ ಇದೆ. ಕೆಲವು ಸಂದರ್ಭಗಳಲ್ಲಿ ಹೀಟ್ ಸ್ಟೋಕ್ ಆಗುವ ಸಾಧ್ಯತೆ ಇದ್ದು, ಇದು ಜೀವಕ್ಕೆ ಕುತ್ತು ತರಲಿದೆ. ಹೀಗಾಗಿ ಮುಂದಿನ ಕೆಲವು ದಿನ ತಾಪಮಾನ ಇಳಿಕೆಯವರೆಗೂ 11 ರಿಂದ 4 ಗಂಟೆಯವರೆಗೂ ಹೆಚ್ಚು ಬಿಸಿಲಿಗೆ ಮೈ ಒಡ್ಡದೆ ಇರುವಂತೆ ಹವಾಮಾನ ಇಲಾಖೆ ಸಲಹೆ ನೀಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X