ಮೇ 28ರಂದು ರಾಜ್ಯಾದ್ಯಂತ ಬಕ್ರೀದ್ ಆಚರಣೆಗೆ ನಿರ್ಧಾರ : ರಾಜ್ಯ ಚಂದ್ರ ದರ್ಶನ ಸಮಿತಿ

ಸಾಂದರ್ಭಿಕ ಚಿತ್ರ
ಬೆಂಗಳೂರು : ದೇಶದ ಯಾವುದೇ ರಾಜ್ಯದಲ್ಲಿ ದುಲ್ಹಜ್ ಮಾಸದ ಚಂದ್ರ ದರ್ಶನವಾದ ಮಾಹಿತಿ ಲಭ್ಯವಾಗದ ಹಿನ್ನೆಲೆಯಲ್ಲಿ ಮೇ 28ರಂದು ಬಕ್ರೀದ್ ಹಬ್ಬ ಆಚರಣೆ ಮಾಡಲು ರಾಜ್ಯ ಚಂದ್ರ ದರ್ಶನ ಸಮಿತಿ ನಿರ್ಧರಿಸಿದೆ. ಆದರೆ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಖಾಝಿಗಳಿಂದ ಈ ಬಗ್ಗೆ ಅಧಿಕೃತ ಪ್ರಕಟನೆ ಬಂದಿಲ್ಲ.
ರವಿವಾರ ಸಂಜೆ ನಗರದ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ರಾಜ್ಯ ವಕ್ಫ್ ಮಂಡಳಿಯ ಕಚೇರಿಯಲ್ಲಿ ಸಭೆ ನಡೆಸಿದ ರಾಜ್ಯ ಚಂದ್ರ ದರ್ಶನ ಸಮಿತಿಯ ಸದಸ್ಯರು, ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಬೇರೆ ಬೇರೆ ರಾಜ್ಯಗಳ ಚಂದ್ರ ದರ್ಶನ ಸಮಿತಿಯಿಂದ ಚಂದ್ರ ದರ್ಶನಕ್ಕೆ ಸಂಬಂಧಿಸಿದ ಮಾಹಿತಿ ಕಲೆ ಹಾಕಿದ ಬಳಿಕ ಈ ನಿರ್ಧಾರ ಪ್ರಕಟಿಸಲಾಗಿದೆ.
Next Story




