ಕರಾವಳಿ ಜಿಲ್ಲೆ ಹೊರತುಪಡಿಸಿ ರಾಜ್ಯಾದ್ಯಂತ ಮಾ.21ರಂದು ಈದುಲ್ ಫಿತ್ರ್ ಆಚರಣೆ

ಸಾಂದರ್ಭಿಕ ಚಿತ್ರ | PC : Gemini AI
ಬೆಂಗಳೂರು : ಕರಾವಳಿ ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯಾದ್ಯಂತ ಈದುಲ್ ಫಿತ್ರ್ ಅನ್ನು ಮಾ.21ರಂದು ಆಚರಿಸಲು ರಾಜ್ಯ ಚಂದ್ರ ದರ್ಶನ ಸಮಿತಿ ನಿರ್ಧರಿಸಿದೆ.
ಶವ್ವಾಲ್ನ ಪ್ರಥಮ ಚಂದ್ರದರ್ಶನ ಇಂದು(ಗುರುವಾರ) ಮುಸ್ಸಂಜೆ ಆಗಿರುವುದರಿಂದ ದ.ಕ.ಜಿಲ್ಲೆಯಲ್ಲಿ ಶುಕ್ರವಾರ(ಮಾ.20) ಈದುಲ್ ಫಿತ್ರ್ ಆಚರಿಸಲು ದ.ಕ.ಜಿಲ್ಲಾ ಖಾಝಿ ಅಲ್ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ಕರೆ ನೀಡಿದ್ದಾರೆ ಎಂದು ಮಸ್ಜಿದ್ ಝೀನತ್ ಭಕ್ಷ್ ಕೋಶಾಧಿಕಾರಿ ಎಸ್.ಎಂ. ರಶೀದ್ ಹಾಜಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





