Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ವೃದ್ಧ ಪೋಷಕರ ಆರೈಕೆ ಮಕ್ಕಳ ಹೊಣೆ:...

ವೃದ್ಧ ಪೋಷಕರ ಆರೈಕೆ ಮಕ್ಕಳ ಹೊಣೆ: ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ13 Nov 2023 5:46 PM IST
share
ವೃದ್ಧ ಪೋಷಕರ ಆರೈಕೆ ಮಕ್ಕಳ ಹೊಣೆ: ಹೈಕೋರ್ಟ್

ಬೆಂಗಳೂರು, ನ.13: ವಯಸ್ಸಾದ ಪೋಷಕರನ್ನು ಆರೈಕೆ ಮಾಡುವ ಜವಾಬ್ದಾರಿ ಕಾನೂನು ಮತ್ತು ನೈತಿಕತೆಯು ಮಕ್ಕಳ ಮೇಲಿರುತ್ತದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ತಂದೆಯಿಂದ ಆಸ್ತಿಯನ್ನು ಉಡುಗೊರೆಯಾಗಿ ಪಡೆದ ನಂತರ ಹಲ್ಲೆ ನಡೆಸಿ ಮನೆಯಿಂದ ಹೊರಹಾಕಿದ್ದ ಪುತ್ರಿ ಮತ್ತು ಅಳಿಯನ ವರ್ತನೆ ಗಮನಿಸಿ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ, ಪೋಷಕರು ಆಸ್ತಿಯನ್ನು ಉಡುಗೊರೆಯಾಗಿ ನೀಡಿದಾಗ ಈ ಜವಾಬ್ದಾರಿ ಮತ್ತಷ್ಟು ಹೆಚ್ಚಾಗಲಿದೆ ಎಂದು ಆದೇಶಿಸಿದೆ.

ಅಲ್ಲದೆ, ತಂದೆಯಿಂದ ಆಸ್ತಿಯನ್ನು ಗಿಫ್ಟ್ ಡೀಡ್(ಉಡುಗೊರೆ ಕ್ರಯ) ಆಗಿ ಪಡೆದಿರುವುದನ್ನು ಅಮಾನ್ಯಗೊಳಿಸಿದ್ದ ತುಮಕೂರು ವಲಯದ ಪೋಷಕರ ಕಲ್ಯಾಣ ಮತ್ತು ಹಿರಿಯ ನಾಗರಿಕರ ನಿರ್ವಹಣೆ ಕಾಯ್ದೆಯಡಿಯ ನ್ಯಾಯಾಧಿಕರಣದ ವಿಭಾಗಾಧಿಕಾರಿಯ ಆದೇಶ ಮತ್ತು ಅದನ್ನು ಎತ್ತಿಹಿಡಿದಿದ್ದ ಹೈಕೋರ್ಟ್ ಏಕ ಸದಸ್ಯ ಪೀಠದ ತೀರ್ಪನ್ನು ವಿಭಾಗೀಯ ಪೀಠ ಪುರಸ್ಕರಿಸಿದೆ.

ಪೋಷಕರನ್ನು ನೋಡಿಕೊಳ್ಳುವುದು ಮಕ್ಕಳ ಹೊಣೆಗಾರಿಕೆಯಾಗಿದೆಯೇ ಹೊರತು ದಯೆ-ದಾನದ ವಿಚಾರವಲ್ಲ, ವೃದ್ಧಾಪ್ಯದಲ್ಲಿ ತಂದೆ-ತಾಯಿಯನ್ನು ಆರೈಕೆ ಮಾಡುವುದು ಮಕ್ಕಳ ಶಾಸನಬದ್ಧ ಜವಾಬ್ದಾರಿ. ಪ್ರಸ್ತುತದ ಪ್ರಕರಣದಲ್ಲಿ ಪುತ್ರಿ ಪೋಷಕರ ಆಸ್ತಿಯನ್ನು ಉಡುಗೊರೆಯಾಗಿ ಪಡೆದುಕೊಂಡ ನಂತರ ಅವರನ್ನು ಆರೈಕೆ ಮಾಡಿಲ್ಲ. ಅಷ್ಟೇ ಅಲ್ಲ, ಪೋಷಕರ ಮೇಲೆ ಹಲ್ಲೆ ನಡೆಸಿ ಮನೆಯಿಂದ ಹೊರಹಾಕಿರುವುದು ಬಹಳ ನೋವಿನ ಸಂಗತಿ ಎಂದು ನ್ಯಾಯಪೀಠವು ಅಭಿಪ್ರಾಯಪಟ್ಟಿದೆ.

ಪೋಷಕರಿಗೆ ಮಕ್ಕಳು ಕಿರುಕುಳ ನೀಡುವ ಹಲವು ಪ್ರಕರಣಗಳು ಅನೇಕ ಕಾರಣಗಳಿಂದ ಬೆಳಕಿಗೆ ಬರುವುದೇ ಇಲ್ಲ. ಇಂತಹ ವಿಷಯಗಳಲ್ಲಿ ನ್ಯಾಯಾಲಯಗಳು, ಅಧಿಕಾರಿಗಳು ಮತ್ತು ನ್ಯಾಯಮಂಡಳಿಗಳು ಹೆಚ್ಚಿನ ಜಾಗರೂಕತೆಯಿಂದ ಮತ್ತು ಕಟ್ಟುನಿಟ್ಟಾಗಿ ನಿರ್ವಹಿಸಬೇಕಾಗುತ್ತದೆ ಎಂದು ವಿಭಾಗೀಯ ಪೀಠ ತನ್ನ ಆದೇಶದಲ್ಲಿ ತಿಳಿಸಿದೆ.

ಪ್ರಕರಣವೇನು?: ತುಮಕೂರಿನ ಗುಬ್ಬಿ ತಾಲೂಕಿನ ಬಸವಪಟ್ಟಣದ ಆರ್.ಕವಿತಾ ಅವರಿಗೆ ತಂದೆ ರಾಜಶೇಖರಯ್ಯ ತಮ್ಮ ಆಸ್ತಿಯನ್ನು 2018ರ ಸೆ.28ರಂದು ಉಡುಗೊರೆಯಾಗಿ ನೀಡಿದ್ದರು. ಆದರೆ ಕೆಲ ದಿನಗಳ ಬಳಿಕ ನಮ್ಮನ್ನು ಸರಿಯಾಗಿ ನೊಡಿಕೊಳ್ಳುತ್ತಿಲ್ಲ ಮತ್ತು ಮನೆ ನಿರ್ಮಾಣಕ್ಕೆ 10 ಲಕ್ಷ ಹಣ ತೆಗೆದುಕೊಂಡಿದ್ದಾರೆ ಜೊತೆಗೆ ತಮ್ಮ ಸಾಲ ತೀರಿಸಲು ಜಮೀನು ಆಸ್ತಿ ಮಾರಲು ಒತ್ತಾಯಿಸಿದ್ದರು ಎಂದು ಪೋಷಕರು, ಉಪವಿಭಾಗಾಧಿಕಾರಿ ಕಚೇರಿಗೆ ಅರ್ಜಿ ಸಲ್ಲಿಸಿದ್ದರು.

ಇದನ್ನು ಅಲ್ಲಗಳೆದಿದ್ದ ಕವಿತಾ, ತಂದೆ ರಾಜಶೇಖರಯ್ಯ ಮತ್ತು ತಾಯಿ ನಿರ್ಮಲಾ ಅವರನ್ನು ತಾವೇ ಆರೈಕೆ ಮಾಡುತ್ತಿದ್ದೇವೆ. ತಂದೆಯ ವೈದ್ಯಕೀಯ ಚಿಕಿತ್ಸೆಗಾಗಿ 30 ಲಕ್ಷ ಹಣವನ್ನು ಖರ್ಚು ಮಾಡಿದ್ದೇವೆ ಎಂದು ತಿಳಿಸಿದ್ದರು. ಆದರೆ ಪೋಷಕರ ಮೇಲೆ ಹಲ್ಲೆ ನಡೆಸಿ, ಮನೆಯಿಂದ ಹೊರಹಾಕಿದ್ದನ್ನು ಉಪವಿಭಾಗಾಧಿಕಾರಿ ಗಮನಿಸಿ, ಆಸ್ತಿ ಉಡುಗೊರೆ ಕ್ರಯವನ್ನು 2021ರ ಫೆ.24 ರಂದು ಅಮಾನ್ಯಗೊಳಿಸಿದ್ದರು. ಈ ಆದೇಶ ಪ್ರಶ್ನಿಸಿ ಕವಿತಾ ಹೈಕೋರ್ಟ್‍ಗೆ ತಕರಾರು ಅರ್ಜಿ ಸಲ್ಲಿಸಿದ್ದು, ಅದನ್ನು ಏಕ ಸದಸ್ಯ ನ್ಯಾಯಪೀಠ 2021ರ ಸೆ.11ರಂದು ವಜಾಗೊಳಿಸಿತ್ತು. ಇದರಿಂದ ಕವಿತಾ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X