Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸಿಎಂ ನೇತೃತ್ವದ ಧರಣಿಗೆ ಮಣಿದ ಚುನಾವಣಾ...

ಸಿಎಂ ನೇತೃತ್ವದ ಧರಣಿಗೆ ಮಣಿದ ಚುನಾವಣಾ ಆಯೋಗ; ಫಾರಂ-7 ದುರ್ಬಳಕೆ ಮಾಡಿದವರ ವಿರುದ್ಧ ತನಿಖೆ, ಕ್ರಮಕ್ಕೆ ಸೂಚನೆ

► ಮರಣ, ಬಹು ನೋಂದಣಿ ಪ್ರಕರಣದಲ್ಲಿ ಮಾತ್ರ ಫಾರಂ-7 ಅನುಮೋದನೆಗೆ ಸೂಚನೆ ► ಮರಣ ಪ್ರಮಾಣ ಪತ್ರ, 2ನೇ ಎಪಿಕ್ ಸಂಖ್ಯೆ ನಮೂದಿಸುವುದು ಕಡ್ಡಾಯ

ವಾರ್ತಾಭಾರತಿವಾರ್ತಾಭಾರತಿ1 Oct 2026 11:30 PM IST
share
ಸಿಎಂ ನೇತೃತ್ವದ ಧರಣಿಗೆ ಮಣಿದ ಚುನಾವಣಾ ಆಯೋಗ; ಫಾರಂ-7 ದುರ್ಬಳಕೆ ಮಾಡಿದವರ ವಿರುದ್ಧ ತನಿಖೆ, ಕ್ರಮಕ್ಕೆ ಸೂಚನೆ

ಬೆಂಗಳೂರು : ಮತದಾರರ ಅರ್ಜಿ ನಮೂನೆ-7 ಅಕ್ರಮಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಸಚಿವ ಸಂಪುಟ ಹಾಗೂ ಕಾಂಗ್ರೆಸ್ ಪಕ್ಷದ ಹೋರಾಟಕ್ಕೆ ಚುನಾವಣಾ ಆಯೋಗ ಮಣಿದಿದ್ದು, ತನಿಖೆಗೆ ಆದೇಶಿಸಿದೆ.

ಬೆಂಗಳೂರಿನ ಗಾಂಧಿನಗರದಲ್ಲಿರುವ ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಗೆ ಶಿವಕುಮಾರ್ ಅವರು ಸಂಪುಟ ಸಹೋದ್ಯೋಗಿಗಳೊಂದಿಗೆ ಗುರುವಾರ ಧರಣಿ ನಡೆಸಿದ್ದರ ಫಲವಾಗಿ ಚುನಾವಣೆ ಆಯೋಗವು ರಾಜ್ಯದಲ್ಲಿ ಫಾರಂ-6, ಫಾರಂ-6ಎ, ಫಾರಂ-7 ಬಳಸಿ ಸುಳ್ಳು ಅರ್ಜಿಗಳನ್ನು ಸಲ್ಲಿಸಿರುವವರ ವಿರುದ್ಧ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ರಾಜ್ಯದ ಎಲ್ಲಾ ಚುನಾವಣಾ ನೋಂದಣಿ ಅಧಿಕಾರಿಗಳಿಗೆ ಸೂಚನೆ ನೀಡಿದೆ.

ಚುನಾವಣಾ ಆಯೋಗದ ತೀರ್ಮಾನದ ಬಳಿಕ ಮಾಧ್ಯಮ ಗಳೊಂದಿಗೆ ಮಾತನಾಡಿದ ಸಿಎಂ ಡಿ.ಕೆ. ಶಿವಕುಮಾರ್ ಅವರು, ಮರಣ ಹಾಗೂ ಎರಡು ಬಾರಿ ನೋಂದಣಿ ಪ್ರಕರಣಗಳನ್ನು ಹೊರತುಪಡಿಸಿ ಬೇರೆ ಯಾವುದೇ ಪ್ರಕರಣಗಳಲ್ಲಿ ಫಾರಂ-7 ಅನ್ನು ಅನುಮೋದನೆ ಮಾಡುವಂತಿಲ್ಲ ಎಂದು ಮುಖ್ಯ ಚುನಾವಣಾ ಆಯುಕ್ತರು ರಾಜ್ಯದ ಎಲ್ಲಾ ತಹಶೀಲ್ದಾರ್‌ಗಳಿಗೆ ನಿರ್ದೇಶನ ನೀಡಿದ್ದಾರೆ. ಮರಣ ಪ್ರಕರಣಗಳಲ್ಲಿ ಮರಣ ಪ್ರಮಾಣ ಪತ್ರ ಕಡ್ಡಾಯವಾಗಿ ಸಲ್ಲಿಕೆಯಾಗಬೇಕು, ಎರಡು ಬಾರಿ ನೋಂದಣಿ ಆಗಿದ್ದರೆ ಎರಡನೇ ಎಪಿಕ್ ಸಂಖ್ಯೆಯನ್ನು ನಮೂದಿಸಬೇಕು ಎಂದು ಸೂಚನೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಆಯೋಗದ ಸಂಧಾನಕ್ಕೆ ನಾವು ಬಗ್ಗಲಿಲ್ಲ. ಚುನಾವಣಾ ಆಯೋಗದ ಅಧಿಕಾರಿಗಳು ಹಾಗೂ ಕಾನೂನು ತಜ್ಞರು ಸಭೆ ಮಾಡಿ ಕೆಲವು ತೀರ್ಮಾನ ಕೈಗೊಂಡಿದ್ದಾರೆ. ನಮ್ಮ ಹೋರಾಟಕ್ಕೆ ಆಯೋಗ ಮಣಿದಿದೆ. ಅರ್ಹ ಮತದಾರರಿಗೆ ನ್ಯಾಯ ಒದಗಿಸುವ ಭರವಸೆ ಸಿಕ್ಕಿದೆ. ಸೂಕ್ತ ತನಿಖೆ ಆಗದೇ ಇದ್ದರೆ ಮತ್ತೆ ಹೋರಾಟ ಮಾಡುತ್ತೇವೆ. ಇದರಲ್ಲಿ ವಿರೋಧ ಪಕ್ಷಗಳ ಕುತಂತ್ರವಿದೆ. ನಮ್ಮ ದಾಖಲೆಗಳನ್ನು ನೋಡಿ ಆಯೋಗ ಅಚ್ಚರಿ ವ್ಯಕ್ತಪಡಿಸಿದೆ. 136 ಮಂದಿಯನ್ನು ಗೆಲ್ಲಿಸಿ ನಾಡಿನ ಜನತೆ ಇಡೀ ಜನರ ರಕ್ಷಣೆ ಮಾಡುವಂತೆ ಸೂಚಿಸಿದ್ದಾರೆ. ಆ ಪ್ರಕಾರ ನಾವು ಈ ನಾಡಿನ ಜನರ ಹಕ್ಕನ್ನು ರಕ್ಷಿಸಲು ಇಂದು ಹೋರಾಟ ಮಾಡಿದ್ದೇವೆ’ ಎಂದರು.

‘ಇದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಡೆದಿರುವ ಅತಿದೊಡ್ಡ ವಂಚನೆ. ರಾಜ್ಯ ಚುನಾವಣಾ ಆಯೋಗ ನಮ್ಮ ಮನವೊಲಿಸಲು ಬಂದರೂ ನಾವು ಜಗ್ಗಲಿಲ್ಲ. ನಾವು ಬೀದಿಯಲ್ಲಿ ನಿಂತು ಹೋರಾಟ ಮಾಡುತ್ತಿಲ್ಲ. ಮಹಾತ್ಮಾ ಗಾಂಧೀಜಿ ನಮಗೆ ಹೇಳಿಕೊಟ್ಟ ಮಾರ್ಗದಲ್ಲಿ ಚುನಾವಣೆ ಅಧಿಕಾರಿಗಳಿಗೆ ಅವರ ಕಚೇರಿಯಲ್ಲಿ ಕುಳಿತು ಅಕ್ರಮದ ಬಗ್ಗೆ ಮನದಟ್ಟು ಮಾಡಿಕೊಟ್ಟಿದ್ದೇವೆ. ಅವರಿಗೆ ಅಗತ್ಯ ದಾಖಲೆಗಳನ್ನು ನೀಡಿ ತಕ್ಷಣವೇ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದೇವೆ’ ಎಂದರು.

Tags

Election CommissionForm-7
share
ವಾರ್ತಾಭಾರತಿ
ವಾರ್ತಾಭಾರತಿ
Next Story
X