Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬಿಜೆಪಿಯ ರಾಜ್ಯಾಧ್ಯಕ್ಷರ ಆಯ್ಕೆ...

ಬಿಜೆಪಿಯ ರಾಜ್ಯಾಧ್ಯಕ್ಷರ ಆಯ್ಕೆ ಕಾಂಗ್ರೆಸ್ ನ ಮೇಲೆ ಯಾವುದೇ ಪ್ರಭಾವ ಬೀರುವುದಿಲ್ಲ: ಆಯನೂರು ಮಂಜುನಾಥ್

''ಬಿಜೆಪಿ ಇನ್ನು ಮುಂದೆ ಆದರೂ ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವುದನ್ನು ಬಿಡಬೇಕು''

ವಾರ್ತಾಭಾರತಿವಾರ್ತಾಭಾರತಿ11 Nov 2023 11:54 AM IST
share
ಬಿಜೆಪಿಯ ರಾಜ್ಯಾಧ್ಯಕ್ಷರ ಆಯ್ಕೆ ಕಾಂಗ್ರೆಸ್ ನ ಮೇಲೆ ಯಾವುದೇ ಪ್ರಭಾವ ಬೀರುವುದಿಲ್ಲ: ಆಯನೂರು ಮಂಜುನಾಥ್

ಶಿವಮೊಗ್ಗ: ಭಾರತೀಯ ಜನತಾ ಪಾರ್ಟಿಯಲ್ಲಿ ಬಹಳ ತಡವಾಗಿದ್ದರೂ ಕೂಡ ಗಜ ಪ್ರಸವ ರೀತಿಯಲ್ಲಿ ಅಂತೂ ರಾಜ್ಯ ಅಧ್ಯಕ್ಷರ ಆಯ್ಕೆ ಆಗಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ,ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಬಿ.ವೈ ವಿಜೇಂದ್ರ ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿರುವುದು ಬಹಳ ಸಂತೋಷದ ವಿಚಾರ. ಶಿವಮೊಗ್ಗಕ್ಕೆ ಒಂದು ರಾಜ್ಯ ಅಧ್ಯಕ್ಷ ಸ್ಥಾನ ನೀಡಿದ್ದಾರೆ. ಬಿಜೆಪಿಯಲ್ಲಿ ಇದೇ ಮೊದಲ ಬಾರಿ ಅತ್ಯಂತ ಚಿಕ್ಕ ವಯಸ್ಸಿನ ರಾಜ್ಯಾಧ್ಯಕ್ಷರ ನೇಮಕ ಆಗಿದೆ. ಯಶಸ್ವಿಯಾಗಿ ಬಹಳ ಎಚ್ಚರದಿಂದ ಕೆಲಸ ಮಾಡಲಿ ಎಂದರು.

ವಿಜಯೇಂದ್ರ ಇಡುವಂತಹ ಪ್ರತಿಯೊಂದು ಹೆಜ್ಜೆ ಯಡಿಯೂರಪ್ಪರ ಮೇಲೆ ಪ್ರಭಾವ ಬೀರುತ್ತದೆ. ವಿಜಯೇಂದ್ರ ಹಿಂದೆ ಯಡಿಯೂರಪ್ಪ ಅವರ ಪ್ರಭಾವ ಇದೆ. ಹಾಗಾಗಿ ಅವರ ಸಫಲತೆ ಹಾಗೂ ವಿಫಲತೆ ಎರಡು ಕೂಡ ಯಡಿಯೂರಪ್ಪರ ಮೇಲೆ ಪ್ರಭಾವ ಬೀರುತ್ತದೆ. ಯಡಿಯೂರಪ್ಪ ಅವರ ಘನತೆಗೂ ಕೂಡ ಪ್ರಭಾವ ಬೀರುವ ರೀತಿ ಇರುವುದರಿಂದ ಬಹಳ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ಸಲಹೆ ನೀಡಿದರು.

ರಾಜಕೀಯ ನಿರ್ಣಯಗಳನ್ನು ಬಹಳ ಮುತುವರ್ಜಿ ತೆಗೆದುಕೊಳ್ಳಬೇಕು. ಯಡಿಯೂರಪ್ಪ ಅವರನ್ನು ಮೂಲೆಗುಂಪು ಮಾಡಲಾಗುತ್ತಿದೆ ಎಂಬುದನ್ನು ನಾನು ಸದ್ಯಕ್ಕೆ ಹೇಳುವುದಿಲ್ಲ. ಅದನ್ನು ಕಾಲವೇ ನಿರ್ಣಯ ಮಾಡುತ್ತದೆ. ಯಡಿಯೂರಪ್ಪನವರ ಸಂಪೂರ್ಣ ಶಕ್ತಿಯನ್ನು ಬಳಸಿಕೊಳ್ಳುವುದಕ್ಕೆ ಈ ರೀತಿ ಮಾಡಿದ್ದಾರೆ ಎಂದರು.

ಪಾರ್ಲಿಮೆಂಟ್ ಚುನಾವಣೆಗೆ ಯಡಿಯೂರಪ್ಪನವರ ಅವಶ್ಯಕತೆ ಬಿಜೆಪಿಗೆ ತುಂಬಾನೇ ಇದೆ. ಮಗನನ್ನು ಆಯ್ಕೆ ಮಾಡುವ ಮೂಲಕ ಪರೋಕ್ಷವಾಗಿ ಯಡಿಯೂರಪ್ಪ ಅವರಿಗೆ ಜವಾಬ್ದಾರಿ ನೀಡಿದ್ದಾರೆ. ಲೋಕಸಭೆಯಲ್ಲಿ ಬಿಜೆಪಿಯನ್ನು ಹೆಚ್ಚು ಸ್ಥಾನದಿಂದ ಗೆಲ್ಲಿಸುವ ಜವಾಬ್ದಾರಿ ವಿಜಯೇಂದ್ರ ಅವರಿಗಿಂತಲೂ ಯಡಿಯೂರಪ್ಪರವರಿಗೆ ಇದೆ ಎಂದರು.

ವಿಜಯೇಂದ್ರ ಆಯ್ಕೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ರೀತಿಯ ತೊಂದರೆಗಳಿಲ್ಲ. ಈಗಾಗಲೇ ಕಾಂಗ್ರೆಸ್ ತನ್ನ ಸಾಮರ್ಥ್ಯವನ್ನು ಪ್ರದರ್ಶನ ಮಾಡಿದೆ. ಬಿಜೆಪಿ ಈ ಆಯ್ಕೆಯಿಂದ ಅವರ ಆಂತರಿಕ ಕಲಹ, ಭ್ರಷ್ಟಾಚಾರ ಯಾವುದು ಕೂಡ ಮಾಯವಾಗುವುದಿಲ್ಲ. ಅವರ ಕೆಲಸಕ್ಕಾಗಿ ಒಬ್ಬ ನಾಯಕನನ್ನು ಆಯ್ಕೆ ಮಾಡಿಕೊಂಡಿದ್ದಾರೆ ಹೊರತು ಇನ್ನು ಯಾವುದೇ ರೀತಿಯ ಪ್ರಭಾವ ಕಾಂಗ್ರೆಸ್ ಮೇಲೆ ಬೀರುವುದಿಲ್ಲ ಎಂದರು.

ಬಿಜೆಪಿ ಇನ್ನು ಮುಂದೆ ಆದರೂ ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವುದನ್ನು ಬಿಡಬೇಕು. ಬಿ.ವೈ ವಿಜಯೇಂದ್ರ ಅವರು ತಮ್ಮ ಸಾಮರ್ಥ್ಯವನ್ನು ಸಾಬೀತು ಪಡಿಸಿಕೊಳ್ಳಬೇಕು ಎಂದರು.

Tags

BJP state presidentCongressAyanur Manjunath
share
ವಾರ್ತಾಭಾರತಿ
ವಾರ್ತಾಭಾರತಿ
Next Story
X