Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಪಂಚ ರಾಜ್ಯಗಳ ಚುನಾವಣೆ ಫಲಿತಾಂಶದಿಂದ...

ಪಂಚ ರಾಜ್ಯಗಳ ಚುನಾವಣೆ ಫಲಿತಾಂಶದಿಂದ ʼINDIAʼ ಒಕ್ಕೂಟಕ್ಕೆ ತೀವ್ರ ಆಘಾತವಾಗಿದೆ: ಬಿ.ವೈ. ವಿಜಯೇಂದ್ರ

ಬೆಂಗಳೂರಿನಲ್ಲಿ ಬಿಜೆಪಿ ಲೋಕಸಭಾ ಚುನಾವಣಾ ಯೋಜನಾ ಸಭೆ

ವಾರ್ತಾಭಾರತಿವಾರ್ತಾಭಾರತಿ8 Jan 2024 12:30 PM IST
share
ಪಂಚ ರಾಜ್ಯಗಳ ಚುನಾವಣೆ ಫಲಿತಾಂಶದಿಂದ ʼINDIAʼ ಒಕ್ಕೂಟಕ್ಕೆ ತೀವ್ರ ಆಘಾತವಾಗಿದೆ: ಬಿ.ವೈ. ವಿಜಯೇಂದ್ರ

ಬೆಂಗಳೂರು: ದೇಶ ಮತ್ತು ರಾಜ್ಯದಲ್ಲಿ ಬಿಜೆಪಿ ಪರ ವಾತಾವರಣ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಇಂದು ವಿಶ್ಲೇಷಿಸಿದರು.

ನಗರದ ಬೆಂಗಳೂರಿನ ಹೋಟೆಲ್ ನಲ್ಲಿ ಇಂದು ನಡೆದ ಬಿಜೆಪಿ ಲೋಕಸಭಾ ಚುನಾವಣಾ ಯೋಜನಾ ಸಭೆಯಲ್ಲಿ ಅವರು ಮಾತನಾಡಿದರು. ಮುಂದಿನ ಲೋಕಸಭಾ ಚುನಾವಣೆಯಲ್ಲಿ ರಾಜ್ಯ ಸರಕಾರಕ್ಕೆ ತಕ್ಕ ಪಾಠ ಕಲಿಸಲು ರಾಜ್ಯದ ಮತದಾರರು ಸಜ್ಜಾಗಿದ್ದಾರೆ. ಬಿಜೆಪಿ, ಸಂಘಟನೆಗೆ, ಪೂರಕ ಕ್ರಮಗಳನ್ನು ಪಕ್ಷ ಕೈಗೊಳ್ಳಲಿದೆ ಎಂದು ಪ್ರಕಟಿಸಿದರು. ಪಕ್ಷವು ರಾಜ್ಯದಲ್ಲಿ ಎಲ್ಲ 28 ಸ್ಥಾನಗಳನ್ನೂ ಗೆಲ್ಲಲಿದೆ. ಇದಕ್ಕಾಗಿ ಎಲ್ಲರೂ ಶ್ರಮಿಸುವುದಾಗಿ ತಿಳಿಸಿದರು.

ಇತ್ತೀಚೆಗೆ ನಡೆದ ಪಂಚ ರಾಜ್ಯಗಳ ಚುನಾವಣೆಯಲ್ಲಿ ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸಗಡದಲ್ಲಿ ಬಿಜೆಪಿ ಗೆದ್ದಿದೆ. ಐಎನ್‍ಡಿಐಎ (ಇಂಡಿಯಾ) ಒಕ್ಕೂಟ, ಕಾಂಗ್ರೆಸ್‍ಗೆ ಆಘಾತವಾಗಿತ್ತು ಎಂದು ವಿವರಿಸಿದರು. ಇದೊಂದು ಸ್ಪಷ್ಟ ಸಂದೇಶವಾಗಿದೆ ಎಂದರು.

ದೇಶ- ರಾಜ್ಯದ ಜನರು, ಪ್ರಜ್ಞಾವಂತ ಮತದಾರರು ಕಾಂಗ್ರೆಸ್ ಪಕ್ಷದ ಗಿಮಿಕ್ ಗ್ಯಾರಂಟಿಯನ್ನು ನಂಬಲು ತಯಾರಿಲ್ಲ. ಇದರಿಂದ ಮೋದಿ ಗ್ಯಾರಂಟಿಯೇ ಶ್ರೇಷ್ಠ ಎಂದು ಪ್ರಜ್ಞಾವಂತ ಮತದಾರರು ತಿಳಿದಿದ್ದಾರೆ ಎಂದು ನುಡಿದರು. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಬಹುಮತ ಸಾಧಿಸಿ ಮೋದಿಜೀ ಮೂರನೇ ಬಾರಿ ಪ್ರಧಾನಮಂತ್ರಿ ಆಗಲಿದ್ದು, ಅವರ ನೇತೃತ್ವದಲ್ಲಿ ದೇಶ ಅಭಿವೃದ್ಧಿ ಪಥದಲ್ಲಿ ಸಾಗಲಿದೆ ಎಂದು ತಿಳಿಸಿದರು.

ಕಾಂಗ್ರೆಸ್ ಸರಕಾರದ ಅಸಮರ್ಥ, ಅಸಮರ್ಪಕ ಆಡಳಿತದಿಂದ ಹಣಕಾಸು ವ್ಯವಸ್ಥೆ ಹದಗೆಟ್ಟಿದೆ. ಕಾನೂನು- ಸುವ್ಯವಸ್ಥೆ ಕಾಪಾಡುವಲ್ಲಿ ಸರಕಾರ ಸಂಪೂರ್ಣ ವಿಫಲವಾಗಿದೆ. 14 ಬಜೆಟ್ ಮಂಡಿಸಿದ ಅನುಭವಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಂಪನ್ಮೂಲ ಕ್ರೋಡೀಕರಣದ ವಿಚಾರದಲ್ಲಿ ಪೂರ್ಣಪ್ರಮಾಣದಲ್ಲಿ ವಿಫಲವಾಗಿದ್ದಾರೆ. ಇದರಿಂದ ಭೀಕರ ಬರಗಾಲ, 500 ರೈತರ ಆತ್ಮಹತ್ಯೆ ಹೊರತಾಗಿಯೂ ರಾಜ್ಯ ಸರಕಾರವು ಪರಿಹಾರ ಕೊಡದೆ, ಕೇಂದ್ರ ಸರಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದೆ ಎಂದು ಟೀಕಿಸಿದರು.

ಈ ಸಂದರ್ಭದಲ್ಲಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.

ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಸಂಸದ ಡಿ.ವಿ. ಸದಾನಂದಗೌಡ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಮತು ಮುಖಂಡರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X