Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ನಾಲ್ಕು ರಾಜ್ಯಗಳ ಚುನಾವಾಣಾ ಫಲಿತಾಂಶ;...

ನಾಲ್ಕು ರಾಜ್ಯಗಳ ಚುನಾವಾಣಾ ಫಲಿತಾಂಶ; ಕರ್ನಾಟಕ ಕಾಂಗ್ರೆಸ್‍ಗೂ ಎಚ್ಚರಿಕೆ ಗಂಟೆ: ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ3 Dec 2023 5:37 PM IST
share
ನಾಲ್ಕು ರಾಜ್ಯಗಳ ಚುನಾವಾಣಾ ಫಲಿತಾಂಶ; ಕರ್ನಾಟಕ ಕಾಂಗ್ರೆಸ್‍ಗೂ ಎಚ್ಚರಿಕೆ ಗಂಟೆ: ಬೊಮ್ಮಾಯಿ

ಬೆಂಗಳೂರು: ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶ ಲೋಕಸಭೆ ಚುನಾವಣೆಯ ದಿಕ್ಸೂಚಿಯಾಗಿದ್ದು, ಪ್ರಧಾನಿ ಮೋದಿಯವರ ವರ್ಚಸ್ಸು ಮತ್ತಷ್ಟು ಹೆಚ್ಚಾಗಿದ್ದು, ಕರ್ನಾಟಕ ಕಾಂಗ್ರೆಸ್ ಗೂ ಎಚ್ಚರಿಕೆಯ ಗಂಟೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ರವಿವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಪಂಚ ರಾಜ್ಯಗಳ ಚುನಾವಣೆ ಲೋಕಸಭೆ ಚುನಾವಣೆಗಿಂತ ಮೊದಲು ಬಂದಿರುವುದರಿಂದ ಇದನ್ನು ಸೆಮಿ ಫೈನಲ್ ಅಂತ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅಂತೂ ಮೇಲಿಂದ ಮೇಲೆ ಹೇಳಿದ್ದಾರೆ. ಈ ಫಲಿತಾಂಶ ಲೋಕಸಭೆ ಚುನಾವಣೆಗೆ ಸ್ಪಷ್ಟ ಸಂದೇಶ ನೀಡಿದೆ ಎಂದು ಹೇಳಿದರು.

ಮಧ್ಯಪ್ರದೇಶ ಮೂರನೇ ಎರಡರಷ್ಟು ಬಹುಮತ ಪಡೆದಿದ್ದೇವೆ. ಛತ್ತೀಸ್ ಗಡ, ರಾಜಸ್ತಾನದಲ್ಲೂ ಸ್ಪಷ್ಟ ಬಹುಮತ ಪಡೆದಿದ್ದೇವೆ. ತೆಲಂಗಾಣದಲ್ಲಿ ನಮ್ಮ ಸಂಖ್ಯೆ 1 ರಿಂದ 11 ಕ್ಕೆ ಏರಿದ್ದೇವೆ. ಈ ಫಲಿತಾಂಶಕ್ಕೆ ಕಾರಣವಾಗಿರುವ ಪ್ರಧಾನಿ ಮೋದಿ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಅಮಿತ್ ಶಾ, ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹ್ವಾನ್ ಸೇರಿದಂತೆ ಎಲ್ಲ ನಾಯಕರಿಗೂ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಹೇಳಿದರು.

ಇಂಡಿಯಾ ಒಕ್ಕೂಟದ ಪರಿಸ್ಥಿತಿ ಈಗ ನಡೆದ ಚುನಾವಣೆಗಳನಲ್ಲಿ ಛಿದ್ರವಾಗಿದೆ. ಕಾಂಗ್ರೆಸ್ ಅದರಿಂದ ದೂರವಾಗುತ್ತಿದೆ. ಲೊಕಸಭೆ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟ ಸಂಪೂರ್ಣ ನೆಲ ಕಚ್ಚಲಿದೆ ಎಂದು ಹೇಳಿದರು.

ಇನ್ನು ಈ ಫಲಿತಾಂಶ ಕರ್ನಾಟಕದ ಮೇಲೂ ಆಗಲಿದ್ದು, ಕರ್ನಾಟಕದಲ್ಲಿ ಇಷ್ಟೊಂದು ಬರ ಇದೆ. ಡಿಸಿ ಅಕೌಂಟ್ ನಲ್ಲಿ 400 ಕೋಟಿ ರೂ.ಗೂ ಅಧಿಕ ರೂ. ಹಣ ಇದ್ದರೂ, ಅದನ್ನು ಬಿಡುಗಡೆ ಮಾಡದೇ ಕೇಂದ್ರದ ಕಡೆಗೆ ಬೆರಳು ಮಾಡುತ್ತಿದ್ದಾರೆ. ಹಿಂದಿನ ಯಾವುದೇ ಸರ್ಕಾರ ಈ ರೀತಿ ಮಾಡಿಲ್ಲ. ಮೊದಲು ತನ್ನ ಬಳಿ ಇರುವ ಹಣವನ್ನು ರೈತರಿಗೆ ಪರಿಹಾರ ನೀಡಬೇಕು. ನಾವು ಪ್ರವಾಹ ಬಂದಾಗ ಮೊದಲು ಪರಹಾರ ನೀಡಿದ್ದೇವು ಎಂದರು.

ಜನಾಂದೋಲನ: ರಾಜ್ಯ ಸರಕಾರದ ಗ್ಯಾರೆಂಟಿಗಳು ಕೇವಲ ಶೇ.25ರಷ್ಟು ಜನರಿಗೆ ಮಾತ್ರ ತಲುಪಿದೆ. ಅಧಿವೇಶನ ಮುಗಿದ ಮೇಲೆ ಬಿಜೆಪಿಯಿಂದ ಗ್ಯಾರೆಂಟಿಯ ಸರಿಯಾದ ಅನುಷ್ಠಾನಕ್ಕಾಗಿ ಬೃಹತ್ ಚಳುವಳಿ ನಡೆಸಲು ತೀರ್ಮಾನ ಮಾಡಿದ್ದೇವೆ. ಗ್ಯಾರೆಂಟಿ ದೊರೆಯದ ಫಲಾನುಭವಿಗಳ ಮುಂದಾಳತ್ವದಲ್ಲಿ ಹೋರಾಟ ರೂಪಿಸಲಾಗುವುದು ಎಂದರು.

ಮೋದಿ ವರ್ಚಸ್ಸು ಹೆಚ್ಚಾಗಿದೆ: ದೇಶದಲ್ಲಿ ಈಗಿನ ವಾತಾವರಣ ನೋಡಿದರೆ, ಮತ್ತೆ ಕೇಂದ್ರದಲ್ಲಿ ನರೇಂದ್ರ ಮೋದಿಯವರು ಪ್ರಧಾನಿಯಾಗುತ್ತಾರೆ. ರಾಜ್ಯದಲ್ಲಿ 25 ಎಂಪಿ ಸ್ಥಾನ ಗೆಲ್ಲುತ್ತೇವೆ. ಜೆಡಿಎಸ್ ಜೊತೆಗಿನ ಹೊಂದಾಣಿಕೆ ನಮಗೆ ಹೆಚ್ಚು ಅನುಕೂಲವಾಗಲಿದೆ. ಕರ್ನಾಟಕದ ಸಿಎಂ ಸಿದ್ದರಾಮಯ್ಯ ಅವರು ಕರ್ನಾಟಕ ಗೆದ್ದರೆ ಇಡೀ ದೇಶ ಗೆದ್ದಂತೆ ಅಂತ ಹೇಳುತ್ತಾರೆ. ಪ್ರಧಾನಿ ಮೊದಿಯವರ ವರ್ಚಸ್ಸು ಈಗ ಮತ್ತೆ ಹೆಚ್ಚಾಗಿದೆ. ಕಾಂಗ್ರೆಸ್ ನ ಯಾವ ನಾಯಕರಿಗೂ ಮೋದಿಯವರ ಶೇ.1ರಷ್ಟೂ ವರ್ಚಸ್ಸಿಲ್ಲ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X