Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಇಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ 2025:...

ಇಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ 2025: ಮುಂಚೂಣಿ ರಾಜ್ಯಗಳ ಸಾಲಿನಲ್ಲಿ ಕರ್ನಾಟಕ

ವಾರ್ತಾಭಾರತಿವಾರ್ತಾಭಾರತಿ19 Sept 2026 7:31 PM IST
share
ಇಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ 2025: ಮುಂಚೂಣಿ ರಾಜ್ಯಗಳ ಸಾಲಿನಲ್ಲಿ ಕರ್ನಾಟಕ

ಬೆಂಗಳೂರು: ನೀತಿ ಆಯೋಗ ಬಿಡುಗಡೆ ಮಾಡಿರುವ ಭಾರತ್ ಇಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ-2025ರಲ್ಲಿ ಕರ್ನಾಟಕ ರಾಜ್ಯವು 73 ಅಂಕಗಳೊಂದಿಗೆ ದೇಶದಲ್ಲಿ ಮೂರನೇ ಸ್ಥಾನ ಪಡೆದು, ದೇಶದ ಮುಂಚೂಣಿ ರಾಜ್ಯಗಳ ಪೈಕಿ ಒಂದಾಗಿ ಹೊರಹೊಮ್ಮಿದೆ.

ಒಟ್ಟಾರೆ ಶ್ರೇಯಾಂಕದಲ್ಲಿ 84 ಅಂಕಗಳೊಂದಿಗೆ ಹೊಸದಿಲ್ಲಿ ಮೊದಲ ಸ್ಥಾನದಲ್ಲಿದ್ದು, ಮಹಾರಾಷ್ಟ್ರ 78 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. 73 ಅಂಕಗಳೊಂದಿಗೆ ಕರ್ನಾಟಕ ಮೂರನೇ ಸ್ಥಾನದಲ್ಲಿದೆ. ನಂತರದ ಸ್ಥಾನಗಳಲ್ಲಿ ಚಂಡೀಗಢ (71) ಮತ್ತು ಗೋವಾ (65) ಇವೆ. 65 ಅಥವಾ ಅದಕ್ಕಿಂತ ಹೆಚ್ಚು ಅಂಕ ಗಳಿಸಿದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ‘ಅತ್ಯುತ್ತಮ ಸಾಧನೆ ಮಾಡಿದವು’ ಎಂದು ಸೂಚ್ಯಂಕದಲ್ಲಿ ವರ್ಗೀಕರಿಸಲಾಗಿದೆ.

ಚಾರ್ಜಿಂಗ್ ಮೂಲಸೌಕರ್ಯ ಸನ್ನದ್ಧತೆ ವಿಭಾಗದಲ್ಲಿ ಕರ್ನಾಟಕವು 97 ಅಂಕಗಳನ್ನು ಗಳಿಸಿದ್ದು, ದೇಶದಲ್ಲೇ ಅಗ್ರಸ್ಥಾನ ಪಡೆದಿದೆ.

ದಿಲ್ಲಿಯ ವಿಜ್ಞಾನ ಭವನದಲ್ಲಿ ನಡೆದ ನೀತಿ ಆಯೋಗದ ಕಾರ್ಯಾಗಾರದ ಭಾಗವಾಗಿ ‘ಭಾರತ್ ಇಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ-2025' ಬಿಡುಗಡೆ ಸಮಾರಂಭದಲ್ಲಿ ಕರ್ನಾಟಕದ ಪರವಾಗಿ ಗೌರವ ಸ್ವೀಕರಿಸಿ ಮಾತನಾಡಿದ ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ‘ನಮ್ಮ ರಾಜ್ಯದ ಇಲೆಕ್ಟ್ರಿಕ್ ಸಾರಿಗೆ ಮೂಲಸೌಕರ್ಯ ಅಭಿವೃದ್ಧಿಯ ಉಪಕ್ರಮಗಳಲ್ಲಿ ಬೆಸ್ಕಾಂನ ‘ಇವಿ ಮಿತ್ರ’, ಏಕೀಕೃತ ಎಲೆಕ್ಟ್ರಿಕ್ ವಾಹನ ಚಾಜಿರ್ಂಗ್ ಅಪ್ಲಿಕೇಶನ್, ಏಕಗವಾಕ್ಷಿ ಅನುಮತಿ ವ್ಯವಸ್ಥೆ ಮತ್ತು ಇವಿ ಆಕ್ಸಿಲರೇಟರ್ ಸೆಲ್ ಸೇರಿವೆ. ಇವಿ ವಾಹನಗಳ ಮಾರಾಟ, ಚಾರ್ಜಿಂಗ್ ಮೂಲಸೌಕರ್ಯ ಮತ್ತು ಉತ್ಪಾದನಾ ವಲಯಗಳನ್ನು ಒಳಗೊಂಡ ಪ್ರತ್ಯೇಕ ಎಲೆಕ್ಟ್ರಿಕ್ ವಾಹನ ನೀತಿಯನ್ನು 2017ರಲ್ಲಿ ಜಾರಿಗೆ ತಂದ ದೇಶದ ಮೊದಲ ರಾಜ್ಯ ಕರ್ನಾಟಕ’ ಎಂದರು.

‘ರಾಜ್ಯಾದ್ಯಂತ ಇಲೆಕ್ಟ್ರಿಕ್ ವಾಹನಗಳ ಬಳಕೆ ಮತ್ತು ಚಾರ್ಜಿಂಗ್ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡುತ್ತಿರುವದರ ಫಲವಾಗಿ ಈ ಸಾಧನೆ ಸಾಧ್ಯವಾಗಿದೆ. ಸದ್ಯ ರಾಜ್ಯದಲ್ಲಿ 6,979 ಇಲೆಕ್ಟ್ರಿಕ್ ವಾಹನ ಚಾರ್ಜಿಂಗ್ ಕೇಂದ್ರಗಳಿದ್ದು, ಬೆಂಗಳೂರಿನಲ್ಲೇ 4,896 ಚಾಚಿರ್ಂಗ್ ಕೇಂದ್ರಗಳಿವೆ. ಇಲೆಕ್ಟ್ರಿಕ್ ವಾಹನಗಳ ಮಾರಾಟವೂ ಹೆಚ್ಚುತ್ತಿದ್ದು, 2026-27ನೇ ಹಣಕಾಸು ವರ್ಷದ ಮೊದಲ 5 ತಿಂಗಳಲ್ಲಿ ಮಾರಾಟ ಶೇ.15ರಷ್ಟಿದೆ. ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರದ ನಂತರ ದೇಶದಲ್ಲಿ ಅತಿ ಹೆಚ್ಚು ಎಲೆಕ್ಟ್ರಿಕ್ ವಾಹನ ಮಾರಾಟ ದಾಖಲಿಸಿರುವ ರಾಜ್ಯ ನಮ್ಮದು’ ಎಂದು ಅವರು ಹೇಳಿದರು.

‘ದೇಶದ ಒಟ್ಟು ಇಲೆಕ್ಟ್ರಿಕ್ ವಾಹನ ನೋಂದಣಿಗಳಲ್ಲಿ ಕರ್ನಾಟಕದ ಪಾಲು ಶೇ.8.81ರಷ್ಟಿದೆ. ಇಲೆಕ್ಟ್ರಿಕ್ ವಾಹನ ನೋಂದಣಿಯಲ್ಲಿ ಉತ್ತರಪ್ರದೇಶ ಮತ್ತು ಮಹಾರಾಷ್ಟ್ರದ ನಂತರದ ಸ್ಥಾನ ಕರ್ನಾಟಕದ್ದು. ದ್ವಿಚಕ್ರ ಮತ್ತು ನಾಲ್ಕುಚಕ್ರ ಇಲೆಕ್ಟ್ರಿಕ್ ವಾಹನ ನೋಂದಣಿಯಲ್ಲಿ ಮಹಾರಾಷ್ಟ್ರದ ನಂತರ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಇ-ಬಸ್ ನೋಂದಣಿಯಲ್ಲಿ ದಿಲ್ಲಿ ಮತ್ತು ಮಹಾರಾಷ್ಟ್ರದ ನಂತರ ಕರ್ನಾಟಕ ಮೂರನೇ ಸ್ಥಾನದಲ್ಲಿದೆ. ಇಲೆಕ್ಟ್ರಿಕ್ ಸಾರಿಗೆಯನ್ನು ಜನರಿಗೆ ಇನ್ನಷ್ಟು ಸುಲಭವಾಗಿ ಲಭ್ಯವಾಗುವಂತೆ ಮಾಡುವ ಮೂಲಕ ಈ ಕ್ಷೇತ್ರವನ್ನು ಮತ್ತಷ್ಟು ಬಲಪಡಿಸಲಾಗುವುದು ಎಂದು ಗೌರವ್ ಗುಪ್ತ ಹೇಳಿದರು

ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ನೀತಿ ಆಯೋಗವು ಡಬ್ಲ್ಯುಆರ್‌ಐ ಇಂಡಿಯಾ ಸಹಯೋಗದಲ್ಲಿ ಅಭಿವೃದ್ಧಿಪಡಿಸಿರುವ ಭಾರತ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕದ ಎರಡನೇ ಆವೃತ್ತಿ ಇದಾಗಿದೆ. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಇಲೆಕ್ಟ್ರಿಕ್ ಸಾರಿಗೆ ಕ್ಷೇತ್ರದಲ್ಲಿ ಸಾಧಿಸಿರುವ ಪ್ರಗತಿಯನ್ನು ನೀತಿ ನಿರೂಪಣೆ ಮತ್ತು ಅನುಷ್ಠಾನದ ಆಧಾರದ ಮೇಲೆ ಸೂಚ್ಯಂಕ ಮೌಲ್ಯಮಾಪನ ಮಾಡುತ್ತದೆ.


‘ಭಾರತ್ ಇಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ-2025ರಲ್ಲಿ ದೇಶದ ಮುಂಚೂಣಿ ರಾಜ್ಯಗಳ ಸಾಲಿನಲ್ಲಿ ಕರ್ನಾಟಕ ಸ್ಥಾನ ಪಡೆದಿರುವುದು ಸುಸ್ಥಿರ ಸಾರಿಗೆ ವ್ಯವಸ್ಥೆಗೆ ಒತ್ತು ನೀಡುವ ನಮ್ಮ ಪ್ರಯತ್ನಗಳಿಗೆ ಸಾಕ್ಷಿಯಾಗಿದೆ. ನೀತಿ ನಿರೂಪಣೆ, ಮೂಲಸೌಕರ್ಯ ಅಭಿವೃದ್ಧಿ ಮತ್ತು ಇಲೆಕ್ಟ್ರಿಕ್ ವಾಹನಗಳ ವ್ಯಾಪಕ ಬಳಕೆಗೆ ಉತ್ತೇಜನ ನೀಡುವ ಮೂಲಕ ರಾಜ್ಯದ ಇಲೆಕ್ಟ್ರಿಕ್ ಸಾರಿಗೆ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲಾಗುವುದು’

-ಕೆ.ಜೆ.ಜಾರ್ಜ್, ಇಂಧನ ಸಚಿವ

‘ಕರ್ನಾಟಕದಲ್ಲಿ ಇಲೆಕ್ಟ್ರಿಕ್ ವಾಹನ ಮೂಲಸೌಕರ್ಯ ಅಭಿವೃದ್ಧಿಪಡಿಸುವ ನೋಡಲ್ ಸಂಸ್ಥೆಯಾಗಿ ಬೆಸ್ಕಾಂ, ರಾಜ್ಯದ ಚಾಜಿರ್ಂಗ್ ಜಾಲವನ್ನು ವಿಸ್ತರಿಸಿ ಬಲಪಡಿಸಲು ಬದ್ಧವಾಗಿದೆ. ಜನರಿಗೆ ಸುಲಭವಾಗಿ ಲಭ್ಯವಾಗುವ ಚಾಜಿರ್ಂಗ್ ಮೂಲಸೌಕರ್ಯ ಅಭಿವೃದ್ಧಿಗೆ ನಿರಂತರವಾಗಿ ನೆರವು ನೀಡುವುದರ ಜತೆಗೆ, ರಾಜ್ಯದಲ್ಲಿ ಇಲೆಕ್ಟ್ರಿಕ್ ಸಾರಿಗೆ ವ್ಯವಸ್ಥೆಗೆ ಎಲ್ಲ ಅಗತ್ಯ ಬೆಂಬಲ ನೀಡಲಾಗುವುದು’

-ಡಾ.ಎನ್.ಶಿವಶಂಕರ್, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ

Tags

Electric Mobility Index 2025KarnatakaEV Transition
share
ವಾರ್ತಾಭಾರತಿ
ವಾರ್ತಾಭಾರತಿ
Next Story
X