Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ವಿದ್ಯುತ್‌ ತಂತಿ ತಗುಲಿ ತಾಯಿ,ಮಗು...

ವಿದ್ಯುತ್‌ ತಂತಿ ತಗುಲಿ ತಾಯಿ,ಮಗು ಮೃತಪಟ್ಟ ಪ್ರಕರಣ; ನಾಲ್ಕು ಮಾದರಿಯಲ್ಲಿ ತನಿಖೆ ನಡೆಸಲಾಗುತ್ತಿದೆ: ಸಚಿವ ಜಾರ್ಜ್

ಘಟನೆಗೆ ಕಾರಣ ಇಲಿ, ಹೆಗ್ಗಣಗಳ ಕಾಟ

ವಾರ್ತಾಭಾರತಿವಾರ್ತಾಭಾರತಿ21 Nov 2023 6:53 PM IST
share
ವಿದ್ಯುತ್‌ ತಂತಿ ತಗುಲಿ ತಾಯಿ,ಮಗು ಮೃತಪಟ್ಟ ಪ್ರಕರಣ; ನಾಲ್ಕು ಮಾದರಿಯಲ್ಲಿ ತನಿಖೆ ನಡೆಸಲಾಗುತ್ತಿದೆ: ಸಚಿವ ಜಾರ್ಜ್

ಬೆಂಗಳೂರು: ಕಾಡುಗೋಡಿಯಲ್ಲಿ ವಿದ್ಯುತ್ ಪ್ರವಹಿಸುತ್ತಿದ್ದ ತಂತಿ ತಗುಲಿ ತಾಯಿ, ಮಗು ಮೃತಪಟ್ಟ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ನಾಲ್ಕು ಮಾದರಿಯಲ್ಲಿ ತನಿಖೆ ನಡೆಸಲಾಗುತ್ತಿದೆ. ವರದಿಯ ಬಳಿಕ ಮತ್ತಷ್ಟು ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ.

ಮಂಗಳವಾರ ನಗರದ ಬೆಸ್ಕಾಂ ಕಾರ್ಪೊರೇಟ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಘಟನೆಗೆ ಸಂಬಂಧಿಸಿದಂತೆ ಬೆಸ್ಕಾಂ, ಪೊಲೀಸ್, ಇಂಧನ ಇಲಾಖೆ ಹಾಗೂ ಸ್ವತಂತ್ರ ಮಾದರಿಯ ತನಿಖೆಗಳು ನಡೆಯುತ್ತಿವೆ. ಈಗಾಗಲೇ ಸಂಬಂಧಪಟ್ಟ ಐವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಹಾಗೂ ಮೃತರ ಕುಟುಂಬಕ್ಕೆ ಹತ್ತು ಲಕ್ಷ ರೂ. ಪರಿಹಾರವನ್ನು ಘೋಷಿಸಲಾಗಿದೆ ಎಂದರು.

ರಾಜ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಗಂಭೀರವಾಗಿ ಪರಿಗಣಿಸಿದ್ದೇವೆ. ಬೆಸ್ಕಾಂ ಅಧಿಕಾರಿಗಳ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳಲು ನಾವು ಯಾವುದೇ ಅಡ್ಡಿ ಪಡಿಸಿಲ್ಲ. ತನಿಖಾ ವರದಿ ನೀಡಲು ಸಮಿತಿಗಳಿಗೆ ಕಾಲಮಿತಿ ನಿಗದಿ ಪಡಿಸಲಾಗಿದೆ ಎಂದು ಅವರು ಹೇಳಿದರು.

ವಿದ್ಯುತ್ ತಂತಿ ಕಡಿತಗೊಂಡಿರುವುದನ್ನು ನೋಡಿಕೊಳ್ಳದೆ ಇರುವುದು ಲೋಪವಾಗಿದೆ. ಇದನ್ನು ತಾಂತ್ರಿಕ ಸಮಸ್ಯೆ ಎಂದು ಪರಿಗಣಿಸಲಾಗಿದೆ. ಒಂದು ಕಡೆ ವಿದ್ಯುತ್ ತಂತಿಗಳ ಸಮಸ್ಯೆಯಾದರೆ ಮತ್ತೊಂದು ಆಫ್ಟಿಕಲ್ ಫೈಬರ್ ಕೇಬಲ್‌ ಗಳ ಸಮಸ್ಯೆಯಿದೆ. ಏಕಾಏಕಿ ಎಲ್ಲವನ್ನೂ ಒಮ್ಮಲೆ ಕಿತ್ತು ಹಾಕಲು ಆಗುವುದಿಲ್ಲ. ಅದಕ್ಕಾಗಿ ಆಫ್ಟಿಕಲ್ ಕೇಬಲ್‌ ಳನ್ನು ಭೂಮಿ ಒಳಗಿನ ಮಾರ್ಗಗಳಲ್ಲಿ ಅಳವಡಿಸಲು ಹದಿನೈದು ದಿನಗಳ ಕಾಲಾವಕಾಶ ನೀಡಲಾಗುತ್ತಿದೆ ಎಂದು ಕೆ.ಜೆ.ಜಾರ್ಜ್ ಸೂಚಿಸಿದರು.

ನಿಗದಿತ ಕಾಲಾವಧಿಯಲ್ಲಿ ನೆಲ ಮಾರ್ಗದಲ್ಲಿ ಆಫ್ಟಿಕಲ್ ಕೇಬಲ್ ಳನ್ನು ಅಳವಡಿಸದಿದ್ದರೆ ವಿದ್ಯುತ್ ತಂತಿ ಕಂಬಿಯ ಮೇಲಿರುವ ಎಲ್ಲಾ ಆಫ್ಟಿಕಲ್ ಕೇಬಲ್ ಳನ್ನು ಕಡಿತ ಮಾಡಲಾಗುವುದು ಎಂದು ಕೆ.ಜೆ.ಜಾರ್ಜ್ ಎಚ್ಚರಿಸಿದರು.

ಸುದ್ದಿಗೋಷ್ಠಿಯಲ್ಲಿ ಇಂಧನ ಇಲಾಖೆ ಅಪರ ಕಾರ್ಯದರ್ಶಿ ಗೌರವ್ ಗುಪ್ತಾ, ಕೆಪಿಟಿಸಿಎಲ್ ಎಂ.ಡಿ.ಪಂಕಜ್ ಕುಮಾರ್ ಪಾಂಡೆ ಉಪಸ್ಥಿತರಿದ್ದರು.

ಘಟನೆಗೆ ಕಾರಣ ಇಲಿ, ಹೆಗ್ಗಣಗಳ ಕಾಟ‌ !

ಘಟನಾ ಸ್ಥಳದ ಪಕ್ಕದಲ್ಲಿ ಇದ್ದ ಔದುಂಬರ ಅಪಾರ್ಟ್ಮೆಂಟ್ ಉಪಕೇಂದ್ರದ ಟ್ರಾನ್ಸ್ ಫಾರ್ಮರ್‌ ಗಳಲ್ಲಿ, ಹೆಗ್ಗಣಗಳು ಓಡಾಡಿದ ಪರಿಣಾಮ ಟ್ರಿಪ್ ಆಗಿ ಕೇಬಲ್ ಕಟ್ ಆಗಿದೆ. ಕಾಡುಗೋಡಿ ಪೊಲೀಸರು ಪರಿಶೀಲನೆ ಮಾಡಿದ್ದಾರೆ. ಆದರೆ ಆ ಸಮಯದಲ್ಲಿ ಸಮಸ್ಯೆ ಕಂಡು ಬಂದಿಲ್ಲ. ನ.19ರ ಬೆಳಗ್ಗೆ ಕೇಬಲ್‌ ನಲ್ಲಿ ವಿದ್ಯುತ್ ಹರಿಯುತ್ತಿತ್ತು. ಆದರೆ ಯಾರೂ ಮಾಹಿತಿಯನ್ನು ಬೆಸ್ಕಾಂಗೆ ತಿಳಿಸಿಲ್ಲ. ಪರಿಣಾಮ ಈ ಘಟನೆ ಜರುಗಿದೆ ಎಂದು ಬೆಸ್ಕಾಂನ ಚೀಫ್ ಎಲೆಕ್ಟ್ರಿಕಲ್ ಇಂಜಿನಿಯರ್ ಅಪ್ಪಚ್ಚು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X