Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಹೆಚ್ಚುವರಿಯಾಗಿ 188 ಇಂದಿರಾ ಕ್ಯಾಂಟೀನ್...

ಹೆಚ್ಚುವರಿಯಾಗಿ 188 ಇಂದಿರಾ ಕ್ಯಾಂಟೀನ್ ಗಳ ಸ್ಥಾಪನೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ30 Nov 2023 2:55 PM IST
share
ಹೆಚ್ಚುವರಿಯಾಗಿ 188 ಇಂದಿರಾ ಕ್ಯಾಂಟೀನ್ ಗಳ ಸ್ಥಾಪನೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಜನರ ಅನುಕೂಲಕ್ಕಾಗಿ ಈ ವರ್ಷ ಹೆಚ್ಚುವರಿಯಾಗಿ 188 ಇಂದಿರಾ ಕ್ಯಾಂಟೀನ್ ಗಳನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ಶಾಸಕರ ಭವನ ಆವರಣದಲ್ಲಿ ಸಂತ ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು ಅವರು, ಇಂದಿರಾ ಕ್ಯಾಂಟೀನ್ ಸಮರ್ಪಕವಾಗಿ ನಡೆಯುತ್ತಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿ, ಬೆಂಗಳೂರಿನ 225 ವಾರ್ಡ್ ಗಳಲ್ಲಿಯೂ ಇಂದಿರಾ ಕ್ಯಾಂಟೀನ್ ಪ್ರಾರಂಭಿಸಲಾಗುವುದು.ಕ್ಯಾಂಟೀನ್ ಗೆ ಸ್ಥಳದ ಅಭಾವವಿರುವ ಕಡೆ ಮೊಬೈಲ್ ಕ್ಯಾಂಟೀನ್ ಗಳನ್ನು ಸ್ಥಾಪಿಸಲಾಗುವುದು ಎಂದರು.

ಕನಕದಾಸರು -ಸಮಸಮಾಜದ ಕನಸು ಕಂಡಿದ್ದ ದಾಸಶ್ರೇಷ್ಠ:

ಕನಕದಾಸರು ಸಮಾಜಸುಧಾರಕರಾಗಿದ್ದರು. ಅವರ ಸಾಹಿತ್ಯದ ಮೂಲಕ ಮನುಷ್ಯತ್ವವನ್ನು ಸಾರಿದರು. ಇಡೀ ಜಾತ್ಯಾತೀತವಾದ, ಮೇಲು ಕೀಳು ಬೇಧಭಾವವಿಲ್ಲದ ಸಮಸಮಾಜ ನಿರ್ಮಿಸಲು ಶ್ರಮಿಸಿದ ವಿಶ್ವಮಾನವ. ರಾಮಧಾನ್ಯ ಚರಿತೆ, ಮೋಹನತರಂಗಿಣಿ ಸೇರಿದಂತೆ ಹಲವು ಕೃತಿಗಳನ್ನು ರಚಿಸಿದವರು. ಸಮಾಜದ ತಾರತಮ್ಯ ಹೋಗಲಾಡಿಸಲು ಹೋರಾಡಿದ ದಾಸಶ್ರೇಷ್ಠರ ದಿನವನ್ನು ಸರ್ಕಾರ ಇಂದು ಆಚರಿಸುತ್ತಿದೆ. ಸಾಹಿತ್ಯದ ಮೂಲಕ ತಮ್ಮ ಆದರ್ಶಗಳನ್ನು ಜನರಿಗೆ ತಿಳಿಹೇಳಿ ಜಾಗೃತಿ ಮೂಡಿಸಿದ್ದರು. ಜನರಿಗೆ ಅರ್ಥವಾಗುವ ಸರಳಭಾಷೆಯಲ್ಲಿ ತಮ್ಮ ದಾಸಸಾಹಿತ್ಯವನ್ನು ರಚಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ನಾಡಿನ ಎಲ್ಲ ಜನತೆಗೆ ಕನಕದಾಸ ಜಯಂತಿಯ ಶುಭಾಶಯಗಳನ್ನು ಕೋರಿದರು.

ಶಾಸಕ ಬಿ.ಆರ್.ಪಾಟೀಲ್ ಅವರನ್ನು ಮುಖ್ಯಮಂತ್ರಿಗಳು ಭೇಟಿಯಾಗಿರುವ ಬಗ್ಗೆ ಕೇಳಿದ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಬಿ.ಆರ್.ಪಾಟೀಲ್ ಅವರೊಂದಿಗೆ ಚರ್ಚಿಸಲಾಗಿತ್ತು, ಅವರು ಅಧಿವೇಶನಕ್ಕೆ ಆಗಮಿಸಲು ಮನವೊಲಿಸಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ನಿಮಾನ್ಸ್ ನಲ್ಲಿ ರೋಗಿಗಳಿಗೆ ಸರಿಯಾದ ಚಿಕಿತ್ಸಾ ವ್ಯವಸ್ಥೆಯಿಲ್ಲದೇ ಮಗುವೊಂದು ಸಾವನ್ನಪ್ಪಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ನಿಮಾನ್ಸ್ ನಿರ್ದೇಶಕರೊಂದಿಗೆ ಚರ್ಚಿಸುವುದಾಗಿ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X