Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬೆಂಗಳೂರಿನಲ್ಲಿ ಎಐ ವಿಶ್ವವಿದ್ಯಾಲಯ...

ಬೆಂಗಳೂರಿನಲ್ಲಿ ಎಐ ವಿಶ್ವವಿದ್ಯಾಲಯ ಸ್ಥಾಪನೆ : ಸಿಎಂ ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ8 July 2026 8:34 PM IST
share
ಬೆಂಗಳೂರಿನಲ್ಲಿ ಎಐ ವಿಶ್ವವಿದ್ಯಾಲಯ ಸ್ಥಾಪನೆ : ಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : ಪ್ರಪಂಚಕ್ಕೆ ಬೇಕಾಗಿರುವುದನ್ನು ಕರ್ನಾಟಕದ ರಾಜಧಾನಿ ಬೆಂಗಳೂರಿನಿಂದ ನೀಡಬೇಕು ಎಂಬುದು ನಮ್ಮ ಉದ್ದೇಶ. ಹೀಗಾಗಿ, ಕೃತಕ ಬುದ್ಧಿ ಮತ್ತೆ(ಎಐ)ವಿಶ್ವವಿದ್ಯಾನಿಲಯ ಸ್ಥಾಪಿಸುವ ಚಿಂತನೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಬುಧವಾರ ನಗರದ ಮಾನ್ಯತಾ ಟೆಕ್‍ಪಾರ್ಕ್‍ನಲ್ಲಿ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (ಕೆಡಿಇಎಂ) ಸಹಭಾಗಿತ್ವದಲ್ಲಿ ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಯು ಜಾಗತಿಕ ಸಾಮಥ್ರ್ಯ ಕೇಂದ್ರ (ಜಿಸಿಸಿ) ಮುಖಂಡರ ಜೊತೆಗೆ ಹಮ್ಮಿಕೊಂಡಿದ್ದ ‘ಕ್ಯಾಟಲಿಸ್ಟ್ ಕನೆಕ್ಟ್’ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಎಐ ಯೂನಿವರ್ಸಿಟಿ ಮಾಡುವ ಚಿಂತನೆ ಮಾಡುತ್ತಿದ್ದೇವೆ. ಈ ಬಗ್ಗೆ ಸಲಹೆ ಕೇಳಿದ್ದೇವೆ ಎಂದರು.

ಬೆಂಗಳೂರಿನಾಚೆಗೆ ಮತ್ತಷ್ಟು ಬೆಂಗಳೂರುಗಳನ್ನು ನಿರ್ಮಿಸಲು ನಮ್ಮ ಸರಕಾರ ಮುಂದಾಗಿದೆ. ಬೆಂಗಳೂರಿನಲ್ಲಿರುವ ಎಲ್ಲ ಸೌಕರ್ಯಗಳನ್ನು ರಾಜ್ಯದ ಎರಡು ಹಾಗೂ ಮೂರನೇ ಹಂತದ ನಗರಗಳಿಗೂ ಒದಗಿಸಲು ಬದ್ಧರಾಗಿದ್ದೇವೆ. ನೀವೆಲ್ಲರೂ ಕರ್ನಾಟಕದ ಪ್ರಗತಿಯ ಪಾಲುದಾರರು, ರಾಯಭಾರಿಗಳು. ಈ ರಾಜ್ಯ ಹಾಗೂ ದೇಶದ ಪ್ರಗತಿಗೆ ನಾವು ನಿಮ್ಮ ಜೊತೆ ಕೆಲಸ ಮಾಡಲಿದ್ದೇವೆ. ನಾವೆಲ್ಲರೂ ಒಂದೇ ತಂಡ 'ಟೀಮ್ ಕರ್ನಾಟಕ'. ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡೋಣ. ಜತೆಗೂಡುವುದು ಆರಂಭ, ಜತೆಗೂಡಿ ಆಲೋಚಿಸುವುದು ಪ್ರಗತಿ, ಜತೆಗೂಡಿ ಕೆಲಸ ಮಾಡುವುದು ಯಶಸ್ಸು ಎಂದು ಕರೆ ನೀಡಿದರು.

ಬೆಂಗಳೂರಿನಲ್ಲಿ ಪ್ರತಿ ತಿಂಗಳು 30ಸಾವಿರ ಹೊಸ ವಾಹನಗಳು ನೋಂದಣಿಯಾಗುತ್ತಿವೆ. ಹೀಗಾಗಿ ನಾವು ಸುಗಮ ಸಂಚಾರಕ್ಕೆ ಆದ್ಯತೆ ನೀಡುತ್ತಿದ್ದೇವೆ. ನಾವು ಈಗಾಗಲೇ 350ಕಿ.ಮೀ ಮೆಟ್ರೋ ಸಂಪರ್ಕಕ್ಕೆ ಯೋಜನೆ ರೂಪಿಸಿದ್ದು, ಇದನ್ನು ಮುಂದಿನ ವರ್ಷದ ವೇಳೆಗೆ 500 ಕಿ.ಮೀಗಳಿಗೆ ವಿಸ್ತರಿಸುವ ಗುರಿ ಹೊಂದಿದ್ದೇವೆ ಎಂದ ಅವರು, ನಮ್ಮ ರಾಜ್ಯದಲ್ಲಿ ಪ್ರತಿಭಾನ್ವಿತ ಮಾನವ ಸಂಪನ್ಮೂಲ ಇದೆ. ನಮ್ಮ ರಾಜ್ಯದಲ್ಲಿ 257 ಇಂಜಿನಿಯರಿಂಗ್ ಕಾಲೇಜುಗಳಿದ್ದು, ಪ್ರತಿ ವರ್ಷ 1.50 ಲಕ್ಷ ಇಂಜಿನಿಯರ್ ಗಳನ್ನು ತಯಾರು ಮಾಡುತ್ತಿದ್ದೇವೆ. ಇಂದು ನಿಮ್ಮ ಉಪಸ್ಥಿತಿಯೇ ನಮ್ಮ ಮೇಲಿರುವ ನಂಬಿಕೆಗೆ ಸಾಕ್ಷಿಯಾಗಿದೆ ಎಂದರು.

ಕರ್ನಾಟಕಕ್ಕೆ ಬಂದ ಕಂಪೆನಿಗಳು ಇಲ್ಲಿನ ಸಾಮರ್ಥ್ಯ, ಪ್ರತಿಭೆ ಬಗ್ಗೆ ಅರಿತಿದ್ದಾರೆ. ನಾವು ಭವಿಷ್ಯದಲ್ಲಿ ಸಂಶೋಧನೆಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಕೇವಲ ಬೆಂಗಳೂರು ಮಾತ್ರವಲ್ಲ ಕರ್ನಾಟಕದ ಇತರೆ ಭಾಗಗಳಲ್ಲಿ ಉದ್ಯಮ ಆರಂಭಕ್ಕೆ ಆದ್ಯತೆ ನೀಡಲಾಗುತ್ತಿದೆ. ಮಹಾರಾಷ್ಟ್ರವು ಉದ್ಯಮಗಳಿಗೆ ದುಬಾರಿಯಾಗಿದ್ದು, ಅವರಿಗೆ ಕರ್ನಾಟಕ ಉತ್ತಮ ಆಯ್ಕೆಯಾಗಿದೆ ಎಂದು ನಮ್ಮ ಸ್ನೇಹಿತರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಎಲ್ಲರೂ ಕಚೇರಿ ಕೆಲಸ ಮುಗಿಸಿ 30-40 ನಿಮಿಷಗಳಲ್ಲಿ ಮನೆ ಸೇರಲು ಬಯಸುತ್ತಾರೆ. ಕರ್ನಾಟಕ ಈ ಎಲ್ಲ ಆಯಾಮಗಳನ್ನು ಪರಿಗಣಿಸುತ್ತಿದೆ ಎಂದು ಅವರು ಹೇಳಿದರು.

ಇಲ್ಲಿನ ಸಂಸ್ಕೃತಿ ಹಾಗೂ ಹವಾಮಾನ ಬೆಂಗಳೂರಿನ ಅತಿ ದೊಡ್ಡ ಬಲ. ನಮ್ಮ ಸಂಸ್ಕೃತಿ ಉಳಿಸಿಕೊಂಡು ಪ್ರಗತಿ ಸಾಧಿಸುವ ಗುರಿ ಹೊಂದಿದ್ದೇವೆ. ಬೆಂಗಳೂರಿನಲ್ಲಿ ಪಾದಚಾರಿ ಮಾರ್ಗ ಒತ್ತುವರಿ ತೆರವುಗೊಳಿಸುತ್ತಿದ್ದು, ಬೀದಿ ಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಮಾಡಲಾಗುತ್ತಿದೆ.ಇನ್ನೂ, ದೇಶದಲ್ಲಿ 138 ಅಂತಾರಾಷ್ಟ್ರೀಯ ಶಾಲೆಗಳಿದ್ದು, ಆ ಪೈಕಿ 40 ಶಾಲೆಗಳು ಕರ್ನಾಟಕ ಹಾಗೂ ಬೆಂಗಳೂರಿನಲ್ಲಿವೆ. ಬೆಂಗಳೂರಿನಲ್ಲಿ 2 ಲಕ್ಷ ವಿದೇಶಿ ಪಾಸ್ ಪೋರ್ಟ್ ದಾರರು ಕೆಲಸ ಮಾಡುತ್ತಿದ್ದಾರೆ. ನಾವು ನಿಮ್ಮ ನಿರೀಕ್ಷೆಯನ್ನು ತಲುಪಲಿದ್ದೇವೆ. ಬೆಂಗಳೂರು ಟೆಕ್ ಸಮಿಟ್ ನಿಮ್ಮೆಲ್ಲರಿಗೂ ಒಂದು ಅವಕಾಶವನ್ನು ನೀಡಲಿದ್ದು, ದೇಶದ ದೊಡ್ಡ ಟೆಕ್ ಸಮಿಟ್ ಗಳಲ್ಲಿ ಒಂದಾಗಿದೆ. ನಾವು ಎರಡು ಹಾಗೂ ಮೂರನೇ ಹಂತದ ನಗರಗಳಲ್ಲಿ ಉದ್ಯಮ ಸ್ಥಾಪನೆಗೆ ಆದ್ಯತೆ ನೀಡುತ್ತಿದ್ದೇವೆ ಎಂದು ಅವರು ನುಡಿದರು.

ಸಭೆಯಲ್ಲಿ ಗೃಹ, ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ, ಕರ್ನಾಟಕ ರಾಜ್ಯ ಎಲೆಕ್ಟ್ರಾನಿಕ್ಸ್ ಅಭಿವೃದ್ಧಿ ನಿಗಮ ಅಧ್ಯಕ್ಷ ಶರತ್ ಬಚ್ಚೇಗೌಡ, ಐಟಿ-ಬಿಟಿ ಇಲಾಖೆ ಕಾರ್ಯದರ್ಶಿ ಎನ್.ಮಂಜುಳಾ ಉಪಸ್ಥಿತರಿದ್ದರು.

Tags

AI UniversityBengaluruCM D.K. Shivakumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X