Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಪ್ರಜ್ವಲ್ ರೇವ‍ಣ್ಣ ಗೆದ್ದರೂ ಅಮಾನತು...

ಪ್ರಜ್ವಲ್ ರೇವ‍ಣ್ಣ ಗೆದ್ದರೂ ಅಮಾನತು ಆದೇಶ ವಾಪಸ್ಸು ಬೇಡ : ಆರ್.ಅಶೋಕ್

ವಾರ್ತಾಭಾರತಿವಾರ್ತಾಭಾರತಿ5 May 2024 4:46 PM IST
share
ಪ್ರಜ್ವಲ್ ರೇವ‍ಣ್ಣ ಗೆದ್ದರೂ ಅಮಾನತು ಆದೇಶ ವಾಪಸ್ಸು ಬೇಡ : ಆರ್.ಅಶೋಕ್

ಬೆಂಗಳೂರು : ಲೋಕಸಭೆ ಚುನಾವಣೆಯಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿಜೇತರಾದರೂ ಅವರನ್ನು ಜೆಡಿಎಸ್‍ನಿಂದ ಕೆಲಕಾಲ ಅಮಾನತು ಮಾಡಿರುವ ನಿರ್ಧಾರವನ್ನು ಹಿಂತೆಗೆದುಕೊಳ್ಳದಂತೆ ಪಕ್ಷದ ನಾಯಕರಿಗೆ ನಾವೇ ಮನವಿ ಸಲ್ಲಿಸುತ್ತೇವೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ತಿಳಿಸಿದ್ದಾರೆ.

ರವಿವಾರ ನಗರದ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಜೆಡಿಎಸ್ ಕೂಡ ಗಂಭೀರವಾಗಿ ಪರಿಗಣಿಸಿದೆ. ಈಗಾಗಲೇ ಅವರನ್ನು ಪಕ್ಷದಿಂದ ಅಮಾನತುಪಡಿಸಲಾಗಿದೆ. ಮುಂದೆ ಅವರು ವಿಜೇತರಾದರೂ ಅಮಾನತು ಆದೇಶವನ್ನು ಹಿಂಪಡೆಯದಂತೆ ಮನವಿ ಮಾಡುತ್ತೇವೆ ಎಂದರು.

ಅಲ್ಲದೆ, ತನಿಖೆ ಮುಗಿದು ನ್ಯಾಯಾಲಯದ ತೀರ್ಪು ಬರುವರೆಗೂ ಅಮಾನತು ಪ್ರಕರಣನ್ನು ವಾಪಸ್ ಪಡೆಯಬಾರದು. ಈ ನಿಲುವಿನಿಂದ ಕುಮಾರಸ್ವಾಮಿ ಹಿಂದೆ ಸರಿಯಬಾರದೆಂದು ಎಂದ ಅವರು, ಈ ಪ್ರಕರಣದಿಂದ ಫಲಿತಾಂಶದ ಮೇಲೆ ಯಾವುದೇ ನಕಾರಾತ್ಮಕ ಪರಿಣಾಮ ಬೀರುವುದಿಲ್ಲ. ಸಂತ್ರಸ್ತರಿಗೆ ನ್ಯಾಯ ಸಿಗಬೇಕು ಎನ್ನುವುದಕ್ಕಿಂತ ಹೆಚ್ಚಾಗಿ ಕಾಂಗ್ರೆಸಿಗರು ಲಾಭ ಮಾಡಿಕೊಳ್ಳಲು ಹೊರಟಿದ್ದರು. ಮತದಾರರಿಗೆ ಇವರ ನಿಜವಾದ ಬಂಡವಾಳ ಗೊತ್ತಾಗಿದೆ ಎಂದು ಟೀಕಿಸಿದರು.

ಬರಗಾಲದ ಪರಿಹಾರದ ವಿಚಾರದಲ್ಲಿ ಕರ್ನಾಟಕದ ಕಾಂಗ್ರೆಸ್ ಸರಕಾರ ಇನ್ನೂ ಕುಂಭಕರ್ಣ ನಿದ್ರೆಯಲ್ಲಿದೆ. ಹಣ ಬಂದು ಕ್ಷಣದಲ್ಲಿ ರೈತರಿಗೆ ನೀಡುವುದಾಗಿ ಹೇಳಿದ್ದರು. ಕ್ಷಣಗಳು ಹೋಗಿ ಗಂಟೆಗಳಾಗಿ, ಈಗ ದಿನಗಳೇ ಕಳೆದಿವೆ. ರೈತರು ಈ ಬಿಸಿಲಿನ ಬೇಗೆಯಿಂದ ಹಾಹಾಕಾರ ಪಡುತ್ತಿದ್ದಾರೆ. ರಾಜ್ಯ ಸರಕಾರವು ಬೇರೆ ರಾಜಕಾರಣ ಮಾಡುತ್ತಿದೆ. ರೈತರ ಕಷ್ಟಕ್ಕೆ ಸ್ಪಂದಿಸದ ಕಟುಕ- ಕರುಣೆ ಇಲ್ಲದ ರಾಜ್ಯ ಸರಕಾರ ಇದು ಎಂದು ಆರೋಪಿಸಿದರು.

ಮೇವು ಇಲ್ಲದೆ ದನಕರುಗಳನ್ನು ಕಟುಕರಿಗೆ ಮಾರಾಟ ಮಾಡುವ ಸ್ಥಿತಿಗೆ ರೈತರು ಬರುತ್ತಿರುವುದು ಬೇಸರದ ಸಂಗತಿ. ಈ ಸರಕಾರ ಒಂದು ರೀತಿಯಲ್ಲಿ ಬೂಟಾಟಿಕೆ ಮಾಡುತ್ತಿದೆ. ಜಾಹೀರಾತುಗಳನ್ನು ಕೊಡುತ್ತಿದೆ. ಆದರೆ, ರೈತರ ಸಂಕಷ್ಟಕ್ಕೆ ಸ್ಪಂದಿಸುವ ಗಂಭೀರತೆ ಎಲ್ಲೂ ಕಾಣಿಸುತ್ತಿಲ್ಲ ಎಂದು ಅವರು ಟೀಕಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X