Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಅಧಿಕಾರಿಗಳು ಲಂಚ ಸ್ವೀಕರಿಸಿರುವುದಕ್ಕೆ...

ಅಧಿಕಾರಿಗಳು ಲಂಚ ಸ್ವೀಕರಿಸಿರುವುದಕ್ಕೆ ಪುರಾವೆಗಳು ಅಗತ್ಯ: ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ1 Jan 2024 8:53 PM IST
share
ಅಧಿಕಾರಿಗಳು ಲಂಚ ಸ್ವೀಕರಿಸಿರುವುದಕ್ಕೆ ಪುರಾವೆಗಳು ಅಗತ್ಯ: ಹೈಕೋರ್ಟ್

ಬೆಂಗಳೂರು: ಲಂಚಕ್ಕೆ ಬೇಡಿಕೆಯಿಟ್ಟ ಆರೋಪ ಪ್ರಕರಣಗಳಲ್ಲಿ ಸರಕಾರಿ ಅಧಿಕಾರಿಗಳ ಮೇಲೆ ದಾಳಿ ನಡೆಸುವ ಸಂದರ್ಭದಲ್ಲಿ ಹಣಕ್ಕಾಗಿ ಬೇಡಿಕೆ ಇಟ್ಟಿರುವುದು ಮತ್ತು ಸ್ವೀಕರಿಸಿರುವ ಪುರಾವೆಗಳು ಅಗತ್ಯವಾಗಿ ಬೇಕಿರುತ್ತವೆ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ನಿವೃತ್ತ ಸಬ್ ರಿಜಿಸ್ಟ್ರಾರ್ ವಿರುದ್ಧದ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣವನ್ನು ರದ್ದುಪಡಿಸಿ ಆದೇಶಿಸಿದೆ.

ತಮ್ಮ ವಿರುದ್ಧದ ಪ್ರಕರಣ ಮತ್ತು ವಿಚಾರಣೆಯ ರದ್ದು ಕೋರಿ ಗದಗದ ನಿವೃತ್ತ ಸಬ್ ರಿಜಿಸ್ಟ್ರಾರ್ ಶ್ರೀಕಾಂತ್ ಎಂಬವರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ನ್ಯಾಯಪೀಠವು ವಿಚಾರಣೆ ನಡೆಸಿದೆ.

ಭ್ರಷ್ಟಾಚಾರ ತಡೆ ಕಾಯ್ದೆ ಸೆಕ್ಷನ್ 7(ಎ) ಪ್ರಕಾರ, ಅಧಿಕಾರಿಗಳ ವಿರುದ್ಧ ದಾಳಿ ನಡೆಸುವ ಸಂದರ್ಭದಲ್ಲಿ ಸರಕಾರಿ ಅಧಿಕಾರಿಯಿಂದ ಯಾವುದಾದರೂ ಕೆಲಸ ಆಗುವುದು ಬಾಕಿ ಇರಬೇಕು. ಅದಕ್ಕಾಗಿ ಲಂಚಕ್ಕೆ ಬೇಡಿಕೆ ಇಟ್ಟಿರಬೇಕು ಎಂದು ತಿಳಿಸಲಾಗಿದೆ. ಆದರೆ, ಈ ಪ್ರಕರಣದಲ್ಲಿ ಆ ಪ್ರಕ್ರಿಯೆ ನಡೆದಿಲ್ಲ. ಈ ಪ್ರಕ್ರಿಯೆಯಲ್ಲಿ ದೂರುದಾರ ಮತ್ತು ಸರಕಾರಿ ಸೇವಕರಿರುವುದು ಕಡ್ಡಾಯವಾಗಿದೆ. ಎಸಿಬಿ ಅಧಿಕಾರಿಗಳು ದಾಳಿಯ ಸಂದರ್ಭದಲ್ಲಿ ಅರ್ಜಿದಾರರಿಂದ ಲಂಚಕ್ಕಾಗಿ ಬೇಡಿಕೆ ಇಟ್ಟಿರುವುದು ಮತ್ತು ಲಂಚ ಸ್ವೀಕರಿಸಿರುವ ಸಂಬಂಧ ಪಂಚನಾಮೆ ಮಾಡಿಲ್ಲ ಎಂದು ಪೀಠ ಹೇಳಿದೆ.

ಪ್ರಸ್ತುತ ಪ್ರಕರಣದಲ್ಲಿ ಯಾವುದೇ ಅಂಶಗಳು ಒಳಗೊಂಡಿಲ್ಲ. ಹೀಗಾಗಿ, ಪ್ರಕರಣದ ವಿಚಾರಣೆ ಮುಂದುವರೆದಲ್ಲಿ ಕಾನೂನಿನ ದುರ್ಬಳಕೆಯಾಗಲಿದೆ ಎಂದು ಅಭಿಪ್ರಾಯಪಟ್ಟು ಪ್ರಕರಣವನ್ನು ಕೋರ್ಟ್ ರದ್ದುಪಡಿಸಿತು.

ಪ್ರಕರಣವೇನು?: ಗದಗದ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು 2019ರಲ್ಲಿ ಭ್ರಷ್ಟಾಚಾರ ನಿಗ್ರಹ ದಳಕ್ಕೆ (ಎಸಿಬಿ) ಅನಾಮಧೇಯ ದೂರು ಸಲ್ಲಿಕೆಯಾಗಿತ್ತು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಎಸಿಬಿ ಡಿವೈಎಸ್‍ಪಿ ತನಿಖೆ ನಡೆಸುತ್ತಿದ್ದರು.

ಅರ್ಜಿದಾರ ಶ್ರೀಕಾಂತ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಸಕ್ಷಮ ಪ್ರಾಧಿಕಾರದಿಂದ ಅನುಮತಿ ಪಡೆದು ವಿಚಾರಣೆ ಮುಂದುವರೆಸಿದ್ದರು. 2021ರಲ್ಲಿ ಪ್ರಕರಣ ಕುರಿತಾಗಿ ವಿಚಾರಣಾ ನ್ಯಾಯಾಲಯ ಕಾಗ್ನಿಜೆನ್ಸ್ ಪಡೆದುಕೊಂಡಿತ್ತು. ಇದನ್ನು ಪ್ರಶ್ನಿಸಿ ಶ್ರೀಕಾಂತ್ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ್ದ ಹೈಕೋರ್ಟ್ ನ್ಯಾಯಪೀಠ, ವಿಚಾರಣೆಗೆ ತಡೆಯಾಜ್ಞೆ ನೀಡಿತ್ತು. ಈ ನಡುವೆ ಲೋಕಾಯುಕ್ತವನ್ನು ಮರುಸ್ಥಾಪಿಸಿದ ಹಿನ್ನೆಲೆಯಲ್ಲಿ ಪ್ರಕರಣದಲ್ಲಿ ಲೋಕಾಯುಕ್ತವನ್ನು ಪ್ರತಿವಾದಿಯನ್ನಾಗಿ ಮಾಡಲಾಗಿತ್ತು.

ಲೋಕಾಯುಕ್ತ ಪರ ವಕೀಲರು ವಾದ ಮಂಡಿಸಿ, ಅರ್ಜಿದಾರರ ಕಚೇರಿಯಲ್ಲಿ ಹಾಜರಿದ್ದ ಹಲವು ಖಾಸಗಿ ವ್ಯಕ್ತಿಗಳೊಂದಿಗೆ 100 ರೂ.ಗಳಿಗಿಂತಲೂ ಹೆಚ್ಚಿನ ಹಣ ಪಡೆದಿರುವ ಆರೋಪವಿದೆ. ಹೀಗಾಗಿ, ಪ್ರಕರಣದ ತನಿಖೆ ನಡೆಸುವ ಅಗತ್ಯವಿದೆ ಎಂದು ವಾದ ಮಂಡಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X