Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮಾಜಿ ಸಚಿವ ಎಚ್.ಡಿ.ರೇವಣ್ಣ ಜೈಲು ಪಾಲು ;...

ಮಾಜಿ ಸಚಿವ ಎಚ್.ಡಿ.ರೇವಣ್ಣ ಜೈಲು ಪಾಲು ; ಜಾಮೀನು ಅರ್ಜಿ ವಿಚಾರಣೆ ನಾಳೆಗೆ(ಮೇ.9) ಮುಂದೂಡಿಕೆ

ವಾರ್ತಾಭಾರತಿವಾರ್ತಾಭಾರತಿ8 May 2024 3:45 PM IST
share
ಮಾಜಿ ಸಚಿವ ಎಚ್.ಡಿ.ರೇವಣ್ಣ ಜೈಲು ಪಾಲು ; ಜಾಮೀನು ಅರ್ಜಿ ವಿಚಾರಣೆ ನಾಳೆಗೆ(ಮೇ.9) ಮುಂದೂಡಿಕೆ

ಬೆಂಗಳೂರು : ಮೈಸೂರಿನ ಕೆ.ಆರ್.ನಗರದ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯ ಅಪಹರಣ ಸಂಬಂಧ ಬಂಧನವಾಗಿರುವ ಮಾಜಿ ಸಚಿವ ಎಚ್.ಡಿ.ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಾಳೆಗೆ(ಮೇ.9) ಮುಂದೂಡಿಕೆ ಆಗಿದೆ.

ಆರೋಪಿ ಹೊಳೆನರಸೀಪುರ ಶಾಸಕ ಎಚ್.ಡಿ.ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ನ್ಯಾಯಾಧೀಶರು ನಾಳೆಗೆ ವಿಚಾರಣೆ ಮುಂದೂಡಿದ್ದಾರೆ.

ಇದೇ ವೇಳೆ ಎಸ್ಐಟಿ ವಶದಲ್ಲಿದ್ದ ಮಾಜಿ ಸಚಿವ ಎಚ್.ಡಿ ರೇವಣ್ಣರನ್ನು 7 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ 17ನೇ ಎಸಿಎಂಎಂ ನ್ಯಾಯಾಲಯ ನ್ಯಾಯಧೀಶ ರವೀಂದ್ರಕುಮಾರ್ ಕಟ್ಟಿಮನಿ ಆದೇಶ ನೀಡಿದ್ದಾರೆ. ಇದರಿಂದ ಆರೋಪಿ ಶಾಸಕ ಹೆಚ್.ಡಿ.ರೇವಣ್ಣ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ.

ಗಂಭೀರ ಸ್ವರೂಪದ ಪ್ರಕರಣ ಹಿನ್ನೆಲೆ ರೇವಣ್ಣ ಅವರನ್ನು ವಿಚಾರಣೆಗಾಗಿ ಕಸ್ಟಡಿಗೆ ಪಡೆದಿದ್ದ ‘ಎಸ್‌ಐಟಿ’ ತನಿಖಾಧಿಕಾರಿಗಳು, ಅವಧಿ ಮುಗಿದಿದ್ದರಿಂದ ಬುಧವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ್ದ 17ನೆ ಎಸಿಎಂಎಂ ನ್ಯಾಯಾಲಯ, ಆರೋಪಿ ರೇವಣ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಮೇ 4ರಂದು ಬಂಧಿತರಾಗಿದ್ದ ರೇವಣ್ಣ ಅವರನ್ನು ನಾಲ್ಕು ದಿನಗಳ ಕಾಲ ‘ಎಸ್‌ಐಟಿ’ ವಶಕ್ಕೆ ನೀಡಲಾಗಿತ್ತು. ಇನ್ನೂ, ತನಿಖಾಧಿಕಾರಿಗಳ ವಶದಲ್ಲಿದ್ದಾಗ ಎಚ್.ಡಿ.ರೇವಣ್ಣ ತನಿಖಾಧಿಕಾರಿಗಳಿಗೆ ಸಹಕರಿಸದೇ ನಕಾರಾತ್ಮಕವಾಗಿ ಉತ್ತರ ನೀಡಿದ್ದಾರೆ. ಜಾಮೀನು ನೀಡಿದರೆ ಸಾಕ್ಷ್ಯಗಳನ್ನು ನಾಶಪಡಿಸಬಹುದು. ಆದ್ದರಿಂದ ನ್ಯಾಯಾಂಗ ಬಂಧನಕ್ಕೆ ನೀಡಬೇಕೆಂದು ಎಸ್‌ಐಟಿ ಪರ ವಕೀಲರು ವಾದ ಮಂಡಿಸಿದರು.

ಇದಕ್ಕೆ ಪ್ರತಿಯಾಗಿ ಸರ್ವೋಚ್ಚ ನ್ಯಾಯಾಲಯದ ತೀರ್ಪು ಉಲ್ಲೇಖಿಸಿ ಆಕ್ಷೇಪ ವ್ಯಕ್ತಪಡಿಸಿದ ರೇವಣ್ಣ ಪರ ವಕೀಲರು, ತಪ್ಪೊಪ್ಪಿಗೆ ನೀಡಿಲ್ಲವೆಂದ ಮಾತ್ರಕ್ಕೆ ತನಿಖೆಗೆ ಅಸಹಕಾರ ನೀಡಿದ್ದಾರೆ ಎನ್ನಲು ಸಾಧ್ಯವಿಲ್ಲ, ಆದ್ದರಿಂದ ನ್ಯಾಯಾಂಗ ಬಂಧನಕ್ಕೆ ನೀಡಬಾರದು ಎಂದು ಮನವಿ ಸಲ್ಲಿಸಿದ್ದರು.

ಇದೇ ವೇಳೆ, ಪೊಲೀಸ್ ಕಸ್ಟಡಿಯಲ್ಲಿ ಏನಾದರೂ ತೊಂದರೆಯಾಯಿತೇ? ಎಂಬ ನ್ಯಾಯಾಧೀಶರ ಪ್ರಶ್ನೆಗೆ ನಾನು ಯಾವುದೇ ತಪ್ಪು ಮಾಡಿಲ್ಲ, ಮೂರು ದಿನಗಳಿಂದ ವಿಚಾರಣೆ ಮಾಡುತ್ತಿದ್ದಾರೆ. ಅನಾರೋಗ್ಯದ ಸಮಸ್ಯೆ ಇದ್ದರೂ ಸಹ ನನ್ನನ್ನು ಆಸ್ಪತ್ರೆಗೆ ದಾಖಲಿಸಲಿಲ್ಲ ಎಂದು ರೇವಣ್ಣ ಅಳಲು ತೋಡಿಕೊಂಡರು ಎನ್ನಲಾಗಿದೆ.

ದೇವರಾಜೇಗೌಡ ವಿರುದ್ಧ ದೂರು: ವಕೀಲ ಹಾಗೂ ಬಿಜೆಪಿ ಮುಖಂಡ ದೇವರಾಜೇಗೌಡ ವಿರುದ್ಧ ಎಫ್‍ಐಆರ್ ದಾಖಲಿಸಬೇಕೆಂದು ಆಗ್ರಹಿಸಿ ವಿಶೇಷ ತನಿಖಾ ತಂಡಕ್ಕೆ ಕರ್ನಾಟಕ ಪಿಂಜಾರ ಜನಾಂಗ ಕ್ಷೇಮಾಭಿವೃದ್ಧಿ ಸಂಘಟನೆ ದೂರು ಸಲ್ಲಿಸಿದೆ.

ಕಳೆದ ಎರಡು ವರ್ಷಗಳಿಂದ ಪೆನ್‍ಡ್ರೈವ್ ಇದೆ ಎಂದು ಹೇಳಿಕೊಂಡಿರುವ ದೇವರಾಜೇಗೌಡ ಪೊಲೀಸರಿಗೆ ಯಾಕೆ ದೂರು ನೀಡಿರಲಿಲ್ಲ?. ಒಂದು ವೇಳೆ ದೂರು ನೀಡಿದ್ದರೆ ಸಂತ್ರಸ್ತೆಯರ ಮಾನ-ಮಾರ್ಯಾದೆ ಉಳಿಯುತ್ತಿತ್ತು ಎಂದು ಸಂಘಟನೆಯ ರಾಜ್ಯಾಧ್ಯಕ್ಷ ಬಷೀರ್ ಅಹ್ಮದ್ ದೂರಿದ್ದಾರೆ.

ಮಹಿಳಾ ಆಯೋಗಗಕ್ಕೆ ದೂರು: ಅಪಾರ ಪ್ರಮಾಣದಲ್ಲಿ ಪೆನ್‍ಡ್ರೈವ್‍ಗಳನ್ನು ಹಂಚುವ ಮೂಲಕ ಮಹಿಳೆಯರ ಮಾನಹಾನಿಗೆ ಕಾರಣವಾಗಿರುವ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಬೇಕು ಹಾಗೂ ಈ ಕುರಿತ ಎಲ್ಲಾ ಪ್ರಕರಣಗಳ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಜೆಡಿಎಸ್ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ರಶ್ಮಿ ರಾಮೇಗೌಡ ಒತ್ತಾಯಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X