Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಪರೀಕ್ಷಾ ಮೌಲ್ಯಮಾಪನ ವ್ಯವಸ್ಥೆ...

ಪರೀಕ್ಷಾ ಮೌಲ್ಯಮಾಪನ ವ್ಯವಸ್ಥೆ ಪರಿಷ್ಕರಣೆ ಕೋರಿಕೆ: ಅರ್ಜಿ ವಜಾಗೊಳಿಸಿದ ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ18 Dec 2023 10:55 PM IST
share
ಪರೀಕ್ಷಾ ಮೌಲ್ಯಮಾಪನ ವ್ಯವಸ್ಥೆ ಪರಿಷ್ಕರಣೆ ಕೋರಿಕೆ: ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ಕಾಲೇಜು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೆಲವು ಪ್ರಕರಣಗಳಲ್ಲಿ ಮರುಮೌಲ್ಯಮಾಪನ ಶುಲ್ಕ ವಾಪಸ್ ನೀಡಿಕೆ ಮತ್ತು ಅಗತ್ಯ ಹಾಜರಾತಿ ವಿಚಾರಗಳಲ್ಲಿ ಸಡಿಲಿಕೆ ಸೇರಿದಂತೆ ಹಲವು ಕೋರಿಕೆಗಳನ್ನು ಒಳಗೊಂಡಿದ್ದ ಅರ್ಜಿಯನ್ನು ಮಾನ್ಯ ಮಾಡಲು ಹೈಕೋರ್ಟ್ ನಿರಾಕರಿಸಿದೆ.

ಈ ರೀತಿಯ ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಏನು ಹೇಳಲು ಸಾಧ್ಯ ಎಂದು ಹೈಕೋರ್ಟ್ ವಿಭಾಗೀಯ ನ್ಯಾಯಪೀಠವು ಅಭಿಪ್ರಾಯಪಟ್ಟಿತು. ಈ ವಿಚಾರಗಳು ತಜ್ಞರು ಮತ್ತು ವಿವಿಗಳಿಗೆ ಸಂಬಂಧಿಸಿದ ಸಂಗತಿಗಳಾಗಿವೆ. ಒಂದು ವಿಷಯಕ್ಕೆ ಮರುಮೌಲ್ಯಮಾಪನ ಶುಲ್ಕ ಇಷ್ಟೇ ಇರಬೇಕೆಂದು ಹೇಳಲು ನಾವು ಯಾರು ಎಂದು ಸಿಜೆ ವರಾಳೆ ಪ್ರಶ್ನಿಸಿದರು.

ಉತ್ತರ ಪತ್ರಿಕೆಗಳ ಮರುಮೌಲ್ಯಮಾಪನ ವಿಚಾರಕ್ಕೆ ಬಂದಾಗ ಅದನ್ನು ತಜ್ಞರು ಮಾಡಬೇಕಾಗುತ್ತದೆ. ಇದಕ್ಕೆ ಅವರಿಗೆ ಶುಲ್ಕ ಪಾವತಿಸಬೇಕಾಗುತ್ತದೆ ಎಂದು ನ್ಯಾಯಾಲಯ ಹೇಳಿದೆ. ಅರ್ಜಿ ಸಲ್ಲಿಸುವುದಕ್ಕೂ ಮುನ್ನ ತಜ್ಞರ ಸಂಪರ್ಕ ಮಾಡಲಾಗಿತ್ತೇ ಎಂದು ನ್ಯಾಯಾಲಯವು ಅರ್ಜಿದಾರರನ್ನು ಕೇಳಿದೆ.

ಸಾಕಷ್ಟು ಸಂಶೋಧನೆ ನಡೆಸಿದ, ತಜ್ಞರ ಅಭಿಪ್ರಾಯಗಳನ್ನು ಒಳಗೊಂಡ ಪಿಐಎಲ್ ಸಲ್ಲಿಸಲು ಅವಕಾಶ ಮಾಡಿ, ಹಾಲಿ ಪಿಐಎಲ್ ಹಿಂಪಡೆಯಲು ಅನುಮತಿಸಿತು. ಅಲ್ಲದೇ, ಅರ್ಜಿಯನ್ನು ನ್ಯಾಯಾಲಯ ಇತ್ಯರ್ಥಪಡಿಸಿತು.

ಮರು-ಮೌಲ್ಯಮಾಪನದ ಅಂಕಗಳು ಗಣನೀಯವಾಗಿ ಭಿನ್ನವಾಗಿರುವುದು ಕಂಡುಬಂದಾಗ ಪರೀಕ್ಷೆಯ ಮರುಮೌಲ್ಯಮಾಪನ ಶುಲ್ಕದ ಮರುಪಾವತಿಗಾಗಿ ನಿಯಮಾವಳಿಗಳನ್ನು ರೂಪಿಸಲು ನಿರ್ದೇಶಿಸಬೇಕು. ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗಾಗಿ ಹಾಜರಾತಿ ಮಾನದಂಡವನ್ನು ಶೇ.51 ಅಥವಾ ಅದಕ್ಕಿಂತ ಕಡಿಮೆಗೆ ಸಡಿಲಗೊಳಿಸಿ ಮತ್ತು ಎಲ್ಲ ಕಾಲೇಜುಗಳಲ್ಲಿ ಒಂದೇ ಹಾಜರಾತಿ ಮಾನದಂಡವನ್ನು ನಿಗದಿಪಡಿಸುವುದು ಸೇರಿದಂತೆ ವಿದ್ಯಾರ್ಥಿಗಳ ಕುಂದುಕೊರತೆಗಳನ್ನು ಪರಿಹರಿಸಲು ವಿಶ್ವವಿದ್ಯಾಲಯದ ಪ್ರಭಾವದಿಂದ ಮುಕ್ತವಾದ ಸಮಿತಿಗಳನ್ನು ಸ್ಥಾಪಿಸಬೇಕು ಎಂದು ಕೋರಿ ರಾಷ್ಟ್ರೀಯ ಮಾನವ ಹಕ್ಕುಗಳು ಮತ್ತು ಸಾಮಾಜಿಕ ನ್ಯಾಯ ಒಕ್ಕೂಟ ಅರ್ಜಿ ಸಲ್ಲಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X