Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸಂಸದ ಸ್ಥಾನದಿಂದ ಪ್ರತಾಪ್ ಸಿಂಹರನ್ನು...

ಸಂಸದ ಸ್ಥಾನದಿಂದ ಪ್ರತಾಪ್ ಸಿಂಹರನ್ನು ಉಚ್ಚಾಟನೆ ಮಾಡಲಿ: ಎಎಪಿ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ15 Dec 2023 10:54 PM IST
share
ಸಂಸದ ಸ್ಥಾನದಿಂದ ಪ್ರತಾಪ್ ಸಿಂಹರನ್ನು ಉಚ್ಚಾಟನೆ ಮಾಡಲಿ: ಎಎಪಿ ಒತ್ತಾಯ

ಬೆಂಗಳೂರು: ಒಬ್ಬ ವಿದ್ಯಾವಂತ ಸಂಸದನಾಗಿ ಅಪರಿಚಿತರಿಗೆ ಪಾಸ್ ಗಳನ್ನು ನೀಡಿರುವ ಪ್ರತಾಪ್ ಸಿಂಹ ಅವರನ್ನು ಲೋಕಸಭಾ ಸದಸ್ಯ ಸ್ಥಾನದಿಂದ ಉಚ್ಚಾಟನೆ ಮಾಡಬೇಕು. ಸಂಸತ್‍ಗೆ ರಕ್ಷಣೆ ನೀಡಲಾಗದ ಗೃಹ ಸಚಿವ ಅಮಿತ್ ಶಾ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಶುಕ್ರವಾರ ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಧರಣಿ ನಡೆಸಿದ್ದಾರೆ.

ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ ಮಾತನಾಡಿ,ʼಹೊಸ ಸಂಸತ್ತು ಉದ್ಘಾಟನೆಗೊಂಡ ನಂತರ ನಡೆದಿರುವ ಎರಡನೇ ಭದ್ರತಾ ಲೋಪ ಇದಾಗಿದೆ. 22 ವರ್ಷಗಳ ಹಿಂದಿನ ಭಯೋತ್ಪಾದಕರ ದಾಳಿ ದಿನವನ್ನೇ ಆರಿಸಿಕೊಂಡು ಈ ದಾಳಿ ನಡೆದಿರುವುದನ್ನು ಗಮನಿಸಿದರೆ, ಈ ಘಟನೆ ಹಿಂದೆ ಬೇರೆ ಹುನ್ನಾರಗಳಿರಬಹುದುʼ ಎಂದರು.

ಇದು ದೇಶದ ಸುರಕ್ಷತೆಯ ದೃಷ್ಟಿಯಿಂದ ಹಲವು ಪ್ರಶ್ನೆಗಳನ್ನು ಸೃಷ್ಟಿಸಿವೆ. ಮೈಸೂರಿನ ಮೂಲದ ಮನೋರಂಜನ್ ಅವರಿಗೆ ಈ ಮೊದಲು ಪ್ರತಾಪ್ ಸಿಂಹ ಅವರೇ ಎರಡು ಬಾರಿ ಪಾಸ್ ನೀಡಿದ್ದರು ಎನ್ನಲಾಗುತ್ತಿದೆ. ಸಂಸತ್ ಸಭಾಂಗಣ ಪ್ರವೇಶಿಸಲು ಪಾಸ್ ಸ್ವೀಕರಿಸಿದ ವ್ಯಕ್ತಿ ನಡೆಸುವ ಎಲ್ಲ ಕೃತ್ಯಗಳಿಗೆ ಪಾಸ್ ಕೊಟ್ಟ ಸಂಸದರೇ ಜವಾಬ್ದಾರರಾಗಿರುತ್ತಾರೆ. ಪರಿಚಿತರಿಗಷ್ಟೇ ಪಾಸ್ ನೀಡಬೇಕು ಎಂಬ ನಿಯಮವಿದೆ. ಇದೆಲ್ಲವೂ ಪಾಸ್‍ನಲ್ಲಿ ಉಲ್ಲೇಖವಾಗಿರುತ್ತದೆ. ಹಾಗಾಗಿ ಪ್ರತಾಪ್ ಸಿಂಹ ಅವರನ್ನು ಉಚ್ಚಾಟಿಸಿ, ವಿಚಾರಣೆಗೆ ಒಳಪಡಿಸಬೇಕು ಎಂದು ಅವರು ಒತ್ತಾಯಿಸಿದರು.

ಸಂಸತ್ತಿಗೆ ರಕ್ಷಣೆ ನೀಡಲಾಗದವರು, ಪ್ರಶ್ನಿಸಿದ ಸಂಸದರನ್ನು ಅಮಾನತುಗೊಳಿಸಿ ಪೌರುಷ ಮೆರೆಯುತ್ತಿದ್ದಾರೆ. ಭದ್ರತಾ ಸಿಬ್ಬಂದಿಯನ್ನು ಕೆಲಸದಿಂದ ತೆಗೆದು ಹಾಕುತ್ತಿದ್ದಾರೆ. ಆದರೆ ಈ ಭದ್ರತಾ ವೈಫಲ್ಯಕ್ಕೆ ಸಂಸದ ಪ್ರತಾಪ್ ಸಿಂಹ ಮೂಲ ಕಾರಣಕರ್ತರಾಗಿದ್ದಾರೆ. ಅವರು ಪಾಸ್ ನೀಡಿದ್ದರಿಂದಲೇ ಈ ಎಲ್ಲ ಅನಾಹುತಗಳಿಗೆ ಕಾರಣ. ಪ್ರತಾಪ್ ಸಿಂಹ ಅವರನ್ನು ಅಮಾನತುಗೊಳಿಸಿ ವಿಚಾರಣೆಗೆ ಒಳಪಡಿಸುವ ಬದಲು ಭದ್ರತಾ ವೈಫಲ್ಯದ ಬಗ್ಗೆ ಸರಕಾರವನ್ನು ಪ್ರಶ್ನಿಸಿದ ಸಂಸದರನ್ನೇ ಅಮಾನತು ಮಾಡಿರುವುದು ಪ್ರಜಾಪ್ರಭುತ್ವ ವಿರೋಧಿ ನಡೆಯಾಗಿದೆ ಎಂದು ಮೋಹನ್ ದಾಸರಿ ಆಕ್ರೋಶ ವ್ಯಕ್ತಪಡಿಸಿದರು.

ಒಂದೂವರೆ ವರ್ಷದಿಂದ ಸಂಚು ಹೂಡಿದ್ದರೂ ಕೇಂದ್ರ ಗುಪ್ತಚರಕ್ಕೆ ಗೊತ್ತಾಗಲಿಲ್ಲವೇ? ಗೃಹ ಸಚಿವ ಅಮಿತ್ ಶಾ ದೇಶದ ಭದ್ರತೆ ವಿಚಾರವನ್ನು ಸಂಪೂರ್ಣವಾಗಿ ಅವಗಣಿಸಿದ್ದಾರೆ. ತನ್ನ ಕರ್ತವ್ಯವನ್ನು ನಿಭಾಯಿಸಲು ಆಗದ ಅಮಿತ್ ಶಾ ಗೃಹ ಸಚಿವ ಸ್ಥಾನಕ್ಕೆ ರಾಜೀನಾಮ ಕೊಡಬೇಕು ಮೋಹನ್ ದಾಸರಿ ಒತ್ತಾಯಿಸಿದರು.

ಧರಣಿಯಲ್ಲಿ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ. ಸದಂ, ಬೆಂಗಳೂರು ನಗರ ಅಧ್ಯಕ್ಷ ಡಾ. ಸತೀಶ್ ಮೋಹನ್, ಬೆಂಗಳೂರು ಮಹಿಳಾ ಘಟಕದ ಅಧ್ಯಕ್ಷ ವೀಣಾ ಸರ್ ರಾವ್, ಪ್ರಧಾನ ಕಾರ್ಯದರ್ಶಿ ಜಗದೀಶ್ ಚಂದ್ರ ಮಾಧ್ಯಮ ವಕ್ತಾರೆ ಉಷಾ ಮೋಹನ್ ಸೇರಿದಂತೆ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X