ಪಾರ್ಶ್ವವಾಯು, ಹೃದಯಾಘಾತದಿಂದ ಪಾರು ಮಾಡಲು ಅಗತ್ಯವಿರುವ ದುಬಾರಿ ಚುಚ್ಚುಮದ್ದು ಉಚಿತ: ಸಚಿವ ದಿನೇಶ್ ಗುಂಡೂರಾವ್

Photo: PTI (ಸಾಂದರ್ಭಿಕ ಚಿತ್ರ)
ಬೆಂಗಳೂರು: ಪಾರ್ಶ್ವವಾಯು, ಹೃದಯಾಘಾತದಿಂದ ಪಾರು ಮಾಡಲು ಅಗತ್ಯವಿರುವ ದುಬಾರಿ ಚುಚ್ಚುಮದ್ದು ಉಚಿತವಾಗಿ ಒದಗಿಸಲು ರಾಜ್ಯ ಸರಕಾರ ಮುಂದಾಗಿದೆ.
ʼʼಪಾರ್ಶ್ವವಾಯುವಿನಿಂದ ಅಂಗಾಂಗ ವೈಫಲ್ಯ ಹಾಗೂ ಮರಣ ಸಂಭವಿಸುವ ಸಾಧ್ಯತೆ ಇರುತ್ತದೆ. ಅದೇ ರೀತಿ, ಹೃದಯಾಘಾತಕ್ಕೆ ಒಳಗಾದವರಿಗೆ 90 ನಿಮಿಷದೊಳಗೆ ಅಗತ್ಯ ಚಿಕಿತ್ಸೆ ಸಿಗದಿದ್ದರೆ ಮೃತಪಡುವ ಸಂಭವ ಇರುತ್ತದೆ. ಆದ್ದರಿಂದ ಪಾರ್ಶ್ವ ವಾಯು ಮತ್ತು ಹೃದಯಾಘಾತಕ್ಕೆ ಒಳಗಾದವರನ್ನು ಪ್ರಾಣಾಪಾಯದಿಂದ ಪಾರು ಮಾಡಲು ಅಗತ್ಯವಿರುವ ದುಬಾರಿ ಬೆಲೆಯ ಚುಚ್ಚುಮದ್ದುಗಳನ್ನು 'ಸ್ಟೆಮಿ' ಯೋಜನೆಯಡಿ ಉಚಿತವಾಗಿ ಒದಗಿಸಲು ಕ್ರಮವಹಿಸಲಾಗಿದೆʼʼ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
Next Story







