Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರೈತನ ಬದುಕಿಗೆ ಗ್ಯಾರಂಟಿ ಕೊಡಲು...

ರೈತನ ಬದುಕಿಗೆ ಗ್ಯಾರಂಟಿ ಕೊಡಲು ಸಾಧ್ಯವಿಲ್ಲವೇ?: ರಾಜ್ಯ ಸರಕಾರದ ವಿರುದ್ಧ ಕುಮಾರಸ್ವಾಮಿ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ16 Sept 2023 11:00 AM IST
share
ರೈತನ ಬದುಕಿಗೆ ಗ್ಯಾರಂಟಿ ಕೊಡಲು ಸಾಧ್ಯವಿಲ್ಲವೇ?: ರಾಜ್ಯ ಸರಕಾರದ ವಿರುದ್ಧ ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು: ʼʼಕೇವಲ ಪ್ರಚಾರ, ಅಧಿಕಾರದ ಸುಖ ಅನುಭವಿಸುತ್ತಿರುವ ಕಾಂಗ್ರೆಸ್‌ ಸರಕಾರಕ್ಕೆ ಅನ್ನದಾತನ ಸಾವಿನ ಕೇಕೆ ಸವಿಗಾನವಾಗಿದೆಯಾ? ಇವರಿಗೆ ವಾಸ್ತವ ಅರಿವಿಲ್ಲವೆ?ʼʼ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರೈತರ ಆತ್ಮಹತ್ಯೆಗಳ ಕುರಿತ ಪತ್ರಿಕಾ ವರದಿಯನ್ನು ಉಲ್ಲೇಖಿಸಿ ಟ್ವೀಟ್‌ ಮಾಡಿರುವ ಅವರು, ʼʼಬೆಳ್ಳಂ ಬೆಳಗ್ಗೆಯೇ ಈ ವರದಿ ಓದಿದಾಕ್ಷಣ ಬಹಳ ಸಂಕಟವಾಯಿತು, ಕಣ್ಣಾಲಿಗಳು ತುಂಬಿ ಬಂದವು. ಇನ್ನೆಷ್ಟು ದಿನ ಇಂತಹ ಸಾವುಗಳನ್ನು ನೋಡಬೇಕುʼʼ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ʼʼಗ್ಯಾರಂಟಿಗಳನ್ನು ಕೊಟ್ಟೆವೆಂದು ಬೀಗುತ್ತಿರುವ ಕಾಂಗ್ರೆಸ್ ಸರಕಾರಕ್ಕೆ ರೈತನ ಬದುಕಿಗೆ ಗ್ಯಾರಂಟಿ ಕೊಡಲು ಸಾಧ್ಯವಿಲ್ಲವೇ? ಇದೇನಾ 'ಕರ್ನಾಟಕ ಮಾದರಿ'? ರಾಜ್ಯದಲ್ಲಿ ಕೃಷಿ ಇಲಾಖೆ ಎನ್ನುವುದು ಇದೆಯಾ? ಅದು ಕೃಷಿ ಇಲಾಖೆಯಾ, ಕಸಾಯಿಖಾನೆಯಾ? ಕಂದಾಯಕ್ಕೂ ಆದಾಯದ ಚಿಂತೆಯಾ? ರಾಜ್ಯಕ್ಕೆ ಬರ, ಕೆಲವರಿಗೆ ಅದೇ ವರ..!! ಇದು ನೈಜಸ್ಥಿತಿ‌ʼʼ ಎಂದು ವಾಗ್ದಾಳಿ ನಡೆಸಿದ್ದಾರೆ.

ʼʼಆಗಸ್ಟ್, ಸೆಪ್ಟೆಂಬರ್ ನಲ್ಲಿ ಕೆಲವೆಡೆ ಮಳೆಯಾದರೂ ಪ್ರಯೋಜನವಾಗಿಲ್ಲ. ಆಗ್ಗೆ ಬೆಳೆಗಳು ನಾಶವಾಗಿವೆ. ತುರ್ತಾಗಿ ಕೇಂದ್ರಕ್ಕೆ ಮನವಿ ಮಾಡಬೇಕಿದ್ದ ಸರಕಾರ ಮಾರ್ಗಸೂಚಿ ನೆಪದಲ್ಲಿ ಕಾಲಹರಣ ಮಾಡುತ್ತಿದೆ. ಕಾಲಹರಣವೂ ಜೀವಹರಣವೂ ಬೇರೆ ಬೇರೆ ಅಲ್ಲ. ತುರ್ತಾಗಿ ಜಿಲ್ಲಾಧಿಕಾರಿಗಳ ಖಾತೆಯಲ್ಲಿರುವ ಹಣ ಬಿಡುಗಡೆ ಮಾಡಬಹುದಲ್ಲವೇ? ʼʼ ಎಂದು ಎಚ್‌.ಡಿಕೆ ಪ್ರಶ್ನಿಸಿದ್ದಾರೆ.

ʼʼಬೆಳೆ ವಿಮೆಯೂ ಅನ್ನದಾತರ ಆಪತ್ತಿಗೆ ಆಗುತ್ತಿಲ್ಲ,ಅದರ ಬಗ್ಗೆ ಅವರಿಗೆ ವಿಶ್ವಾಸವೇ ಇಲ್ಲ. ಅವರು ಸಾವಿನ ದವಡೆಗೆ ಬೀಳುತ್ತಿದ್ದರೆ ಅಧಿಕಾರಿಗಳು ಅರ್ಹ-ಅನರ್ಹ ಸಾವು(!!) ಎಂದು ವಿಭಜಿಸಿ ಲೆಕ್ಕ ಹಾಕಿಕೊಂಡು ಕೂತಿದ್ದಾರೆ.ಸಾವಿನಲ್ಲೂ ಅರ್ಹತೆ, ಅನರ್ಹತೆ ಹುಡುಕುವ ಈ ಕ್ರೂರತೆಗೆ ಏನೆಂದು ಹೇಳುವುದು? ರೈತರ ಸಾವುಗಳೆಂದರೆ ಇವರಿಗೆ ಇಷ್ಟು ಹಗುರವೇ?ʼʼ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ʼʼನನ್ನ ಮನವಿ ಇಷ್ಟೇ; ರೈತರು ಎದೆಗುಂದಬಾರದು. ನಿಮ್ಮ ದುಡುಕಿನ ನಿರ್ಧಾರ ನಿಮ್ಮ ಕುಟುಂಬವನ್ನು ಅನಾಥಗೊಳಿಸುತ್ತದೆ, ನಿಮ್ಮೊಂದಿಗೆ ನಾನಿದ್ದೇನೆ. ಸರಕಾರ ಇಂಥಹ ಆತ್ಮಹತ್ಯೆ ಪ್ರಕರಣಗಳಿಗೆ ಇತಿಶ್ರೀ ಹಾಡಲೇಬೇಕು. ಶಾಶ್ವತವಾಗಿ ಪರಿಹಾರೋಪಾಯ ಕಂಡುಕೊಳ್ಳಬೇಕು. ಜೀವಬಿಟ್ಟ ರೈತ ಕುಟುಂಬಗಳಿಗೆ ಮಾನವೀಯತೆಯ ನೆರವು ಕೊಡಬೇಕು. ವಿಳಂಬ ಸರಿಯಲ್ಲʼʼ ಎಂದು ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X