ಎಸೆಸೆಲ್ಸಿ, ದ್ವಿತೀಯ ಪಿಯುಸಿ ಪರೀಕ್ಷೆಗಳ ಅಂತಿಮ ವೇಳಾಪಟ್ಟಿ ಪ್ರಕಟ

ಸಾಂದರ್ಭಿಕ ಚಿತ್ರ | PC : freepik
ಬೆಂಗಳೂರು : ಪ್ರಸಕ್ತ ವರ್ಷದ ಎಸೆಸೆಲ್ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟವಾಗಿದ್ದು, ದ್ವಿತೀಯ ಪಿಯುಸಿ ಪರೀಕ್ಷೆ-1 ಫೆ.28ರಿಂದ ಮಾ.17ರ ವರೆಗೆ, ಎಸೆಸೆಲ್ಸಿ ಪರೀಕ್ಷೆ-1 ಮಾ.18ರಿಂದ ಎ.2ರವರೆಗೆ ನಡೆಯಲಿದೆ.
ದ್ವಿತೀಯ ಪಿಯುಸಿ ಪರೀಕ್ಷೆ: ದ್ವಿತೀಯ ಪಿಯುಸಿ ಪರೀಕ್ಷೆ-1ಕ್ಕೆ ಸಂಬಂಧಿಸಿದಂತೆ ಫೆ.28ರಂದು ಕನ್ನಡ, ಅರೇಬಿಕ್, ಮಾ.2ರಂದು ಭೂಗೋಳಶಾಸ್ತ್ರ, ಸಂಖ್ಯಾಶಾಸ್ತ್ರ, ಮನಃಶಾಸ್ತ್ರ, ಮಾ.3ರಂದು ಇಂಗ್ಲಿಷ್, ಮಾ.4ರಂದು ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್ ಭಾಷೆಯ ಪರೀಕ್ಷೆಗಳು ನಡೆಯಲಿವೆ.
ಮಾ.5ರಂದು ಇತಿಹಾಸ, ಮಾ.6ರಂದು ಭೌತಶಾಸ್ತ್ರ, ಮಾ.7 ಐಚ್ಛಿಕ ಕನ್ನಡ, ವ್ಯವಹಾರ ಅಧ್ಯಯನ, ಭೂಗರ್ಭಶಾಸ್ತ್ರ, ಮಾ.9 ರಸಾಯನಶಾಸ್ತ್ರ, ಶಿಕ್ಷಣಶಾಸ್ತ್ರ, ಮೂಲಗಣಿತ, ಮಾ.10ರಂದು ಅರ್ಥಶಾಸ್ತ್ರ ಪರೀಕ್ಷೆ ನಡೆಯಲಿದೆ.
ಮಾ.11ರಂದು ತರ್ಕಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗೃಹವಿಜ್ಞಾನ, ಮಾ.12ರಂದು ಹಿಂದಿ, ಮಾ.13ರಂದು ರಾಜ್ಯಶಾಸ್ತ್ರ, ಮಾ.14ರಂದು ಲೆಕ್ಕಶಾಸ್ತ್ರ, ಗಣಿತ, ಮಾ.16ರಂದು ಸಮಾಜಶಾಸ್ತ್ರ, ಜೀವಶಾಸ್ತ್ರ, ಗಣಕವಿಜ್ಞಾನ ಪರೀಕ್ಷೆಗಳು ನಡೆಯಲಿವೆ.
ಮಾ.17ರಂದು ಹಿಂದೂಸ್ಥಾನಿ ಸಂಗೀತ, ಎಲೆಕ್ಟ್ರಾನಿಕ್ಸ್ ಮತ್ತು ಯಂತ್ರಾಂಶ, ಉಡುಪುಗಳ ತಯಾರಿಕೆ ಮತ್ತು ಗೃಹೋಪಯೋಗಿ ವಸ್ತುಗಳು, ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋಮೊಬೈಲ್, ಆರೋಗ್ಯ ರಕ್ಷಣೆ, ಬ್ಯೂಟಿ ಅಂಡ್ ವೆಲ್ನೆಸ್ ಪರೀಕ್ಷೆಗಳು ನಡೆಯಲಿವೆ.
ಎಸೆಸೆಲ್ಸಿ ವೇಳಾಪಟ್ಟಿ: ಎಸೆಸೆಲ್ಸಿ ಪರೀಕ್ಷೆ ಪರೀಕ್ಷೆ-1ಕ್ಕೆ ಸಂಬಂಧಿಸಿದಂತೆ ಮಾ.18ರಂದು ಪ್ರಥಮ ಭಾಷೆಯಾದ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಸಂಸ್ಕೃತ, ಮಾ.23ರಂದು ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ಥಾನಿ ಸಂಗೀತ, ಕರ್ನಾಟಕ ಸಂಗೀತ ಮತ್ತು ಮಾ.25 ದ್ವಿತೀಯ ಭಾಷೆಯಾದ ಇಂಗ್ಲೀಷ್, ಕನ್ನಡ ಪರೀಕ್ಷೆಗಳು ನಡೆಯಲಿವೆ.
ಮಾ.28ರಂದು ಗಣಿತ, ಸಮಾಜಶಾಸ್ತ್ರ, ಮಾ.30ರಂದು ತೃತೀಯ ಭಾಷೆಯಾದ ಹಿಂದಿ, ಕನ್ನಡ, ಇಂಗ್ಲೀಷ್, ಅರೇಬಿಕ್, ಉರ್ದು, ಸಂಸ್ಕೃತ, ಕೊಂಕಣಿ, ತುಳು, ಮರಾಠಿ ಮತ್ತು ಎನ್.ಎಸ್.ಕ್ಯೂ.ಎಫ್. ವಿಷಯಗಳಾದ ಮಾಹಿತಿ ತಂತ್ರಜ್ಞಾನ, ರೀಟೇಲ್, ಆಟೋ ಮೊಬೈಲ್, ಬ್ಯೂಟಿ ಅಂಡ್ ವೆಲ್ನೆಸ್, ಅಪರೆಲ್ ಮೇಡ್ ಅಪ್ಸ್ ಅಂಡ್ ಹೋಮ್ ಫರ್ನಿಷಿಂಗ್, ಎಲೆಕ್ಟ್ರಾನಿಕ್ಸ್ ಅಂಡ್ ಹಾರ್ಡ್ವೇರ್ ಪರೀಕ್ಷೆಗಳು ನಡೆಯಲಿವೆ.
ಎ.1ರಂದು ಅರ್ಥಶಾಸ್ತ್ರ, ಎಲಿಮೆಂಟ್ಸ್ ಆಫ್ ಎಲೆಕ್ಟ್ರಿಕಲ್ ಇಂಜಿನಿಯರ್, ಎಲಿಮೆಂಟ್ಸ್ ಆಫ್ ಮೆಕ್ಯಾನಕಲ್ ಇಂಜಿನಿಯರ್ ಮತ್ತು ಎ.2ರಂದು ಸಮಾಜ ವಿಜ್ಞಾನ ಪರೀಕ್ಷೆ ನಡೆಯಲಿದೆ.
ಹಾಗೆಯೇ ಪ್ರಸಕ್ತ ವರ್ಷದ ಎಸೆಸೆಲ್ಸಿ ಪರೀಕ್ಷೆ-2 ಮತ್ತು ದ್ವಿತೀಯ ಪಿಯು ಪರೀಕ್ಷೆ-2ರ ಅಂತಿಮ ವೇಳಾಪಟ್ಟಿ ಪ್ರಕಟವಾಗಿದ್ದು, ದ್ವಿತೀಯ ಪಿಯು ಪರೀಕ್ಷೆ-2 ಎ.25ರಿಂದ ಮೇ 9ರವರೆಗೂ ನಡೆಯಲಿವೆ. ಎಸೆಸೆಲ್ಸಿ ಪರೀಕ್ಷೆ-2 ಮೇ 18ರಿಂದ ಮೇ 25ರವರಗೆ ನಡೆಯಲಿದೆ.
‘ರಾಜ್ಯದ ಎಲ್ಲ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರುಗಳು ಹಾಗೂ ಪ್ರೌಢಶಾಲಾ ಮುಖ್ಯ ಶಿಕ್ಷಕರು ತಮ್ಮ ಶಾಲಾ, ಕಾಲೇಜುಗಳ ಪ್ರಕಟಣಾ ಫಲಕದಲ್ಲಿ(ನೋಟಿಸ್ ಬೋರ್ಡ್) ವೇಳಾಪಟ್ಟಿಯನ್ನು ಪ್ರಕಟಿಸಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಬೇಕು’ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಪರೀಕ್ಷಾ ಮಂಡಳಿ ಹೇಳಿದೆ.







